HomeಮುಖಪುಟED, CBI ನೆರವಿನಿಂದ ಬಿಜೆಪಿ ಚುನಾವಣೆ ಎದುರಿಸುತ್ತಿದೆ: ಸಿಎಂ ಭೂಪೇಶ್ ಬಘೇಲ್ ಆರೋಪ

ED, CBI ನೆರವಿನಿಂದ ಬಿಜೆಪಿ ಚುನಾವಣೆ ಎದುರಿಸುತ್ತಿದೆ: ಸಿಎಂ ಭೂಪೇಶ್ ಬಘೇಲ್ ಆರೋಪ

- Advertisement -
- Advertisement -

ಬಿಜೆಪಿಯು ಕೇಂದ್ರೀಯ ಸಂಸ್ಥೆಗಳಾದ ಜಾರಿ ನಿರ್ದೇಶನಾಲಯ (ಇಡಿ) ಮತ್ತು ಕೇಂದ್ರ ತನಿಖಾ ದಳದ (ಸಿಬಿಐ) ನೆರವಿನೊಂದಿಗೆ ಛತ್ತೀಸ್‌ಗಢದಲ್ಲಿ ವಿಧಾನಸಭೆ ಚುನಾವಣೆ ಎದುರಿಸಲು ಬಯಸಿದೆ ಎಂದು ಮುಖ್ಯಮಂತ್ರಿ ಭೂಪೇಶ್ ಬಾಘೇಲ್ ಶುಕ್ರವಾರ ಆರೋಪಿಸಿದ್ದಾರೆ.

ಛತ್ತೀಸ್‌ಗಢದಲ್ಲಿ ಕಾಂಗ್ರೆಸ್ ತನ್ನ ಚುನಾವಣಾ ಪ್ರಚಾರಕ್ಕಾಗಿ ಮಹಾದೇವ್ ಬೆಟ್ಟಿಂಗ್ ಆ್ಯಪ್‌ನಿಂದ ಅಕ್ರಮವಾಗಿ ಪಡೆದ ಹಣವನ್ನು ಬಳಸುತ್ತಿದೆ ಎಂದು ಬಿಜೆಪಿ ಶನಿವಾರ ಆರೋಪಿಸಿದೆ. ಆ್ಯಪ್‌ನ ಪ್ರವರ್ತಕರಿಂದ ₹ 500 ಕೋಟಿಗೂ ಹೆಚ್ಚು ಕಿಕ್‌ಬ್ಯಾಕ್‌ಗಳನ್ನು ಮುಖ್ಯಮಂತ್ರಿ ಭೂಪೇಶ್ ಬಾಘೇಲ್ ಪಡೆದಿದ್ದಾರೆ ಎಂದು ಪಕ್ಷ ಆರೋಪಿಸಿದೆ.

ಇಡಿ ಅಧಿಕಾರಿಗಳಿಂದ ಬಂಧನಕ್ಕೊಳಗಾ ಆ್ಯಪ್‌ನ ಪ್ರವರ್ತಕರು, ಬಘೇಲ್‌ಗೆ 508 ಕೋಟಿ ರೂಪಾಯಿ ಪಾವತಿಸಿದ್ದಾರೆ ಎಂದು ಹೇಳಿದ್ದಾರೆ.

”ಬಿಜೆಪಿಗೆ ಚುನಾವಣೆ ಎದುರಿಸುವ ತಾಕತ್ತು ಇಲ್ಲ ಎಂಬುದು ಸ್ಪಷ್ಟವಾಗಿದೆ, ಆದ್ದರಿಂದ ಜಾರಿ ನಿರ್ದೇಶನಾಲಯ (ಇಡಿ), ಆದಾಯ ತೆರಿಗೆ ಇಲಾಖೆ (ಐಟಿ) ಮತ್ತು ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ನಂತಹ ಕೇಂದ್ರೀಯ ಸಂಸ್ಥೆಗಳ ಸಹಾಯವನ್ನು ಪಡೆಯುತ್ತಿದೆ” ಎಂದು ಮುಖ್ಯಮಂತ್ರಿ ಬಘೆಲ್ ಎನ್‌ಡಿಟಿವಿಗೆ ತಿಳಿಸಿದರು.

“ಯಾರು ಕೊರಿಯರ್ ಕಳುಹಿಸಿದ್ದರೂ ನೀವು (ಬಿಜೆಪಿ) ಅವನನ್ನು ಏಕೆ ಹಿಡಿಯುತ್ತಿಲ್ಲ? ಆ ವ್ಯಕ್ತಿಯನ್ನು ಏಕೆ ಬಂಧಿಸುತ್ತಿಲ್ಲ? ಇದರರ್ಥ ಹೊಣೆಗಾರ ಬಿಜೆಪಿ ಮತ್ತು ಇಡಿಯವರು ಶಾಮೀಲಾಗಿದ್ದಾರೆ” ಎಂದು ವಾಗ್ದಾಳಿ ನಡೆಸಿದರು.

”ಇದು ನನ್ನ ವರ್ಚಸ್ಸು ಹಾಳು ಮಾಡುವ ಪ್ರಯತ್ನವಲ್ಲದೆ ಬೇರೇನೂ ಅಲ್ಲ, ನಾನು ಇದನ್ನು ಮೊದಲೇ ಹೇಳಿದ್ದೇನೆ, ಅವರು ಭ್ರಷ್ಟಾಚಾರದಲ್ಲಿ ತೊಡಗುತ್ತಾರೆ, ಆದರೆ ನಮ್ಮ ಮೇಲೆ ಆರೋಪವನ್ನು ಮಾಡುತ್ತಾರೆ” ಎಂದು ಅವರು ಹೇಳಿದರು.

ಮಹಾದೇವ್ ಬೆಟ್ಟಿಂಗ್ ಆಪ್ ಹಗರಣದ ತನಿಖೆಯನ್ನು ಆರಂಭಿಸಿದ್ದು ನಮ್ಮ ಸರ್ಕಾರ ಎಂದು ಬಾಘೇಲ್ ಹೇಳಿದ್ದಾರೆ.

”ನಾವು ಮಹಾದೇವ್ ಆ್ಯಪ್ ಹಗರಣದ ತನಿಖೆಯನ್ನು ಪ್ರಾರಂಭಿಸಿದ್ದೇವೆ ಮತ್ತು ಹಲವಾರು ಜನರನ್ನು ಬಂಧಿಸಿದ್ದೇವೆ. ನಾವು ಕೇಂದ್ರಕ್ಕೆ ಮಾತ್ರವಲ್ಲದೆ ಇತರ ರಾಜ್ಯಗಳಿಗೂ ಹಗರಣದಲ್ಲಿ ಭಾಗಿಯಾದವರನ್ನು ಬಂಧಿಸಲು ಕಟ್ಟುನಿಟ್ಟಾದ ತನಿಖೆಗಳನ್ನು ಕೈಗೊಳ್ಳಲು ಪತ್ರ ಬರೆದಿದ್ದೇವೆ. ಆದರೆ ಕೇಂದ್ರವು ಸಹಕರಿಸಲಿಲ್ಲ” ಎಂದು ಬಘೆಲ್ ಆರೋಪಿಸಿದ್ದಾರೆ.

ಛತ್ತೀಸ್‌ಗಢದಲ್ಲಿ ಮೊದಲ ಹಂತದ ಮತದಾನ ನವೆಂಬರ್ 7 ರಂದು ನಡೆಯಲಿದ್ದು, ಎರಡನೇ ಹಂತದ ಮತದಾನ ನವೆಂಬರ್ 17 ರಂದು ನಡೆಯಲಿದೆ.

ಇದನ್ನೂ ಓದಿ: ನನ್ನ ದೇಹವನ್ನು ಬಂಧಿಸಬಹುದು, ಆಲೋಚನೆಯನ್ನಲ್ಲ: BJP ವಿರುದ್ಧ ಕೇಜ್ರಿವಾಲ್ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...

ಹೋರಾಟಗಾರ ಸೋನಮ್ ವಾಂಗ್ಚುಕ್ ಬಂಧನ ರದ್ದುಗೊಳಿಸಿದ ಕೇಂದ್ರ

ಲಡಾಖ್‌ನಲ್ಲಿ ಶಾಂತಿಯನ್ನು ಮರುಸ್ಥಾಪಿಸಲು ಮತ್ತು ಮಾತುಕತೆಗೆ ಪೂರಕವಾದ ವಾತಾವರಣವನ್ನು ನಿರ್ಮಿಸುವ ಉದ್ದೇಶದಿಂದ, ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (ಎನ್‌ಎಸ್‌ಎ) ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಬಂಧನವನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ ಎಂದು ವರದಿಯಾಗಿದೆ. ಸರ್ಕಾರ...

‘ಭಾರತವನ್ನು ಬೆದರಿಸುವಲ್ಲಿ ತಿಂಗಳುಗಟ್ಟಲೆ ಕಳೆದ ಅಮೆರಿಕ ಈಗ ಜಗತ್ತನ್ನ ಬೇಡಿಕೊಳ್ಳುತ್ತಿದೆ’: ರಷ್ಯಾದ ತೈಲ ವಿಚಾರದ ಕುರಿತು ಇರಾನ್ ಟೀಕೆ

ಟೆಹ್ರಾನ್: ರಷ್ಯಾದ ತೈಲದ ವಿಷಯದಲ್ಲಿ ಅಮೆರಿಕವು ದ್ವಿಮುಖ ನೀತಿಯನ್ನು ಅನುಸರಿಸುತ್ತಿದೆ ಎಂದು ಇರಾನ್ ಶನಿವಾರ ಆರೋಪಿಸಿದೆ. ವಾಷಿಂಗ್ಟನ್ ಈಗ ಒತ್ತಡ ಮತ್ತು ನಿರ್ಬಂಧಗಳ ಮೂಲಕ ನಿರ್ಬಂಧಿಸಲು ಪ್ರಯತ್ನಿಸಿದ ಅದೇ ಕಚ್ಚಾ ತೈಲವನ್ನು ಖರೀದಿಸಲು...

ಗಾಝಾ ನರಮೇಧ : ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಇಸ್ರೇಲ್‌ ಪರ ಅಮೆರಿಕ ವಕಾಲತ್ತು

ಗಾಝಾ ನರಮೇಧಕ್ಕೆ ಸಂಬಂಧಿಸಿದಂತೆ ಇಸ್ರೇಲ್ ವಿರುದ್ದ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ದಕ್ಷಿಣ ಆಫ್ರಿಕಾ ಹೂಡಿರುವ ಪ್ರಕರಣದಲ್ಲಿ ಅಮೆರಿಕ ಸೇರಿದಂತೆ ಕೆಲ ರಾಷ್ಟ್ರಗಳು ಮಧ್ಯ ಪ್ರವೇಶಿಸಿದ್ದು, ಇಸ್ರೇಲ್ ಪರ ವಕಾಲತ್ತು ವಹಿಸಲು ಮುಂದಾಗಿವೆ ಎಂದು ವರದಿಯಾಗಿದೆ. ದಿ...

ಇರಾನ್‌ನ ಕಿರೀಟ ರತ್ನ ಖಾರ್ಗ್ ದ್ವೀಪದ ಮೇಲೆ ಅಮೆರಿಕದಿಂದ ಬಾಂಬ್ ದಾಳಿ : ಟ್ರಂಪ್ ಹೇಳಿಕೆ

ಇರಾನ್‌ನ ಖಾರ್ಗ್ ದ್ವೀಪದ ಮೇಲೆ ಅಮೆರಿಕ 'ಅತ್ಯಂತ ಶಕ್ತಿಶಾಲಿ ಬಾಂಬ್ ದಾಳಿ' ನಡೆಸಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ದ್ವೀಪದಲ್ಲಿರುವ ತೈಲ ಮೂಲಸೌಕರ್ಯಗಳನ್ನು ನಾಶಪಡಿಸದೆ ಇರಲು ನಿರ್ಧರಿಸಿದ ಅಮೆರಿಕ ಪಡೆಗಳು, ಅಲ್ಲಿನ ಮಿಲಿಟರಿ ಕೇಂದ್ರಗಳನ್ನು...

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...