Homeಮುಖಪುಟಕೇರಳ: ರಾಜೀವ್‌ ಚಂದ್ರಶೇಖರ್‌ ವಿರುದ್ಧ ಮತ್ತೊಂದು ಪ್ರಕರಣ ದಾಖಲು

ಕೇರಳ: ರಾಜೀವ್‌ ಚಂದ್ರಶೇಖರ್‌ ವಿರುದ್ಧ ಮತ್ತೊಂದು ಪ್ರಕರಣ ದಾಖಲು

- Advertisement -
- Advertisement -

ಕೊಚ್ಚಿಯ ಕನ್ವೆನ್ಷನ್ ಸೆಂಟರ್‌ನಲ್ಲಿ ಯೆಹೋವನ ಸಾಕ್ಷಿಗಳ ಸಮಾವೇಷದಲ್ಲಿ ನಡೆದ ಸ್ಫೋಟಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಮಾಡಿದ ಪೋಸ್ಟ್‌ಗೆ ಸಂಬಂಧಿಸಿ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ವಿರುದ್ಧ ಎರಡನೇ ಪ್ರಕರಣ ದಾಖಲಾಗಿದೆ.

ಕೆಪಿಸಿಸಿ ಡಿಜಿಟಲ್ ಮೀಡಿಯಾ ಕನ್ವೀನರ್ ಪಿ ಸರಿನ್ ನೀಡಿದ ದೂರಿನ ಆಧಾರದ ಮೇಲೆ ಎರ್ನಾಕುಲಂ ಸೆಂಟ್ರಲ್ ಪೊಲೀಸರು ಕೇಂದ್ರ ಸಚಿವರ ವಿರುದ್ಧ ಎರಡನೇ ಪ್ರಕರಣ ದಾಖಲಿಸಿದ್ದಾರೆ.

ಐಪಿಸಿ 153 ಮತ್ತು 153 ಎ ಮತ್ತು ಸೆಕ್ಷನ್ 120 (ಒ) ಅಡಿಯಲ್ಲಿ ರಾಜೀವ್ ಚಂದ್ರಶೇಖರ್‌ ವಿರುದ್ಧ ಎರಡು ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸಚಿವ ರಾಜೀವ್ ಚಂದ್ರಶೇಖರ್ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವ ಪೋಸ್ಟ್‌ನ್ನು ಮಾಡಿದ ಆರೋಪದ ಮೇಲೆ ಎರಡು ದಿನಗಳ ಹಿಂದೆ ಅವರ ವಿರುದ್ಧ ಪ್ರಕರಣ ದಾಖಲಾಗಿದೆ.

ರಾಜೀವ್‌ ಚಂದ್ರಶೇಖರ್ ಮತ್ತು ಬಿಜೆಪಿ ಪ್ರಕರಣ ದಾಖಲಿಸಿರುವ ಬಗ್ಗೆ ಟೀಕಿಸಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಹಮಾಸ್ ಸಂಘಟನೆಯನ್ನು ಓಲೈಸುತ್ತಿದ್ದಾರೆ ಎಂಬುದನ್ನು ತೋರಿಸಿಕೊಟ್ಟ ಕಾರಣಕ್ಕೆ ಈ ಪ್ರಕರಣ ದಾಖಲಿಸಲಾಗಿದೆ ಎಂದು ರಾಜೀವ್  ಹೇಳಿದ್ದಾರೆ.

ಈ ಮೊದಲು ಕೇರಳ ಪೊಲೀಸರು ಯೆಹೋವನ ಸಾಕ್ಷಿಗಳ ಸಮಾವೇಷದಲ್ಲಿನ ಸ್ಪೋಟದ ಬಗ್ಗೆ ಪೋಸ್ಟ್‌ ಮಾಡಿದ್ದ ರಾಜೀವ್‌ ಚಂದ್ರಶೇಖರ್ ವಿರುದ್ಧ ಪ್ರಕರಣ ದಾಖಲಿಸಿದ್ದರು. ಇದೀಗ ಮತ್ತೊಂದು ಪ್ರಕರಣ ದಾಖಲಾಗಿದೆ.

ರಾಜೀವ್ ಚಂದ್ರಶೇಖರ್ ಪೋಸ್ಟ್‌ನಲ್ಲಿ ಏನಿದೆ?

ಭ್ರಷ್ಟಾಚಾರದ ಆರೋಪದ ಮೂಲಕ ಅಪಖ್ಯಾತಿ ಪಡೆದ ಸಿಎಂ ಪಿಣರಾಯಿ ವಿಜಯನ್‌  ನಾಚಿಕೆಯಿಲ್ಲದೆ ತುಷ್ಟೀಕರಣ ರಾಜಕಾರಣ ಮಾಡುತ್ತಿದ್ದಾರೆ. ದೆಹಲಿಯಲ್ಲಿ ಕುಳಿತು ಇಸ್ರೇಲ್ ವಿರುದ್ಧ ಪ್ರತಿಭಟನೆ ನಡೆಸುತ್ತಿರುವಾಗ ಕೇರಳದಲ್ಲಿ ಜಿಹಾದ್‌ಗಾಗಿ ಹಮಾಸ್‌ನ ಮುಕ್ತ ಕರೆಗಳು ಅಮಾಯಕ ಕ್ರಿಶ್ಚಿಯನ್ನರ ಮೇಲೆ ದಾಳಿ ಮತ್ತು ಬಾಂಬ್ ಸ್ಫೋಟಗಳಿಗೆ ಕಾರಣವಾಗುತ್ತಿವೆ ಎಂದು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದರು.

ರಾಜ್ಯದಲ್ಲಿ ದ್ವೇಷ ಮತ್ತು ಜಿಹಾದ್‌ನ್ನು ಮುಕ್ತವಾಗಿ ಬೋಧಿಸಲು INDIA ಮೈತ್ರಿಕೂಟದ ಎರಡು ರಾಜಕೀಯ ಪಕ್ಷಗಳು ಭಯೋತ್ಪಾದಕ ಸಂಘಟನೆ ಹಮಾಸ್‌ನ ಮುಖ್ಯಸ್ಥರಿಗೆ ಅವಕಾಶ ನೀಡಿರುವುದು ಮಾತ್ರ ಕಷ್ಟ ಎಂದು ಹೇಳಿದ್ದರು.

ಚಂದ್ರಶೇಖರ್‌ಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಪಿಣರಾಯ್ ವಿಜಯನ್‌, ಸಚಿವರ ಹೇಳಿಕೆ ಕೋಮುವಾದದಿಂದ ಕೂಡಿದೆ. ವಿಷವುಳ್ಳವರು ವಿಷವನ್ನು ಉಗುಳುತ್ತಲೇ ಇರುತ್ತಾರೆ. ಜವಾಬ್ದಾರಿಯುತ ಸಚಿವರಾಗಿ ಅವರು ಘಟನೆಯ ಬಗ್ಗೆ ತನಿಖೆ ನಡೆಸುತ್ತಿರುವ ತನಿಖಾ ಸಂಸ್ಥೆಗಳಿಗೆ ಕನಿಷ್ಠ ಗೌರವವನ್ನು ತೋರಿಸಬೇಕಾಗಿತ್ತು. ನಿರ್ದಿಷ್ಟ ವರ್ಗವನ್ನು ಗುರಿಯಾಗಿಸಿಕೊಂಡು ತನಿಖೆಯ ಆರಂಭಿಕ ದಿನಗಳಲ್ಲಿ ಸಾರ್ವಜನಿಕ ಹೇಳಿಕೆಗಳನ್ನು ನೀಡಲು ಪ್ರಾರಂಭಿಸಿದ್ದಾರೆ ಎಂದು ಹೇಳಿದ್ದರು.

ಇದನ್ನು ಓದಿ: ಅಪರೂಪದ ಕಾಯಿಲೆಯಿಂದ ಬಳಲುತ್ತಿರುವ ಮಗು: ಚುಚ್ಚು ಮದ್ದಿಗೆ ತೆರಿಗೆ ವಿನಾಯಿತಿ ನೀಡುವಂತೆ ಪ್ರಧಾನಿಗೆ ಸಿಎಂ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...