HomeಮುಖಪುಟMLA, MPಗಳ ವಿರುದ್ಧದ ಕ್ರಿಮಿನಲ್ ಮೊಕದ್ದಮೆಗಳ ಮೇಲೆ ನಿಗಾ ವಹಿಸಿ: ಹೈಕೋರ್ಟ್‌ಗಳಿಗೆ ಸುಪ್ರೀಂ ನಿರ್ದೇಶನ

MLA, MPಗಳ ವಿರುದ್ಧದ ಕ್ರಿಮಿನಲ್ ಮೊಕದ್ದಮೆಗಳ ಮೇಲೆ ನಿಗಾ ವಹಿಸಿ: ಹೈಕೋರ್ಟ್‌ಗಳಿಗೆ ಸುಪ್ರೀಂ ನಿರ್ದೇಶನ

- Advertisement -
- Advertisement -

ಕ್ರಿಮಿನಲ್ ಮೊಕದ್ದಮೆಗಳನ್ನು ಎದುರಿಸುತ್ತಿರುವ ಸಂಸದರು ಮತ್ತು ಶಾಸಕರ ವಿರುದ್ಧದ ವಿಚಾರಣೆಗಳ ಮೇಲೆ ನಿಗಾ ವಹಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಹೈಕೋರ್ಟ್‌ಗಳಿಗೆ ನಿರ್ದೇಶನಗಳನ್ನು ನೀಡಿದೆ.

ಸಂಸದರು ಮತ್ತು ಶಾಸಕರ ವಿರುದ್ಧದ ಕ್ರಿಮಿನಲ್ ಮೊಕದ್ದಮೆಗಳನ್ನು ತ್ವರಿತವಾಗಿ ವಿಲೇವಾರಿ ಮಾಡುವಂತೆ ಕೋರಿ ಸಲ್ಲಿಸಲಾದ ಮನವಿಯ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಅವರ ನೇತೃತ್ವದ ಪೀಠವು ತನ್ನ ಆದೇಶವನ್ನು ಪ್ರಕಟಿಸಿದೆ.

ಆದೇಶದಲ್ಲಿ, ”ಪ್ರಕರಣಗಳ ಆರಂಭಿಕ ವಿಲೇವಾರಿ ಮೇಲೆ ಪ್ರಭಾವ ಬೀರುವ ಹಲವಾರು ಅಂಶಗಳಿವೆ ಎಂದು ಹೇಳಿದೆ ಮತ್ತು ಇದು ರಾಜ್ಯದಿಂದ ರಾಜ್ಯಕ್ಕೆ ಭಿನ್ನವಾಗಿದೆ. ಈ ಪ್ರಕರಣಗಳನ್ನು ವಿಲೇವಾರಿ ಮಾಡಲು ಈ ದೇಶದ ಎಲ್ಲಾ ವಿಚಾರಣಾ ನ್ಯಾಯಾಲಯಗಳಿಗೆ ಏಕರೂಪದ ಅಥವಾ ಪ್ರಮಾಣಿತ ಮಾರ್ಗಸೂಚಿಯನ್ನು ರೂಪಿಸಲು ಈ ನ್ಯಾಯಾಲಯಕ್ಕೆ ಕಷ್ಟಕರವಾಗಿದೆ” ಎಂದು ತಿಳಿಸಿದೆ.

ಕಳೆದ ವರ್ಷ ನವೆಂಬರ್‌ನಲ್ಲಿ ಸುಪ್ರೀಂ ಕೋರ್ಟ್ ಪೀಠಕ್ಕೆ ಸಹಾಯ ಮಾಡಿದ್ದ ಅಮಿಕಸ್ ಕ್ಯೂರಿ ವಿಜಯ್ ಹನ್ಸಾರಿಯಾ ಅವರು 16 ಹೈಕೋರ್ಟ್‌ಗಳಲ್ಲಿ ಸಂಸದರು ಮತ್ತು ಶಾಸಕರಿಗೆ ಸಂಬಂಧಿಸಿದ 962 ಪ್ರಕರಣಗಳು ಐದು ವರ್ಷಗಳಿಂದ ಬಾಕಿ ಉಳಿದಿವೆ ಎಂದು ಹೇಳಿದ್ದರು.

ಬುಧವಾರ ಹೊರಡಿಸಿದ ಮಾರ್ಗಸೂಚಿಗಳಲ್ಲಿ, ಮರಣದಂಡನೆ, ಜೀವಾವಧಿ ಶಿಕ್ಷೆ ಅಥವಾ ಐದು ವರ್ಷ ಅಥವಾ ಅದಕ್ಕಿಂತ ಹೆಚ್ಚಿನ ಜೈಲು ಶಿಕ್ಷೆ ವಿಧಿಸಬಹುದಾದ ಪ್ರಕರಣಗಳಿಗೆ ಆದ್ಯತೆ ನೀಡಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಅಪರೂಪದ ಕಾರಣಗಳನ್ನು ಹೊರತುಪಡಿಸಿ ಈ ಪ್ರಕರಣಗಳನ್ನು ಮುಂದೂಡದಂತೆ ವಿಚಾರಣಾ ನ್ಯಾಯಾಲಯಗಳಿಗೆ ನಿರ್ದೇಶನ ನೀಡಿದೆ.

ವಿಶೇಷ ಪೀಠವು ವಿಚಾರಣೆಯನ್ನು ತ್ವರಿತಗೊಳಿಸಲು ಮತ್ತು ಅಡ್ವೊಕೇಟ್ ಜನರಲ್ ಮತ್ತು ಪ್ರಾಸಿಕ್ಯೂಟರ್‌ಗಳಿಂದ ನೆರವು ಪಡೆಯಲು ಆದೇಶಗಳನ್ನು ನೀಡಬಹುದು. ಮುಖ್ಯ ನ್ಯಾಯಾಧೀಶರು ವಿಶೇಷ ಪೀಠದ ಮುಂದೆ ತಡೆಯಾಜ್ಞೆ ಹೊರಡಿಸಿದ ಪ್ರಕರಣಗಳನ್ನು ಮಾರ್ಗದರ್ಶಿ ಸೂತ್ರಗಳ ಪ್ರಕಾರ ಅಗತ್ಯವಿದ್ದಾಗ ವಿಚಾರಣೆಗಳನ್ನು ಪ್ರಾರಂಭಿಸುವುದನ್ನು ಖಚಿತಪಡಿಸಿಕೊಳ್ಳಬಹುದು” ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ವಿಚಾರಣಾ ನ್ಯಾಯಾಲಯಗಳಿಗೆ ವಿಷಯದ ಪ್ರಕರಣಗಳನ್ನು ಹಂಚಲು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರನ್ನು ನೇಮಿಸಬಹುದು ಎಂದು ಹೈಕೋರ್ಟ್‌ಗಳಿಗೆ ತಿಳಿಸಲಾಗಿದೆ. ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರು ಗೊತ್ತುಪಡಿಸಿದ ನ್ಯಾಯಾಲಯಕ್ಕೆ ಸಾಕಷ್ಟು ಮೂಲಸೌಕರ್ಯ ಸೌಲಭ್ಯಗಳನ್ನು ಖಚಿತಪಡಿಸಿಕೊಳ್ಳಬೇಕು ಮತ್ತು ಪರಿಣಾಮಕಾರಿ ಕಾರ್ಯನಿರ್ವಹಣೆಗಾಗಿ ಅಂತಹ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳಲು ಅನುವು ಮಾಡಿಕೊಡಬೇಕು” ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಇದರೊಂದಿಗೆ ಪೀಠವು ತ್ವರಿತ ವಿಚಾರಣೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಇತ್ಯರ್ಥಪಡಿಸಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ನಿಯೋಗದಿಂದ ಕರ್ನಾಟಕ ರಾಜ್ಯಪಾಲರ ಭೇಟಿ: ‘ದ್ವೇಷ ಭಾಷಣ ತಡೆ’ ಮಸೂದೆಗೆ ಒಪ್ಪಿಗೆ ನೀಡದಂತೆ ಮನವಿ

ಬೆಂಗಳೂರು: ದ್ವೇಷ ಭಾಷಣ ಮಸೂದೆಯನ್ನು"ವಾಕ್ ಸ್ವಾತಂತ್ರ್ಯದ ಮೇಲಿನ ನೇರ ದಾಳಿ" ಮತ್ತು "ರಾಜಕೀಯ ಸೇಡಿನ ಸಾಧನ" ಎಂದು ಕರೆದಿರುವ ಬಿಜೆಪಿ ನಾಯಕರ ನಿಯೋಗವು ಸೋಮವಾರ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಭೇಟಿ...

ಟೆಕ್ಕಿ ಶರ್ಮಿಳಾ ಕೊಲೆ ಪ್ರಕರಣ : ಪಿಯು ವಿದ್ಯಾರ್ಥಿಯನ್ನು ಬಂಧಿಸಿದ ಪೊಲೀಸರು

ಬೆಂಗಳೂರಿನ ರಾಮಮೂರ್ತಿ ನಗರದ ಸುಬ್ರಹ್ಮಣ್ಯ ಬಡಾವಣೆಯಲ್ಲಿ 2026ರ ಜನವರಿ 3ರಂದು ರಾತ್ರಿ ನಡೆದ ಮಂಗಳೂರು ಮೂಲದ ಸಾಫ್ಟ್‌ವೇರ್ ಇಂಜಿನಿಯರ್ ಶರ್ಮಿಳಾ ಕುಶಾಲಪ್ಪ (34) ಅವರ ಕೊಲೆ ಪ್ರಕರಣವನ್ನು ಪೊಲೀಸರು ಬೇಧಿಸಿದ್ದಾರೆ. ಆರಂಭದಲ್ಲಿ, ಫ್ಲ್ಯಾಟ್‌ಗೆ ಬೆಂಕಿ...

ಎಸ್‌ಎಸ್‌ಎಲ್‌ಸಿ ಪ್ರಶ್ನೆ ಪತ್ರಿಕೆ ಸೋರಿಕೆ: ಸಾಮಾಜಿಕ ಮಾಧ್ಯಮದಲ್ಲಿ 200-500 ರೂ.ಗೆ ಮಾರಾಟ: ಆರು ಶಿಕ್ಷಕರು, ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳ ಬಂಧನ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ತನಿಖೆಯ ಸಂದರ್ಭದಲ್ಲಿ ಆಘಾತಕಾರಿ ಮಾಹಿತಿಗಳು ಹೊರಬಿದ್ದಿವೆ. ವಿದ್ಯಾರ್ಥಿಗಳು ಪ್ರಶ್ನೆಪತ್ರಿಕೆಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಬಹಿರಂಗವಾಗಿ ಜಾಹೀರಾತು ಮಾಡಿ ಖಾಸಗಿ ಸಂದೇಶಗಳ ಮೂಲಕ 200 ರಿಂದ...

ಕರೂರ್ ಕಾಲ್ತುಳಿತ : ಸಿಬಿಐ ಮುಂದೆ ವಿಚಾರಣೆಗೆ ಹಾಜರಾದ ನಟ ವಿಜಯ್

ಕರೂರ್ ಕಾಲ್ತುಳಿತ ಘಟನೆಗೆ ಸಂಬಂಧಪಟ್ಟಂತೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಸೋಮವಾರ (ಜ.12) ದೆಹಲಿಯ ಕೇಂದ್ರ ತನಿಖಾ ದಳ (ಸಿಬಿಐ) ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಚಾರ್ಟರ್ಡ್ ವಿಮಾನದಲ್ಲಿ...

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...