ದಲಿತ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ರಾಜಸ್ಥಾನದ ದೀದ್ವಾನಾ ಕುಚಾಮನ್ ಜಿಲ್ಲೆಯಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಐವರ ಮೇಲೆ ಪ್ರಕರಣ ದಾಖಲಿಸಲಾಗಿದೆ.
ಪ್ರಕರಣ ಆಗಸ್ಟ್‌ನಲ್ಲಿ ನಡೆದಿದ್ದು, ಕೇಸ್ ದಾಖಲಾದ ಬಳಿಕ ಭಾನುವಾರ ಬಯಲಾಗಿದೆ. ಐವರು ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 376 (ಡಿ) (ಗ್ಯಾಂಗ್ ರೇಪ್) ಮತ್ತು ಎಸ್ಸಿ ಎಸ್ಟಿ ದೌರ್ಜನ್ಯ ತಡೆ ಕಾಯ್ದೆ ಮತ್ತು ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ದೀದ್ವಾನಾ ಕುಚಾಮನ್ ಜಿಲ್ಲೆಯ ದಿವಾನ ವೃತ್ತದ ಅಧಿಕಾರಿ ಧರಮ್ ಚಂದ್ ಪೂನಿಯಾ ಈ ಕುರಿತು ಪ್ರತಿಕ್ರಿಯಿಸಿದ್ದು, ಘಟನೆ ಆಗಸ್ಟ್‌ನಲ್ಲಿ ನಡೆದಿದೆ. ಭಾನುವಾರ ಪ್ರಕರಣ ದಾಖಲಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳಾದ ಶೋರ್ ಮಾಲಿ, ರಾಮ್‌ದೇವ್ ಥಲೋಡ್ ಮತ್ತು ತೇಜ್‌ಪಾಲ್‌ನ್ನು ವಶಕ್ಕೆ ಪಡೆಯಲಾಗಿದೆ ಮತ್ತು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಇಬ್ಬರು ಆರೋಪಿಗಳು ನಾಪತ್ತೆಯಾಗಿದ್ದು ಅವರಿಗೆ ಹುಡುಕಾಟ ನಡೆಯುತ್ತಿದೆ ಎಂದು ಹೇಳಿದ್ದಾರೆ.
ಘಟನೆಗೆ ಸಂಬಂಧಿಸಿ ಸಂತ್ರಸ್ತ ಮಹಿಳೆಯ ಹೇಳಿಕೆಯನ್ನು ದಾಖಲಿಸಿಕೊಳ್ಳಲಾಗಿದೆ. ಸಂತ್ರಸ್ತೆಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ, ವರದಿ ನಿರೀಕ್ಷಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಇದನ್ನು ಓದಿ: ಕೋಲಾರ: ಕಾಂಗ್ರೆಸ್ ಮುಖಂಡನ ಹತ್ಯೆ; ಆರೋಪಿಗಳ ಮೇಲೆ ಪೊಲೀಸ್ ಫೈರಿಂಗ್


