Homeಮುಖಪುಟಇಸ್ರೇಲ್‌ ದಾಳಿಗೆ ಅಲ್ ಜಝೀರಾ ಬ್ಯೂರೋ ಮುಖ್ಯಸ್ಥರ ಕುಟುಂಬದ ನಾಲ್ವರು ಬಲಿ

ಇಸ್ರೇಲ್‌ ದಾಳಿಗೆ ಅಲ್ ಜಝೀರಾ ಬ್ಯೂರೋ ಮುಖ್ಯಸ್ಥರ ಕುಟುಂಬದ ನಾಲ್ವರು ಬಲಿ

- Advertisement -
- Advertisement -

ಗಾಝಾ ಮೇಲೆ ಇಸ್ರೇಲ್‌ ನಡೆಸಿದ ವೈಮಾನಿಕ ದಾಳಿಗೆ ಅಲ್ ಜಝೀರಾ ಅರೇಬಿಕ್ ಬ್ಯೂರೋ ಮುಖ್ಯಸ್ಥರ ಕುಟುಂಬದ ನಾಲ್ವರು ಸದಸ್ಯರು ಮೃತಪಟ್ದಿದ್ದಾರೆ.

ಗಾಝಾದಲ್ಲಿರುವ ಅಲ್ ಜಝೀರಾ ಅರೇಬಿಕ್ ಬ್ಯೂರೋ ಮುಖ್ಯಸ್ಥ ವೇಲ್ ದಹದೌಹ್ ಅವರ ಪತ್ನಿ, ಮಗ, ಮಗಳು ಮತ್ತು ಮೊಮ್ಮಗ ಇಸ್ರೇಲ್ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ.

ಅಲ್ ಜಝೀರಾದಲ್ಲಿ ಪ್ರಸಾರವಾದ ವಿಡಿಯೋದಲ್ಲಿ ದಹದೌಹ್ ಅವರು ಬುಧವಾರ ಡೇರ್ ಎಲ್-ಬಾಲಾಹ್‌ನಲ್ಲಿರುವ ಅಲ್-ಅಕ್ಸಾ ಹುತಾತ್ಮರ ಆಸ್ಪತ್ರೆಗೆ ತನ್ನ ಮೃತ ಪತ್ನಿ, ಮಗ ಮತ್ತು ಮಗಳನ್ನು ನೋಡಲು ಪ್ರವೇಶಿಸುತ್ತಿರುವುದನ್ನು ತೋರಿಸಿದೆ.

15 ವರ್ಷದ ಮಗ ಮಹಮೂದ್‌ನ ಮುಖವನ್ನು ತೋರಿಸಲಾಗಿದೆ. ಅವನು ತನ್ನ ತಂದೆಯಂತೆ ಪತ್ರಕರ್ತನಾಗಲು ಬಯಸಿದ್ದ ಎಂದು ಹೇಳಲಾಗಿದೆ. ನಂತರ ವಿಡಿಯೋದಲ್ಲಿ ಅವರ 7 ವರ್ಷದ ಮಗಳು ಶ್ಯಾಮ್‌ ಅವರ ರಕ್ತಸಿಕ್ತ ದೇಹವನ್ನು ಅವರು ಹಿಡಿದು ಕಣ್ಣೀರಿಡುವುದು ಕಂಡು ಬಂದಿದೆ.

ಆಘಾತಕ್ಕೊಳಗಾದ ದಹದೌಹ್ ಅವರಲ್ಲಿ ಆಸ್ಪತ್ರೆಯಿಂದ ಹೊರಡುವಾಗ ಅಲ್ ಜಝೀರಾ ಮಾದ್ಯಮ ಮಾತನಾಡಿಸಿದೆ. ಏನಾಯಿತು ಎಂಬುದು ಸ್ಪಷ್ಟವಾಗಿದೆ. ಇದು ಮಕ್ಕಳು, ಮಹಿಳೆಯರು ಮತ್ತು ನಾಗರಿಕರ ಮೇಲೆ ಉದ್ದೇಶಿತ ದಾಳಿಗಳ ಸರಣಿಯಾಗಿದೆ. ಅಂತಹ ದಾಳಿಯ ಬಗ್ಗೆ ನಾನು ಯಾರ್ಮೌಕ್‌ನಿಂದ ವರದಿ ಮಾಡುತ್ತಿದ್ದೆ ಮತ್ತು ಇಸ್ರೇಲಿ ದಾಳಿಗಳು ನುಸಿರಾತ್ ಸೇರಿದಂತೆ ಹಲವು ಪ್ರದೇಶಗಳನ್ನು ಗುರಿಯಾಗಿರಿಸಿಕೊಂಡಿವೆ ಎಂದು ಹೇಳಿದ್ದಾರೆ.

ದಹದೌಹ್ ಅವರ ಮೊಮ್ಮಗ ಆಡಮ್ ದಾಳಿ ನಡೆದ ಎರಡು ಗಂಟೆಗಳ ನಂತರ ಮೃತಪಟ್ಟಿದ್ದಾರೆ.  ಅಂಬೆಗಾಲಿಡುವ ಮೊಮ್ಮಗಳು ಸೇರಿದಂತೆ ದಹದೌಹ್ ಅವರ ಕುಟುಂಬದ ಕೆಲವು ಸದಸ್ಯರು ಗಾಝಾದ ದಕ್ಷಿಣದಲ್ಲಿರುವ ನುಸಿರಾತ್ ನಿರಾಶ್ರಿತರ ಶಿಬಿರದಲ್ಲಿ ಅವರು ವಾಸಿಸುತ್ತಿದ್ದ ಮನೆಯ ಮೇಲಿನ ದಾಳಿಯ ವೇಳೆ ಅದೃಷ್ಟಾವಶಾತ್ ಬದುಕುಳಿದಿದ್ದಾರೆ.

ಅಲ್ ಜಜೀರಾ ಅರೇಬಿಕ್ ಪ್ರಕಾರ, ದಹದೌಹ್ ಅವರ ಮಗ ಯೆಹಿಯಾ ಅವರ ತಲೆಗೆ ಗಂಭೀರವಾದ ಗಾಯವಾಗಿದೆ. ವೈದ್ಯರು ಸೂಕ್ತವಾದ ಉಪಕರಣಗಳು ಸಿಗದೆ ಅವರ ಶಸ್ತ್ರಚಿಕಿತ್ಸೆಗೆ ಹೆಣಗಾಡಿದ್ದಾರೆ.

ಇಸ್ರೇಲಿ ಆಕ್ರಮಣ ಪಡೆಗಳ ವಿವೇಚನಾರಹಿತ ದಾಳಿಯು ಪತ್ರಕರ್ತರ ಪತ್ನಿ, ಮಗ ಮತ್ತು ಮಗಳ ದುರಂತ ಸಾವಿಗೆ ಕಾರಣವಾಯಿತು ಎಂದು ಅಲ್ ಜಝೀರಾ ಮೀಡಿಯಾ ನೆಟ್‌ವರ್ಕ್ ಹೇಳಿಕೆಯಲ್ಲಿ ತಿಳಿಸಿದೆ.

ಇದನ್ನು ಓದಿ: ಮುಸ್ಲಿಂ ಮಹಾಪಂಚಾಯತ್‌ಗೆ ಅನುಮತಿ ನಿರಾಕರಿಸಿದ ದೆಹಲಿ ಹೈಕೋರ್ಟ್‌

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...