Homeಮುಖಪುಟಮಾದ್ಯಮ ಪ್ರತಿನಿಧಿಗಳಿಂದ ಎಲೆಕ್ಟ್ರಾನಿಕ್ ಸಾಧನಗಳ ಜಪ್ತಿ: ಮಾರ್ಗಸೂಚಿ ರಚಿಸಲು ಸುಪ್ರೀಂಕೋರ್ಟ್ ಸೂಚನೆ

ಮಾದ್ಯಮ ಪ್ರತಿನಿಧಿಗಳಿಂದ ಎಲೆಕ್ಟ್ರಾನಿಕ್ ಸಾಧನಗಳ ಜಪ್ತಿ: ಮಾರ್ಗಸೂಚಿ ರಚಿಸಲು ಸುಪ್ರೀಂಕೋರ್ಟ್ ಸೂಚನೆ

- Advertisement -
- Advertisement -

ವ್ಯಕ್ತಿಗಳು, ವಿಶೇಷವಾಗಿ ಮಾದ್ಯಮ ಪ್ರತಿನಿಧಿಗಳಿಂದ ಫೋನ್‌ಗಳು ಮತ್ತು ಲ್ಯಾಪ್‌ಟಾಪ್‌ಗಳಂತಹ ಎಲೆಕ್ಟ್ರಾನಿಕ್ ಸಾಧನಗಳನ್ನು ವಶಪಡಿಸಿಕೊಳ್ಳುವುದಕ್ಕೆ ಸಂಬಂಧಿಸಿ ಮಾರ್ಗಸೂಚಿಗಳನ್ನು ಜಾರಿಗೆ ತರುವಂತೆ ಸುಪ್ರೀಂಕೋರ್ಟ್ ಕೇಂದ್ರ ಸರಕಾರಕ್ಕೆ ಸೂಚಿಸಿದೆ.

ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್ ಮತ್ತು ಸುಧಾಂಶು ಧುಲಿಯಾ ಅವರ ಪೀಠವು, ಕೇಂದ್ರದ ಪರವಾಗಿ ಹಾಜರಾಗಿದ್ದ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್ ವಿ ರಾಜು ಅವರಲ್ಲಿ ತನಿಖಾ ಸಂಸ್ಥೆಗಳ ಅಧಿಕಾರ ವ್ಯಾಪ್ತಿಗೆ ಸಂಬಂಧಿಸಿದಂತೆ ಗಂಭೀರ ಕಳವಳವನ್ನು ವ್ಯಕ್ತಪಡಿಸಿದ್ದಾರೆ. ಈ ವಿಷಯ ಗಂಭೀರವಾದುದು ಎಂದು ಹೇಳಿರುವ ಸುಪ್ರೀಂ ಕೋರ್ಟ್, ಕೇಂದ್ರದ ತನಿಖಾ ಸಂಸ್ಥೆಗಳಿಗೆ ಪರಮಾಧಿಕಾರ ನೀಡಿರುವುದು ಕಳವಳಕಾರಿ ಎಂದು ಹೇಳಿದೆ.

ಸರ್ವ ರೀತಿಯ ಅಧಿಕಾರವನ್ನು ತನಿಖಾ ಸಂಸ್ಥೆಗಳಿಗೆ ನೀಡಿರುವುದನ್ನು ಒಪ್ಪಿಕೊಳ್ಳುವುದು ನನಗೆ ತುಂಬಾ ಕಷ್ಟಕರವಾಗಿದೆ. ಇದು ತುಂಬಾ ಅಪಾಯಕಾರಿ ಎಂದು ನಾನು ಭಾವಿಸುತ್ತೇನೆ ಎಂದು ನ್ಯಾಯಮೂರ್ತಿ ಕೌಲ್ ಹೇಳಿದ್ದಾರೆ.

ಫೌಂಡೇಶನ್ ಆಫ್ ಮೀಡಿಯಾ ಪ್ರೊಫೆಷನಲ್ಸ್ ಪರವಾಗಿ ಕೋರ್ಟ್‌ಗೆ ಹಾಜರಾದ ವಕೀಲರು, ತನಿಖಾ ಸಂಸ್ಥೆಗಳು ಎಲೆಕ್ಟ್ರಾನಿಕ್ ಸಾಧನಗಳನ್ನು ಯಾವಾಗ ಮತ್ತು ಹೇಗೆ ವಶಪಡಿಸಿಕೊಳ್ಳುತ್ತವೆ ಎಂಬುದಕ್ಕೆ ಸಂಬಂಧಿಸಿದಂತೆ ಯಾವುದೇ ಮಾರ್ಗಸೂಚಿಗಳಿಲ್ಲದ ಕಾರಣ ಇದು ಒಂದು ಪ್ರಮುಖ ವಿಷಯವಾಗಿದೆ ಎಂದು ಹೇಳಿದ್ದಾರೆ.

ಈ ವಿಚಾರದಲ್ಲಿ ಜಟಿಲವಾದ ಕಾನೂನು ಸಮಸ್ಯೆಗಳು ತಲೆದೋರಿರುವುದರಿಂದ ಈ ವಿಚಾರದಲ್ಲಿ ಸ್ವಲ್ಪ ಕಾಲಾವಕಾಶ ನೀಡುವಂತೆ ರಾಜು ನ್ಯಾಯಾಲಯವನ್ನು ಕೋರಿದ್ದಾರೆ. ಪದೇಪದೇ ಅಪರಾಧ ಕೃತ್ಯಗಳನ್ನು ಎಸಗುವವರು ಅಥವಾ ದೇಶ ವಿರೋಧಿ ಶಕ್ತಿಗಳು ಎಲೆಕ್ಟ್ರಾನಿಕ್‌ ಸಾಧನಗಳಲ್ಲಿ ಮಹತ್ವದ ದತ್ತಾಂಶಗಳನ್ನು ಮುಚ್ಚಿಟ್ಟಿರುತ್ತಾರೆ. ಇಂಥ ಸಾಧನಗಳನ್ನು ಜಪ್ತಿ ಮಾಡುವುದು ಅಗತ್ಯವಾಗುತ್ತದೆ ಎಂದು ಎಸ್.ವಿ.ರಾಜು ನ್ಯಾಯಪೀಠಕ್ಕೆ ತಿಳಿಸಿದರು.

ಅರ್ಜಿದಾರರ ವಕೀಲರು ರಾಜ್ಯದ ಅಧಿಕಾರ ಮತ್ತು ಖಾಸಗಿತನದ ಹಕ್ಕು ಸೇರಿದಂತೆ ವ್ಯಕ್ತಿಯ ಹಕ್ಕುಗಳಿಗೆ ಸಂಬಂಧಿಸಿದ ಸಮಸ್ಯೆಯನ್ನು ಕೋರ್ಟ್‌ ಗಮನಕ್ಕೆ ತಂದಿದ್ದಾರೆ. ಹಲವು ಮಾದ್ಯಮ ಪ್ರತಿನಿಧಿಗಳು ಸುದ್ದಿಗಳಿಗೆ ಸಂಬಂಧಿಸಿ ತಮ್ಮದೇ ಆದ ಮೂಲಗಳನ್ನು ಹೊಂದಿರುತ್ತಾರೆ. ಹೀಗಾಗಿ ಅವರ ಸಾಧನಗಳನ್ನು ಜಪ್ತಿ ಮಾಡುವುದು ಗಂಭೀರ ವಿಷಯ ಎಂದು ಹೇಳಿದ ನ್ಯಾಯಪೀಠ, ಎಲ್ಲ ಸಾಧನಗಳನ್ನು ನೀವು ವಶಕ್ಕೆ ಪಡೆದರೆ ಸಮಸ್ಯೆಯಾಗುತ್ತದೆ. ಈ ಕುರಿತು ಮಾರ್ಗಸೂಚಿಗಳನ್ನು ರಚಿಸಲೇಬೇಕು ಎಂದು ಹೇಳಿದೆ.

ಎರಡೂ ಪಕ್ಷದವರ ಹಿತಾಸಕ್ತಿ ರಕ್ಷಣೆಯಾಗಬೇಕು. ಯಾವುದೇ ದುಷ್ಪರಿಣಾಮವೂ ಉಂಟಾಗಬಾರದು. ಹೀಗಾಗಿ ಯಾವ ರೀತಿಯ ಮಾರ್ಗಸೂಚಿಗಳಿರಬೇಕು ಎಂಬ ಬಗ್ಗೆ ಕೇಂದ್ರ ಸರ್ಕಾರ ವಿಶ್ಲೇಷಣೆ ನಡೆಸಬೇಕು. ಮಾದ್ಯಮ  ಪ್ರತಿನಿಧಿಗಳ ಹಿತಾಸಕ್ತಿಗಳನ್ನು ರಕ್ಷಿಸಲು ಸರಿಯಾದ ಮಾರ್ಗಸೂಚಿಗಳ ಅಗತ್ಯವಿದೆ ಎಂದು ಸುಪ್ರೀಂಕೋರ್ಟ್‌ ಹೇಳಿದೆ. ಈ ವಿಷಯದ  ಮುಂದಿನ ವಿಚಾರಣೆ ಡಿಸೆಂಬರ್‌ನಲ್ಲಿ ನಡೆಯಲಿದೆ.

ಇದನ್ನು ಓದಿ: ಅಲಿಘರ್ ನಗರದ ಹೆಸರು ಹರಿಘರ್ ಎಂದು ಬದಲಾಯಿಸಲು ಅನುಮೋದನೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...