Homeಕರ್ನಾಟಕ545 ಪಿಎಸ್‌ಐ ನೇಮಕಾತಿ ಹಗರಣ: ಮರು ಪರೀಕ್ಷೆಗೆ ಹೈಕೋರ್ಟ್ ಆದೇಶ

545 ಪಿಎಸ್‌ಐ ನೇಮಕಾತಿ ಹಗರಣ: ಮರು ಪರೀಕ್ಷೆಗೆ ಹೈಕೋರ್ಟ್ ಆದೇಶ

- Advertisement -
- Advertisement -

545 ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಪಿಎಸ್‌ಐ) ನೇಮಕಾತಿ ಅಕ್ರಮ ಹಿನ್ನೆಲೆಯಲ್ಲಿ ಇಂದು ಹೈಕೋರ್ಟ್‌ ತನ್ನ ಮಹತ್ವದ ತೀರ್ಪು ಪ್ರಕಟಿಸಿದ್ದು, ಮರು ಪರೀಕ್ಷೆ ನಡೆಸಲು ಆದೇಶಿಸಿದೆ.

545 ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ ಪರೀಕ್ಷೆ ಹಗರಣ ಹಿನ್ನೆಲೆಯಲ್ಲಿ, ಈ ಮೊದಲೇ ಲಿಖಿತ ಪರೀಕ್ಷೆ, ಆಯ್ಕೆಪಟ್ಟಿಯನ್ನು ರದ್ದುಪಡಿಸಿ, ಹೊಸದಾಗಿ ಪರೀಕ್ಷೆ ನಡೆಸುವುದಾಗಿ ಹಿಂದಿನ ಬಿಜೆಪಿ ಸರ್ಕಾರ ಆದೇಶ ಹೊರಡಿಸಿತ್ತು. ಆದರೆ ಇದನ್ನು ಪ್ರಶ್ನಿಸಿ 269 ಅಭ್ಯರ್ಥಿಗಳು ಹೈಕೋರ್ಟ್‌ ಮೆಟ್ಟಿಲೇರಿದ್ದರು. ಇವರ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್‌ ಇಂದು ತೀರ್ಪು ನೀಡಿದೆ. ಈ ಮೂಲಕ ಹೈಕೋರ್ಟ್‌ ಮೆಟ್ಟಿಲೇರಿದ್ದ ಅಭ್ಯರ್ಥಿಗಳಿಗೆ ಹಿನ್ನೆಡೆಯಾಗಿದೆ.

ಸರಕಾರದ ಆದೇಶ ರದ್ದು ಕೋರಿ ಎನ್.ವಿ. ಚಂದನ್ ಸೇರಿದಂತೆ ಆಯ್ಕೆಪಟ್ಟಿಯಲ್ಲಿ ಹೆಸರಿದ್ದ ಅಭ್ಯರ್ಥಿಗಳು ಸಲ್ಲಿಸಿರುವ ತಕರಾರು ಅರ್ಜಿಗಳ ವಿಚಾರಣೆಯನ್ನು 2023ರ ಅ.26ರಂದು ಪೂರ್ಣಗೊಳಿಸಿ ಕಾಯ್ದಿರಿಸಿರುವ ತೀರ್ಪುನ್ನು ನ್ಯಾಯಮೂರ್ತಿಗಳಾದ ಪಿ.ಎಸ್. ದಿನೇಶ್ ಕುಮಾರ್ ನೇತೃತ್ವದ ವಿಭಾಗೀಯ ಪೀಠ, ಶುಕ್ರವಾರ ಪ್ರಕಟಿಸಿತು.

ರಾಜ್ಯ ಸರಕಾರವು ನ್ಯಾಯಯುತ ಮತ್ತು ಪಾರದರ್ಶಕ ಮರು ಪರೀಕ್ಷೆ ನಡೆಸುವುದನ್ನು ಖಾತರಿಪಡಿಸಲು ಸ್ವತಂತ್ರ ಸಂಸ್ಥೆಯಿಂದ ಹೊಸದಾಗಿ ಲಿಖಿತ ಪರೀಕ್ಷೆ ನಡೆಸುವ ಜವಾಬ್ದಾರಿ ವಹಿಸಬೇಕು ಎಂದು ಹೈಕೋರ್ಟ್ ಆದೇಶಿಸಿದೆ.

ಪರೀಕ್ಷೆಯಲ್ಲಿ ಅಕ್ರಮ ನಡೆದ ಹಿನ್ನೆಲೆಯಲ್ಲಿ ಹಿಂದಿನ ಬಿಜೆಪಿ ಸರ್ಕಾರವು ಪರೀಕ್ಷೆ, ಆಯ್ಕೆಪಟ್ಟಿ ಎಲ್ಲವನ್ನು ರದ್ದುಪಡಿಸಿದ್ದನ್ನು ಪ್ರಶ್ನಿಸಿ 269 ಅಭ್ಯರ್ಥಿಗಳು ಕೆಎಸ್‌ಸಿ ಗೆ ಅರ್ಜಿ ಸಲ್ಲಿಸಿದ್ದರು. ಆ ಅರ್ಜಿಯನ್ನು ವಜಾಗೊಳಿಸಿತ್ತು. ಹೀಗಾಗಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಅಲ್ಲದೇ ಮರು ಪರೀಕ್ಷೆಗೆ ವಿರೋಧ ವ್ಯಕ್ತಪಡಿಸಿದ್ದರು. ಅಕ್ರಮ ಎಸಗಿದವರನ್ನು ಹೊರತುಪಡಿಸಿ, ಉಳಿದವರನ್ನು ನೇಮಕಾತಿ ಪಟ್ಟಿಗೆ ಪರಿಗಣಿಸಿ ಎಂದಿದ್ದರು. ಇವರ ಅರ್ಜಿಯನ್ನು ವಿಚಾರಣೆ ನಡೆಸಿದ್ದ ಉಚ್ಚನ್ಯಾಯಾಲಯವು ಮರು ಪರೀಕ್ಷೆಗೆ ಮಧ್ಯಂತರ ತಡೆಯಾಜ್ಞೆ ನೀಡಿತ್ತು. ನಂತರ ಅರ್ಜಿಯ ವಿಚಾರಣೆ ಪೂರ್ಣಗೊಳಿಸಿ ತೀರ್ಪು ಕಾಯ್ದಿರಿಸಲಾಗಿತ್ತು.

ಇಂದು ನ್ಯಾಯಮೂರ್ತಿ ದಿನೇಶ್ ಕುಮಾರ್ ಅವರ ನೇತೃತ್ವದ ವಿಭಾಗೀಯ ಪೀಠವು ತೀರ್ಪು ನೀಡಿದೆ. ಈ ಆದೇಶದ ಆಧಾರದಲ್ಲಿ ಕರ್ನಾಟಕ ರಾಜ್ಯ ಪೊಲೀಸ್‌ ಇಲಾಖೆಯು ಮರು ಪರೀಕ್ಷೆಯನ್ನು ಯಾವಾಗ ನಡೆಸುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

ಇದನ್ನೂ ಓದಿ: ಮುಂದಿನ ಚುನಾವಣೆಗೆ ಸ್ಪರ್ಧಿಸುವುದಾಗಿ ಹೇಳಿದ ಪಿಎಸ್‌ಐ ಹಗರಣದ ಆರೋಪಿ ರುದ್ರಗೌಡ ಪಾಟಿಲ!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

‘ಮಹಾಲಕ್ಷಿ ಮತ್ತು ಮೆಟ್ರೋ’: ತೆಲಂಗಾಣ ಸರ್ಕಾರ-ಎಲ್‌&ಟಿ ನಡುವೆ ಜೋರಾದ ಜಟಾಪಟಿ

0
ಹೈದರಾಬಾದ್ ಮಹಾನಗರ ಮೆಟ್ರೋ ಸೇವೆ ಸೇರಿದಂತೆ ತೆಲಂಗಾಣ ರಾಜ್ಯದ ಹಲವು ಬೃಹತ್ ಯೋಜನೆಗಳ ಅನುಷ್ಠಾನ ಮತ್ತು ನಿರ್ವಹಣೆ ಮಾಡುತ್ತಿರುವ 'ಲಾರ್ಸೆನ್ ಮತ್ತು ಟೂಬ್ರೊ (ಎಲ್ & ಟಿ)' ಕಂಪನಿ ಮತ್ತು ರಾಜ್ಯ ಸರ್ಕಾರದ...