Homeಮುಖಪುಟಇಸ್ರೇಲ್‌ ವೈಮಾನಿಕ ದಾಳಿಗೆ 'ಪ್ಯಾಲೆಸ್ತೀನ್‌ ಟಿವಿ' ವರದಿಗಾರ ಅಬು ಹತಾಬ್ ಸೇರಿ ಕುಟುಂಬದ 12 ಮಂದಿ...

ಇಸ್ರೇಲ್‌ ವೈಮಾನಿಕ ದಾಳಿಗೆ ‘ಪ್ಯಾಲೆಸ್ತೀನ್‌ ಟಿವಿ’ ವರದಿಗಾರ ಅಬು ಹತಾಬ್ ಸೇರಿ ಕುಟುಂಬದ 12 ಮಂದಿ ಬಲಿ

- Advertisement -
- Advertisement -

ದಕ್ಷಿಣ ಗಾಝಾ ಪಟ್ಟಿಯಲ್ಲಿರುವ ಖಾನ್ ಯೂನಿಸ್ ನಗರದ ಮೇಲೆ ಇಸ್ರೇಲ್‌ ನಡೆಸಿದ ವೈಮಾನಿಕ ದಾಳಿಯಲ್ಲಿ ಫೆಲೆಸ್ತೀನ್ ಚಾನೆಲ್‌ನ ವರದಿಗಾರ ಮೊಹಮ್ಮದ್ ಅಬು ಹತಾಬ್ ಮತ್ತು ಅವರ ಕುಟುಂಬದ 11 ಮಂದಿ ಸದಸ್ಯರು ಬಲಿಯಾಗಿದ್ದಾರೆ.

ಪ್ಯಾಲೆಸ್ತೀನ್‌ ಪ್ರಾಧಿಕಾರದ ಅಧೀನದಲ್ಲಿದ್ದ ‘ಪ್ಯಾಲೆಸ್ತೀನ್ ಟಿವಿ’ಯಲ್ಲಿ ಅಬು ಹತಾಬ್ ಕೆಲಸ ಮಾಡುತ್ತಿದ್ದರು. ಪ್ಯಾಲೆಸ್ತೀನ್‌ ಟಿವಿ, ಇಸ್ರೇಲ್‌ ನಡೆಸಿದ ವೈಮಾನಿಕ ದಾಳಿಯಲ್ಲಿ ಅಬು ಹತಾಬ್‌ ಮತ್ತು ಕುಟುಂಬಸ್ಥರು ಮೃತಪಟ್ಟ ಬಗ್ಗೆ ವರದಿಯನ್ನು ಮಾಡಿದೆ. ಆದರೆ ಈ ಬಗ್ಗೆ ಇಸ್ರೇಲ್‌ ಮಿಲಿಟರಿ ಯಾವುದೇ ಪ್ರತಿಕ್ರಿಯೆಯನ್ನು ನೀಡಿಲ್ಲ.

ಮೃತ 11 ಮಂದಿಯಲ್ಲಿ ಅಬು ಹತಾಬ್ ಅವರ ಪತ್ನಿ, ಮಗ ಮತ್ತು ಸಹೋದರ ಸೇರಿದ್ದಾರೆ ಎಂದು ಪ್ಯಾಲೆಸ್ತೀನ್  ಸುದ್ದಿ ಸಂಸ್ಥೆ ವಫಾ ವರದಿ ಮಾಡಿದೆ.

ಪತ್ರಕರ್ತರ ರಕ್ಷಣಾ ಸಮಿತಿಯು ಈ ಕುರಿತು ಪ್ರತಿಕ್ರಿಯಿಸಿದ್ದು, 1992ರ ಬಳಿಕ ಈ ಪ್ರದೇಶದಲ್ಲಿ ನಡೆದ ಯಾವುದೇ ಸಂಘರ್ಷಕ್ಕಿಂತ ಇದೇ ಮೊದಲ ಬಾರಿಗೆ ದೊಡ್ಡ ಸಂಖ್ಯೆಯಲ್ಲಿ ಪತ್ರಕರ್ತರ ಹತ್ಯೆ ನಡೆದಿದೆ ಎಂದು ದತ್ತಾಂಶಗಳನ್ನು ಉಲ್ಲೇಖಿಸಿ ಮಾಹಿತಿಯನ್ನು ನೀಡಿದೆ.

ವರದಿಯ ಪ್ರಕಾರ ಅ.7 ರಂದು ಹಮಾಸ್ ಮತ್ತು ಇಸ್ರೇಲ್ ನಡುವೆ ಯುದ್ಧ ಆರಂಭವಾದ ಬಳಿಕ 36 ಪತ್ರಕರ್ತರ ಹತ್ಯೆ ನಡೆದಿದೆ. ಅವರಲ್ಲಿ 31 ಮಂದಿ ಪ್ಯಾಲೆಸ್ತೀನಿಯನ್ನರು, ನಾಲ್ವರು ಇಸ್ರೇಲ್ ಪತ್ರಕರ್ತರು ಮತ್ತು ಓರ್ವ ಲೆಬನಾನಿನ ಪತ್ರಕರ್ತನ ಹತ್ಯೆ ನಡೆದಿದೆ ಎಂದು ದತ್ತಾಂಶಗಳು ಬಹಿರಂಗಪಡಿಸಿದೆ.

ಶುಕ್ರವಾರ ಅಬು ಹತಾಬ್ ಅವರ ಅಂತ್ಯಕ್ರಿಯೆ ನಡೆದಿದ್ದು, ಈ ವೇಳೆ ಸಂಬಂಧಿಕರು, ಸ್ನೇಹಿತರು ಮತ್ತು ಪತ್ರಕರ್ತರು ಅಳುತ್ತಿರುವುದು ಮತ್ತು ಪ್ರಾರ್ಥಿಸುತ್ತಿರುವ ಪೋಟೋಗಳು ವೈರಲ್‌ ಆಗಿದೆ.

ಅ.13 ರಂದು ರಾಯಿಟರ್ಸ್‌ನ ಪತ್ರಕರ್ತ ಇಸ್ಸಾಮ್ ಅಬ್ದುಲ್ಲಾ ಅವರ ಹತ್ಯೆ ನಡೆದಿದೆ. ಇಸ್ರೇಲ್‌ ಸೇನೆಯು ಘಟನೆಯನ್ನು ಪರಿಶೀಲಿಸುತ್ತಿದೆ ಎಂದು ಹೇಳಿದೆ. ಪತ್ರಕರ್ತರು ಯುದ್ಧ ವಲಯಗಳ ಬಳಿ ಇರುವುದು ಜೀವಕ್ಕೆ ತೀವ್ರ ಅಪಾಯವನ್ನುಂಟುಮಾಡುತ್ತದೆ ಎಂದು ಹೇಳಿದೆ.

ಕಳೆದ ವಾರ ರಾಯಿಟರ್ಸ್‌ಗೆ ಇಸ್ರೇಲ್‌ ಮಿಲಿಟರಿ ಪಡೆ ಪತ್ರ ಬರೆದಿದ್ದು, ಗಾಝಾದಲ್ಲಿನ ವರದಿಗಾರರ ಸುರಕ್ಷತೆಯನ್ನು ಖಾತರಿಪಡಿಸಲು ಸಾಧ್ಯವಿಲ್ಲ ಎಂದು ಹೇಳಿದೆ. ಏಕೆಂದರೆ ಹಮಾಸ್ ತನ್ನ ಮಿಲಿಟರಿ ಕಾರ್ಯಾಚರಣೆಗಳನ್ನು ನಾಗರಿಕರು ಮತ್ತು ಪತ್ರಕರ್ತರ ಮೇಲೆ ನಡೆಸುತ್ತಿದೆ ಎಂದು ಇಸ್ರೇಲ್‌ ನಡೆಸಿದ ಕೃತ್ಯವನ್ನು ಹಮಾಸ್‌ನ ಮೇಲೆ ಹೊರಿಸಲು ಮುಂದಾಗಿದೆ.

ಯುದ್ಧದ ದೈನಂದಿನ ಭೀಕರತೆಯನ್ನು ಜಗತ್ತಿಗೆ ತೋರಿಸುತ್ತಿದ್ದ ಗಾಝಾದಲ್ಲಿನ ಪತ್ರಕರ್ತರು ತಮ್ಮ ಜೀವನವನ್ನು ಅಥವಾ ಕುಟುಂಬಗಳನ್ನು ಕಳೆದುಕೊಳ್ಳುವಂತಹ ಪರಿಸ್ಥಿತಿ ಉಂಟಾಗಿದೆ. ಅಲ್ ಜಝೀರಾದ ಗಾಝಾ ಬ್ಯೂರೋ ಮುಖ್ಯಸ್ಥ ವೇಲ್ ಅಲ್-ದಹದೌಹ್ ಅವರ ಕುಟುಂಬದ ಹಲವಾರು ಸದಸ್ಯರು ಇಸ್ರೇಲ್‌ ನಡೆಸಿದ ದಾಳಿಯಲ್ಲಿ ಕೊಲ್ಲಲ್ಪಟ್ಟಿದ್ದಾರೆ.

ಇದಲ್ಲದೆ ಗಾಝಾದ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್‌ ನಡೆಸಿದ ದಾಳಿಯಲ್ಲಿ ಅಲ್‌ ಜಝೀರಾ ಮಾದ್ಯಮದ ಬ್ರಾಡ್‌ ಕಾಸ್ಟಿಂಗ್ ಇಂಜಿನಿಯರ್‌ ಮೊಹಮದ್ ಅಬು ಅಲ್-ಕುಮ್ಸಾನ್ ಕುಟುಂಬದ 19 ಸದಸ್ಯರು ಸೇರಿ 50ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದರು.

ಇದನ್ನು ಓದಿ: ಗಾಝಾದ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಅಲ್ ಜಝೀರಾ ಸಿಬ್ಬಂದಿಯ ಕುಟುಂಬದ 19 ಮಂದಿ ಬಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿಯನ್ನು ಪ್ರಶ್ನಿಸಿದ್ದ ನಾರ್ವೆ ಪತ್ರಕರ್ತೆಯ ಭಾರತ ಭೇಟಿಗೆ ತಡೆ : ಕೊನೆ ಕ್ಷಣದಲ್ಲಿ ವೀಸಾ ರದ್ದು

ಕಳೆದ ಮೇ ತಿಂಗಳಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ನಾರ್ವೆಗೆ ಭೇಟಿ ನೀಡಿದ್ದಾಗ, ಅವರಿಗೆ ಪ್ರಶ್ನೆ ಕೇಳಿ ಸುದ್ದಿಯಾಗಿದ್ದ ಅಲ್ಲಿನ ಪತ್ರಕರ್ತೆ ಹೆಲ್ಲೆ ಲಿಂಗ್ ಅವರ ಭಾರತ ಭೇಟಿಗೆ ಕೊನೆ ಕ್ಷಣದಲ್ಲಿ ತಡೆಯೊಡ್ಡಲಾಗಿದೆ ಎಂದು...

ಸ್ಥಳೀಯರ ಹೋರಾಟಕ್ಕೆ ಸಂದ ಜಯ: ‘ನಮ್ಮ ಮೆಟ್ರೋ’ ಪಿಂಕ್ ಲೈನ್‌ನ 3 ನಿಲ್ದಾಣಗಳ ಹೆಸರು ಬದಲಾವಣೆಗೆ ಕೇಂದ್ರದಿಂದ ಅನುಮೋದನೆ!

ಬೆಂಗಳೂರು: 'ನಮ್ಮ ಮೆಟ್ರೋ' ಗುಲಾಬಿ ಮಾರ್ಗದ (Pink Line) ಎಲಿವೇಟೆಡ್‌ ಕಾರಿಡಾರ್‌ನ ಮೂರು ಪ್ರಮುಖ ನಿಲ್ದಾಣಗಳ ಹೆಸರು ಬದಲಾವಣೆಗೆ ರಾಜ್ಯ ಸರ್ಕಾರ ಸಲ್ಲಿಸಿದ್ದ ಪ್ರಸ್ತಾವನೆಗೆ ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ...

ಗಾಝಾದ ನಾಸರ್ ಆಸ್ಪತ್ರೆಯ ಮೇಲೆ ಇಸ್ರೇಲ್‌ನಿಂದ ವೈಮಾನಿಕ ದಾಳಿ : ಕನಿಷ್ಠ 6 ಸಾವು, 20ಕ್ಕೂ ಹೆಚ್ಚು ಜನರಿಗೆ ಗಾಯ

ದಕ್ಷಿಣ ಗಾಝಾದ ನಾಸರ್ ಆಸ್ಪತ್ರೆಯ ಕಟ್ಟಡವೊಂದರ ಮೇಲೆ ಇಸ್ರೇಲ್ ವೈಮಾನಿಕ ದಾಳಿ ನಡೆಸಿದ್ದು, ಕನಿಷ್ಠ ಆರು ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಖಾನ್ ಯೂನಿಸ್‌ನಲ್ಲಿರುವ ಆಸ್ಪತ್ರೆಯ ಶಸ್ತ್ರಚಿಕಿತ್ಸಾ ವಿಭಾಗದ ಮೇಲೆ ದಾಳಿ...

ಮುಸ್ಲಿಂ ದಂಪತಿಗೆ ನಿಂದನೆ; ವಿಡಿಯೋ ವೈರಲ್ ಆದ ಬೆನ್ನಲ್ಲೇ ಕೆಎಸ್‌ಆರ್‌ಟಿಸಿ ಕಂಡಕ್ಟರ್ ಅಮಾನತು

ತಪ್ಪಾಗಿ ಬೇರೆ ಬಸ್ ಹತ್ತಿ ಇಳಿದ ಇಬ್ಬರು ಪ್ರಯಾಣಿಕರ ವಿರುದ್ಧ ಕೋಮುವಾದಿ ಹೇಳಿಕೆಗಳನ್ನು ನೀಡಿದ್ದಾರೆ ಎನ್ನಲಾದ ವೈರಲ್ ವಿಡಿಯೋ ಆಧರಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು (ಕೆಎಸ್‌ಆರ್‌ಟಿಸಿ) ಬಸ್ ಕಂಡಕ್ಟರ್ ಒಬ್ಬರನ್ನು...

ನೊಂದವರ ದನಿಯಾಗಿ, ಶೋಷಿತರ ಹೋರಾಟದ ಶಕ್ತಿಯಾಗಿ ಬೆಳೆದ ಶಿವರಾಮ ಮೋಘ: ಡಾ. ಪಿ. ನಂದಕುಮಾರ್

ಭಾರತದ ಸಾಂಸ್ಕೃತಿಕ ಚರಿತ್ರೆಯಲ್ಲಿ ಹೈದರಾಬಾದ್ ಕರ್ನಾಟಕ’ (ಕಲ್ಯಾಣ ಕರ್ನಾಟಕ) ಪ್ರದೇಶಕ್ಕೆ ವಿಶೇಷವಾದ ಸ್ಥಾನವಿದೆ. ಹಲವು ಸಾಂಸ್ಕೃತಿಕ ವಿಶೇಷತೆಯನ್ನು ಒಳಗೊಂಡಿರುವ ಈ ಪ್ರದೇಶವು ಕಲೆ, ಸಾಹಿತ್ಯ, ಸಂಸ್ಕೃತಿ ಕ್ಷೇತ್ರಗಳಿಗೆ ಮಹತ್ವದ ಕೊಡುಗೆ ನೀಡಿದೆ. ಶ್ರೀವಿಜಯ...

ಅರ್ಜೆಂಟೀನಾದ ನೌಕಾಪಡೆ -ವಾಯುಪಡೆಯನ್ನು ‘ಭಯೋತ್ಪಾದಕ ಸಂಸ್ಥೆಗಳು’ ಎಂದು ಘೋಷಿಸಿದ ಇರಾನ್‌

ಅರ್ಜೆಂಟೀನಾದ ನೌಕಾಪಡೆ ಮತ್ತು ವಾಯುಪಡೆಯನ್ನು ಇರಾನ್ ಸರ್ಕಾರವು ಭಯೋತ್ಪಾದಕ ಸಂಸ್ಥೆಗಳು ಎಂದು ಘೋಷಿಸಿದ್ದು, ಈ ವರ್ಷದ ಆರಂಭದಲ್ಲಿ ಟೆಹ್ರಾನ್‌ನ 'ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್' (ಐಆರ್ ಜಿಸಿ) ಅನ್ನು ಕಪ್ಪುಪಟ್ಟಿಗೆ ಸೇರಿಸುವ ಬ್ಯೂನಸ್...

ಎಸ್‌ಐಆರ್ ಅವಧಿಯಲ್ಲಿ ಕೈಬಿಡಲಾದ ವ್ಯಕ್ತಿಗಳ ಗುರುತಿನ ಚೀಟಿ ಸಂಖ್ಯೆ ಮರುಸ್ಥಾಪನೆ ಕೋರಿ ಅರ್ಜಿ

ಭಾರತೀಯ ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯನ್ನು (ಎಸ್‌ಐಆರ್) ಪ್ರಶ್ನಿಸಿರುವ ಇಬ್ಬರು ಅರ್ಜಿದಾರರು, ತಮ್ಮ ಪರಿಷ್ಕೃತ ಪರಿಹಾರ ಪ್ರಕ್ರಿಯೆಯನ್ನು ಕೇವಲ ಏಳು ರಾಜ್ಯಗಳಿಗೆ ಸೀಮಿತಗೊಳಿಸುವ ಬದಲು, ಕರಡು ಪಟ್ಟಿಯಿಂದ ಕೈಬಿಡಲಾದ...

ಜಮ್ಮು ಕಾಶ್ಮೀರ : CRPF ತುಕಡಿ ಮೇಲೆ ಭಯೋತ್ಪಾದಕರಿಂದ ಗುಂಡಿನ ದಾಳಿ ; ಮೂವರು ಯೋಧರಿಗೆ ಗಾಯ

ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಬುಧವಾರ (ನ.11) ನಡೆದ ಭಯೋತ್ಪಾದಕ ದಾಳಿಯಲ್ಲಿ ಸೆಂಟ್ರಲ್ ರಿಸರ್ವ್ ಪೊಲೀಸ್ ಫೋರ್ಸ್‌ನ (ಸಿಆರ್‌ಪಿಎಫ್‌)ಮೂವರು ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಜಿಲ್ಲೆಯ ಚೆಕ್‌ಪಾಯಿಂಟ್ ಒಂದರಲ್ಲಿ ನಿಯೋಜನೆಗೊಂಡಿದ್ದ ಭದ್ರತಾ...

‘ಮಾಲಿನ್ಯ ಹೆಚ್ಚಾದರೆ ಕಡಿಮೆಯಾಗುತ್ತದೆ, ಚಿಂತೆ ಏಕೆ?’: ಪಟಾಕಿ ಸಿಡಿಸುವುದನ್ನು ಸಮರ್ಥಿಸಿಕೊಂಡ ಯೋಗಿ ಆದಿತ್ಯನಾಥ್

ಉತ್ತರ ಪ್ರದೇಶ: ದೇಶದ ಹಲವು ನಗರಗಳಲ್ಲಿ ವಾಯುಮಾಲಿನ್ಯ ಜನರ ಜೀವಕ್ಕೆ ಕಂಟಕವಾಗುತ್ತಿರುವ ಬೆನ್ನಲ್ಲೇ, ದೀಪಾವಳಿ ಸಂದರ್ಭದಲ್ಲಿ ಪಟಾಕಿ ಸಿಡಿಸುವುದನ್ನು ಸಮರ್ಥಿಸಿಕೊಂಡಿರುವ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಹೇಳಿಕೆ ತೀವ್ರ ಚರ್ಚೆಗೆ...

‘ಗ್ಯಾನೇಶ್ ಕುಮಾರ್ 2 ಕೋಟಿ ರೂ. ಲಂಚ ಕೇಳಿದ್ದರು’: ಹೇಳಿಕೆ ದಾಖಲಿಸಿಕೊಂಡ ಕೇರಳ ವಿಜಿಲೆನ್ಸ್-ವರದಿ

ಕೇರಳದ ಭ್ರಷ್ಟಾಚಾರ ನಿಗ್ರಹ ಮತ್ತು ವಿಜಿಲೆನ್ಸ್ ಬ್ಯೂರೋ (ವಿಎಸಿಬಿ) ಪ್ರಸ್ತುತ ಮುಖ್ಯ ಚುನಾವಣಾ ಆಯುಕ್ತರಾಗಿರುವ ಗ್ಯಾನೇಶ್ ಕುಮಾರ್ ಅವರ ವಿರುದ್ಧ ಕೇಳಿಬಂದಿರುವ ಲಂಚದ ಆರೋಪಗಳ ಕುರಿತು ಪ್ರಾಥಮಿಕ ತನಿಖೆಯನ್ನು ಆರಂಭಿಸಿದೆ. 2006ರಲ್ಲಿ ಗ್ಯಾನೇಶ್ ಕುಮಾರ್...