ಎರಡು ದಶಕಗಳಷ್ಟು ಹಳೆಯದಾದ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರಿಗೆ ಸುಪ್ರೀಂಕೋರ್ಟ್ ಬಿಗ್ ರಿಲೀಫ್ ನೀಡಿದ್ದು, ಬಂಧನದಿಂದ ರಕ್ಷಣೆಯನ್ನು ನೀಡಿದೆ.
ವಾರಣಾಸಿಯ ವಿಭಾಗೀಯ ಆಯುಕ್ತರ ಕಚೇರಿ ಆವರಣದಲ್ಲಿ ಹಿಂಸಾತ್ಮಕ ಪ್ರತಿಭಟನೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊರಡಿಸಲಾದ ಜಾಮೀನು ರಹಿತ ವಾರಂಟ್ ವಿರುದ್ಧ ಸುಪ್ರೀಂಕೋರ್ಟ್ ಗುರುವಾರ ಐದು ವಾರಗಳ ಕಾಲ ಅವರಿಗೆ ಬಂಧನದಿಂದ ರಕ್ಷಣೆ ನೀಡಿದೆ.
ಭಾರತದ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಜೆ ಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರ ಪೀಠವು ವಾರಣಾಸಿ ನ್ಯಾಯಾಲಯದ ಮುಂದೆ ಜಾಮೀನು ರಹಿತ ವಾರಂಟ್‌ಗಳ ರದ್ದತಿಗೆ ಹಾಜರಾಗಲು 4 ವಾರಗಳ ಕಾಲಾವಕಾಶ ನೀಡಿದೆ.
ಸಂವಿಧಾನದ 32ನೇ ವಿಧಿಯ ಅಡಿಯಲ್ಲಿ ಸುರ್ಜೆವಾಲ್ ಅವರು ಸಲ್ಲಿಸಿದ ರಿಟ್ ಅರ್ಜಿಯ ಮೇಲೆ ನ್ಯಾಯಾಲಯವು ತನ್ನ ಆದೇಶವನ್ನು ನೀಡಿದೆ.
23 ವರ್ಷಗಳ ಹಿಂದೆ ನಡೆದ ಘಟನೆಯೊಂದಕ್ಕೆ ಸಂಬಂಧಿಸಿ ಪ್ರಮುಖ ರಾಜಕೀಯ ಪಕ್ಷದ ಕಾರ್ಯದರ್ಶಿ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿ ಮಾಡಲಾಗಿದೆ ಎಂದು ಹಿರಿಯ ವಕೀಲ ಎಎಂ ಸಿಂಘ್ವಿ ನ್ಯಾಯಾಲಯದಲ್ಲಿ ವಾದ ಮಂಡಿಸಿದ್ದರು.
ವಿಚಾರಣೆ ವೇಳೆ ನೀವು ಯಾಕೆ ಇಲ್ಲಿಗೆ ಬಂದಿದ್ದೀರಿ? ನೀವು ಹೈಕೋರ್ಟ್‌ಗೆ ಹೋಗಬೇಕು ಎಂದು ಪೀಠ ಅವರಿಗೆ ಹೇಳಿದೆ.
ಅವರು ಹೈಕೋರ್ಟ್‌ಗೆ ಹೋಗಿದ್ದರು ಆದರೆ ಅಲ್ಲಿ ತುರ್ತು ಆದೇಶಕ್ಕೆ ನಿರಾಕರಿಸಲಾಗಿದೆ. ಕ್ರಿಮಿನಲ್ ಪ್ರೊಸೀಜರ್ ಕೋಡ್‌ನ ಸೆಕ್ಷನ್ 482ರ ಅಡಿಯಲ್ಲಿ ಅರ್ಜಿದಾರರು ಸಲ್ಲಿಸಿದ ಅರ್ಜಿಯ ಮೇಲೆ ಅಲಹಾಬಾದ್ ಹೈಕೋರ್ಟ್ ತನ್ನ ತೀರ್ಪನ್ನು ಕಾಯ್ದಿರಿಸಿದ್ದರೂ ಕೂಡ ನ್ಯಾಯಾಲಯದಿಂದ ಜಾಮೀನು ರಹಿತ ವಾರೆಂಟ್ ನೀಡಲಾಗಿದೆ ಎಂದು ಅವರು ಸುಪ್ರೀಂಕೋರ್ಟ್ ಗಮನಕ್ಕೆ ತಂದಿದ್ದಾರೆ.
ಅರ್ಜಿಯ ಕುರಿತು ಹೈಕೋರ್ಟ್ ತನ್ನ ಆದೇಶವನ್ನು ಕಾಯ್ದಿರಿಸಿದಾಗ ಜಾಮೀನು ರಹಿತ ವಾರೆಂಟ್ ನೀಡುವ ಅಗತ್ಯ ಏನಿತ್ತು ಎಂದು ಅವರು ಪ್ರಶ್ನಿಸಿದ್ದಾರೆ. 2000 ವಿಷವಿಯಲ್ಲಿ ಮಾಡಿದ ಎಫ್‌ಐಆರ್ ಆಗಿದೆ. ಈ ವೇಳೆ ಆಪಾದಿತ ಕಾಂಗ್ರೆಸ್ ನಾಯಕರು ಯೂತ್ ಕಾಂಗ್ರೆಸ್‌ನಲ್ಲಿದ್ದರು.
ಈ ಕುರಿತು ಅಕ್ಟೋಬರ್‌ನಲ್ಲಿ ಹೈಕೋರ್ಟ್ ಆದೇಶವನ್ನು ಕಾಯ್ದಿರಿಸಿದೆ ಮತ್ತು ನ.7ರಂದು ತನ್ನ ಕಕ್ಷಿದಾರನ ವಿರುದ್ಧ ಜಾಮೀನು ರಹಿತ ವಾರೆಂಟ್ ಹೊರಡಿಸಲಾಗಿದೆ ಎಂದು ಕೋರ್ಟ್ ಗಮನಕ್ಕೆ ತರಲಾಗಿತ್ತು.
ಇದನ್ನು ಓದಿ: ಸಾಹಿತಿಗಳಿಗೆ ಬೆದರಿಕೆ ಪತ್ರ: ಸಾವರ್ಕರ್ ಕುರಿತ ಪುಸ್ತಕ ಓದುತ್ತಿದ್ದ ಆರೋಪಿ


