Homeಮುಖಪುಟನಿಜ್ಜರ್ ಹತ್ಯೆ: ಕೆನಡಾದ ತನಿಖೆಗೆ ಸಹಕರಿಸಿ: ಭಾರತಕ್ಕೆ ಮತ್ತೆ ಆಗ್ರಹಿಸಿದ ಬ್ಲಿಂಕನ್

ನಿಜ್ಜರ್ ಹತ್ಯೆ: ಕೆನಡಾದ ತನಿಖೆಗೆ ಸಹಕರಿಸಿ: ಭಾರತಕ್ಕೆ ಮತ್ತೆ ಆಗ್ರಹಿಸಿದ ಬ್ಲಿಂಕನ್

- Advertisement -
- Advertisement -

ಸಿಖ್ ಪ್ರತ್ಯೇಕತಾವಾದಿ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯ ಬಗ್ಗೆ ಕೆನಡಾದ ತನಿಖೆಗೆ ಸಹಕರಿಸುವಂತೆ ಯುಎಸ್ ವಿದೇಶಾಂಗ ಕಾರ್ಯದರ್ಶಿ ಆಂಟೋನಿ ಬ್ಲಿಂಕನ್ ಶುಕ್ರವಾರ ಭಾರತಕ್ಕೆ ಆಗ್ರಹಿಸಿದ್ದಾರೆ.

ಖಲಿಸ್ತಾನಿ ಪ್ರತ್ಯೇಕತಾವಾದಿ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯಲ್ಲಿ ಭಾರತೀಯ ಏಜೆಂಟರ ಕೈವಾಡ ಇದೆ ಎಂದು  ಕೆನಡಾದ ಪ್ರಧಾನ ಮಂತ್ರಿ ಜಸ್ಟಿನ್ ಟ್ರುಡೊ ಸೆಪ್ಟೆಂಬರ್‌ನಲ್ಲಿ ಆರೋಪಿಸಿದ ನಂತರ ಭಾರತ ಮತ್ತು ಕೆನಡಾ ನಡುವಿನ ಸಂಬಂಧಗಳು ಹದಗೆಟ್ಟಿದ್ದವು.

ಭಾರತವು ಕೆನಡಾದೊಂದಿಗೆ ಸಹಕರಿಸುವುದು ಬಹಳ ಮುಖ್ಯ ಎಂದು ನಾವು ಭಾವಿಸುತ್ತೇವೆ. ಈ ಸಮಸ್ಯೆ ಪರಿಹರಿಸಲು ಅವರು ಒಂದು ಮಾರ್ಗವನ್ನು ಕಂಡುಕೊಳ್ಳುತ್ತಾರೆ. ಈ ವಿಚಾರದಲ್ಲಿ ಭಾರತವು ಕೆನಡಾದೊಂದಿಗೆ ಕೆಲಸ ಮಾಡುತ್ತದೆ ಮತ್ತು ನಾನು ಈ ಬಗ್ಗೆ ಚರ್ಚಿಸಿದ್ದೇನೆ ಎಂದು ಅವರು ಹೇಳಿದ್ದಾರೆ.

ಭಾರತ ಮತ್ತು ಕೆನಡಾ ನಮ್ಮ ಇಬ್ಬರು ಆಪ್ತ ಸ್ನೇಹಿತರು ಮತ್ತು ಪಾಲುದಾರರು ಮತ್ತು ಇಬ್ಬರೂ ಸ್ನೇಹಿತರಾಗಿ ಅವರು ಹೊಂದಿರುವ ಯಾವುದೇ ಭಿನ್ನಾಭಿಪ್ರಾಯಗಳು ಅಥವಾ ವಿವಾದಗಳನ್ನು ಪರಿಹರಿಸುವುದನ್ನು ನಾವು ನೋಡಲು ಬಯಸುತ್ತೇವೆ ಎಂದು ಯುಎಸ್ ವಿದೇಶಾಂಗ ಕಾರ್ಯದರ್ಶಿ ಹೇಳಿದರು.

5ನೇ ಭಾರತ-ಯುಎಸ್‌ 2+2 ಸಂವಾದಕ್ಕಾಗಿ ಬ್ಲಿಂಕನ್ ಮತ್ತು US ರಕ್ಷಣಾ ಕಾರ್ಯದರ್ಶಿ ಲಾಯ್ಡ್ ಆಸ್ಟಿನ್ ದೆಹಲಿಗೆ ಆಗಮಿಸಿದ್ದರು. ಭಾರತದ ಕಡೆಯಿಂದ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಹಾಗೂ ವಿದೇಶಾಂಗ ಇಲಾಖೆಯ ಸಚಿವ ಜೈ ಶಂಕರ್‌ ಅವರು ಮಾತುಕತೆಯಲ್ಲಿ ಭಾಗಿಯಾಗಿದ್ದರು.

ಸಿಖ್ ಪ್ರತ್ಯೇಕತಾವಾದಿ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯ ಬಗ್ಗೆ ಕೆನಡಾದ ಪ್ರಧಾನ ಮಂತ್ರಿ ಜಸ್ಟಿನ್ ಟ್ರುಡೊ ಅವರ ಆರೋಪಗಳ ಬಳಿಕ ಭಾರತ ಮತ್ತು ಕೆನಡಾದ ನಡುವಿನ ಸಂಬಂಧ ಹದಗೆಟ್ಟಿತ್ತು. ಭಾರತ ಮತ್ತು ಕೆನಡಾ ಎರಡೂ ದೇಶಗಳು ರಾಜತಾಂತ್ರಿಕ ಅಧಿಕಾರಿಗಳನ್ನು ಉಚ್ಛಾಟಿಸಿತ್ತು.

ಭಾರತವು ಕೆನಡಾದ ನಾಗರಿಕರಿಗೆ ವೀಸಾಗಳನ್ನು ನೀಡುವುದನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿತ್ತು ಮತ್ತು ದೇಶದಲ್ಲಿ ತನ್ನ ರಾಜತಾಂತ್ರಿಕ ಅಧಿಕಾರಿಗಳನ್ನು ಕಡಿಮೆ ಮಾಡಲು ಕೆನಡಾವನ್ನು ಕೇಳಿಕೊಂಡಿತ್ತು.ಕೆನಡಾ ಈಗಾಗಲೇ 41 ರಾಜತಾಂತ್ರಿಕರು ಮತ್ತು ಅವರ ಕುಟುಂಬ ಸದಸ್ಯರನ್ನು ಭಾರತದಿಂದ  ವಾಪಾಸ್ಸು ಕರೆಸಿಕೊಂಡಿದೆ. ಕಳೆದ ತಿಂಗಳು ಭಾರತವು ಕೆಲವು ವೀಸಾ ಸೇವೆಗಳನ್ನು ಪುನರಾರಂಭಿಸಿದೆ.

ಇದನ್ನು ಓದಿ: ದಲಿತ ಬಾಲಕಿಯ ಮೇಲೆ ಅತ್ಯಾಚಾರ ಆರೋಪ: ಸಬ್ ಇನ್ಸ್‌ಪೆಕ್ಟರ್‌ಗೆ ಸ್ಥಳೀಯರಿಂದ ಥಳಿತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...