ವಯನಾಡ್ ಪುಲ್ಪಲ್ಲಿ ಸಹಕಾರಿ ಬ್ಯಾಂಕ್‌ಗೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಕೆಪಿಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿ ಕೆ.ಕೆ.ಅಬ್ರಹಾಂ ಅವರನ್ನು ಕೋಝಿಕ್ಕೋಡ್ ಇಡಿ ಘಟಕ ಬಂಧಿಸಿದೆ.
ಪುಲ್ಪಲ್ಲಿ ಸಹಕಾರಿ ಬ್ಯಾಂಕ್‌ನ ಮಾಜಿ ಅಧ್ಯಕ್ಷರಾಗಿರುವ ಅಬ್ರಹಾಂ ಅವರನ್ನು ನಿನ್ನೆ ವಿಚಾರಣೆ ನಡೆಸಲಾಗಿದ್ದು, ಆ ಬಳಿಕ ಅವರ ಬಂಧನ ನಡೆದಿದೆ. ಈ ಪ್ರಕರಣದಲ್ಲಿ 2ನೇ ಬಂಧನ ಇದಾಗಿದ್ದು, ಈ ಹಿಂದೆ ಸಜೀವನ್ ಕೊಲ್ಲಪಲ್ಲಿಯನ್ನು ಇಡಿ ಬಂಧಿಸಿತ್ತು. ಅಧಿಕೃತ ಮೂಲಗಳ ಪ್ರಕಾರ ಪುಲ್ಪಲ್ಲಿ ಸೇವಾ ಸಹಕಾರಿ ಬ್ಯಾಂಕ್ ಹಗರಣಕ್ಕೆ ಸಂಬಂಧಿಸಿದಂತೆ ಈ ಬಂಧನ ನಡೆದಿದೆ.
ಬ್ಯಾಂಕ್ ಅವ್ಯವಹಾರಕ್ಕೆ ಸಂಬಂಧಿಸಿ ಈ ಹಿಂದೆ ಸಜೀವನ್ ಕೊಲ್ಲಪಲ್ಲಿ ವಿಚಾರಣೆ ವೇಳೆ ನೀಡಿದ ಮಾಹಿತಿಯ ಆಧಾರದ ಮೇಲೆ ಅಬ್ರಹಾಂ ಬಂಧನ ನಡೆದಿದೆ. ಪುಲ್ಪಲ್ಲಿ ಸಹಕಾರಿ ಬ್ಯಾಂಕ್ ವಂಚನೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆಯನ್ನು ಇಡಿ ಅಧಿಕಾರಿಗಳು ಪತ್ತೆಹಚ್ಚಿದ್ದಾರೆ ಎನ್ನಲಾಗಿದೆ.
ಪುಲ್ಪಲ್ಲಿ ಸೇವಾ ಸಹಕಾರಿ ಬ್ಯಾಂಕ್‌ನಲ್ಲಿ ಅಬ್ರಹಾಂ ಅವರು ಅಧ್ಯಕ್ಷರಾಗಿದ್ದಾಗ ಸಂಜೀವನ್ ಎಂಬವರೊಂದಿಗೆ ಸೇರಿಕೊಂಡು ಬ್ಯಾಂಕ್‌ನ 8ಕೋ.ರೂ.ಗೂ ಅಧಿಕ ಹಣವನ್ನು ಸಾಲದ ಮೂಲಕ ದುರ್ಬಳಕೆ ಮಾಡಿಕೊಂಡಿದ್ದಾರೆ ಆರೋಪಿಸಲಾಗಿದೆ.
ಅಬ್ರಹಾಂ ಅವರು ಅಧ್ಯಕ್ಷರಾಗಿದ್ದಾಗ ಹಣಕಾಸು ಅವ್ಯವಹಾರ ನಡೆದಿದೆ ಎಂಬ ದೂರನ್ನು ಆಧರಿಸಿ ಇಡಿ ತನಿಖೆ ಆರಂಭಿಸಿದೆ. ವೃದ್ಧ ದಂಪತಿಯೊಂದು ಇದಕ್ಕೂ ಮೊದಲು ಅಬ್ರಾಹಂ ವಿರುದ್ಧ ದೂರು ನೀಡಿದ್ದರು. ಇದೇ ಪ್ರಕರಣಕ್ಕೆ ಸಂಬಂಧಿಸಿ ಹಣ ಕಳೆದುಕೊಂಡ ರೈತರೋರ್ವರು ಕೆಲವು ತಿಂಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿದ್ದರು.
ನಿನ್ನೆ ಜಮ್ಮು ಕಾಶ್ಮೀರದಲ್ಲಿ ಇಡಿ ಅಧಿಕಾರಿಗಳು ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಜಮ್ಮು-ಕಾಶ್ಮೀರ ಸರ್ಕಾರದ ಮಾಜಿ ಕ್ಯಾಬಿನೆಟ್ ಸಚಿವ ಚೌಧರಿ ಲಾಲ್ ಸಿಂಗ್ ಅವರನ್ನು ಬಂಧಿಸಿದ್ದರು.
ಪತ್ನಿ ಕಾಂತಾ ಅಂಡೋತ್ರಾ ನಡೆಸುತ್ತಿರುವ ಶೈಕ್ಷಣಿಕ ಟ್ರಸ್ಟ್‌ಗೆ ಸಂಬಂಧಿಸಿದ ಹಣಕಾಸು ಅಕ್ರಮ ವ್ಯವಹಾರಕ್ಕೆ ಸಂಬಂಧಿಸಿ ಮಾಜಿ ಸಚಿವರ ಬಂಧನ ನಡೆದಿದೆ. ಬಂಧನಕ್ಕೂ ಮುನ್ನ ಮಾಜಿ ಸಚಿವರನ್ನು ಇಡಿ ಶನಿವಾರ ಮತ್ತು ಸೋಮವಾರ ವಿಚಾರಣೆಗೆ ಒಳಪಡಿಸಿತ್ತು. ಅಕ್ಟೋಬರ್‌ನಲ್ಲಿ ಟ್ರಸ್ಟ್ ವಿರುದ್ಧದ ಹಣ ವರ್ಗಾವಣೆ ತನಿಖೆಯ ಭಾಗವಾಗಿ ಜಮ್ಮುವಿನಲ್ಲಿ ಇಡಿ ಅಧಿಕಾರಿಗಳು ಶೋಧ ನಡೆಸಿದ್ದರು.
ಇದನ್ನು ಓದಿ: ಅಕ್ರಮ ಹಣ ವರ್ಗಾವಣೆ ಪ್ರಕರಣ: ಮಾಜಿ ಸಚಿವ ಚೌಧರಿ ಲಾಲ್ ಸಿಂಗ್ ಬಂಧನ


