ಬೆಲೆಯೇರಿಕೆಯಿಂದ ತತ್ತರಿಸಿರುವ ಜನರಿಗೆ ಕೇಂದ್ರ ಸರಕಾರ ಮತ್ತೆ ಶಾಕ್ ನೀಡಿದ್ದು, ವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿ 101.50ರೂ ಹೆಚ್ಚಳವಾಗಿದೆ.
ಕಳೆದ ಎರಡು ತಿಂಗಳಲ್ಲಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ ನಡೆದ ಎರಡನೇ ಬೆಲೆ ಏರಿಕೆಯಾಗಿದೆ. ಪರಿಷ್ಕೃತ ದರ ಇಂದಿನಿಂದಲೇ ಜಾರಿಗೆ ಬರಲಿದೆ.
ವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿ ಮಾತ್ರ ಹೆಚ್ಚಳವಾಗಿದ್ದು, ಮನೆಗೆ ಬಳಸುವ ಅಡುಗೆ ಅನಿಲ ದರದಲ್ಲಿ ಯಾವುದೇ ಬದಲಾವಣೆಗಳು ಆಗಿಲ್ಲ.
ಬೆಲೆಯೇರಿಕೆಯಿಂದಾಗಿ 19 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆ ಈಗ ಮುಂಬೈನಲ್ಲಿ 1,785.50 ರೂ.ಗೆ ತಲುಪಿದೆ. ಚೆನ್ನೈನಲ್ಲಿ 19 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆ 1,999.50 ರೂ. ಮತ್ತು ದೆಹಲಿಯಲ್ಲಿ ಇದು 1,833 ರೂ.ಗೆ ಮತ್ತು ಕೋಲ್ಕತ್ತದಲ್ಲಿ 1943ರೂ.ಗೆ ಹೆಚ್ಚಳವಾಗಿದೆ. ಬೆಂಗಳೂರಿನಲ್ಲಿ 19 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆ 1914 ರೂ.ಗೆ ತಲುಪಿದೆ.
ಅಕ್ಟೋಬರ್ 1 ರಂದು ವಾಣಿಜ್ಯ ಸಿಲಿಂಡರ್‌ಗಳ ಬೆಲೆಯನ್ನು ಸುಮಾರು 209 ರೂಪಾಯಿಗೆ ಹೆಚ್ಚಿಸಲಾಗಿತ್ತು. ಈಗ ಮತ್ತೆ ಏರಿಕೆ ಆಗಿದ್ದು, ಕಳೆದ ಒಂದು ತಿಂಗಳಲ್ಲಿ ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಸಿಲಿಂಡರ್‌ಗಳ ಬೆಲೆಯಲ್ಲಿ 310ರೂ. ಹೆಚ್ಚಳವಾಗಿದೆ.
VIDEO | The price of commercial LPG cylinders has been hiked by Rs 101.50 across the country, effective immediately.
Now a 19kg commercial LPG cylinder will cost Rs 1,785.50 in Mumbai, the cheapest among the four metros. The price in Chennai will be the dearest, at Rs 1,999.50.… pic.twitter.com/BTGuw1XLaT
— Press Trust of India (@PTI_News) November 1, 2023
ಇದನ್ನು ಓದಿ: ಗಾಝಾದ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಅಲ್ ಜಝೀರಾ ಸಿಬ್ಬಂದಿಯ ಕುಟುಂಬದ 19 ಮಂದಿ ಬಲಿ


