HomeUncategorizedಮಣಿಪುರ ಜನಾಂಗೀಯ ಕಲಹಕ್ಕೆ ಪ್ರಚೋದಿಸಿದ್ದು ಸಿಎಂ ಬಿರೇನ್ ಸಿಂಗ್: ಗಂಭೀರ ಆರೋಪ ಮಾಡಿದ ಬುಡಕಟ್ಟು ಸಂಸ್ಥೆ

ಮಣಿಪುರ ಜನಾಂಗೀಯ ಕಲಹಕ್ಕೆ ಪ್ರಚೋದಿಸಿದ್ದು ಸಿಎಂ ಬಿರೇನ್ ಸಿಂಗ್: ಗಂಭೀರ ಆರೋಪ ಮಾಡಿದ ಬುಡಕಟ್ಟು ಸಂಸ್ಥೆ

- Advertisement -
- Advertisement -

ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅವರು ಈಶಾನ್ಯ ರಾಜ್ಯದಲ್ಲಿ ಆರಂಭವಾದ ಜನಾಂಗೀಯ ಕಲಹಕ್ಕೆ ಪ್ರಚೋದನೆ ನೀಡಿದ್ದಾರೆ ಎಂದು ಕುಕಿ ಸಮುದಾಯದ ನಾಯಕರ ವೇದಿಕೆ (ಐಟಿಎಲ್‌ಎಫ್) ಆರೋಪಿಸಿದೆ.

ರಾಜ್ಯದಲ್ಲಿ ಸಂಘರ್ಷಕ್ಕೆ ಕಾರಣರಾಗಿದ್ದ ಎರಡು ಸಮುದಾಯಗಳಾದ ಮೈತೈ ಮತ್ತು ಕುಕಿಗಳು ದೀರ್ಘಕಾಲದಿಂದ ಒಟ್ಟಿಗೆ ವಾಸಿಸುತ್ತಿದ್ದರು. 2017ಕ್ಕಿಂತ ಮೊದಲು ಬೇರೆ ಸರಕಾರ ಇದ್ದಾಗ ರಾಜ್ಯದಲ್ಲಿ ಎರಡು ಸಮುದಾಯಗಳ ನಡುವೆ ಯಾಕೆ ಗಲಭೆ, ಹಿಂಸಾಚಾರ ನಡೆದಿಲ್ಲ ಎಂದು ಐಟಿಎಲ್‌ಎಫ್ ಪ್ರಶ್ನಿಸಿದೆ.

ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ನಾಗ್ಪುರದಲ್ಲಿ ಆರ್‌ಎಸ್‌ಎಸ್‌ನ ದಸರಾ ರ್ಯಾಲಿಯನ್ನುದ್ದೇಶಿಸಿ ಮಾತನಾಡುತ್ತಾ, ಮಣಿಪುರ ಸಂಘರ್ಷಕ್ಕೆ ಉತ್ತೇಜನ ನೀಡಿದವರು ಯಾರು? ಎಂದು ಪ್ರಶ್ನಿಸಿದ್ದರು.

ಮೈತೈಗಳು ಮುಖ್ಯವಾಗಿ ಇಂಫಾಲ್ ಕಣಿವೆಯಲ್ಲಿ ವಾಸಿಸುತ್ತಿದ್ದರೆ, ಕುಕಿಗಳು ಬೆಟ್ಟ ಪ್ರದೇಶಗಳ ಜಿಲ್ಲೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಭಾರತೀಯ ಅರಣ್ಯ ಕಾಯಿದೆ 1927ರ ಅಡಿಯಲ್ಲಿ ಮೀಸಲು ಮತ್ತು ರಕ್ಷಿತ ಅರಣ್ಯಗಳಿಗೆ ಸಂಬಂಧಿಸಿದಂತೆ 1966 ರ ಸರ್ಕಾರದ ಅಧಿಸೂಚನೆಯನ್ನು 2023ರಲ್ಲಿ ಇದ್ದಕ್ಕಿದ್ದಂತೆ ಏಕೆ ಜಾರಿಗೆ ತರಲಾಯಿತು? ಎಂದು ಐಟಿಎಲ್‌ಎಫ್ ಪ್ರಶ್ನಿಸಿದೆ.

ಮಣಿಪುರದಲ್ಲಿಆದಿವಾಸಿಗಳನ್ನು ಮೀಸಲು ಅರಣ್ಯ ಪ್ರದೇಶಗಳಿಂದ ಹೊರ ಕಳುಹಿಸಲು ರಾಜ್ಯ ಸರ್ಕಾರವು ನಡೆಸುತ್ತಿರುವ ಕಾರ್ಯಾಚರಣೆಯನ್ನು ವಿರೋಧಿಸಿ ಪ್ರತಿಭಟನೆಗಳು ನಡೆಯಿತು. ಕಳೆದ ಕೆಲವು ವರ್ಷಗಳಲ್ಲಿ ಮಣಿಪುರದಲ್ಲಿ ಸಂವಿಧಾನದ ಅಡಿಯಲ್ಲಿ ಬುಡಕಟ್ಟು ಜನಾಂಗದವರು ನೀಡಲ್ಪಟ್ಟ ಹಕ್ಕುಗಳ ಮೇಲೆ ಹೆಚ್ಚು ಸಂಘಟಿತ ದಾಳಿ ನಡೆದಿದೆ ಐಟಿಎಲ್ಎಫ್ ಹೇಳಿಕೆಯಲ್ಲಿ ತಿಳಿಸಿದೆ.

ಮೇ.3ರಂದು ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರ ಪ್ರಾರಂಭವಾದಾಗಿನಿಂದ 180ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು ನೂರಾರು ಜನರು ಗಾಯಗೊಂಡಿದ್ದಾರೆ. ಮಹಿಳೆಯರ ಬೆತ್ತಲೆ ಮೆರವಣಿಗೆ, ನೂರಾರು ಮನೆಗಳ ಧ್ವಂಸ ಸೇರಿ ಭಯಾನಕ ಕೃತ್ಯಗಳೇ ನಡೆದು ಹೋಗಿದೆ.

ಮಣಿಪುರದ ಜನಸಂಖ್ಯೆಯ ಶೇಕಡ 53ರಷ್ಟು ಮೈತೈ ಸಮುದಾಯದವರಿದ್ದಾರೆ ಮತ್ತು ಇಂಫಾಲ್ ಕಣಿವೆಯಲ್ಲಿ ಹೆಚ್ಚಾಗಿ ವಾಸಿಸುತ್ತಿದ್ದಾರೆ. ಬುಡಕಟ್ಟು ಜನಾಂಗದ ನಾಗಾಗಳು ಮತ್ತು ಕುಕಿಗಳು ಶೇಕಡಾ 40ರಷ್ಟಿದ್ದು, ಬೆಟ್ಟ ಪ್ರದೇಶದ ಜಿಲ್ಲೆಗಳಲ್ಲಿ ವಾಸಿಸುತ್ತಿದ್ದಾರೆ.

ಇದನ್ನು ಓದಿ; ಚೆನ್ನೈ: ರೈಲು ಹರಿದು ಕರ್ನಾಟಕದ ಮೂವರು ಬಾಲಕರು ಮೃತ್ಯು

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...

ಜನಾಂಗೀಯ ದ್ವೇಷ: ಅಮೆರಿಕಾದ ಸ್ಯಾನ್ ಡಿಯಾಗೋ ಮಸೀದಿ ಸಂಕೀರ್ಣದಲ್ಲಿ ಗುಂಡಿನ ದಾಳಿ: ಮೂವರು ಸಾವು

ಸ್ಯಾನ್ ಡಿಯಾಗೋ: ಅಮೆರಿಕದ ಸ್ಯಾನ್ ಡಿಯಾಗೋ ನಗರದ ಇಸ್ಲಾಮಿಕ್ ಸೆಂಟರ್ ಆಫ್ ಸ್ಯಾನ್ ಡಿಯಾಗೋ (ICSD) ಮಸೀದಿ ಸಂಕೀರ್ಣದಲ್ಲಿ ಸೋಮವಾರ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಈ ಘಟನೆಯನ್ನು ಸಂಭಾವ್ಯ...

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...