Homeಮುಖಪುಟಅದಾನಿ ಸಮೂಹದ ಉದ್ಯೋಗಿಯನ್ನು ಕೇಂದ್ರದ EAC ಸಮಿತಿಗೆ ನೇಮಕ: ಪ್ರತಿಪಕ್ಷಗಳಿಂದ ಟೀಕೆ

ಅದಾನಿ ಸಮೂಹದ ಉದ್ಯೋಗಿಯನ್ನು ಕೇಂದ್ರದ EAC ಸಮಿತಿಗೆ ನೇಮಕ: ಪ್ರತಿಪಕ್ಷಗಳಿಂದ ಟೀಕೆ

- Advertisement -
- Advertisement -

ಕೇಂದ್ರ ಪರಿಸರ ಸಚಿವಾಲಯದ ಅಧೀನದ ತಜ್ಞರ ಮೌಲ್ಯಮಾಪನ ಸಮಿತಿ(ಇಎಸಿ) ಸದಸ್ಯರಾಗಿ ಜನಾರ್ದನ್ ಚೌಧರಿ ಅವರನ್ನು ನೇಮಕ ಮಾಡಿದ್ದಕ್ಕೆ ವಿರೋಧ ಪಕ್ಷಗಳು ಮಂಗಳವಾರ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಚೌಧರಿ ಅದಾನಿ ಕಂಪೆನಿಯ ಉದ್ಯೋಗಿ ಎಂದು ಆರೋಪಿಸಿದೆ.

ಮಾದ್ಯಮ ವರದಿಗಳ ಪ್ರಕಾರ, ಅದಾನಿ ಗ್ರೀನ್‌ ಎನರ್ಜಿ ಲಿಮಿಟೆಡ್‌ನ ಸಲಹೆಗಾರರಾಗಿರುವ ಚೌಧರಿಯನ್ನು ಅದಾನಿ ಸಮೂಹದ ಜಲವಿದ್ಯುತ್ ಯೋಜನೆ ಪ್ರಸ್ತಾವನೆಗಳಿಗೆ ಒಪ್ಪಿಗೆ ನೀಡಲಿರುವ ಪರಿಸರ ಸಚಿವಾಲಯದ ಮೌಲ್ಯಮಾಪನ ಸಮಿತಿಗೆ ಸೆಪ್ಟಂಬರ್‌ನಲ್ಲಿ ನೇಮಕ ಮಾಡಲಾಗಿದೆ.

ಪರಿಸರ ಸಚಿವಾಲಯದ ಅಡಿಯ ಇಎಸಿ ಸದಸ್ಯರನ್ನಾಗಿ ಅದಾನಿ ಕಂಪೆನಿಯ ಉದ್ಯೋಗಿ ಜನಾರ್ದನ್ ಚೌಧರಿ ಅವರನ್ನು ಅದಾನಿಯ ಪ್ರಧಾನ ಸೇವಕ ನೇಮಿಸಿದ್ದಾರೆ. ಈ ಸಮಿತಿಯು ಅದಾನಿಯ 6 ಯೋಜನೆಗಳನ್ನು (10,300 MW) ಅನುಮೋದಿಸಬೇಕಾಗಿದೆ ಎಂದು ಕೇರಳ ಕಾಂಗ್ರೆಸ್ ತನ್ನ ಅಧಿಕೃತ ಎಕ್ಸ್‌ ಖಾತೆಯಲ್ಲಿ ಹೇಳಿಕೊಂಡಿದೆ.

ಇತ್ತೀಚೆಗೆ ಮಹಾರಾಷ್ಟ್ರದ ಸತಾರದಲ್ಲಿ 1500 ಮೆಗಾವ್ಯಾಟ್ ಸಾಮರ್ಥ್ಯದ ವಿದ್ಯುತ್‌ ಸ್ಥಾವರಕ್ಕೆ ಇವರೇ ಒಪ್ಪಿಗೆ ನೀಡಿದ್ದಾರೆ ಎಂದು ಆರೋಪಿಸಿದೆ. ಇದು ವ್ಯಾಪಾರವನ್ನು ಸುಲಭಗೊಳಿಸುವ ವಿಧಾನ ಎಂದು ಕಾಂಗ್ರೆಸ್ ವ್ಯಂಗ್ಯವಾಡಿದೆ.

ಚೌದರಿ ಅವರು ಅದಾನಿ ಗ್ರೀನ್ ಎನರ್ಜಿ ಲಿಮಿಟೆಡ್‌ನ (AGEL) ಪ್ರಮುಖ ಸಲಹೆಗಾರ, ಈಗ ಅವರು ಕೇಂದ್ರದ ಪರಿಸರ ಸಚಿವಾಲಯದ ಮೌಲ್ಯಮಾಪನ ಸಮಿತಿಯ (ಇಎಸಿ) ಸದಸ್ಯರಾಗಿದ್ದಾರೆ. ಸೆಪ್ಟೆಂಬರ್ 27ರಂದು ಕೇಂದ್ರ ಪರಿಸರ ಸಚಿವಾಲಯವು 7 ಸಾಂಸ್ಥಿಕ ಸದಸ್ಯರ ನೇಮಕದ ವೇಳೆ ಚೌಧರಿ ಅವರನ್ನು ಕೂಡ ನೇಮಿಸಿದ್ದರು.

ಶಿವಸೇನಾ (ಉದ್ಧವ್‌ ಬಣ) ಹಾಗೂ ತೃಣಮೂಲ ಕಾಂಗ್ರೆಸ್‌ ಕೂಡ  ಪರಿಸರ ಸಚಿವಾಲಯದ ಮೌಲ್ಯಮಾಪನ ಸಮಿತಿಗೆ ಚೌದರಿಯನ್ನು ನೇಮಕ ಮಾಡಿರುವುದನ್ನು ವಿರೋಧಿಸಿದೆ. ದೋಸ್ತಿ ಎಂದರೆ ಹೀಗಿರಬೇಕು ಎಂದು ಶಿವಸೇನಾ ರಾಜ್ಯಸಭೆ ಸದಸ್ಯೆ ಪ್ರಿಯಾಂಕ ಚತುರ್ವೇದಿ ಟೀಕಿಸಿದ್ದಾರೆ.

ಇದನ್ನು ಓದಿ: ಉಡುಪಿ: ಒಂದೇ ಕುಟುಂಬದ ನಾಲ್ವರ ಕೊಲೆ ಪ್ರಕರಣ; ಆರೋಪಿ ಅರೆಸ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...