Homeಮುಖಪುಟಪಾಕಿಸ್ತಾನ, ಬಾಂಗ್ಲದೇಶಕ್ಕಿಂತ ಭಾರತದಲ್ಲಿ ನಿರುದ್ಯೋಗದ ದರ ಹೆಚ್ಚಳ

ಪಾಕಿಸ್ತಾನ, ಬಾಂಗ್ಲದೇಶಕ್ಕಿಂತ ಭಾರತದಲ್ಲಿ ನಿರುದ್ಯೋಗದ ದರ ಹೆಚ್ಚಳ

- Advertisement -
- Advertisement -

2022ರಲ್ಲಿ ಭಾರತದ ಯುವ ಜನರಲ್ಲಿನ ನಿರುದ್ಯೋಗ ದರವು ನೆರೆಯ ದೇಶಗಳಾದ ಪಾಕಿಸ್ತಾನ, ಬಾಂಗ್ಲದೇಶ ಮತ್ತು ಭೂತಾನ್‌ಗಿಂತಲೂ ಹೆಚ್ಚಾಗಿದೆ ಎಂದು ವಿಶ್ವಬ್ಯಾಂಕ್‌( ವರ್ಲ್ಡ್‌ ಬ್ಯಾಂಕ್‌) ಅಂಕಿ ಅಂಶಗಳು ಬಹಿರಂಗಪಡಿಸಿದೆ.

2022ರಲ್ಲಿ ಭಾರತದಲ್ಲಿನ ಯುವಕರ ನಿರುದ್ಯೋಗ ದರವು 23.22% ರಷ್ಟಿದೆ. ಪಾಕಿಸ್ತಾನದಲ್ಲಿನ ನಿರುದ್ಯೋಗ ದರವು 11.3%ರಷ್ಟಿದೆ.. ಬಾಂಗ್ಲಾದೇಶದಲ್ಲಿ 12.9% ಮತ್ತು ಭೂತಾನ್‌ನಲ್ಲಿ ನಿರುದ್ಯೋಗ ದರವು 14.4% ಇದೆ ಎಂದು ವಿಶ್ವ ಬ್ಯಾಂಕ್ (ವರ್ಲ್ಡ್‌ ಬ್ಯಾಂಕ್) ಅಂಕಿ-ಅಂಶಗಳು ತಿಳಿಸಿದೆ.

ವರದಿಯ ಪ್ರಕಾರ 2022ರ ವರ್ಷದಲ್ಲಿ ಚೀನಾದಲ್ಲಿ ನಿರುದ್ಯೋಗ ದರವು 13.2%, ಸಿರಿಯಾದಲ್ಲಿ 22.1%, ಇಂಡೋನೇಷ್ಯಾದಲ್ಲಿ 13%, ಮಲೇಷ್ಯಾದಲ್ಲಿ 11.7%, ವಿಯೆಟ್ನಾಂನಲ್ಲಿ 7.4%, ದಕ್ಷಿಣ ಕೊರಿಯಾದಲ್ಲಿ 6.9% ಮತ್ತು ಸಿಂಗಾಪುರದಲ್ಲಿ 6.1% ರಷ್ಟಿದೆ. ಈ ಎಲ್ಲಾ ದೇಶಗಳ ನಿರುದ್ಯೋಗದ ದರಕ್ಕಿಂತ ಭಾರತದಲ್ಲಿ ನಿರುದ್ಯೋಗ ದರ ಹೆಚ್ಚಳವಾಗಿದೆ.

ಈ ಮಾಹಿತಿಯನ್ನು ಅಂತರಾಷ್ಟ್ರೀಯ ಕಾರ್ಮಿಕ ಸಂಸ್ಥೆಯಿಂದ ಪಡೆಯಲಾಗಿದೆ. ಅಂಕಿ ಅಂಶವನ್ನು 15ರಿಂದ 24 ವರ್ಷ ವಯಸ್ಸಿನವರು ಮತ್ತು ಉದ್ಯೋಗ ಇಲ್ಲದೆ ಉದ್ಯೋಗವನ್ನು ಹುಡುಕುತ್ತಿರುವವರ ಅಂಕಿ-ಅಂಶಗಳನ್ನು ಸಂಗ್ರಹಿಸಿ ಸಿದ್ದಪಡಿಸಲಾಗಿದೆ.

15-34 ವರ್ಷ ವಯಸ್ಸಿನ ಸುಮಾರು 36%  ಜನರು ಭಾರತದಲ್ಲಿ ನಿರುದ್ಯೋಗವು ಅತಿದೊಡ್ಡ ಸಮಸ್ಯೆ ಎಂದು ಹೇಳುತ್ತಿದ್ದಾರೆ ಎಂದು ಲೋಕನೀತಿ-ಸಿಎಸ್ಡಿಎಸ್ ಸಮೀಕ್ಷೆಯು (Lokniti-CSDS survey) ಕಂಡುಹಿಡಿದಿದೆ. ಯುವಕರ ವೃತ್ತಿ ಆಕಾಂಕ್ಷೆಗಳು, ಉದ್ಯೋಗದ ಆದ್ಯತೆಗಳು ಮತ್ತು ನಿರೀಕ್ಷೆಗಳನ್ನು ವಿಶ್ಲೇಷಿಸಿ ಸಮೀಕ್ಷೆಯನ್ನು ಸಿದ್ದಪಡಿಸಲಾಗಿದೆ.

ಭಾರತದ ನಿರುದ್ಯೋಗ ಪ್ರಮಾಣ 2023ರ ಜನವರಿಗೆ ಹೋಲಿಸಿದರೆ ಫೆಬ್ರವರಿಯಲ್ಲಿ ಹೆಚ್ಚಾಗಿತ್ತು. ಕಳೆದ ಜನವರಿಯಲ್ಲಿ ಶೇ.7.14 ರಷ್ಟಿದ್ದ ನಿರುದ್ಯೋಗ ಪ್ರಮಾಣ ಫೆಬ್ರವರಿಯಲ್ಲಿ ಶೇ.7.45ಕ್ಕೆ ಏರಿಕೆಯಾಗಿತ್ತು. ಫೆಬ್ರವರಿಯಲ್ಲಿ ನಿರುದ್ಯೋಗದ ಕುರಿತು ಬಿಡುಗಡೆಯಾದ ವರದಿಯಲ್ಲಿ ನಗರ ಭಾಗದ ಜನರಲ್ಲಿ ನಿರುದ್ಯೋಗ ಪ್ರಮಾಣ ಶೇ.7.93ರಷ್ಟಿದ್ದರೆ, ಗ್ರಾಮೀಣ ಪ್ರದೇಶದಲ್ಲಿ ಶೇ. 7.23ರಷ್ಟಿತ್ತು.

ಇದನ್ನು ಓದಿ: ಅಮೆರಿಕಗೆ ಅಕ್ರಮವಾಗಿ ಪ್ರವೇಶಿಸಲು ಯತ್ನಿಸಿದ 8,076 ಭಾರತೀಯರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...