Homeಮುಖಪುಟಮೂರು ದಿನಗಳು ಚಪ್ಪಲಿ ಸವೆಸಿದರೂ ಸದಾನಂದಗೌಡರಿಗೆ ನಡ್ಡಾ ದರ್ಶನವಾಗಲಿಲ್ಲ: ಕಾಂಗ್ರೆಸ್ ಟೀಕೆ

ಮೂರು ದಿನಗಳು ಚಪ್ಪಲಿ ಸವೆಸಿದರೂ ಸದಾನಂದಗೌಡರಿಗೆ ನಡ್ಡಾ ದರ್ಶನವಾಗಲಿಲ್ಲ: ಕಾಂಗ್ರೆಸ್ ಟೀಕೆ

- Advertisement -
- Advertisement -

ರಾಜ್ಯ ಬಿಜೆಪಿಯ ಆಂತರಿಕ ಸಮಸ್ಯೆಗಳ ಬಗ್ಗೆ ಚರ್ಚಿಸಲು ದೆಹಲಿಗೆ ಆಗಮಿಸಿದ್ದ ಮಾಜಿ ಕೇಂದ್ರ ಸಚಿವ ಡಿವಿ ಸದಾನಂದಗೌಡ ಅವರಿಗೆ ಹೈಕಮಾಂಡ್ ನಾಯಕರು ಭೇಟಿಗೆ ಅವಕಾಶ ನೀಡಿಲ್ಲ. 2 ದಿನಗಳ ಕಾಯುವಿಕೆ ಬಳಿಕ ಡಿವಿಎಸ್ ತೀವ್ರ ನಿರಾಸೆಯೊಂದಿಗೆ ಬೆಂಗಳೂರಿಗೆ ಮರಳಿದ್ದಾರೆ.

ಈ ವಿಚಾರವಾಗಿ ಎಕ್ಸಾನಲ್ಲಿ ಟೀಕಿಸಿ ಪೋಸ್ಟ್ ಮಾಡಿರುವ ರಾಜ್ಯ ಕಾಂಗ್ರೆಸ್, ”ಹೈಕಮಾಂಡ್ ನಾಯಕರ ಭೇಟಿಗೆ ತೆರಳಿದ್ದ ಸದಾನಂದಗೌಡರು ಮೂರು ದಿನಗಳು ಚಪ್ಪಲಿ ಸವೆಸಿದರೂ ನಡ್ಡಾ ದರ್ಶನವಾಗಲಿಲ್ಲ” ಎಂದು ರಾಜ್ಯ ಕಾಂಗ್ರೆಸ್ ಘಟಕ ಟೀಕಿಸಿದೆ.

”ಸದಾನಂದಗೌಡರು ಮಾಜಿ ಸಿಎಂ, ಮಾಜಿ ಕೇಂದ್ರ ಮಂತ್ರಿ, ಹೀಗಿದ್ದೂ ನಯಾಪೈಸೆ ಬೆಲೆ ಕೊಡದೆ ಅವಮಾನಿಸಿದ ಬಿಜೆಪಿ ಹೈಕಮಾಂಡ್ ಕರ್ನಾಟಕದ ನಾಯಕರನ್ನು ಗುಲಾಮರು ಎಂದುಕೊಂಡಿದೆಯೇ? ಬಿಜೆಪಿ ನಾಯಕರಿಗೆ ಕಿಂಚಿತ್ ಸ್ವಾಭಿಮಾನವಿದ್ದಿದ್ದರೆ ಇಂತಹ ಗುಲಾಮಗಿರಿಗೆ ಒಡ್ಡಿಕೊಳ್ಳುತ್ತಿರಲಿಲ್ಲ” ಎಂದು ಹೇಳಿದೆ.

”ಸದಾನಂದಗೌಡರನ್ನು ತಾವೇ ಕರೆಸಿಕೊಂಡು ತಾವೇ ನಿರ್ಲಕ್ಷಿಸುತ್ತಿರುವುದು ಮಹಾ ಅವಮಾನವಲ್ಲವೇ?” ಎಂದು ರಾಜ್ಯ ಬಿಜೆಪಿ ನಾಯಕರಿಗೆ ಕೇಳಿದೆ.

”ಬಿಜೆಪಿ ನಾಯಕರಿಗೆ ಕನಿಷ್ಠ ಸ್ವಾಭಿಮಾನವಿದ್ದರೆ ಇಂತಹ ಗುಲಾಮಗಿರಿಯಿಂದ ಹೊರಬರಲಿ. ಕನ್ನಡಿಗರ ಸ್ವಾಭಿಮಾನದ ಕೆಚ್ಚನ್ನು ತೋರಿಸಲಿ” ಎಂದು ಕಾಂಗ್ರೆಸ್ ಪೋಸ್ಟ್ ಮಾಡಿದೆ.

ರಾಜ್ಯ ಬಿಜೆಪಿಯ ಆಂತರಿಕ ಸಮಸ್ಯೆಗಳ ಬಗ್ಗೆ ಚರ್ಚಿಸಲು ದೆಹಲಿಗೆ ಆಗಮಿಸಿದ್ದ ಮಾಜಿ ಕೇಂದ್ರ ಸಚಿವ ಡಿವಿ ಸದಾನಂದಗೌಡ ಅವರಿಗೆ ಹೈಕಮಾಂಡ್ ನಾಯಕರು ಭೇಟಿಗೆ ಅವಕಾಶ ನೀಡಿಲ್ಲ. 2 ದಿನಗಳ ಕಾಯುವಿಕೆ ಬಳಿಕ ಡಿವಿಎಸ್ ತೀವ್ರ ನಿರಾಸೆಯೊಂದಿಗೆ ಬೆಂಗಳೂರಿಗೆ ಮರಳಿದ್ದಾರೆ.

ರಾಜ್ಯ ಬಿಜೆಪಿಯಲ್ಲಿನ ಸಮಸ್ಯೆ ಉಲ್ಲೇಖಿಸಿ ಮತ್ತು 2024 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ವಿರುದ್ಧ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರಿಗೆ ಡಿವಿ ಸದಾನಂದಗೌಡ ಪತ್ರ ಬರೆದಿದ್ದರು. ಪತ್ರ ಓದಿದ್ದ ಜೆಪಿ ನಡ್ಡಾ ದೆಹಲಿಯಲ್ಲಿ ಬಂದು ಭೇಟಿ ಮಾಡಿ, ಚರ್ಚಿಸಲು ಸೂಚನೆ ನೀಡಿದ್ದರು.

ಜೆಪಿ ನಡ್ಡಾ ಸೂಚನೆ ಹಿನ್ನೆಲೆ ಬುಧವಾರ ದೆಹಲಿಗೆ ಬಂದಿದ್ದ ಡಿವಿಎಸ್, ಜೆಪಿ ನಡ್ಡಾ ಸೇರಿದಂತೆ ಬೇರೆ ಬೇರೆ ನಾಯಕರ ಭೇಟಿಗೆ ಪ್ರಯತ್ನಿಸಿದರು. ಆದರೆ ಪಂಚ ರಾಜ್ಯಗಳ ಚುನಾವಣೆ ಭರದಲ್ಲಿರುವ ವರಿಷ್ಠರು ಭೇಟಿಗೆ ಸಮಯ ನೀಡಿಲ್ಲ. ಜೆಪಿ ನಡ್ಡಾ ಅವರು 2 ದಿನಗಳ ಸಮಯ ನೀಡುವ ಭರವಸೆ ನೀಡಿ ಕಾಯಿಸಿದ್ದರು.

2 ದಿನಗಳ ಬಳಿಕ ಭೇಟಿಗೆ ಸಮಯ ನೀಡದ ಹಿನ್ನೆಲೆ ಇಂದು (ಶುಕ್ರವಾರ) ಸದಾನಂದಗೌಡ ಬೆಂಗಳೂರಿಗೆ ಮರಳಿದ್ದಾರೆ. ಚೆನ್ನೈನಲ್ಲಿ ನಡೆಯಲಿರುವ ರಕ್ಷಣಾ ಸಮಿತಿ ಸಭೆಯಲ್ಲಿ ಭಾಗಿಯಾಗಲು ಅವರು ಬೆಂಗಳೂರಿಗೆ ಮರಳಿದ್ದು ಅವರು ಸಮಿತಿ ಸಭೆಯಲ್ಲಿ ಭಾಗಿಯಾಗಲಿದ್ದಾರೆ ಎಂದು ಮೂಲಗಳು ಹೇಳಿವೆ.

ಇದನ್ನೂ ಓದಿ: ಮಾನವೀಯತೆ ಎಚ್ಚರಗೊಳ್ಳುವುದು ಯಾವಾಗ?: ಇಸ್ರೇಲ್‌ನ ಹಿಂಸಾಚಾರಕ್ಕೆ ಪ್ರಿಯಾಂಕಾ ಗಾಂಧಿ ಕಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೈಕ್ಷಣಿಕ ಬೇಡಿಕೆಗಳಿಗಾಗಿ ವಾರ್ಧಾ ಎಂಜಿಎಎಚ್‌ವಿಯಲ್ಲಿ ವಿದ್ಯಾರ್ಥಿಗಳ ಅಹೋರಾತ್ರಿ ಸತ್ಯಾಗ್ರಹ: 47ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ, 6 ವಿದ್ಯಾರ್ಥಿಗಳ ವಿರುದ್ಧ ಎಫ್‌ಐಆರ್

ವಾರ್ಧಾ (ಮಹಾರಾಷ್ಟ್ರ): ಮಹಾರಾಷ್ಟ್ರದ ವಾರ್ಧಾದಲ್ಲಿರುವ ಪ್ರತಿಷ್ಠಿತ ಮಹಾತ್ಮ ಗಾಂಧಿ ಅಂತರರಾಷ್ಟ್ರೀಯ ಹಿಂದಿ ವಿಶ್ವವಿದ್ಯಾಲಯದಲ್ಲಿ (ಎಂಜಿಎಎಚ್‌ವಿ) ಶೈಕ್ಷಣಿಕ ಹಾಗೂ ವಿದ್ಯಾರ್ಥಿ ಕಲ್ಯಾಣಕ್ಕೆ ಸಂಬಂಧಿಸಿದ ವಿವಿಧ ಮೂಲಭೂತ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ವಿದ್ಯಾರ್ಥಿಗಳು ನಡೆಸುತ್ತಿರುವ ಸತ್ಯಾಗ್ರಹವು...

ಮೀಸಲಾತಿ ವಿರೋಧಿ ಬೇಡಿಕೆಗಳ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿ: ಕೇಂದ್ರ ಸಚಿವ ಅಠಾವಳೆ ಆಗ್ರಹ

ಮೀಸಲಾತಿಯನ್ನು ವಿರೋಧಿಸುವ ಅಥವಾ ಅದನ್ನು ರದ್ದುಗೊಳಿಸಲು ಆಗ್ರಹಿಸುವವರ ವಿರುದ್ಧ ದೇಶದ್ರೋಹದ ಪ್ರಕರಣಗಳನ್ನು ದಾಖಲಿಸಬೇಕೆಂದು ಕೇಂದ್ರ ಸಚಿವ ಹಾಗೂ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ (ಅಠಾವಳೆ) ಅಧ್ಯಕ್ಷ ರಾಮದಾಸ್ ಅಠಾವಳೆ ಭಾನುವಾರ ಆಗ್ರಹಿಸಿದ್ದಾರೆ. ಮೀಸಲಾತಿ ವಿರೋಧಿಸಿ...

Karnataka SIR : ಇಂದು ಕರಡು ಪಟ್ಟಿ ಪ್ರಕಟ; 43.80 ಲಕ್ಷ ಮತದಾರರಿಗೆ ದಾಖಲೆ ಕೇಳಿ ನೋಟಿಸ್

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್‌) ಮನೆ ಮನೆ ಗಣತಿಯ (ಎನ್ಯುಮರೇಷನ್ ಫಾರಂ ಹಂತ) ಬಳಿಕ ಕರಡು ಮತದಾರರ ಪಟ್ಟಿಯನ್ನು ರಾಜ್ಯ ಚುನಾವಣಾ ಆಯೋಗ ಇಂದು (ಆ.24, ಸೋಮವಾರ) ಪ್ರಕಟಿಸಲಿದೆ....

ಅಮೆರಿಕದೊಂದಿಗಿನ ಯುದ್ಧಕ್ಕೆ ಇರಾನ್ 40 ವರ್ಷಗಳಿಂದ ಸಿದ್ಧವಾಗಿತ್ತು: ನಿವೃತ್ತ ಲೆಫ್ಟಿನೆಂಟ್ ಜನರಲ್ ಧಿಲ್ಲೋನ್

"ತನ್ನ ಅತ್ಯುನ್ನತ ನಾಯಕತ್ವವನ್ನು ಕಳೆದುಕೊಳ್ಳುವಂತಹ ತುರ್ತು ಪರಿಸ್ಥಿತಿಗಳು ಸೇರಿದಂತೆ, ಅಮೆರಿಕದೊಂದಿಗಿನ ಸಂಭಾವ್ಯ ಯುದ್ಧಕ್ಕಾಗಿ ಇರಾನ್ ನಾಲ್ಕು ದಶಕಗಳಿಂದ ಸಿದ್ಧತೆ ನಡೆಸಿದೆ. ಹೀಗಾಗಿ ಎದುರಾಳಿಗಳಿಗೆ ಆ ದೇಶವನ್ನು ಸಂಪೂರ್ಣವಾಗಿ ನಾಶಪಡಿಸುವುದು ಕಷ್ಟಕರವಾಗಿದೆ" ಎಂದು ಭಾರತೀಯ...

ಸಚಿವ ಬಿ. ನಾಗೇಂದ್ರ ವಜಾಗೆ ಆಗ್ರಹಿಸಿ ಆಗಸ್ಟ್ 24ರಂದು ವಿಧಾನಸೌಧ ಮುತ್ತಿಗೆಗೆ ಕರೆ ನೀಡಿದ ಬಿಜೆಪಿ: ಉಲ್ಬಣಗೊಂಡ ರಾಜಕೀಯ ಸಂಘರ್ಷ

ಕರ್ನಾಟಕದ ರಾಜಕೀಯ ವಲಯದಲ್ಲಿ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣಕಾಸು ಅಕ್ರಮ ಪ್ರಕರಣವು ಭಾರಿ ಸಂಚಲನ ಮೂಡಿಸಿದ್ದು, ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಮತ್ತು ವಿರೋಧ ಪಕ್ಷಗಳ ನಡುವಿನ ಸಮರ...

ಕೇರಳ ವಿಶ್ವವಿದ್ಯಾಲಯದಲ್ಲಿ ಜಾತಿ ತಾರತಮ್ಯ; ದಲಿತ ಪಿಎಚ್‌ಡಿ ಸಂಶೋಧಕಿಯಿಂದ ಆರೋಪ

ತುಂಚತ್ ಎಝುತ್ತಚ್ಚನ್ ಮಲಯಾಳಂ ವಿಶ್ವವಿದ್ಯಾಲಯದ (ಟಿಇಎಂಯು) ದಲಿತ ಸಂಶೋಧಕಿಯೊಬ್ಬರು, "ಸಹಾಯಕ ಪ್ರಾಧ್ಯಾಪಕರೊಬ್ಬರು ತಮ್ಮ ವಿರುದ್ಧ ಜಾತಿ ಆಧಾರಿತ ತಾರತಮ್ಯ, ಕಿರುಕುಳ ಮತ್ತು ಪಿಎಚ್‌ಡಿ ಸಂಶೋಧನೆಗೆ ಅಡ್ಡಿಪಡಿಸುತ್ತಿದ್ದಾರೆ" ಎಂದು ಆರೋಪಿಸಿದ್ದಾರೆ. ಆಗಸ್ಟ್ 15 ರಿಂದ ತಿರೂರಿನ...

ಉತ್ತರ ಪ್ರದೇಶ| ಆಹಾರ ಸುರಕ್ಷತಾ ಅಧಿಕಾರಿಗಳ ದಾಳಿ; ತನ್ನದೇ ಅಂಗಡಿಯ ಸಿಹಿತಿಂಡಿ ತಿನ್ನಲು ನಿರಾಕರಿಸಿದ ಮಾಲೀಕ

ಆಹಾರ ಸುರಕ್ಷತಾ ದಾಳಿಯ ವೇಳೆ ಸಿಹಿ ತಿಂಡಿ ಅಂಗಡಿಯ ಮಾಲೀಕನೊಬ್ಬ ತನ್ನದೇ ಅಂಗಡಿಯಲ್ಲಿ ಮಾರಾಟಕ್ಕಿಟ್ಟಿದ್ದ ಸಿಹಿತಿಂಡಿಯನ್ನು ತಿನ್ನಲು ನಿರಾಕರಿಸಿ ಸುದ್ದಿಯಾಗಿರುವ ಘಟನೆ ಉತ್ತರ ಪ್ರದೇಶದ ಹಮೀರ್‌ಪುರದಲ್ಲಿ ನಡೆದಿದೆ. ಕಲಬೆರಕೆ ಹಾಗೂ ನಕಲಿ ಸಿಹಿತಿಂಡಿಗಳನ್ನು ಮಾರಾಟ...

ದೇಶದ ಅಭಿವೃದ್ಧಿಗೆ ಕೌಶಲ್ಯದ ಕೊರತೆ ಸವಾಲು: 8.7 ಕೋಟಿ ಯುವಜನರು ಶಿಕ್ಷಣ, ಉದ್ಯೋಗದಿಂದ ವಂಚಿತರಾಗಿದ್ದಾರೆ ಎಂದ ನೀತಿ ಆಯೋಗ

ಭಾರತದ ಆರ್ಥಿಕ ಪ್ರಗತಿ ಹಾಗೂ ಭವಿಷ್ಯದ ಅಭಿವೃದ್ಧಿಯ ಹಾದಿಯಲ್ಲಿ ದೇಶದ ಯುವಶಕ್ತಿಯನ್ನು ಬಳಸಿಕೊಳ್ಳುವುದು ಅತ್ಯಂತ ನಿರ್ಣಾಯಕವಾಗಿದೆ. ಆದರೆ ಪ್ರಸ್ತುತ ದೇಶದಲ್ಲಿ ಕೋಟ್ಯಂತರ ಯುವಜನರು ಯಾವುದೇ ರೀತಿಯ ಶಿಕ್ಷಣ, ಉದ್ಯೋಗ ಅಥವಾ ಕೌಶಲ್ಯ ತರಬೇತಿಯಲ್ಲಿ...

ಮೀಸಲಾತಿ ಭಿಕ್ಷೆಯಲ್ಲ, ಸಾಂವಿಧಾನಿಕ ಹಕ್ಕು: ಕೇಂದ್ರ ಸಚಿವ ಚಿರಾಗ್ ಪಾಸ್ವಾನ್

"ಯಾರದ್ದೋ ಬೇಡಿಕೆಗೆ ಮೀಸಲಾತಿಯನ್ನು ರದ್ದುಗೊಳಿಸಲು ಸಾಧ್ಯವಿಲ್ಲ. ಇದು ತಲೆಮಾರುಗಳಿಂದ ಸಾಮಾಜಿಕ ತಾರತಮ್ಯವನ್ನು ಎದುರಿಸಿದ ಸಮುದಾಯಗಳನ್ನು ಬೆಂಬಲಿಸಲು ಇರುವ ಸಾಂವಿಧಾನಿಕ ಹಕ್ಕು" ಎಂದು ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ಶುಕ್ರವಾರ ಹೇಳಿದ್ದಾರೆ. ದೆಹಲಿಗೆ ತೆರಳುವ...

ಸರ್ಕಾರಿ ಶಾಲೆಗೆ ಅತಿಕ್ರಮಣ ಮತ್ತು ಶಿಕ್ಷಕರಿಗೆ ಬೆದರಿಕೆ ಆರೋಪ: ಲಾತೂರ್‌ನಲ್ಲಿ ಸಿಜೆಪಿ ನಾಯಕ ಅಭಿಜೀತ್ ದೀಪ್ಕೆ ವಿರುದ್ಧ ಎಫ್‌ಐಆರ್ ದಾಖಲು

ಅನುಮತಿಯಿಲ್ಲದೆ ಸರ್ಕಾರಿ ಶಾಲೆಯ ತರಗತಿ ಕೊಠಡಿಗೆ ಪ್ರವೇಶಿಸಿ, ಶೈಕ್ಷಣಿಕ ಕಾರ್ಯಗಳಿಗೆ ಅಡ್ಡಿಪಡಿಸಿದ ಹಾಗೂ ಕರ್ತವ್ಯದಲ್ಲಿದ್ದ ಶಿಕ್ಷಕರಿಗೆ ಬೆದರಿಕೆಯೊಡ್ಡಿದ ಆರೋಪದ ಮೇಲೆ ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಚಾಲಕ ಅಭಿಜೀತ್ ದೀಪ್ಕೆ ಮತ್ತು ಅವರ...