Homeಮುಖಪುಟತಮಿಳುನಾಡು: ಗುಂಪು ದಾಳಿ; ದಲಿತ ಸಮುದಾಯದ 10 ಮಂದಿಗೆ ಗಾಯ

ತಮಿಳುನಾಡು: ಗುಂಪು ದಾಳಿ; ದಲಿತ ಸಮುದಾಯದ 10 ಮಂದಿಗೆ ಗಾಯ

- Advertisement -
- Advertisement -

ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಸೊಕ್ಕಡಿ ಗ್ರಾಮದಲ್ಲಿ ಎಐಎಡಿಎಂಕೆಯ ಪಂಚಾಯತ್ ಸದಸ್ಯೆ ಮತ್ತು ಆಕೆಯ ಪತಿ ಸೇರಿದಂತೆ ಜನರ ಗುಂಪು ನಡೆಸಿದ ದಾಳಿಯಲ್ಲಿ ದಲಿತ ಸಮುದಾಯದ  10 ಮಂದಿ ಗಾಯಗೊಂಡಿದ್ದಾರೆ.

ದಲಿತ ಸಮುದಾಯದ ಜನರು ತಮ್ಮ ವಸತಿ ಪ್ರದೇಶದ ಬಳಿ ಕಲ್ಲು ಪಾಲಿಶ್ ಮಾಡುವ ಕೆಲಸಕ್ಕೆ ವಿರೋಧ ವ್ಯಕ್ತಪಡಿಸಿದ ಬಳಿಕ ಸಂಘರ್ಷಗಳು ನಡೆದಿದೆ. ಎಐಎಡಿಎಂಕೆಯ ಕೃಷ್ಣಗಿರಿ ವೆಸ್ಟ್ ಯೂನಿಯನ್ ಕಾರ್ಯದರ್ಶಿ ಸೊಕ್ಕಡಿ ರಾಜನ್, ಪಂಚಾಯತ್ ನಾಯಕಿ ಕೋಡಿಲ ರಾಮಲಿಂಗಂ ಮತ್ತು ಅವರ ಪತಿ ರಾಮಲಿಂಗಂ ಅವರು ಜಾತಿ ನಿಂದನೆಗಳನ್ನು ಮಾಡಿದ್ದು, ಬಳಿಕ ದಲಿತರ ಮೇಲೆ ಕಲ್ಲು ತೂರಾಟ ಮಾಡಲು ಜನರನ್ನು ಪ್ರೇರೇಪಣೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ ಸೊಕ್ಕಡಿ ರಾಜನ್ ಮತ್ತು ರಾಮಲಿಂಗಂ ವಿರುದ್ಧ ಪೊಲೀಸರು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.

120ಕ್ಕೂ ಹೆಚ್ಚು ದಲಿತ ಕುಟುಂಬಗಳು ವಾಸಿಸುವ ಗ್ರಾಮದಲ್ಲಿ ಕಲ್ಲು ಪಾಲಿಶ್ ಮಾಡುವುದನ್ನು ಸ್ಥಳೀಯರು ವಿರೋಧಿಸಿದ್ದಾರೆ. ಇದರಿಂದ ಆರೋಗ್ಯ ಸಂಬಂಧಿತ ಸಮಸ್ಯೆಯಾಗುತ್ತದೆ ಎಂದು ಹೇಳಿದ್ದರು. ಇದರಿಂದ ಕೋಪಗೊಂಡು ದಲಿತರು ವಾಸಿಸುತ್ತಿದ್ದ ವಸತಿ ಪ್ರದೇಶದಲ್ಲಿ ಕಲ್ಲು ತೂರಾಟ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.

ಈ ಬಗ್ಗೆ ಸೊಕ್ಕಾಡಿಯ ದಲಿತ ನಿವಾಸಿಯೊಬ್ಬರು ಮಾತನಾಡಿ, ಅ.29ರಂದು ಕೆಲವು ಯುವಕರು ತಮ್ಮ ಮನೆಗೆ ಕಲ್ಲಿನ ಧೂಳು ಬಂದು ಆರೋಗ್ಯ ಸಮಸ್ಯೆಯಾಗುತ್ತದೆ. ಇದರಿಂದ  ಕಲ್ಲು ಪಾಲಿಶ್ ನಿಲ್ಲಿಸುವಂತೆ ಸಂಬಂಧಪಟ್ಟವರಿಗೆ ಆಗ್ರಹಿಸಿದ್ದರು. ಇದಾದ ಕೆಲವೇ ಸಮಯದಲ್ಲಿ ಸ್ಥಳಕ್ಕೆ ಬಂದ ಸೊಕ್ಕಾಡಿ ರಾಜನ್ ಅಲ್ಲಿದ್ದ ಜನರಿಗೆ ಜಾತಿ ನಿಂದನೆ ಮಾಡಿದ್ದರು. ಆ ಬಳಿಕ ವಾಗ್ವಾದ ನಡೆದು ಗ್ರಾಮದಲ್ಲಿ 30 ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು.

ಆದರೆ ತಡರಾತ್ರಿ ಸೊಕ್ಕಡಿ ರಾಜನ್‌, ಪಂಚಾಯತ್‌ ನಾಯಕಿ ಕೋಡಿಲ ರಾಮಲಿಂಗಂ ಮತ್ತು ಅವರ ಪತಿ ರಾಮಲಿಂಗಂ ಅವರೊಂದಿಗೆ ವೆಲ್ಲಾಲ ಗೌಂಡರ್‌ ಜನರು ಬಂದು ದಲಿತರ ಮನೆಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ.

ಘಟನೆಯಲ್ಲಿ ಗಾಯಗೊಂಡವರನ್ನು ಚಿಕಿತ್ಸೆಗಾಗಿ ಕೃಷ್ಣಗಿರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪೊಲೀಸರು ಎರಡೂ ಕಡೆಯ 23 ಮಂದಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಅವರಲ್ಲಿ 13 ಜನರನ್ನು ಬಂಧಿಸಲಾಗಿದೆ.

ಈ ಬಗ್ಗೆ ಗ್ರಾಮದ ಇನ್ನೋರ್ವ ವ್ಯಕ್ತಿ ಮಾತನಾಡಿದ್ದು, ಮೂರು ತಿಂಗಳ ಹಿಂದೆ ಗ್ರಾಮದಲ್ಲಿ ಕಲ್ಲಿನ ಪಾಲಿಶ್ ಮಾಡುವ ಕೆಲಸ ಪ್ರಾರಂಭಿಸಿದ್ದರು. ಹಲವು ಬಾರಿ ನಾವು ಮನೆಗಳಿಗೆ ಧೂಳು ಹರಡದಂತೆ ಕ್ರಮಕೈಗೊಳ್ಳುವಂತೆ ಮನವಿ ಮಾಡಿದ್ದೆವು. ಮನೆಯ ಆಹಾರ, ನೀರು ಎಲ್ಲಾ ದೂಳಲ್ಲಿ ಮುಳುಗುತ್ತದೆ. ನಮ್ಮ ಮನವಿಯನ್ನು ಅವರು ಸ್ವೀಕರಿಸಲಿಲ್ಲ ಎಂದು ಹೇಳಿದ್ದಾರೆ.

ಹರೂರಿನ ಸಿಪಿಐ(ಎಂ) ಮಾಜಿ ಶಾಸಕ ಡಿಲ್ಲಿ ಬಾಬು ಈ ಕುರಿತು ಮಾತನಾಡಿದ್ದು, ಈ ಸಮಸ್ಯೆ ಉಲ್ಬಣಗೊಂಡಾಗ ಪೊಲೀಸರು ದಲಿತರಿಗೆ ಯಾವುದೇ ರಕ್ಷಣೆ ನೀಡಲಿಲ್ಲ. ಇದು ಪೊಲೀಸರ ಸಮ್ಮುಖದಲ್ಲಿ ನಡೆದಿರುವುದು ಆಶ್ಚರ್ಯಕರವಾಗಿದೆ ಮತ್ತು ಈಗ ಪೊಲೀಸರು ದಾಳಿಕೋರರು ಮತ್ತು ಸಂತ್ರಸ್ತರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.  ಪೊಲೀಸ್ ವರಿಷ್ಠಾಧಿಕಾರಿ ಸರೋಜ್ ಕುಮಾರ್ ಠಾಕೂರ್ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿದರೂ ಪರಿಸ್ಥಿತಿ ನಿಯಂತ್ರಿಸಲು ಯಾವುದೇ ಕ್ರಮಗಳನ್ನು ಕೈಗೊಂಡಿಲ್ಲ ಎಂದು ಆರೋಪಿಸಿದ್ದಾರೆ.

ಇದನ್ನು ಓದಿ: ಗಾಝಾದ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಅಲ್ ಜಝೀರಾ ಸಿಬ್ಬಂದಿಯ ಕುಟುಂಬದ 19 ಮಂದಿ ಬಲಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...

ಜನಾಂಗೀಯ ದ್ವೇಷ: ಅಮೆರಿಕಾದ ಸ್ಯಾನ್ ಡಿಯಾಗೋ ಮಸೀದಿ ಸಂಕೀರ್ಣದಲ್ಲಿ ಗುಂಡಿನ ದಾಳಿ: ಮೂವರು ಸಾವು

ಸ್ಯಾನ್ ಡಿಯಾಗೋ: ಅಮೆರಿಕದ ಸ್ಯಾನ್ ಡಿಯಾಗೋ ನಗರದ ಇಸ್ಲಾಮಿಕ್ ಸೆಂಟರ್ ಆಫ್ ಸ್ಯಾನ್ ಡಿಯಾಗೋ (ICSD) ಮಸೀದಿ ಸಂಕೀರ್ಣದಲ್ಲಿ ಸೋಮವಾರ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಈ ಘಟನೆಯನ್ನು ಸಂಭಾವ್ಯ...

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...