Homeಮುಖಪುಟಮರಾಠರಿಗೆ ಮೀಸಲಾತಿ ನೀಡದಂತೆ ಸರಕಾರದ ಮೇಲೆ ಒತ್ತಡ ಹಾಕಲಾಗಿದೆ: ಮನೋಜ್ ಜಾರಂಗೆ

ಮರಾಠರಿಗೆ ಮೀಸಲಾತಿ ನೀಡದಂತೆ ಸರಕಾರದ ಮೇಲೆ ಒತ್ತಡ ಹಾಕಲಾಗಿದೆ: ಮನೋಜ್ ಜಾರಂಗೆ

- Advertisement -
- Advertisement -

ಮರಾಠ ನಾಯಕರು ಈ ಹಿಂದೆ ಸಮುದಾಯಕ್ಕೆ ಮೀಸಲಾತಿ ಬೇಡಿಕೆಯನ್ನು ಬೆಂಬಲಿಸಲಿಲ್ಲ ಮತ್ತು ಮರಾಠರಿಗೆ ಮೀಸಲಾತಿ ನೀಡದಂತೆ 30-40 ವರ್ಷಗಳಿಂದ ಒಬಿಸಿ ನಾಯಕರಿಂದ ಸರ್ಕಾರದ ಮೇಲೆ ಒತ್ತಡವಿದೆ ಎಂದು ಮರಾಠ ಮೀಸಲಾತಿ ಪರ ಹೋರಾಟಗಾರ ಮನೋಜ್ ಜಾರಂಗೆ ಹೇಳಿದ್ದಾರೆ.

ಡಿಸೆಂಬರ್ 24ರೊಳಗೆ ನಮಗೆ ಮೀಸಲಾತಿ ನೀಡದಿದ್ದರೆ, ನಾವು ಈ ನಾಯಕರ ಹೆಸರನ್ನು ಬಹಿರಂಗಪಡಿಸುತ್ತೇವೆ ಎಂದು ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮನೋಜ್‌ ಜಾರಂಗೆ ಅವರು ಹೇಳಿದ್ದಾರೆ.

ಮರಾಠ ಸಮುದಾಯದ ಸದಸ್ಯರಿಗೆ ಕುಂಬಿ ಪ್ರಮಾಣಪತ್ರ ನೀಡುವ ಕುರಿತು ಅಧ್ಯಯನ ಮಾಡಲು ನಿವೃತ್ತ ನ್ಯಾಯಮೂರ್ತಿ ಸಂದೀಪ್ ಶಿಂಧೆ ಸಮಿತಿಯನ್ನು ಮಹಾರಾಷ್ಟ್ರ ಸರ್ಕಾರ ರಚಿಸಿದೆ. ಮರಾಠರಿಗೆ ಕುಂಬಿ ಪ್ರಮಾಣಪತ್ರ ನೀಡುವುದರಿಂದ ಅವರಿಗೆ ಇತರ ಹಿಂದುಳಿದ ವರ್ಗದಡಿಯಲ್ಲಿ ಮೀಸಲಾತಿ ಸಿಗಬಹುದು ಎಂಬುದು ಜಾರಂಗೆಯ ಲೆಕ್ಕಾಚಾರವಾಗಿದೆ.

ಮಹಾರಾಷ್ಟ್ರದ ಸಚಿವ ಮತ್ತು ಎನ್‌ಸಿಪಿ (ಅಜಿತ್ ಪವಾರ್ ಬಣ) ನಾಯಕ ಛಗನ್ ಭುಜಬಲ್ ಸೋಮವಾರ ಮರಾಠ ಸಮುದಾಯಕ್ಕೆ ಒಬಿಸಿ ವರ್ಗದ ಅಡಿಯಲ್ಲಿ ಮೀಸಲಾತಿ ನೀಡುವುದಕ್ಕೆ ವಿರೋಧಿಸಿದ್ದಾರೆ. ಈ ಕುರಿತ ಹಿಂಬಾಗಿಲ ಪ್ರಯತ್ನಗಳನ್ನು ವಿರೋಧಿಸಲಾಗುವುದು. ಹಿಂಸಾಚಾರ ಮತ್ತು ಒತ್ತಡದ ತಂತ್ರಗಳನ್ನು ಸಹಿಸುವುದಿಲ್ಲ ಎಂದು ಅವರು ಹೇಳಿದ್ದರು.

ಮರಾಠ ನಾಯಕರು ನಮಗೆ ಬೆಂಬಲ ನೀಡಿಲ್ಲ, ಮೀಸಲಾತಿಯನ್ನೂ ನೀಡಿಲ್ಲ. ಅಲ್ಲದೆ 30-40 ವರ್ಷಗಳಿಂದ ಒಬಿಸಿ ಮುಖಂಡರಿಂದ ಸರಕಾರದ ಮೇಲೆ ಒತ್ತಡವಿತ್ತು. ಹೀಗಾಗಿ ನಮಗೆ ಮೀಸಲಾತಿ ಸಿಗುತ್ತಿಲ್ಲ. ಡಿ. 24ರೊಳಗೆ ಮರಾಠ ಸಮುದಾಯಕ್ಕೆ ಮೀಸಲಾತಿ ನೀಡಿಲ್ಲ ಎಂದಾದರೆ ನಂತರ ನಾವು ಅಂತಹ ನಾಯಕರ ಹೆಸರನ್ನು ಬಹಿರಂಗಪಡಿಸುತ್ತೇವೆ ಎಂದು ಮನೋಜ್‌ ಜಾರಂಗೆ ಹೇಳಿದ್ದಾರೆ.

ಒಬಿಸಿಗಳಿಗೆ ಸಿಗುವ ಸೌಲಭ್ಯಗಳನ್ನು ಮೀಸಲಾತಿ ವರ್ಗಕ್ಕೆ ಸೇರಿಸಿದ ನಂತರ ಮರಾಠ ಸಮುದಾಯಕ್ಕೂ ನೀಡಬೇಕು. ಒಬಿಸಿ ಕೋಟಾದಡಿ ಉದ್ಯೋಗಗಳನ್ನೂ ಕೂಡ ಸರ್ಕಾರ ನೀಡಬೇಕು. ರಾಜಕೀಯ ಪ್ರಾತಿನಿಧ್ಯ ಸೇರಿದಂತೆ ಇಂದು ಒಬಿಸಿ ವರ್ಗದವರಿಗೆ ಸಿಗುವ ಎಲ್ಲಾ ಸವಲತ್ತುಗಳು ನಮಗೂ ಸಿಗಬೇಕು ಎಂದು ಹೇಳಿದ್ದಾರೆ.

ಮರಾಠಾ ಮೀಸಲಾತಿಯನ್ನು ಏಕೆ ವಿರೋಧಿಸುತ್ತಾರೆ ಎಂಬುದನ್ನು ಒಬಿಸಿ ಮುಖಂಡರು ಸ್ಪಷ್ಟಪಡಿಸಬೇಕು  ಅವರು ವಿರೋಧಿಸಲು ಕಾರಣ ಏನು ಎಂದು ಹೇಳಬೇಕು. ಒಬಿಸಿಗಳು ಏನು ಪಡೆಯುತ್ತಿದ್ದಾರೆ. ಅದು ನಮಗೂ ಸಿಗಬೇಕು. ಮರಾಠಾ ಮೀಸಲಾತಿ ಬೇಡಿಕೆಯನ್ನು ಬೆಂಬಲಿಸಿ ಪ್ರಾಣತ್ಯಾಗ ಮಾಡಿಕೊಂಡವರ ಕುಟುಂಬಗಳಿಗೆ ನೆರವು ನೀಡಬೇಕು. ಅವರ ಕುಟುಂಬಕ್ಕೆ ಸರ್ಕಾರಿ ಉದ್ಯೋಗ ದೊರಕಿಸಿಕೊಡಬೇಕು ಎಂದು ಜಾರಂಗೆ ಮಹಾರಾಷ್ಟ್ರ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

ಇದನ್ನು ಓದಿ: ಮರಾಠರಿಗೆ OBC ವರ್ಗದಡಿ ಮೀಸಲಾತಿ ನೀಡುವುದಕ್ಕೆ ಒಬಿಸಿ ಸಮುದಾಯ ವಿರೋಧ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...