Homeಕರ್ನಾಟಕಬಡವರ ಮಕ್ಕಳನ್ನು ಧರ್ಮ ರಕ್ಷಣೆ, ಗೋ ರಕ್ಷಣೆಗೆ ಬೀದಿಗೆ ಬಿಡುತ್ತಾರೆ, ತಮ್ಮ ಮಕ್ಕಳಿಗೆ ವಿದೇಶದಲ್ಲಿ ಉನ್ನತ...

ಬಡವರ ಮಕ್ಕಳನ್ನು ಧರ್ಮ ರಕ್ಷಣೆ, ಗೋ ರಕ್ಷಣೆಗೆ ಬೀದಿಗೆ ಬಿಡುತ್ತಾರೆ, ತಮ್ಮ ಮಕ್ಕಳಿಗೆ ವಿದೇಶದಲ್ಲಿ ಉನ್ನತ ಶಿಕ್ಷಣ: ಪ್ರಿಯಾಂಕ್ ಖರ್ಗೆ

- Advertisement -
- Advertisement -

ಬಡವರ ಮಕ್ಕಳಿಗೆ ಶಾಲ್ ಹಾಕಿಸಿ ಧರ್ಮ ರಕ್ಷಣೆಗೆ ಹಾಗೂ ಗೋ ರಕ್ಷಣೆಗೆ ಬೀದಿಗೆ ಬಿಡುತ್ತಾರೆ ಆದರೆ ತಮ್ಮ ಮಕ್ಕಳನ್ನು ಉನ್ನತ ಶಿಕ್ಷಣಕ್ಕಾಗಿ ವಿದೇಶಕ್ಕೆ ಕಳಿಸುತ್ತಾರೆ. ಧರ್ಮ ರಕ್ಷಣೆಗೆ ಯಾಕೆ ತಮ್ಮ ಮಕ್ಕಳನ್ನು ಕಳಿಸುವುದಿಲ್ಲ? ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಟೀಕಿಸಿದ್ದಾರೆ.

ಕಲಬುರಗಿ ಜಿಲ್ಲೆಯ ಆಳಂದ ಪಟ್ಟಣದಲ್ಲಿ ನಡೆದ ಸರ್ಕಾರಿ ಪಾಲಿಟೆಕ್ನಿಕ್ ಕಟ್ಟಡದ ಅಡಿಗಲ್ಲು ಸಮಾರಂಭ ನೆರವೇರಿಸಿ ಮಾತನಾಡುತ್ತಿದ ಅವರು, ”ಪ್ರಧಾನಿ ನರೇಂದ್ರ ಮೋದಿ ವೈಜ್ಞಾನಿಕ ಮನೋಭಾವನೆಗೆ ಒತ್ತು ನೀಡದೆ 5000 ವರ್ಷಗಳ ಹಿಂದಿನ ಆಚರಣೆಗಳನ್ನು ಅನುಸರಿಸುವಂತೆ ಕರೆ ನೀಡುತ್ತಾ ಅವುಗಳನ್ನು ಅಳವಡಿಸಿಕೊಳ್ಳುವಂತೆ ಇಂಡಿಯನ್ ಸೈನ್ಸ್ ಕಾಂಗ್ರೆಸ್‌ನ ಕಾರ್ಯಕ್ರಮದಲ್ಲಿ ಹೇಳುತ್ತಾರೆ. ನಾನು ಹೇಳುವುದು ಇಷ್ಟೆ, ಎಲ್ಲವನ್ನೂ ಮಕ್ಕಳು ಓದಲಿ ಆದರೆ, ವೈಜ್ಞಾನಿಕ ಮನೋಭಾವನೆಯನ್ನು ಬೆಳೆಸಿಕೊಳ್ಳಬೇಕು” ಎಂದು ಕರೆ ನೀಡಿದರು.

ಇತ್ತೀಚಿಗೆ ನಾನು ಅಮೆರಿಕಗೆ ಹೋದಾಗ ನಮ್ಮ ರಾಜ್ಯದ ಐತಿಹಾಸಿಕ ಹಿನ್ನೆಲೆಯ ಬಗ್ಗೆ ಅಲ್ಲಿ ವಿವರಿಸಿ ಹೇಳಬೇಕಿತ್ತು. ಅಲ್ಲಿನ ಕಂಪನಿಗಳ ಪ್ರಮುಖರು ಭಾರತದಲ್ಲಿ ಬಂಡವಾಳ ಹೂಡುವುದಕ್ಕೆ ಆಸಕ್ತಿ ತೋರಿಸಿದ್ದರು ಕಾರಣ ಇಲ್ಲಿನ ಮಾನವಸಂಪನ್ಮೂಲ… ಈ ಸಂಪನ್ಮೂಲಗಳನ್ನು ಬಳಸಿಕೊಳ್ಳುವ ಬಗ್ಗೆ ಅವರು ಉತ್ಸುಕರಾಗಿದ್ದಾರೆ. ಇದಕ್ಕೆ ಗುಣಮಟ್ಟದ ಶಿಕ್ಷಣ ಕಾರಣವಾಗಿದೆ ಎಂದು ಹೇಳಿದರು.

”ನಮ್ಮದೇಶದ ಪ್ರಬಲ ಶಕ್ತಿಯೇ ಮಾನವ ಸಂಪನ್ಮೂಲ, ಈ ಸಂಪನ್ಮೂಲಕ್ಕೆ ಇಡೀ ವಿಶ್ವದಲ್ಲೇ ಬೇಡಿಕೆ ಇದೆ. ಸಶಕ್ತ ರಾಷ್ಟ್ರ ನಿರ್ಮಾಣವಾಗಬೇಕಾದರೆ ಯುವಶಕ್ತಿಯನ್ನು ಬೆಳೆಸಬೇಕು. ಯುವಕರ ಸಂಖ್ಯಾಬಲಕ್ಕೆ ಸರಿಯಾದ ಶಿಕ್ಷಣ ನೀಡಿದಾಗ ಮಾತ್ರ ರಾಷ್ಟ್ರ ನಿರ್ಮಾಣಕ್ಕೆ ಅನುಕೂಲವಾಗಲಿದೆ. ಅಣೆಕಟ್ಟು ಹಾಗೂ ರಸ್ತೆ ನಿರ್ಮಾಣದ ಜೊತೆಗೆ ಯುವಶಕ್ತಿಗೆ ವೈಜ್ಞಾನಿಕ ಶಿಕ್ಷಣ ನೀಡಿದಾಗ ಮಾತ್ರ ಸುಭದ್ರ ರಾಷ್ಟ್ರವಾಗಲಿದೆ” ಎಂದರು.

”ಸಂವಿಧಾನದ ಅಡಿಯಲ್ಲಿ ದೊರಕುವ ಸೌಲಭ್ಯಗಳನ್ನು ಬಳಸಿಕೊಂಡು ಎಲ್ಲರೂ ಉತ್ತಮ ಶಿಕ್ಷಣದೊಂದಿಗೆ ವೈಜ್ಞಾನಿಕ ಮನೋಭಾವನೆ ಬೆಳೆಸಿಕೊಳ್ಳಬೇಕು, ಬಿ.ಆರ್.ಪಾಟೀಲ್ ಅವರಂತ ಪ್ರಗತಿಪರ
ಮನೋಭಾವದವರಿದ್ದು ಇದರಿಂದ ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವನೆಯ ಬೆಳವಣಿಗೆಗೆ ಸಹಕಾರಿಯಾಗಲಿದೆ” ಎಂದು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಪ್ರಚಾರದ ವೇಳೆ ಬ್ಯಾಗ್ ಮೇಲೆ ಪ್ಯಾಲೆಸ್ಟೀನಿಯನ್ ಧ್ವಜ: ಆರ್‌ಡಬ್ಲ್ಯೂಪಿಐ ಅಭ್ಯರ್ಥಿಗೆ ನೋಟಿಸ್ ಜಾರಿ ಮಾಡಿದ ಮುಂಬೈ ಪೊಲೀಸರು

ಮುಂಬೈ: ಮುನ್ಸಿಪಲ್ ಚುನಾವಣಾ ರ್ಯಾಲಿಯಲ್ಲಿ ಭಾಗವಹಿಸಿದ್ದ ರೆವಲ್ಯೂಷನರಿ ವರ್ಕರ್ಸ್ ಪಾರ್ಟಿ ಆಫ್ ಇಂಡಿಯಾದ ಅಭ್ಯರ್ಥಿಯೊಬ್ಬರು ತಮ್ಮ ಪ್ರಚಾರ ಕಾರ್ಯಕರ್ತರ ಬಳಿ ಹೊತ್ತೊಯ್ದಿದ್ದ ಬ್ಯಾಗ್ ಮೇಲೆ ಪ್ಯಾಲೆಸ್ಟೀನಿಯನ್ ಧ್ವಜ ಕಾಣಿಸಿಕೊಂಡಿದ್ದು, ಇದು ಮಾನವ ಹಕ್ಕುಗಳ...

ಇರಾನ್‌ನೊಂದಿಗೆ ವ್ಯವಹಾರ ನಡೆಸುವ ರಾಷ್ಟ್ರಗಳ ಮೇಲೆ ಶೇ. 25 ಸುಂಕ ವಿಧಿಸಿದ ಟ್ರಂಪ್

ಇರಾನ್ ಜೊತೆ ವ್ಯಾಪಾರ ನಡೆಸುವ ಯಾವುದೇ ದೇಶದ ಮೇಲೆ ಶೇಕಡ 25ರಷ್ಟು ಸುಂಕ ವಿಧಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸೋಮವಾರ (ಜ.12) ಘೋಷಿಸಿದ್ದಾರೆ. "ತಕ್ಷಣದಿಂದಲೇ ಜಾರಿಗೆ ಬರುವಂತೆ, ಇರಾನ್ ಇಸ್ಲಾಮಿಕ್ ಗಣರಾಜ್ಯದೊಂದಿಗೆ ವ್ಯವಹಾರ...

ಮಂಗಳೂರು | ಬಾಂಗ್ಲಾದೇಶಿಯೆಂದು ಆರೋಪಿಸಿ ವಲಸೆ ಕಾರ್ಮಿಕನ ಮೇಲೆ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಬಾಂಗ್ಲಾದೇಶಿ ಎಂದು ಆರೋಪಿಸಿ ಜಾರ್ಖಂಡ್ ಮೂಲದ ವಲಸೆ ಕಾರ್ಮಿಕನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ನಡೆಸಿ, ಕೊಲೆ ಯತ್ನ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಮಂಗಳೂರಿನ ಕಾವೂರು ಪೊಲೀಸರು ಸೋಮವಾರ (ಜ.12)...

ಬಿಜೆಪಿ ನಿಯೋಗದಿಂದ ಕರ್ನಾಟಕ ರಾಜ್ಯಪಾಲರ ಭೇಟಿ: ‘ದ್ವೇಷ ಭಾಷಣ ತಡೆ’ ಮಸೂದೆಗೆ ಒಪ್ಪಿಗೆ ನೀಡದಂತೆ ಮನವಿ

ಬೆಂಗಳೂರು: ದ್ವೇಷ ಭಾಷಣ ಮಸೂದೆಯನ್ನು"ವಾಕ್ ಸ್ವಾತಂತ್ರ್ಯದ ಮೇಲಿನ ನೇರ ದಾಳಿ" ಮತ್ತು "ರಾಜಕೀಯ ಸೇಡಿನ ಸಾಧನ" ಎಂದು ಕರೆದಿರುವ ಬಿಜೆಪಿ ನಾಯಕರ ನಿಯೋಗವು ಸೋಮವಾರ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಭೇಟಿ...

ಟೆಕ್ಕಿ ಶರ್ಮಿಳಾ ಕೊಲೆ ಪ್ರಕರಣ : ಪಿಯು ವಿದ್ಯಾರ್ಥಿಯನ್ನು ಬಂಧಿಸಿದ ಪೊಲೀಸರು

ಬೆಂಗಳೂರಿನ ರಾಮಮೂರ್ತಿ ನಗರದ ಸುಬ್ರಹ್ಮಣ್ಯ ಬಡಾವಣೆಯಲ್ಲಿ 2026ರ ಜನವರಿ 3ರಂದು ರಾತ್ರಿ ನಡೆದ ಮಂಗಳೂರು ಮೂಲದ ಸಾಫ್ಟ್‌ವೇರ್ ಇಂಜಿನಿಯರ್ ಶರ್ಮಿಳಾ ಕುಶಾಲಪ್ಪ (34) ಅವರ ಕೊಲೆ ಪ್ರಕರಣವನ್ನು ಪೊಲೀಸರು ಬೇಧಿಸಿದ್ದಾರೆ. ಆರಂಭದಲ್ಲಿ, ಫ್ಲ್ಯಾಟ್‌ಗೆ ಬೆಂಕಿ...

ಎಸ್‌ಎಸ್‌ಎಲ್‌ಸಿ ಪ್ರಶ್ನೆ ಪತ್ರಿಕೆ ಸೋರಿಕೆ: ಸಾಮಾಜಿಕ ಮಾಧ್ಯಮದಲ್ಲಿ 200-500 ರೂ.ಗೆ ಮಾರಾಟ: ಆರು ಶಿಕ್ಷಕರು, ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳ ಬಂಧನ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ತನಿಖೆಯ ಸಂದರ್ಭದಲ್ಲಿ ಆಘಾತಕಾರಿ ಮಾಹಿತಿಗಳು ಹೊರಬಿದ್ದಿವೆ. ವಿದ್ಯಾರ್ಥಿಗಳು ಪ್ರಶ್ನೆಪತ್ರಿಕೆಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಬಹಿರಂಗವಾಗಿ ಜಾಹೀರಾತು ಮಾಡಿ ಖಾಸಗಿ ಸಂದೇಶಗಳ ಮೂಲಕ 200 ರಿಂದ...

ಕರೂರ್ ಕಾಲ್ತುಳಿತ : ಸಿಬಿಐ ಮುಂದೆ ವಿಚಾರಣೆಗೆ ಹಾಜರಾದ ನಟ ವಿಜಯ್

ಕರೂರ್ ಕಾಲ್ತುಳಿತ ಘಟನೆಗೆ ಸಂಬಂಧಪಟ್ಟಂತೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಸೋಮವಾರ (ಜ.12) ದೆಹಲಿಯ ಕೇಂದ್ರ ತನಿಖಾ ದಳ (ಸಿಬಿಐ) ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಚಾರ್ಟರ್ಡ್ ವಿಮಾನದಲ್ಲಿ...

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...