Homeಕರ್ನಾಟಕಕೇಂದ್ರ ಬಿಜೆಪಿ ಸರ್ಕಾರ ಕರ್ನಾಟಕದ ಮೇಲೆ ಸೇಡು ತೀರಿಸಿಕೊಳ್ಳುತ್ತಿದೆಯೇ?: ಸಿಎಂ ಸಿದ್ದರಾಮಯ್ಯ

ಕೇಂದ್ರ ಬಿಜೆಪಿ ಸರ್ಕಾರ ಕರ್ನಾಟಕದ ಮೇಲೆ ಸೇಡು ತೀರಿಸಿಕೊಳ್ಳುತ್ತಿದೆಯೇ?: ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಸ್ವಾಭಿಮಾನಿ ಕನ್ನಡಿಗರ ಪ್ರಶ್ನೆ ಎಂಬ ಹ್ಯಾಶ್‌ಟ್ಯಾಗ್ ಮೂಲಕ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಎಕ್ಸಾನಲ್ಲಿ ವಾಗ್ದಾಳಿ ನಡೆಸಿದ್ದಾರೆ.

ಈ ಬಗ್ಗೆ ಸರಣಿ ಪೋಸ್ಟ್ ಮಾಡಿರುವ ಅವರು, ”ಪ್ರಧಾನಿ ನರೇಂದ್ರ ಮೋದಿ ಅವರೇ, 2019ರಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದಾಗಿ ರಾಜ್ಯ ಸಾವು ನೋವಿನಲ್ಲಿ ಮುಳುಗಿತು, ಲಕ್ಷಾಂತರ ಕುಟುಂಬಗಳು ಮನೆ, ಆಸ್ತಿಪಾಸ್ತಿ ಕಳೆದುಕೊಂಡು ಬೀದಿಪಾಲಾದವು, ಆದರೂ ನೀವು ಕರ್ನಾಟಕಕ್ಕೆ ಬರಲಿಲ್ಲ. ರಾಜ್ಯದ ಜನರಿಗಾದ ಅಪಾರ ನಷ್ಟಕ್ಕೆ ಕೇಂದ್ರದ ನೆರವಿನ ಮೊರೆ ಹೋದರೆ ಮತ್ತೆ ಕನ್ನಡಿಗರಿಗೆ ಸಿಕ್ಕಿದ್ದು ಬಿಡಿಗಾಸು ಮಾತ್ರ. ನಿಮ್ಮ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರ ಕರ್ನಾಟಕದ ಮೇಲೆ ಸೇಡು ತೀರಿಸಿಕೊಳ್ಳುತ್ತಿದೆಯೇ? ಇದು ನನ್ನ ಪ್ರಶ್ನೆ ಮಾತ್ರವಲ್ಲ, ನಾಡಿನ ಆರೂವರೆ ಕೋಟಿ ಸ್ವಾಭಿಮಾನಿ ಕನ್ನಡಿಗರ ಪ್ರಶ್ನೆ” ಎಂದು ಕಿಡಿಕಾರಿದ್ದಾರೆ.

”2017ರಲ್ಲಿ ಬರದಿಂದ ತತ್ತರಿಸಿಹೋಗಿದ್ದ ಕರ್ನಾಟಕದ ಜನತೆ ಕೇಂದ್ರದ ನೆರವಿಗಾಗಿ ನಿಮ್ಮತ್ತ ನೋಡುತ್ತಿದ್ದರು. ಆದರೆ ನಿಮ್ಮಿಂದ ನಮಗೆ ಸಿಕ್ಕಿದ್ದು ಬಿಡಿಗಾಸು ಪರಿಹಾರ. ಪ್ರಧಾನಿ ನರೇಂದ್ರ ಮೋದಿ ಅವರೇ ಕನ್ನಡಿಗರ ಮೇಲೇಕೆ ಈ ಮಲತಾಯಿ ಧೋರಣೆ? ನಿಮ್ಮ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರ ಕರ್ನಾಟಕದ ಮೇಲೆ ಸೇಡು ತೀರಿಸಿಕೊಳ್ಳುತ್ತಿದೆಯೇ? ಇದು ನನ್ನ ಪ್ರಶ್ನೆ ಮಾತ್ರವಲ್ಲ, ನಾಡಿನ ಆರೂವರೆ ಕೋಟಿ ಸ್ವಾಭಿಮಾನಿ ಕನ್ನಡಿಗರ ಪ್ರಶ್ನೆ” ಎಂದಿದ್ದಾರೆ.

”ರಾಜ್ಯದ 216 ತಾಲೂಕುಗಳು ಭೀಕರ ಬರದಿಂದ ಕಂಗೆಟ್ಟಿವೆ, ಈ ವರೆಗೆ ಕೇಂದ್ರದಿಂದ ನಯಾಪೈಸೆ ಪರಿಹಾರದ ಹಣ ಬಿಡುಗಡೆಯಾಗಿಲ್ಲ. ಪ್ರಧಾನಿ ನರೇಂದ್ರ ಮೋದಿ ಅವರೇ, ಜಗತ್ತಿನ ಕಷ್ಟ – ದು:ಖಕ್ಕೆಲ್ಲ ಮಿಡಿಯುವ ನಿಮ್ಮ ‘ವಿಶಾಲ ಹೃದಯ ಕನ್ನಡಿಗರ ಬಗ್ಗೆ ಇಷ್ಟೊಂದು ಕಟುವಾಗಿರುವುದು ಯಾಕೆ? ನಿಮ್ಮ ನೇತೃತ್ವದ ಕೇಂದ್ರ ಬಿಜೆಪಿ  ಸರ್ಕಾರ ಕರ್ನಾಟಕದ ಮೇಲೆ ಸೇಡು ತೀರಿಸಿಕೊಳ್ಳುತ್ತಿದೆಯೇ? ಇದು ನನ್ನ ಪ್ರಶ್ನೆ ಮಾತ್ರವಲ್ಲ, ನಾಡಿನ ಆರೂವರೆ ಕೋಟಿ ಸ್ವಾಭಿಮಾನಿ ಕನ್ನಡಿಗರ ಪ್ರಶ್ನೆ” ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

‘ಟಿಪ್ಪು ಸುಲ್ತಾನ್’ ಸಿನಿಮಾದಲ್ಲಿ ಶಾರುಖ್ ಖಾನ್ ನಟಿಸಲಿದ್ದಾರೆ ಎಂಬುವುದು ಸುಳ್ಳು

0
"ಜಿಹಾದಿ ಶಾರುಖ್ ಖಾನ್‌ನ ಭಾರೀ ಬಜೆಟ್‌ನಿಂದ ತಯಾರಾದ ದೇಶದ್ರೋಹಿ, ಮತಾಂಧ ತಿಪ್ಪೆ ಸುಲ್ತಾನನ ನಕಲಿ ಚರಿತ್ರೆ ಬರುತ್ತಿದೆ. ಇಂತಹ ದೇಶದ್ರೋಹಿಯ ಸಿನಿಮಾವನ್ನು ಬಹಿಷ್ಕರಿಸಲು ಶೇರ್ ಮಾಡಿ" ಎಂದು ಪೋಸ್ಟರ್ ಒಂದನ್ನು ಸಾಮಾಜಿಕ ಜಾಲತಾಣಗಳಲ್ಲಿ...