Homeಮುಖಪುಟಮಹಾದೇವ್ ಆ್ಯಪ್ ಬ್ಲಾಕ್ ಮಾಡುವಂತೆ ಕೇಂದ್ರ ಸರಕಾರ ಆದೇಶ

ಮಹಾದೇವ್ ಆ್ಯಪ್ ಬ್ಲಾಕ್ ಮಾಡುವಂತೆ ಕೇಂದ್ರ ಸರಕಾರ ಆದೇಶ

- Advertisement -
- Advertisement -

ಜಾರಿ ನಿರ್ದೇಶನಾಲಯದ ಮನವಿಯ ಮೇರೆಗೆ ಮಹಾದೇವ್ ಆ್ಯಪ್ ಮತ್ತು ರೆಡ್ಡಿಅನ್ನಪ್ರೆಸ್ಟೋಪ್ರೊ ಸೇರಿದಂತೆ 22 ಅಕ್ರಮ ಬೆಟ್ಟಿಂಗ್ ಪ್ಲಾಟ್‌ಫಾರ್ಮ್‌ಗಳನ್ನು ಬ್ಲಾಕ್ ಮಾಡುವಂತೆ ಕೇಂದ್ರ ಸರಕಾರ ಆದೇಶ ಹೊರಡಿಸಿದೆ.

ಛತ್ತೀಸ್‌ಗಢ ಸರ್ಕಾರವು ಈ ಪ್ಲಾಟ್‌ಫಾರ್ಮ್‌ಗಳನ್ನು ನಿರ್ಬಂಧಿಸಲು ಅಧಿಕಾರ ಹೊಂದಿದ್ದರೂ ಯಾವುದೇ ಮನವಿಯನ್ನು ಕಳುಹಿಸಿಲ್ಲ ಎಂದು ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಹೇಳಿದ್ದು, ಇಡಿ ಮನವಿಯ ಮೇರೆಗೆ ಕ್ರಮವನ್ನು ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.

ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ತನ್ನ ಹೇಳಿಕೆಯಲ್ಲಿ ಮಹಾದೇವ್ ಆ್ಯಪ್ ಮತ್ತು ರೆಡ್ಡಿಅನ್ನಪ್ರೆಸ್ಟೊಪ್ರೊ ಸೇರಿದಂತೆ 22 ಅಕ್ರಮ ಬೆಟ್ಟಿಂಗ್ ಅಪ್ಲಿಕೇಶನ್‌ಗಳು ಮತ್ತು ವೆಬ್‌ಸೈಟ್‌ಗಳನ್ನು ನಿರ್ಬಂಧಿಸಿ ಆದೇಶಗಳನ್ನು ಹೊರಡಿಸಿದೆ. ಅಕ್ರಮ ಬೆಟ್ಟಿಂಗ್ ಆಪ್ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ ತನಿಖೆಗಳು ಮತ್ತು ಛತ್ತೀಸ್‌ಗಢದ ಮಹಾದೇವ್ ಬುಕ್‌ ಮೇಲಿನ ದಾಳಿಗಳ ನಂತರ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದೆ.

ಸೆಕ್ಷನ್ 69A IT ಕಾಯಿದೆಯ ಅಡಿಯಲ್ಲಿ ಆ್ಯಪ್‌ನ್ನು ಮುಚ್ಚಲು ಶಿಫಾರಸು ಮಾಡುವ ಎಲ್ಲಾ ಅಧಿಕಾರವನ್ನು ಛತ್ತೀಸ್‌ಗಢ ಸರ್ಕಾರ ಹೊಂದಿದೆ. ಆದರೆ ಅವರು ಶಿಫಾರಸು ಮಾಡಲಿಲ್ಲ ಮತ್ತು ಕಳೆದ 1.5 ವರ್ಷಗಳಿಂದ ತನಿಖೆ ನಡೆಸುತ್ತಿರುವಾಗ ರಾಜ್ಯ ಸರ್ಕಾರ ಈ ಬಗ್ಗೆ ಯಾವುದೇ ವಿನಂತಿಯನ್ನು ಮಾಡಿಲ್ಲ. ವಾಸ್ತವವಾಗಿ EDಯಿಂದ  ವಿನಂತಿಯನ್ನು ಸ್ವೀಕರಿಸಲಾಗಿದೆ ಮತ್ತು ಅದರ ಆಧಾರದ ಮೇಲೆ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ರಾಜೀವ್‌ ಚಂದ್ರ ಶೇಖರ್‌ ಹೇಳಿದ್ದಾರೆ.

ಛತ್ತೀಸ್‌ಗಢ ಪೊಲೀಸ್ ಪಡೆಯಲ್ಲಿ ಕಾನ್ಸ್‌ಟೇಬಲ್ ಆಗಿರುವ ಭೀಮ್ ಸಿಂಗ್ ಯಾದವ್ ಮತ್ತು ಅಸೀಮ್ ದಾಸ್  ಪ್ರಕರಣಕ್ಕೆ ಸಂಬಂಧಿಸಿ ಪ್ರಸ್ತುತ ಬಂಧನದಲ್ಲಿದ್ದು, ಅಕ್ರಮ ಹಣ ವರ್ಗಾವಣೆ ಕಾಯ್ದೆಯ ನಿಯಾಮಾವಳಿಗಳ ಉಲ್ಲಂಘನೆಗಾಗಿ ಬಂಧಿಸಲಾಗಿದೆ ಎಂದು ಹೇಳಿಕೆ ತಿಳಿಸಿದೆ.

ಇದಕ್ಕೂ ಮೊದಲು ಛತ್ತೀಸಗಢ ಮುಖ್ಯಮಂತ್ರಿ ಭೂಪೇಶ್ ಬಘೆಲ್ ಅವರಿಗೆ ಮಹಾದೇವ್‌ ಬೆಟ್ಟಿಂಗ್‌ ಆ್ಯಪ್‌ನ ಪ್ರವರ್ತಕರು 508 ಕೋಟಿ ನೀಡಿರುವ ಕುರಿತು ಆರಂಭಿಕ ಸಾಕ್ಷ್ಯಗಳು ಲಭ್ಯವಾಗಿವೆ ಎಂದು ಜಾರಿ ನಿರ್ದೇಶನಾಲಯ ಹೇಳಿತ್ತು. ಇಡಿ ಅಧಿಕಾರಿಗಳ ಹೇಳಿಕೆ ದೇಶದಲ್ಲಿ ಭಾರೀ ಸಂಚಲನ ಮೂಡಿಸಿತ್ತು.

ಮಹಾದೇವ್ ಆ್ಯಪ್‌ ಮೂಲಕ ಅಕ್ರಮವಾಗಿ ಸಂಗ್ರಹಿಸಿದ್ದ ಹಣವನ್ನು ರಾಜಕಾರಣಿಗಳು, ಅಧಿಕಾರಿಗಳಿಗೆ ಲಂಚವಾಗಿ ನೀಡಲಾಗಿದೆ ಎಂದು ಇ.ಡಿ ಹಿಂದೆ ಹೇಳಿತ್ತು. ಅಲ್ಲದೆ, ಈ ಬಗ್ಗೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿ ಹಲವು ಪ್ರಮುಖರು, ಬಾಲಿವುಡ್‌ ನಟರಿಗೆ ಸಮನ್ಸ್‌ ಜಾರಿ ಮಾಡಿತ್ತು.

ಮಹಾದೇವ್ ಬೆಟ್ಟಿಂಗ್ ಆ್ಯಪ್‌ ಪ್ರಕರಣಕ್ಕೆ ಸಂಬಂಧಿಸಿದ ಹಣದ ಅಕ್ರಮ ವರ್ಗಾವಣೆ ಪ್ರಕರಣದ ವಿಚಾರಣೆ ಹಾಜರಾಗುವಂತೆ ನಟ ರಣಬೀರ್‌ ಕಪೂರ್‌, ಹಾಸ್ಯಗಾರ ಕಪಿಲ್ ಶರ್ಮ, ನಟಿಯರಾದ ಹುಮಾ ಖುರೇಷಿ ಮತ್ತು ಹೀನಾ ಖಾನ್ ಅವರಿಗೆ ಜಾರಿ ನಿರ್ದೇಶನಾಲಯವು (ಇ.ಡಿ) ಸಮನ್ಸ್ ನೀಡಿತ್ತು.

ಇದನ್ನು ಓದಿ: ಗುಂಡ್ಲುಪೇಟೆ: ಬಂಡೀಪುರ ಅರಣ್ಯದಲ್ಲಿ ಗುಂಡಿನ ಚಕಮಕಿ: ಯುವಕ ಬಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...