Homeಸಿನಿಮಾಕ್ರೀಡೆಭಾರತ ಕ್ರಿಕೆಟ್‌ ತಂಡದ ಮಾಜಿ ನಾಯಕ ಬಿಶನ್‌ ಸಿಂಗ್‌ ಬೇಡಿ ನಿಧನ: ಲೆಜೆಂಡರಿ ಸ್ಪಿನ್ನರ್‌ ಅಗಲಿಕೆಗೆ...

ಭಾರತ ಕ್ರಿಕೆಟ್‌ ತಂಡದ ಮಾಜಿ ನಾಯಕ ಬಿಶನ್‌ ಸಿಂಗ್‌ ಬೇಡಿ ನಿಧನ: ಲೆಜೆಂಡರಿ ಸ್ಪಿನ್ನರ್‌ ಅಗಲಿಕೆಗೆ ಬಿಸಿಸಿಐ ಸಂತಾಪ

- Advertisement -
- Advertisement -

ಭಾರತ ಕ್ರಿಕೆಟ್‌ ತಂಡದ ಮಾಜಿ ನಾಯಕ ಹಾಗೂ ಲೆಜೆಂಡರಿ ಸ್ಪಿನ್ನರ್‌ ಬಿಶನ್‌ ಸಿಂಗ್‌ ಬೇಡಿ ನಿಧನರಾಗಿದ್ದಾರೆ.

77 ವರ್ಷದ ಬಿಶನ್‌ ಸಿಂಗ್‌ ಬೇಡಿ ವಯೋಸಹಜ ಅನಾರೋಗ್ಯದಿಂದ ಮೃತಪಟ್ಟಿದ್ದಾರೆ. ಇವರು ಪತ್ನಿ ಅಂಜು, ಪುತ್ರ ಅಂಗದ್ ಮತ್ತು ಪುತ್ರಿ ನೇಹಾ ಅವರನ್ನು ಅಗಲಿದ್ದಾರೆ.

 

ಅಮೃತಸರ ಮೂಲದವರಾದ ಇವರು ಭಾರತದ ಮೊದಲ ಏಕದಿನ ಅಂತರಾಷ್ಟ್ರೀಯ ಕ್ರಿಕೆಟ್‌ ಪಂದ್ಯದ  ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. 1975ರಲ್ಲಿ ನಡೆದ ಏಕದಿನ ಕ್ರಿಕೆಟ್‌ ವಿಶ್ವಕಪ್‌ ಟೂರ್ನಿಯಲ್ಲಿ ಈಸ್ಟ್‌ ಆಫ್ರಿಕಾ ಎದುರು ಅದ್ಭುತ ಬೌಲಿಂಗ್‌ ಮೂಲಕ ಒಡಿಐನಲ್ಲಿ ಭಾರತಕ್ಕೆ ಮೊತ್ತ ಮೊದಲ ಜಯ ತರುವಲ್ಲಿ ನೆರವಾಗಿದ್ದರು.

1977-78ರಲ್ಲಿ ಆಸ್ಟ್ರೇಲಿಯಾದಲ್ಲಿ ಬಿಷನ್‌ ಸಿಂಗ್‌ ಬೇಡಿ ಸಾರಥ್ಯದ ಭಾರತ ತಂಡ ಅದ್ಭುತ ಪ್ರದರ್ಶನ ನೀಡಿ ಕಾಂಗರೂ ಪಡೆಯ ಎದುರು 5 ಪಂದ್ಯಗಳ ಟೆಸ್ಟ್‌ ಕ್ರಿಕೆಟ್‌ ಸರಣಿಯಲ್ಲಿ ಭಾರಿ ಸದ್ದು ಮಾಡಿತ್ತು. ಆ ಸರಣಿಯಲ್ಲಿ ಬಾಬ್ ಸಿಂಪ್ಸನ್ ಸಾರಥ್ಯದ ಆಸ್ಟ್ರೇಲಿಯಾ ತಂಡ 3-2 ಅಂತರದ ಜಯ ದಾಖಲಿಸಿದರೂ, ಬೇಡಿ ಸಾರಥ್ಯದ ಭಾರತ ತಂಡ ನೀಡಿದ ಕೆಚ್ಚೆದೆಯ ಹೋರಾಟವನ್ನು ಈಗಲೂ ಸ್ಮರಿಸಲಾಗುತ್ತದೆ. ಮೆಲ್ಬೋರ್ನ್‌ ಮತ್ತು ಸಿಡ್ನಿಯಲ್ಲಿ ನಡೆದ ಸರಣಿಯ 3ನೇ ಮತ್ತು 4ನೇ ಟೆಸ್ಟ್‌ ಪಂದ್ಯಗಳಲ್ಲಿ ಭಾರತ ತಂಡ ಅವಿಸ್ಮರಣೀಯ ಜಯ ದಾಖಲಿಸಿತ್ತು.

ಕ್ರಿಕೆಟ್‌ನಲ್ಲಿ ಯಶಸ್ಸು ಕಂಡ ಭಾರತೀಯ ಬೌಲರ್‌ಗಳ ಪೈಕಿ ಬಿಷನ್‌ ಸಿಂಗ್‌ ಬೇಡಿ ಕೂಡ ಒಬ್ಬರು. ನಾರ್ತ್‌ಹ್ಯಾಂಪ್ಟನ್‌ಶೈರ್‌ ತಂಡದ ಪರ 1972ರಿಂದ 1977ರವರೆಗೆ ಒಟ್ಟಾರೆ 102 ಪಂದ್ಯಗಳನ್ನು ಆಡಿ ಬರೊಬ್ಬರಿ 434 ವಿಕೆಟ್‌ಗಳನ್ನು ಪಡೆದಿದ್ದಾರೆ.

1990ರಲ್ಲಿ ಭಾರತ ತಂಡಕ್ಕೆ ಮೊತ್ತ ಮೊದಲ ವೃತ್ತಿಪರ ಕೋಚ್‌ ಆಗಿಯೂ ಬಿಷನ್‌ ಸಿಂಗ್‌ ಬೇಡಿ ಆಯ್ಕೆಯಾಗಿದ್ದರು. ತಮ್ಮ ಕೋಚಿಂಗ್‌ ಅವಧಿಯಲ್ಲಿ ಟೀಮ್ ಇಂಡಿಯಾ ಆಟಗಾರರ ಫಿಟ್ನೆಸ್‌ ಕಡೆಗೆ ಹೆಚ್ಚು ಒತ್ತು ನೀಡಿದ್ದರು.

ಬಿಶನ್‌ ಸಿಂಗ್‌ ನಿಧನಕ್ಕೆ ಬಿಸಿಸಿಐ ಸಂತಾಪ ಸೂಚಿಸಿದ್ದು, ಭಾರತದ ಮಾಜಿ ಟೆಸ್ಟ್ ನಾಯಕ ಮತ್ತು ಲೆಜೆಂಡರಿ ಸ್ಪಿನ್ನರ್ ಬಿಶನ್ ಸಿಂಗ್ ಬೇಡಿ ಅವರ ನಿಧನಕ್ಕೆ ಬಿಸಿಸಿಐ ಸಂತಾಪ ವ್ಯಕ್ತಪಡಿಸಿದೆ ಎಂದು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಂತಿಯುತ ಪ್ರತಿಭಟನೆಗಳನ್ನು ಹತ್ತಿಕ್ಕಲು ಕ್ರಿಮಿನಲ್ ಪ್ರಕರಣಗಳ ಬಳಕೆ ಪ್ರಜಾಪ್ರಭುತ್ವಕ್ಕೆ ಕರಾಳ ದಿನ: ಬಾಂಬೆ ಹೈಕೋರ್ಟ್

ಮುಂಬೈ: ಜನರ ಮೂಲಭೂತ ಹಕ್ಕಾಗಿರುವ ಶಾಂತಿಯುತ ಪ್ರತಿಭಟನೆಗಳನ್ನು ಹತ್ತಿಕ್ಕಲು ಕ್ರಿಮಿನಲ್ ಪ್ರಕರಣಗಳನ್ನು ಅಸ್ತ್ರವಾಗಿ ಬಳಸಿದರೆ ಅದು ಪ್ರಜಾಪ್ರಭುತ್ವಕ್ಕೆ ದುಃಖದ ದಿನವಾಗಲಿದೆ ಎಂದು ಬಾಂಬೆ ಹೈಕೋರ್ಟ್ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ. ಸಾರ್ವಜನಿಕ ಸಮಸ್ಯೆಗಳ ವಿರುದ್ಧ...

ಕುರ್ಚಿ ಹಾಕುವ ದಿನಗಳಿಂದಲೂ ಮಾಧ್ಯಮಗಳೊಂದಿಗೆ ದೀರ್ಘಕಾಲದ ಒಡನಾಟವಿದೆ: ಪ್ರಧಾನ ಮಂತ್ರಿ ನರೇಂದ್ರ ಮೋದಿ

ಪತ್ರಕರ್ತರ ಕಾರ್ಯಕ್ರಮಗಳಲ್ಲಿ ಅವರಿಗೆ ಕುರ್ಚಿ ಹಾಕುವ ಜವಾಬ್ದಾರಿ ನಿರ್ವಹಿಸುತ್ತಿದ್ದ ದಿನಗಳಿಂದಲೂ ಮಾಧ್ಯಮಗಳೊಂದಿಗೆ ತಮಗೆ ದೀರ್ಘಕಾಲದ ಸಂಬಂಧವಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ (ನ.12) ಹೇಳಿದ್ದಾರೆ. ನವದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಪತ್ರಕರ್ತರಿಗಾಗಿ ಆಯೋಜಿಸಿದ್ದ...

ಕಾಂಗ್ರೆಸ್ ಸರ್ಕಾರದ ನೀತಿಗಳ ವಿರುದ್ಧವೂ ಜನರು ಪ್ರತಿಭಟನೆ ನಡೆಸಬಹುದು: ಪ್ರಿಯಾಂಕಾ ಗಾಂಧಿ

ಪ್ರತಿಭಟನೆ ನಡೆಸುವ ಹಕ್ಕು ಸಂವಿಧಾನ ನೀಡಿರುವ ಮೂಲಭೂತ ಹಕ್ಕಾಗಿದ್ದು, ಶಾಂತಿಯುತವಾಗಿ ಪ್ರತಿಭಟನೆ ನಡೆಸುವವರೆಗೆ ಕಾಂಗ್ರೆಸ್ ನೇತೃತ್ವದ ಸರ್ಕಾರಗಳ ನೀತಿಗಳ ವಿರುದ್ಧವೂ ಜನರು ಹೋರಾಟ ನಡೆಸಲು ಸ್ವತಂತ್ರರು ಎಂದು ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ...

ಎನ್‌ವಿಡಿಯಾ ಸಿಇಒ ವೈಯಕ್ತಿಕ ಸಂಬಂಧ ವಿವಾದ: ‘ಗೂಢಚಾರಿಕೆ ನಿರೂಪಣೆಗಳನ್ನು ಸೃಷ್ಟಿಸಿ ತಾಂತ್ರಿಕ ದಿಗ್ಬಂಧನ ಹೇರಬೇಡಿ’: ಅಮೆರಿಕಕ್ಕೆ ಚೀನಾ ಎಚ್ಚರಿಕೆ

ಅಮೆರಿಕವು ಚೀನಾದ ತಾಂತ್ರಿಕ ಪ್ರಗತಿಗೆ ಕಡಿವಾಣ ಹಾಕಲು ಗೂಢಚಾರಿಕೆಯ ಆರೋಪಗಳನ್ನು ನೆಪವಾಗಿ ಬಳಸುತ್ತಿದೆ ಎಂದು ಆರೋಪಿಸಿರುವ ಚೀನಾ, ಇಂತಹ ನಿರೂಪಣೆಗಳನ್ನು ಸೃಷ್ಟಿಸುವುದನ್ನು ನಿಲ್ಲಿಸುವಂತೆ ಅಮೆರಿಕವನ್ನು ಒತ್ತಾಯಿಸಿದೆ. ಎನ್‌ವಿಡಿಯಾ (Nvidia) ಸಿಇಒ ಜೆನ್ಸನ್ ಹುವಾಂಗ್...

ಯುಪಿ ವಿಧಾನಸಭೆ ಚುನಾವಣೆಗೆ ಓವೈಸಿ-ಆಝಾದ್ ಮೈತ್ರಿ : ಸಿಎಂ ಅಭ್ಯರ್ಥಿ ಘೋಷಣೆ

ವಿಧಾನಸಭೆ ಚುನಾವಣೆಗೆ ಮುನ್ನ ಉತ್ತರ ಪ್ರದೇಶದ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಅಸಾದುದ್ದೀನ್ ಓವೈಸಿ ಅವರ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಮತ್ತು ಚಂದ್ರಶೇಖರ್ ಆಝಾದ್ ಅವರ ಆಝಾದ್ ಸಮಾಜ ಪಕ್ಷ...

ಪ್ರಧಾನಿ ಮೋದಿಯನ್ನು ಪ್ರಶ್ನಿಸಿದ್ದ ನಾರ್ವೆ ಪತ್ರಕರ್ತೆಯ ಭಾರತ ಭೇಟಿಗೆ ತಡೆ : ಕೊನೆ ಕ್ಷಣದಲ್ಲಿ ವೀಸಾ ರದ್ದು

ಕಳೆದ ಮೇ ತಿಂಗಳಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ನಾರ್ವೆಗೆ ಭೇಟಿ ನೀಡಿದ್ದಾಗ, ಅವರಿಗೆ ಪ್ರಶ್ನೆ ಕೇಳಿ ಸುದ್ದಿಯಾಗಿದ್ದ ಅಲ್ಲಿನ ಪತ್ರಕರ್ತೆ ಹೆಲ್ಲೆ ಲಿಂಗ್ ಅವರ ಭಾರತ ಭೇಟಿಗೆ ಕೊನೆ ಕ್ಷಣದಲ್ಲಿ ತಡೆಯೊಡ್ಡಲಾಗಿದೆ ಎಂದು...

ಸ್ಥಳೀಯರ ಹೋರಾಟಕ್ಕೆ ಸಂದ ಜಯ: ‘ನಮ್ಮ ಮೆಟ್ರೋ’ ಪಿಂಕ್ ಲೈನ್‌ನ 3 ನಿಲ್ದಾಣಗಳ ಹೆಸರು ಬದಲಾವಣೆಗೆ ಕೇಂದ್ರದಿಂದ ಅನುಮೋದನೆ!

ಬೆಂಗಳೂರು: 'ನಮ್ಮ ಮೆಟ್ರೋ' ಗುಲಾಬಿ ಮಾರ್ಗದ (Pink Line) ಎಲಿವೇಟೆಡ್‌ ಕಾರಿಡಾರ್‌ನ ಮೂರು ಪ್ರಮುಖ ನಿಲ್ದಾಣಗಳ ಹೆಸರು ಬದಲಾವಣೆಗೆ ರಾಜ್ಯ ಸರ್ಕಾರ ಸಲ್ಲಿಸಿದ್ದ ಪ್ರಸ್ತಾವನೆಗೆ ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ...

ಗಾಝಾದ ನಾಸರ್ ಆಸ್ಪತ್ರೆಯ ಮೇಲೆ ಇಸ್ರೇಲ್‌ನಿಂದ ವೈಮಾನಿಕ ದಾಳಿ : ಕನಿಷ್ಠ 6 ಸಾವು, 20ಕ್ಕೂ ಹೆಚ್ಚು ಜನರಿಗೆ ಗಾಯ

ದಕ್ಷಿಣ ಗಾಝಾದ ನಾಸರ್ ಆಸ್ಪತ್ರೆಯ ಕಟ್ಟಡವೊಂದರ ಮೇಲೆ ಇಸ್ರೇಲ್ ವೈಮಾನಿಕ ದಾಳಿ ನಡೆಸಿದ್ದು, ಕನಿಷ್ಠ ಆರು ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಖಾನ್ ಯೂನಿಸ್‌ನಲ್ಲಿರುವ ಆಸ್ಪತ್ರೆಯ ಶಸ್ತ್ರಚಿಕಿತ್ಸಾ ವಿಭಾಗದ ಮೇಲೆ ದಾಳಿ...

ಮುಸ್ಲಿಂ ದಂಪತಿಗೆ ನಿಂದನೆ; ವಿಡಿಯೋ ವೈರಲ್ ಆದ ಬೆನ್ನಲ್ಲೇ ಕೆಎಸ್‌ಆರ್‌ಟಿಸಿ ಕಂಡಕ್ಟರ್ ಅಮಾನತು

ತಪ್ಪಾಗಿ ಬೇರೆ ಬಸ್ ಹತ್ತಿ ಇಳಿದ ಇಬ್ಬರು ಪ್ರಯಾಣಿಕರ ವಿರುದ್ಧ ಕೋಮುವಾದಿ ಹೇಳಿಕೆಗಳನ್ನು ನೀಡಿದ್ದಾರೆ ಎನ್ನಲಾದ ವೈರಲ್ ವಿಡಿಯೋ ಆಧರಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು (ಕೆಎಸ್‌ಆರ್‌ಟಿಸಿ) ಬಸ್ ಕಂಡಕ್ಟರ್ ಒಬ್ಬರನ್ನು...

ನೊಂದವರ ದನಿಯಾಗಿ, ಶೋಷಿತರ ಹೋರಾಟದ ಶಕ್ತಿಯಾಗಿ ಬೆಳೆದ ಶಿವರಾಮ ಮೋಘ: ಡಾ. ಪಿ. ನಂದಕುಮಾರ್

ಭಾರತದ ಸಾಂಸ್ಕೃತಿಕ ಚರಿತ್ರೆಯಲ್ಲಿ ಹೈದರಾಬಾದ್ ಕರ್ನಾಟಕ’ (ಕಲ್ಯಾಣ ಕರ್ನಾಟಕ) ಪ್ರದೇಶಕ್ಕೆ ವಿಶೇಷವಾದ ಸ್ಥಾನವಿದೆ. ಹಲವು ಸಾಂಸ್ಕೃತಿಕ ವಿಶೇಷತೆಯನ್ನು ಒಳಗೊಂಡಿರುವ ಈ ಪ್ರದೇಶವು ಕಲೆ, ಸಾಹಿತ್ಯ, ಸಂಸ್ಕೃತಿ ಕ್ಷೇತ್ರಗಳಿಗೆ ಮಹತ್ವದ ಕೊಡುಗೆ ನೀಡಿದೆ. ಶ್ರೀವಿಜಯ...