Homeಮುಖಪುಟಮಹಿಳಾ ಪತ್ರಕರ್ತೆ ಜೊತೆ ಅನುಚಿತ ವರ್ತನೆ: ಬಿಜೆಪಿ ನಾಯಕ ಸುರೇಶ್‌ ಗೋಪಿಗೆ ಸಮನ್ಸ್‌

ಮಹಿಳಾ ಪತ್ರಕರ್ತೆ ಜೊತೆ ಅನುಚಿತ ವರ್ತನೆ: ಬಿಜೆಪಿ ನಾಯಕ ಸುರೇಶ್‌ ಗೋಪಿಗೆ ಸಮನ್ಸ್‌

- Advertisement -
- Advertisement -

ಮಹಿಳಾ ಪತ್ರಕರ್ತೆಯ ಜೊತೆ ಅನುಚಿತವಾಗಿ ವರ್ತಿಸಿದ ಆರೋಪದಲ್ಲಿ ಕೇರಳದ ಖ್ಯಾತ ಚಲನಚಿತ್ರ ನಟ ಹಾಗೂ ಬಿಜೆಪಿ ನಾಯಕ ಸುರೇಶ್‌ ಗೋಪಿಗೆ ಕೋಝಿಕ್ಕೋಡ್‌ನ ನಡಕ್ಕಾವು ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್‌ ನೀಡಲಾಗಿದೆ.

ಬುಧವಾರ ವಿಚಾರಣೆಗೆ ಹಾಜರಾಗುವಂತೆ ಸುರೇಶ್‌ ಗೋಪಿ ಅವರಿಗೆ ನೊಟೀಸ್‌ ನೀಡಲಾಗಿದೆ.

ಏನಿದು ಪ್ರಕರಣ?

ಅ.27ರಂದು ಬಿಜೆಪಿ ನಾಯಕ ಸುರೇಶ್‌ ಗೋಪಿ ಮಹಿಳಾ ಪತ್ರಕರ್ತೆ ಕೇಳಿದ ಪ್ರಶ್ನೆಗೆ ಉತ್ತರಿಸುವಾಗ ಆಕೆಯ ಭುಜವನ್ನು ಪದೇ ಪದೇ ಸ್ಪರ್ಷಿಸಿದ್ದಾರೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ವೈರಲ್‌ ಆಗಿತ್ತು.

ಸುರೇಶ್‌ ಗೋಪಿ 2019ರಲ್ಲಿ ಬಿಜೆಪಿಯಿಂದ ತ್ರಿಶೂರ್ ಕ್ಷೇತ್ರದಲ್ಲಿ ಸ್ಪರ್ಧಿಸಿ ಸೋತಿದ್ದರು. ಬಿಜೆಪಿಯು ಮತ್ತೊಮ್ಮೆ ತ್ರಿಶೂರ್‌ನಿಂದ ಅವರನ್ನು ಕಣಕ್ಕಿಳಿಸುತ್ತದೆ ಎಂದು ಹೇಳಲಾಗುತ್ತಿತ್ತು. ಮಹಿಳಾ ಪತ್ರಕರ್ತೆ, ಕೇರಳದಲ್ಲಿ ಇಷ್ಟು ವರ್ಷಗಳಿಂದ ಒಂದೇ ಒಂದು ಲೋಕಸಭಾ ಸ್ಥಾನವನ್ನು ಬಿಜೆಪಿ ಪಡೆಯಲು ವೈಫಲ್ಯವಾಗಿದೆ ಎಂದು ಉಲ್ಲೇಖಿಸಿ ಪ್ರಶ್ನೆಯನ್ನು ಕೇಳಿದ್ದರು. ಈ ವೇಳೆ ಸುರೇಶ್ ಗೋಪಿ ಆಕೆಯ ಭುಜದ ಮೇಲೆ ಕೈಯಿಟ್ಟು, ನಾನು ಆಗುತ್ತಾ  ನೋಡುತ್ತೇನೆ ಮಗಳೇ, ಎಲ್ಲರೂ ಕಾದು ನೋಡುವ, ಮನುಷ್ಯನಿಂದ ಅಸಾಧ್ಯವಾದುದು ಯಾವುದೂ ಇಲ್ವಲ್ಲ ಎಂದು ಹೇಳಿದ್ದರು. ಪತ್ರಕರ್ತೆ ಈ ವೇಳೆ ಹಿಂದೆ ಸರಿಯುತ್ತಾಳೆ ಮತ್ತು ಅವಳು ತನ್ನ ಪ್ರಶ್ನೆಯನ್ನು ಪುನರಾವರ್ತಿಸಿದಳು, ಈ ವೇಳೆ ಸುರೇಶ್ ಗೋಪಿ ಮತ್ತೆ ಅವರ ಭುಜದ ಮೇಲೆ ಕೈಯಿಡುತ್ತಾರೆ. ಆಗ ಪತ್ರಕರ್ತೆ ಕೈಯಿಯನ್ನು ಕೆಳಗೆ ಹಾಕಿದ್ದಾರೆ.

ಘಟನೆಯ ನಂತರ ಸುರೇಶ್ ಗೋಪಿ ಅವರ ಅನುಚಿತ ವರ್ತನೆಯ ವಿರುದ್ಧ ಪತ್ರಕರ್ತರು ಪ್ರತಿಭಟನೆ ನಡೆಸಿದ್ದಾರೆ ಮತ್ತು ಕ್ಷಮೆಯಾಚಿಸುವಂತೆ ಒತ್ತಾಯಿಸಿದ್ದಾರೆ. ಕೇರಳದ ಕಾರ್ಯನಿರತ ಪತ್ರಕರ್ತರ ಒಕ್ಕೂಟವೂ ಸುರೇಶ್ ಗೋಪಿ ಅವರ ವರ್ತನೆಯನ್ನು ಖಂಡಿಸಿ ಕ್ಷಮೆಯಾಚಿಸುವಂತೆ ಕೇಳಿದೆ. ಸುರೇಶ್‌ ಗೋಪಿ ಬಳಿಕ ಮಹಿಳಾ ಪತ್ರಕರ್ತೆಯ ಬಳಿ ಬಹಿರಂಗವಾಗಿ ಕ್ಷಮೆಯಾಚಿಸಿದ್ದರು. ಪತ್ರಕರ್ತೆಯನ್ನು ಮಗಳಂತೆ ನಡೆಸಿಕೊಂಡಿದ್ದು, ತಂದೆಯಂತೆ ಆಕೆಯಲ್ಲಿ ಕ್ಷಮೆ ಯಾಚಿಸುವುದಾಗಿ ಹೇಳಿದ್ದರು.

ಪ್ರಕರಣಕ್ಕೆ ಸಂಬಂಧಿಸಿ ಮೀಡಿಯಾ ಒನ್ ಚಾನೆಲ್‌ನ ಮಹಿಳಾ ಪತ್ರಕರ್ತೆ ಶಿದಾ ಜಗತ್ ನೀಡಿದ ದೂರಿನ ಮೇರೆಗೆ ನಡಕ್ಕಾವು ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದರು. ಐಪಿಸಿ ಸೆಕ್ಷನ್ 354 (ಎ-1, 4) ಅಡಿಯಲ್ಲಿ ಮಹಿಳೆಯನ್ನು ದೈಹಿಕವಾಗಿ ಸಂಪರ್ಕಿಸುವ ಮೂಲಕ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇರೆಗೆ ಪ್ರಕರಣವನ್ನು ದಾಖಲಿಸಲಾಗಿತ್ತು. ದೂರುದಾರರ ಹೇಳಿಕೆಯನ್ನು ಕೂಡ ಪೊಲೀಸರು ದಾಖಲಿಸಿಕೊಂಡಿದ್ದರು.

ಇದನ್ನು ಓದಿ: ವಿಶ್ವಸಂಸ್ಥೆಯ ಕಚೇರಿಗಳಲ್ಲಿ ಧ್ವಜ ಅರ್ಧಕ್ಕೆ ಇಳಿಸಿ ಮೌನಾಚರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಥಳೀಯ ಸಂಸ್ಥೆ ಚುನಾವಣೆಗೆ ಯಾವುದೇ ಕಾರಣಕ್ಕೂ ‘SIR’ ಪಟ್ಟಿಯನ್ನು ಬಳಸಬೇಡಿ! ರಾಜ್ಯ ಸರ್ಕಾರಕ್ಕೆ ಹೋರಾಟಗಾರರ ಎಚ್ಚರಿಕೆ!

ಯುಪಿ, ರಾಜಸ್ಥಾನದಲ್ಲಿ ಬಿಜೆಪಿ ಸರ್ಕಾರಗಳೇ ಬದಿಗೊತ್ತಿದ ‘SIR’ ಪಟ್ಟಿಯನ್ನು ಕರ್ನಾಟಕ ಸರ್ಕಾರವೂ ಕೈಬಿಡಬೇಕು! ಕೇಂದ್ರ ಚುನಾವಣಾ ಆಯೋಗವು ‘ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯ ಅಂತಿಮ ಪಟ್ಟಿ ಪ್ರಕಟಿಸಿದ ನಂತರವೂ ಲಕ್ಷಾಂತರ...

ಬಿಡದಿ ಟೌನ್‌ಶಿಪ್ : 2 ಗ್ರಾಮಗಳ 1,895 ಎಕರೆ ಭೂ ಸ್ವಾಧೀನಕ್ಕೆ ಅಂತಿಮ ಅಧಿಸೂಚನೆ

ರಾಮನಗರ ತಾಲೂಕಿನ ಬಿಡದಿ ಹೋಬಳಿಯಲ್ಲಿರುವ ಕಂಚುಗಾರನಹಳ್ಳಿ ಮತ್ತು ಬೈರಮಂಗಲ ಗ್ರಾಮಗಳಲ್ಲಿ, ಪ್ರಸ್ತಾವಿತ 'ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್‌ಶಿಪ್' (GBIT) ಯೋಜನೆಗಾಗಿ 1,895 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವ ಅಂತಿಮ ಅಧಿಸೂಚನೆಯನ್ನು ಕರ್ನಾಟಕ ಸರ್ಕಾರ ಹೊರಡಿಸಿದೆ...

ಪಂಜಾಬ್ : ಮೂವರು ಎಎಪಿ ಶಾಸಕರು ಬಿಜೆಪಿ ಸೇರ್ಪಡೆ; ವಿಧಾನಸಭೆ ಚುನಾವಣೆಗೆ ಮುನ್ನ ಮಹತ್ವದ ಬೆಳವಣಿಗೆ

ಪಂಜಾಬ್ ವಿಧಾನಸಭಾ ಚುನಾವಣೆಗೆ (2027) ಮುನ್ನ ಆಮ್ ಆದ್ಮಿ ಪಾರ್ಟಿ (ಎಎಪಿ) ನೇತೃತ್ವದ ಸರ್ಕಾರಕ್ಕೆ ಭಾರಿ ಹಿನ್ನಡೆಯಾಗಿದ್ದು, ಸೋಮವಾರ (ನ.2) ಮೂವರು ಶಾಸಕರಾದ ಹರ್ಮೀತ್ ಸಿಂಗ್ ಪಠಾನ್‌ಮಜ್ರಾ, ಚೇತನ್ ಸಿಂಗ್ ಜೌರಾಮಜ್ರಾ ಮತ್ತು...

‘ಹೆಸರುಗಳನ್ನು ತೆಗೆದುಹಾಕುವುದು ಕಳ್ಳತನವಲ್ಲ’; ಎಸ್‌ಐಆರ್ ಬಗ್ಗೆ ಪ್ರತಿಪಕ್ಷಗಳು ಗೊಂದಲ ಹರಡುತ್ತಿವೆ: ಸಂಬಿತ್ ಪಾತ್ರ

ವಾರಾಣಸಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಪಕ್ಷಗಳು ಗೊಂದಲ ಸೃಷ್ಟಿಸುತ್ತಿವೆ ಎಂದು ಬಿಜೆಪಿ ರಾಷ್ಟ್ರೀಯ ವಕ್ತಾರ ಹಾಗೂ ಪುರಿ ಸಂಸದ ಸಂಬಿತ್ ಪಾತ್ರ ಆರೋಪಿಸಿದ್ದಾರೆ. ಮತದಾರರ ಪಟ್ಟಿಯಿಂದ...

ರಾಮಮಂದಿರ ದೇಣಿಗೆ ದುರುಪಯೋಗ: ವಿಚಾರಣೆಯನ್ನು ಸ್ಥಳೀಯ ನ್ಯಾಯಾಲಯಕ್ಕೆ ಬಿಟ್ಟ ಸುಪ್ರೀಂ: ಆರೋಪಗಳ ಅರ್ಹತೆ ಬಗ್ಗೆ ಪ್ರತಿಕ್ರಿಯೆ ಇಲ್ಲ

ನವದೆಹಲಿ: ಅಯೋಧ್ಯೆಯ ರಾಮಮಂದಿರಕ್ಕೆ ಭಕ್ತರು ನೀಡಿದ ದೇಣಿಗೆ ದುರುಪಯೋಗವಾಗಿದೆ ಎಂಬ ಗಂಭೀರ ಆರೋಪಕ್ಕೆ ಸಂಬಂಧಿಸಿದ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮುಕ್ತಾಯಗೊಳಿಸಿದೆ. ವಿಶೇಷ ತನಿಖಾ ತಂಡ (ಎಸ್‌ಐಟಿ) ಪ್ರಕರಣದ ತನಿಖೆ ಪೂರ್ಣಗೊಳಿಸಿ ಆರೋಪಪಟ್ಟಿ...

ಎಸ್‌ಐಆರ್ ಅಂತಿಮ ಮತದಾರರ ಪಟ್ಟಿ ತಿರಸ್ಕರಿಸುವಂತೆ ರಾಜ್ಯ ಸರ್ಕಾರಕ್ಕೆ ಜನಪರ ಸಂಘಟನೆಗಳ ಒತ್ತಾಯ

ಕೇಂದ್ರ ಚುನಾವಣಾ ಆಯೋಗ ಪ್ರಕಟಿಸಿರುವ ಎಸ್‌ಐಆರ್‌ (ಎಸ್‌ಐಆರ್) ಅಂತಿಮ ಮತದಾರರ ಪಟ್ಟಿಯನ್ನು ಕರ್ನಾಟಕ ಸರ್ಕಾರ ಸಾರಾಸಗಟಾಗಿ ತಿರಸ್ಕರಿಸಬೇಕು ಹಾಗೂ ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ಈ ಪಟ್ಟಿಯನ್ನು ಯಾವುದೇ ಕಾರಣಕ್ಕೂ ಬಳಸಬಾರದು ಎಂದು...

ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ವಿಡಿಯೋ ಪ್ರಕರಣ: ಪವರ್ ಟಿವಿ ರಾಕೇಶ್ ಶೆಟ್ಟಿ ಮನೆ, ಕಚೇರಿ ಮೇಲೆ ಸಿಸಿಬಿ ದಾಳಿ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿಕೊಂಡು ಸಿದ್ಧಪಡಿಸಲಾಗಿದೆ ಎನ್ನಲಾದ ವಿವಾದಾತ್ಮಕ ಸ್ಟಿಂಗ್ ವಿಡಿಯೋ ಪ್ರಕರಣದ ತನಿಖೆಯನ್ನು ಬೆಂಗಳೂರು ಪೊಲೀಸರು ಮತ್ತಷ್ಟು ತೀವ್ರಗೊಳಿಸಿದ್ದಾರೆ. ಪ್ರಕರಣದ ಪ್ರಮುಖ ಶಂಕಿತರಾಗಿರುವ ಪವರ್ ಟಿವಿ ವ್ಯವಸ್ಥಾಪಕ ನಿರ್ದೇಶಕ...

ಮರ ಕತ್ತರಿಸುವ ಯಂತ್ರದಿಂದ ದಾಳಿ ಪ್ರಕರಣ : ಗಾಯಾಳು ಆಂಧ್ರ ವಿದ್ಯಾರ್ಥಿನಿಗೆ ಬೆಂಗಳೂರಿನಲ್ಲಿ ಚಿಕಿತ್ಸೆ, ಆರೋಪಿಗೆ ಪೊಲೀಸರಿಂದ ಗುಂಡೇಟು

ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ರಾಪ್ತಾಡುವಿನ ಸರ್ಕಾರಿ ಶಾಲೆಯ ತರಗತಿಯೊಳಗೆ ಹೇಮಂತ್ ಎಂಬಾತ ಮರ ಕತ್ತರಿಸುವ ಯಂತ್ರದಿಂದ ನಡೆಸಿದ ಭೀಕರ ದಾಳಿಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಹತ್ತನೇ ತರಗತಿ ವಿದ್ಯಾರ್ಥಿನಿ ಗೋಪಿಕಾಳನ್ನು, ಘಟನೆ ನಡೆದ ಕೆಲವೇ...

“ಮೋದಿ ಎಂಬ ರಾವಣನನ್ನು ಕೆಳಗಿಳಿಸಲು ವಾನರ ಸೇನೆ ಬಂದಿದೆ”: ದೆಹಲಿಯಲ್ಲಿ ತೆಲಂಗಾಣ ಸಿಎಂ ರೇವಂತ್ ರೆಡ್ಡಿ ವಾಗ್ದಾಳಿ!

ದೇಶದಲ್ಲಿ ಮತದಾರರ ಪಟ್ಟಿಯ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಮೂಲಕ ಸದ್ದಿಲ್ಲದೆ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲ್ಲಾಡಿಸಲಾಗುತ್ತಿದೆ ಎಂಬ ಆರೋಪಗಳ ನಡುವೆ, ರಾಜಧಾನಿ ನವದೆಹಲಿ ಬೃಹತ್ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಯಿತು. 'ಇಂಡಿಯಾ' (INDIA) ಒಕ್ಕೂಟ...

ಕರ್ನಾಟಕ SIR | ಎರಡು ಫಾರಂ-6 ಹಾಕಿದ ವ್ಯಕ್ತಿಗೆ 5 ವೋಟರ್ ಐಡಿ ನೀಡಿದ ಚು. ಆಯೋಗ!

ವಿಶೇಷ ತೀವ್ರ ಪರಿಷ್ಕರಣೆಯ ಬಳಿಕ ಕರ್ನಾಟಕದ ಮತದಾರರ ಪಟ್ಟಿ ಶುದ್ದವಾಗಿದೆ. ಅನರ್ಹ ಮತದಾರರ ಹೆಸರುಗಳನ್ನು ತೆಗೆದು ಹಾಕಲಾಗಿದೆ ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಒ) ಅನ್ಬುಕುಮಾರ್ ಪ್ರತಿಪಾದಿಸುತ್ತಿದ್ದಾರೆ. ಆದರೆ, ಅಕ್ಟೋಬರ್ 27ರಂದು ಅಂತಿಮ...