Homeಕರ್ನಾಟಕಚಿಕ್ಕಬಳ್ಳಾಪುರ: ಭೀಕರ ಅಪಘಾತಕ್ಕೆ 13 ಜನ ದುರ್ಮರಣ

ಚಿಕ್ಕಬಳ್ಳಾಪುರ: ಭೀಕರ ಅಪಘಾತಕ್ಕೆ 13 ಜನ ದುರ್ಮರಣ

- Advertisement -
- Advertisement -

ಸಿಮೆಂಟ್ ಬಲ್ಕರ್ ಲಾರಿಗೆ ಟಾಟಾ ಸುಮೋ ಢಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ 13 ಜನ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ನಗರ ಹೊರವಲಯದ ರಾಷ್ಟ್ರೀಯ ಹೆದ್ದಾರಿ 44ರ ಚಿತ್ರಾವತಿ ಬಳಿ ನಡೆದಿದೆ.

ಟಾಟಾ ಸುಮೊ ಬಾಗೇಪಲ್ಲಿಯಿಂದ ಬೆಂಗಳೂರು ಕಡೆ ತೆರಳುವಾಗ ರಸ್ತೆಬಂದಿ ನಿಂತಿದ್ದ ಲಾರಿಗೆ ಹಿಂಬದಿಗೆ ಡಿಕ್ಕಿ ಹೊಡೆದು ದುರ್ಘಟನೆ ಸಂಭವಿಸಿದೆ. ದಟ್ಟ ಮಂಜು ಹಿನ್ನೆಲೆಯಲ್ಲಿ ಟಾಟಾ ಸುಮೊ ಚಾಲಕನಿಗೆ ಸರಿಯಾಗಿ ರಸ್ತೆ ಕಾಣಿಸಿಲ್ಲ ಎಂದು ಹೇಳಲಾಗಿದೆ. ಅಪಘಾತದ ತೀವ್ರತೆಗೆ ಟಾಟಾ ಸುಮೊ ಮುಂದಿನ ಭಾಗ ನಜ್ಜುಗುಜ್ಜಾಗಿದ್ದು, ಘಟನೆಯಲ್ಲಿ ಒಟ್ಟು 13 ಜನ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಮೃತರಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದ್ದಾರೆ.

ಚಿಕ್ಕಬಳ್ಳಾಪುರ ಪೊಲೀಸ್ ವರಿಷ್ಠಾಧಿಕಾರಿ ಡಿ.ಎಲ್​.ನಾಗೇಶ್ ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, ಮಗು, ಮೂವರು ಮಹಿಳೆಯರು ಸೇರಿ 13 ಜನರು ಮೃತಪಟ್ಟಿದ್ದಾರೆ. ಮೃತರು ಆಂಧ್ರದ ಗೊರಂಟ್ಲ ನಿವಾಸಿಗಳು. ಇವರು ಟಾಟಾ ಸುಮೊದಲ್ಲಿ ಆಂಧ್ರದ ಗೋರಂಟ್ಲದಿಂದ ಬೆಂಗಳೂರಿನ ಬೊಮ್ಮನಹಳ್ಳಿಗೆ ತೆರಳುತ್ತಿದ್ದರು. 7 ಸೀಟಿನ ಸಾಮರ್ಥ್ಯದ ಟಾಟಾ ಸುಮೊದಲ್ಲಿ 13 ಜನ ಪ್ರಯಾಣ ಪ್ರಯಾಣಿಸುತ್ತಿದ್ದರು ಎಂದು ಹೇಳಿದ್ದಾರೆ.

ಚಿಕ್ಕಬಳ್ಳಾಪುರ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಗಾಯಾಳುಗಳನ್ನು ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.

ಇದನ್ನು ಓದಿ: ಗುಜರಾತ್‌: ವ್ಯಕ್ತಿಯನ್ನು ಥಳಿಸಿ ಹತ್ಯೆ ಮಾಡಿದ ಗುಂಪು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುರಂಗ ರಸ್ತೆ ಕಾಮಗಾರಿ ವೇಳೆ ವಯನಾಡಿನಲ್ಲಿ ಭೂಕುಸಿತ: ಜನರು ಜೀವ ಉಳಿಸಿಕೊಳ್ಳಲು ಓಡಿದ ಭಯಾನಕ ದೃಶ್ಯ ಸೆರೆ

ಕೇರಳದ ವಯನಾಡ್ ಜಿಲ್ಲೆಯ ಮೇಪ್ಪಾಡಿಯಲ್ಲಿ ಮಂಗಳವಾರ (ಇಂದು) ಭೀಕರ ಭೂಕುಸಿತ ಸಂಭವಿಸಿದ್ದು, ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಏಳು ಜನರು ಗಾಯಗೊಂಡಿದ್ದಾರೆ. ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಕಾರ್ಯಾಚರಣೆ ಮುಂದುವರಿದಿದ್ದು, ಈ...

ಒಟಿಟಿಗೆ ಬಂದ ಎರಡೇ ದಿನಕ್ಕೆ ದಿಲ್ಜಿತ್ ದೋಸಾಂಜ್ ನಟನೆಯ ‘ಸಟ್ಲಜ್’ ಸಿನಿಮಾ ಔಟ್! ಜೀ5 ವಿರುದ್ಧ ಆಕ್ರೋಶ, ಕಾನೂನು ಹೋರಾಟದ ಭರವಸೆ

ತೀವ್ರ ವಿವಾದ ಹಾಗೂ ಸೆನ್ಸಾರ್ ಮಂಡಳಿಯ ಕತ್ತರಿ ಪ್ರಯೋಗದ ನಡುವೆಯೂ ಕೊನೆಗೂ ಒಟಿಟಿ ಪರದೆಯ ಮೇಲೆ ಬಿಡುಗಡೆಯಾಗಿದ್ದ ಖ್ಯಾತ ನಟ ದಿಲ್ಜಿತ್ ದೋಸಾಂಜ್ ಅಭಿನಯದ 'ಸಟ್ಲಜ್' (ಮೂಲ ಶೀರ್ಷಿಕೆ: ಪಂಜಾಬ್ 95) ಚಿತ್ರವನ್ನು...

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...