Homeಮುಖಪುಟದಲಿತ ಬಾಲಕಿಯ ಮೇಲೆ ಗ್ಯಾಂಗ್‌ ರೇಪ್: ಮೂವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ

ದಲಿತ ಬಾಲಕಿಯ ಮೇಲೆ ಗ್ಯಾಂಗ್‌ ರೇಪ್: ಮೂವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ

- Advertisement -
- Advertisement -

ಕೇರಳದ ಕೋಝಿಕ್ಕೋಡ್‌ನಲ್ಲಿ ದಲಿತ ಬಾಲಕಿಯ ಮೇಲೆ ಎರಡು ವರ್ಷಗಳ ಮೊದಲು ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದ ಮೂವರು ಆರೋಪಿಗಳಿಗೆ ನ್ಯಾಯಾಲಯವು ಜೀವಾವಧಿ ಶಿಕ್ಷೆಯನ್ನು ವಿಧಿಸಿದೆ ಮತ್ತು ಪ್ರಕರಣದ ನಾಲ್ಕನೇ ಆರೋಪಿಗೆ 30ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಲಾಗಿದೆ.

ಸಯೂಜಿ, ರಾಹುಲ್ ಹಾಗೂ ಆಕ್ಷಯ್‌ ಎಂಬವರಿಗೆ ತ್ವರಿತ ನ್ಯಾಯಾಲಯದ ನ್ಯಾಯಾಧೀಶರಾದ ಶುಹೈಬ್ ಎಂ. ಅವರು ದಲಿತ ದೌರ್ಜನ್ಯ ಕಾನೂನಿನಡಿ ಜೀವಾವಧಿ ಶಿಕ್ಷೆ ವಿಧಿಸಿದ್ದಾರೆ. ಇನ್ನೋರ್ವ ಆರೋಪಿ ಶಿಬು ದಲಿತ ಸಮುದಾಯಕ್ಕೆ ಸೇರಿದ್ದು, ಅವರ ಮೇಲೆ ದಲಿತ ದೌರ್ಜನ್ಯ ಕಾನೂನಿನಡಿ ಶಿಕ್ಷೆ ವಿಧಿಸಲಾಗಿಲ್ಲ ಎಂದು ಪಬ್ಲಿಕ್‌ ಪ್ರಾಸ್ಯೂಕೂಟರ್‌ ಮನೋಜ್‌ ಅರೋರಾ ಅವರು ಹೇಳಿದ್ದಾರೆ.

ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಅಪರಾಧಕ್ಕಾಗಿ ನ್ಯಾಯಾಲಯವು ಎಲ್ಲಾ ನಾಲ್ವರು ಆರೋಪಿಗಳಿಗೆ ಜೈಲು ಶಿಕ್ಷೆ ವಿಧಿಸಿದೆ ಮತ್ತು ನಾಲ್ವರಿಗೆ ಒಟ್ಟು 5.75 ಲಕ್ಷ ರೂಪಾಯಿ ದಂಡವನ್ನು ವಿಧಿಸಿದೆ.

ಪೋಲೀಸರ ಪ್ರಕಾರ, ಪರಿಶಿಷ್ಟ ಜಾತಿಗೆ ಸೇರಿದ 17 ವರ್ಷದ ಬಾಲಕಿಯ ಮೇಲೆ ನಾಲ್ವರು ಸಾಮೂಹಿಕ ಅತ್ಯಾಚಾರ ಎಸಗಿದ್ದರು. ಅವರಲ್ಲಿ ಓರ್ವ ಆರೋಪಿ ಆಕೆಯ ಸ್ನೇಹಿತ. ಅವರು ಬಾಲಕಿಗೆ ರೆಸಾರ್ಟ್‌ಗೆ ಕರೆದುಕೊಂಡು ಹೋಗಿ ಜ್ಯೂಸ್‌ನಲ್ಲಿ ನಿದ್ರೆ ಮಾತ್ರೆ ಬೆರೆಸಿ ಕೊಟ್ಟು ಅವಳ ಮೇಲೆ ಅತ್ಯಾಚಾರ ಎಸಗಿದ್ದರು.

ನಂತರ ಕುಟ್ಟಿಯಾಡಿಯಲ್ಲಿರುವ ಆಕೆಯ ಮನೆಯ ಬಳಿ ಅವಳನ್ನು ಬಿಟ್ಟು ಅಲ್ಲಿಂದ ತೆರಳಿದ್ದರು ಮತ್ತು ಬಾಲಕಿಗೆ ನಡೆದ ಘಟನೆ ಬಗ್ಗೆ ಯಾರಿಗೂ ಹೇಳದಂತೆ ಬೆದರಿಕೆ ಹಾಕಿದ್ದರು. ಆಘಾತ ಮತ್ತು ಭಯದಿಂದ ಸಂತ್ರಸ್ತೆ ಯಾರಿಗೂ ಏನನ್ನೂ ಹೇಳದೆ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದರು. ಈ ವೇಳೆ ಸ್ಥಳೀಯ ನಿವಾಸಿಗಳು ಆಕೆಯನ್ನು ರಕ್ಷಿಸಿದ್ದಾರೆ. ಬಳಿಕ ಬಾಲಕಿ ಆಕೆ ತನಗೆ ಆದ ಆಘಾತದ ಬಗ್ಗೆ ಮನೆಯವರಿಗೆ ತಿಳಿಸಿದ್ದಾಳೆ. ನಂತರ ಆಕೆಯ ಮನೆಯವರು ಪೊಲೀಸರಿಗೆ ದೂರು ನೀಡಿದ್ದರು.

ಇದನ್ನು ಓದಿ: ಗಾಝಾದ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಅಲ್ ಜಝೀರಾ ಸಿಬ್ಬಂದಿಯ ಕುಟುಂಬದ 19 ಮಂದಿ ಬಲಿ

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ರಾಜಸ್ಥಾನ: ಬಿಜೆಪಿ ಸರ್ಕಾರದ ಯೋಜನೆಯಲ್ಲಿ 1,140 ಕೋಟಿ ರೂ.ನಷ್ಟ: ತಮ್ಮದೇ ಸರಕಾರದ ವಿರುದ್ಧ ಆರೋಪಿಸಿದ...

0
ರಾಜಸ್ಥಾನದ ಬಿಜೆಪಿ ಸರಕಾರ ಅಧಿಕಾರಕ್ಕೇರಿದ ಆರು ತಿಂಗಳಲ್ಲೇ ಬಿಕ್ಕಟ್ಟನ್ನು ಎದುರಿಸುತ್ತಿದ್ದು, ಮುಖ್ಯಮಂತ್ರಿಯ ಅಧೀನದ ಇಲಾಖೆಯಲ್ಲಿನ ವಸತಿ ಯೋಜನೆಯಲ್ಲಿನ ಲೋಪದೋಷವನ್ನು ಕ್ಯಾಬಿನೆಟ್ ಸಚಿವರೋರ್ವರು ಬಹಿರಂಗಪಡಿಸಿದ್ದು, ಇದರಿಂದ ಸರಕಾರದ ಬೊಕ್ಕಸಕ್ಕೆ 1,146 ಕೋಟಿ ರೂ. ನಷ್ಟವಾಗಿದೆ...