HomeUncategorizedಜನರು ಕಾಂಗ್ರೆಸ್‌ನ ಗ್ಯಾರಂಟಿಗಳ ಲಾಭ ಪಡೆಯುವುದು ಬಿಜೆಪಿಗೆ ಇಷ್ಟವಿಲ್ಲ: ಗೆಹ್ಲೋಟ್ ಆರೋಪ

ಜನರು ಕಾಂಗ್ರೆಸ್‌ನ ಗ್ಯಾರಂಟಿಗಳ ಲಾಭ ಪಡೆಯುವುದು ಬಿಜೆಪಿಗೆ ಇಷ್ಟವಿಲ್ಲ: ಗೆಹ್ಲೋಟ್ ಆರೋಪ

- Advertisement -
- Advertisement -

ರಾಜಸ್ಥಾನದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ದಾಳಿಗಳು ನಡೆಯುತ್ತಿವೆ ಏಕೆಂದರೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಘೋಷಿಸಿರುವ ಗ್ಯಾರಂಟಿ ಯೋಜನೆಗಳ ಲಾಭವನ್ನು ಮಹಿಳೆಯರು, ರೈತರು ಮತ್ತು ಬಡವರಿಗೆ ತಲುಪುವುದು ಬಿಜೆಪಿಗೆ ಇಷ್ಟವಿಲ್ಲ ಎಂದು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಗುರುವಾರ ಆರೋಪಿಸಿದ್ದಾರೆ.

ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಗೋವಿಂದ್ ಸಿಂಗ್ ದೋತಸ್ರಾ ಮತ್ತು ಮಹುವಾ ವಿಧಾನಸಭಾ ಕ್ಷೇತ್ರದ ಪಕ್ಷದ ಅಭ್ಯರ್ಥಿ ಮೇಲೆ ಇಡಿ ಗುರುವಾರ ದಾಳಿ ನಡೆಸಿದ ನಂತರ ಈ ಆರೋಪ ಹೊರಬಿದ್ದಿದೆ.

ಫೆಡರಲ್ ತನಿಖಾ ಸಂಸ್ಥೆಯು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರ ಪುತ್ರ ವೈಭವ್ ಗೆಹ್ಲೋಟ್ ಅವರನ್ನು ವಿದೇಶಿ ವಿನಿಮಯ ಕಾನೂನನ್ನು ಉಲ್ಲಂಘಿಸಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ವಿಚಾರಣೆಗಾಗಿ ಸಮನ್ಸ್ ನೀಡಿದೆ.

ಈ ವಿಚಾರವಾಗಿ ಎಕ್ಸಾನಲ್ಲಿ ಪೋಸ್ಟ್‌ ಮಾಡಿರುವ ಮುಖ್ಯಮಂತ್ರಿ ಗೆಹ್ಲೋಟ್, ”ದಿನಾಂಕ 25/10/23ರಂದು ರಾಜಸ್ಥಾನದ ಮಹಿಳೆಯರಿಗೆ ಕಾಂಗ್ರೆಸ್ ಗ್ಯಾರಂಟಿ ಯೋಜನೆಯನ್ನು ಪ್ರಾರಂಭಿಸಿತು. ದಿನಾಂಕ 26/10/23ರಂದು ರಾಜಸ್ಥಾನ ಕಾಂಗ್ರೆಸ್ ಅಧ್ಯಕ್ಷ ಗೋವಿಂದ್ ಸಿಂಗ್ ಜಿ ದೋತಾಸ್ರಾ ಮೇಲೆ ಇಡಿ ದಾಳಿ ನಡೆಸುತ್ತದೆ. ನನ್ನ ಮಗ ವೈಭವ್ ಗೆಹ್ಲೋಟ್‌ಗೆ ಇಡಿ ಸಮನ್ಸ್ ನೀಡಿದೆ” ಎಂದು ಬರೆದಿದ್ದಾರೆ.

”ರಾಜಸ್ಥಾನದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ದಾಳಿಗಳು ನಡೆಯುತ್ತಿವೆ ಏಕೆಂದರೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಘೋಷಿಸಿರುವ ಗ್ಯಾರಂಟಿ ಯೋಜನೆಗಳ ಲಾಭವನ್ನು ಮಹಿಳೆಯರು, ರೈತರು ಮತ್ತು ಬಡವರಿಗೆ ತಲುಪುವುದು ಬಿಜೆಪಿಗೆ ಇಷ್ಟವಿಲ್ಲ” ಎಂದು ಅವರು ಹೇಳಿದರು.

ಈ ಬಗ್ಗೆ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯಿಸಿದ್ದು, ”ರಾಜಸ್ಥಾನ ವಿಧಾನಸಭೆ ಚುನಾವಣೆಯಲ್ಲಿ ಸೋಲುವುದು ಖಚಿತವಾಗುತ್ತಿದ್ದಂತೆ ಬಿಜೆಪಿಯು ತನ್ನ ಕೊನೆಯ ದಾಳವನ್ನು ಪುಯೋಗಿಸುತ್ತಿದೆ. ಛತ್ತೀಸ್‌ಗಢದ ಬಳಿಕ ಇದೀಗ ರಾಜಸ್ಥಾನದ ಕಾಂಗ್ರೆಸ್ ನಾಯಕರ ವಿರುದ್ಧ ಇ.ಡಿ ದಾಳಿ ನಡೆಯುತ್ತಿದೆ ಎಂದು ಗುಡುಗಿದ್ದಾರೆ.

ಇದನ್ನೂ ಓದಿ: ರಾಜಸ್ಥಾನದಲ್ಲಿ ಮತ್ತೆ ಗೆದ್ದರೆ, ಮನೆ ಯಜಮಾನಿಗೆ ವರ್ಷಕ್ಕೆ 10 ಸಾವಿರ ರೂ.: ಕಾಂಗ್ರೆಸ್ ಭರವಸೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬೆಂಜಮಿನ್ ನೆತನ್ಯಾಹು ರಾಜೀನಾಮೆಗೆ ಒತ್ತಾಯಿಸಿ ಇಸ್ರೇಲಿನಲ್ಲಿ ಪ್ರತಿಭಟನೆ; ಪೊಲೀಸರೊಂದಿಗೆ ಘರ್ಷಣೆ

0
ಟೆಲ್ ಅವಿವ್‌ನಲ್ಲಿ ಇಸ್ರೇಲಿ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ಶನಿವಾರ ಘರ್ಷಣೆ ಭುಗಿಲೆದ್ದಿದೆ. ಸಾವಿರಾರು ಜನರು ಸರ್ಕಾರದ ವಿರುದ್ಧ ಪ್ರತಿಭಟಿಸಿ, ಗಾಜಾದಲ್ಲಿನ ಹಮಾಸ್‌ನಿಂದ ಒತ್ತೆಯಾಳುಗಳನ್ನು ಹಿಂದಕ್ಕೆ ಕರೆತರುವಂತೆ ಒತ್ತಾಯಿಸಿದರು. ಇಸ್ರೇಲ್ ಮತ್ತು ಹಮಾಸ್ ನಡುವಿನ...