Homeಮುಖಪುಟವಿಶ್ವಾಸಾರ್ಹ ಕಾಂಗ್ರೆಸ್ ಸರ್ಕಾರವನ್ನು ಮರಳಿ ತನ್ನಿ: ಛತ್ತೀಸ್‌ಗಢ ಜನತೆಗೆ ರಾಹುಲ್ ಕರೆ

ವಿಶ್ವಾಸಾರ್ಹ ಕಾಂಗ್ರೆಸ್ ಸರ್ಕಾರವನ್ನು ಮರಳಿ ತನ್ನಿ: ಛತ್ತೀಸ್‌ಗಢ ಜನತೆಗೆ ರಾಹುಲ್ ಕರೆ

- Advertisement -
- Advertisement -

ಛತ್ತೀಸ್‌ಗಢ ಚುನಾವಣೆಯ ಮೊದಲ ಹಂತದ ಮತದಾನ ಇಂದು ಆರಂಭವಾಗಿದ್ದು, ಪಕ್ಷದ ಗ್ಯಾರಂಟಿಗಳ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಾತನಾಡಿದ್ದು, ರಾಜ್ಯದಲ್ಲಿ ವಿಶ್ವಾಸಾರ್ಹ ಕಾಂಗ್ರೆಸ್ ಸರ್ಕಾರವನ್ನು ಮರಳಿ ತನ್ನಿ ಎಂದು ಕರೆ ನೀಡಿದ್ದಾರೆ.

ಛತ್ತೀಸ್‌ಗಢದಲ್ಲಿ ಮಂಗಳವಾರ ಬೆಳಗ್ಗೆಯಿಂದ ಪೊಲೀಸರು ಮತ್ತು ಅರೆಸೇನಾ ಪಡೆ ಸಿಬ್ಬಂದಿಯ ಬಿಗಿ ಭದ್ರತೆಯಲ್ಲಿ ಮೊದಲ ಹಂತದ ವಿಧಾನಸಭಾ ಚುನಾವಣೆಯ ಮತದಾನ ಆರಂಭವಾಗಿದೆ.

ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ ಗಾಂಧಿ, ”ನೀವು ನಿಮ್ಮ ಮತವನ್ನು ಚಲಾಯಿಸುವಾಗ ರಾಜ್ಯ ಕಾಂಗ್ರೆಸ್‌ನ ವಿಶ್ವಾಸಾರ್ಹ ಸರ್ಕಾರವನ್ನು ನೆನಪಿಸಿಕೊಳ್ಳಿ” ಎಂದು ಅವರು ಹೇಳಿದ್ದಾರೆ.

”ಛತ್ತೀಸ್‌ಗಢಕ್ಕೆ ಕಾಂಗ್ರೆಸ್ ನೀಡಿರುವ ಭರವಸೆ: ರೈತರ ಸಾಲ ಮನ್ನಾ, ಪ್ರತಿ ಎಕರೆಗೆ 20 ಕ್ವಿಂಟಾಲ್ ಭತ್ತ ಖರೀದಿ, ಭೂರಹಿತರಿಗೆ ವರ್ಷಕ್ಕೆ 110,000 ಸಹಾಯ ಧನ, ಭತ್ತಕ್ಕೆ 33,200 ಎಂಎಸ್‌ಪಿ, 200 ಯೂನಿಟ್ ವಿದ್ಯುತ್ ಉಚಿತ; ಗ್ಯಾಸ್ ಸಿಲಿಂಡರ್‌ಗೆ 7500 ಸಬ್ಸಿಡಿ: ಕೆಜಿಯಿಂದ ಪಿಜಿವರೆಗೆ ಉಚಿತ ಶಿಕ್ಷಣ, 710 ಲಕ್ಷದವರೆಗೆ ಉಚಿತ ಚಿಕಿತ್ಸೆ: 17.5 ಲಕ್ಷ ಕುಟುಂಬಗಳಿಗೆ ವಸತಿ, ಜಾತಿ ಗಣತಿ ಮುಂತಾದ ಚುನಾವಣಾ ಭರವಸೆಗಳನ್ನು ಪಕ್ಷ ಈಡೇರಿಸುತ್ತೇವೆ ಎಂದು ರಾಹುಲ್ ಹೇಳಿದರು.

“ನಾವು ಯಾವ ಭರವಸೆ ನೀಡುತ್ತೇವೆಯೋ ಆ ಎಲ್ಲವುಗಳನ್ನು ಈಡೇರಿಸುತ್ತೇವೆ” ಎಂದು ರಾಹುಲ್ ಗಾಂಧಿ ಪ್ರತಿಪಾದಿಸಿದರು.

ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ”ಇಂದು ಛತ್ತೀಸಗಢ ರಾಜ್ಯದಲ್ಲಿ ಮೊದಲ ಹಂತದ ಮತದಾನ ಪ್ರಾರಂಭವಾಗಿದೆ. ನಾವು ಪ್ರತಿಯೊಬ್ಬ ಮತದಾರರಿಗೆ, ವಿಶೇಷವಾಗಿ ಮೊದಲ ಬಾರಿಗೆ ಮತದಾನ ಮಾಡುತ್ತಿರುವ ಯುವಕರಿಗೆ ಮತ ಚಲಾಯಿಸುವಂತೆ ಮನವಿ ಮಾಡುತ್ತೇವೆ” ಎಂದು ಹೇಳಿದ್ದಾರೆ.

ಛತ್ತೀಸಗಢದಲ್ಲಿ ನ್ಯಾಯಯುತವಾದ ಆಡಳಿತ ಮುಂದುವರಿಯುತ್ತದೆ ಮತ್ತು ಪ್ರಜಾಪ್ರಭುತ್ವದ ಮೇಲಿನ ನಂಬಿಕೆ ಹಾಗೇ ಉಳಿಯುತ್ತದೆ ಎಂದು ನಮಗೆ ಸಂಪೂರ್ಣ ವಿಶ್ವಾಸವಿದೆ ಎಂದು ಅವರು ಹೇಳಿದರು.

ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಪ್ರಿಯಾಂಕಾ ಗಾಂಧಿ ಅವರು ಛತ್ತೀಸ್‌ಗಢದ ಜನರಿಗೆ ಕಾಂಗ್ರೆಸ್ ಭರವಸೆಗಳನ್ನು ಪುನರುಚ್ಚರಿಸಿದ್ದಾರೆ. ”ಛತ್ತೀಸ್‌ಗಢದ ಸಹೋದರ ಸಹೋದರಿಯರಿಗೆ ಕಾಂಗ್ರೆಸ್‌ನ ಭರವಸೆಯಲ್ಲಿ ನಂಬಿಕೆ ಇದೆ. ಛತ್ತೀಸ್‌ಗಢವನ್ನು ಅಭಿವೃದ್ಧಿಯ ಮಾದರಿಯನ್ನಾಗಿ ಮಾಡಿದ್ದೇವೆ” ಎಂದು ಹೇಳಿದರು.

‘ಛತ್ತೀಸ್‌ಗಢದಲ್ಲಿ ಮತ್ತೊಮ್ಮೆ ನಂಬಿಕಸ್ಥ ಕಾಂಗ್ರೆಸ್ ಸರ್ಕಾರ’ ಎಂದು ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ.

ಒಟ್ಟು 90 ವಿಧಾನಸಭಾ ಕ್ಷೇತ್ರಗಳ ಪೈಕಿ ಮೊದಲ ಹಂತದಲ್ಲಿ 20 ಕ್ಷೇತ್ರಗಳಲ್ಲಿ ಮೊದಲ ಹಂತದಲ್ಲಿ ಮತದಾನ ನಡೆಯುತ್ತಿದ್ದು, 25 ಮಹಿಳೆಯರು ಸೇರಿದಂತೆ 223 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಮತದಾರರ ಪಟ್ಟಿಯ ಪ್ರಕಾರ 40,78,681 ಮತದಾರರು ತಮ್ಮ ಹಕ್ಕು ಚಲಾಯಿಸಲು ಅರ್ಹರಾಗಿದ್ದಾರೆ.

ಮೊದಲ ಹಂತದಲ್ಲಿ ಚುನಾವಣೆ ನಡೆಯುತ್ತಿರುವ 20 ವಿಧಾನಸಭಾ ಕ್ಷೇತ್ರಗಳ ಪೈಕಿ 10 ಕ್ಷೇತ್ರಗಳಲ್ಲಿ ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದ್ದು, ಮಧ್ಯಾಹ್ನ 3 ಗಂಟೆಗೆ ಮುಕ್ತಾಯವಾಗಲಿದೆ. ಉಳಿದ 10 ಕ್ಷೇತ್ರಗಳಲ್ಲಿ ಮತದಾನ ಬೆಳಗ್ಗೆ 8 ಗಂಟೆಗೆ ಆರಂಭವಾಗಿದ್ದು, ಸಂಜೆ 5 ಗಂಟೆಗೆ ಮುಕ್ತಾಯವಾಗಲಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ರಾಜ್ಯದಲ್ಲಿ ಅಧಿಕಾರಕ್ಕಾಗಿ ಆಡಳಿತಾರೂಢ ಕಾಂಗ್ರೆಸ್ ಮತ್ತು ಪ್ರತಿಪಕ್ಷ ಬಿಜೆಪಿ ನಡುವೆ ಪೈಪೋಟಿ ಇದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...