Homeಮುಖಪುಟ'ವಿದ್ಯುತ್ ಕಳ್ಳ': ಕುಮಾರಸ್ವಾಮಿ ನಿವಾಸದ ಬಳಿ ಪೋಸ್ಟರ್‌ ಪತ್ತೆ

‘ವಿದ್ಯುತ್ ಕಳ್ಳ’: ಕುಮಾರಸ್ವಾಮಿ ನಿವಾಸದ ಬಳಿ ಪೋಸ್ಟರ್‌ ಪತ್ತೆ

- Advertisement -
- Advertisement -

ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ವಿದ್ಯುತ್‌ ಕಳ್ಳತನದ ಆರೋಪದ ಬೆನ್ನಲ್ಲೇ ಇದೀಗ ವಿದ್ಯುತ್ ಕಳ್ಳ ಎಚ್.ಡಿ.ಕುಮಾರಸ್ವಾಮಿ ಎಂದು ಬರೆದು ಅಂಟಿಸಿರುವ ಪೋಸ್ಟರ್‌ ವ್ಯಾಪಕವಾಗಿ ವೈರಲ್‌ ಆಗಿದೆ.

ಎಚ್‌ಡಿಕೆ ನಿವಾಸದ ಬಳಿ ‘ಕರೆಂಟ್ ಕದ್ದರು ಎಚ್‌ಡಿಕೆ ಪ್ರಾಮಾಣಿಕತೆಯನ್ನು ಮೆಚ್ಚಲೇಬೇಕು’, ‘ವಿದ್ಯುತ್ ಕಳ್ಳ ಎಚ್.ಡಿ.ಕುಮಾರಸ್ವಾಮಿ’ ಎಂದು ಪೋಸ್ಟರ್‌ ಅಂಟಿಸಲಾಗಿದೆ. ಘಟನೆ ಬೆನ್ನಲ್ಲೇ ಸ್ಥಳಕ್ಕೆ ಧಾವಿಸಿದ ಪೊಲೀಸರು ಪೋಸ್ಟರ್‌ಗಳನ್ನು ತೆರವುಗೊಳಿಸಿದ್ದಾರೆ. ಈ ಪೋಸ್ಟರ್‌ಗಳು ಸಾಮಾಜಿಕ ಮಾದ್ಯಮಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ.

ಈಗಾಗಲೇ ವಿದ್ಯುತ್ ಕಳ್ಳತನ ಆರೋಪಕ್ಕೆ ಸಂಬಂಧಿಸಿ ಮಾಜಿ ಮುಖ್ಯಮಂತ್ರಿ, ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿಯು (ಬೆಸ್ಕಾಂ) ವಿದ್ಯುತ್ ಕಳ್ಳತನ ಪ್ರಕರಣ ದಾಖಲಿಸಿದೆ.

ಬೆಂಗಳೂರಿನ ಜೆ.ಪಿ ನಗರದಲ್ಲಿರುವ ಕುಮಾರಸ್ವಾಮಿಯವರ ನಿವಾಸಕ್ಕೆ ದೀಪಾವಳಿ ಅಲಂಕಾರಕ್ಕೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದಿರುವ ಬಗ್ಗೆ ಆರೋಪ ಕೇಳಿ ಬಂದಿತ್ತು. ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಕಾಂಗ್ರೆಸ್, ಜಗತ್ತಿನ ಏಕೈಕ ಮಹಾಪ್ರಾಮಾಣಿಕ ಹೆಚ್.ಡಿ ಕುಮಾರಸ್ವಾಮಿಯವರ ಜೆ ಪಿ ನಗರದ ನಿವಾಸದ ದೀಪಾವಳಿಯ ದೀಪಾಲಂಕಾರಕ್ಕೆ ನೇರವಾಗಿ ವಿದ್ಯುತ್ ಕಂಬದಿಂದ ಅಕ್ರಮ ವಿದ್ಯುತ್ ಸಂಪರ್ಕ ಪಡೆದಿದ್ದಾರೆ. ಒಬ್ಬ ಮಾಜಿ ಸಿಎಂ ಆಗಿ ವಿದ್ಯುತ್ ಕಳ್ಳತನ ಮಾಡುವ ದಾರಿದ್ರ್ಯ ಬಂದಿದ್ದು ದುರಂತ ಎಂದು ಹೇಳಿದೆ.

ಕುಮಾರಸ್ವಾಮಿ ಅವರೇ ನಮ್ಮ ಸರ್ಕಾರ ಗೃಹಜ್ಯೋತಿಯಲ್ಲಿ 200 ಯೂನಿಟ್ ಉಚಿತ ಕೊಡುತ್ತಿದೆಯೇ ಹೊರತು 2000 ಯೂನಿಟ್ ಅಲ್ಲ. ತಮಗೆ ಅಷ್ಟೊಂದು ದಾರಿದ್ರ್ಯ ಬಂದಿದ್ದರೆ ಗೃಹಜ್ಯೋತಿ ಯೋಜನೆಗೆ ಒಂದು ಅರ್ಜಿ ಹಾಕಬಹುದಿತ್ತಲ್ಲ, ಒಹ್, ತಿಳಿದಿರಲಿಲ್ಲ ಗೃಹಜ್ಯೋತಿಯಲ್ಲಿ ಒಬ್ಬರಿಗೆ ಒಂದೇ ಮೀಟರ್ ಗೆ ಅವಕಾಶವಿದೆ, ತಮ್ಮ ಹೆಸರಲ್ಲಿ ಹಲವು ಮೀಟರ್‌ಗಳಿವೆಯಲ್ಲವೇ? ಎಂದು ಹೇಳಿದೆ.

ರಾಜ್ಯದಲ್ಲಿ ವಿದ್ಯುತ್ ಕೊರತೆಯ ನಡುವೆಯೂ ರೈತರಿಗೆ 7 ಗಂಟೆ ವಿದ್ಯುತ್ ಕೊಡುವ ಕ್ರಮ ಕೈಗೊಂಡಿದ್ದರೂ ಪುಂಖಾನುಪುಂಕವಾಗಿ ಮಾತಾನಾಡುವ ತಾವು ಇಂತಹ ಚೀಪ್ ಕಳ್ಳತನಕ್ಕೆ ಇಳಿಯುವಷ್ಟು ಬರ ಎದುರಿಸುತ್ತಿದ್ದೀರಾ? ಎಂದು ಟೀಕಿಸಿದೆ.

ವಿದ್ಯುತ್ ಕಳ್ಳತನ ಮಾಡಿದ್ದಾರೆ ಎನ್ನುವ ಕಾಂಗ್ರೆಸ್‌ ಆರೋಪಕ್ಕೆ ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದು, ಇದು ಅಚಾತುರ್ಯದಿಂದ ಆದ ಘಟನೆ. ದಂಡ ಕಟ್ಟುತ್ತೇನೆ ಎಂದು ಹೇಳಿದ್ದರು. ದೀಪಾವಳಿ ಹಬ್ಬಕ್ಕೆ ನನ್ನ ಮನೆಗೆ ವಿದ್ಯುತ್ ದೀಪಗಳ ಅಲಂಕಾರ ಮಾಡಲು ಖಾಸಗಿ ಡೆಕೋರೇಟರ್ ಒಬ್ಬರಿಗೆ ಹೇಳಲಾಗಿತ್ತು. ಅವರು ಮನೆಗೆ ವಿದ್ಯುತ್ ದೀಪಗಳ ಅಲಂಕಾರ ಮಾಡಿದ ಮೇಲೆ ಪಕ್ಕದಲ್ಲಿಯೇ ಇದ್ದ ಕಂಬದಿಂದ ವಿದ್ಯುತ್ ಸಂಪರ್ಕ ಪಡೆದು ಪರೀಕ್ಷೆ ಮಾಡಿದ್ದಾರೆ. ಆಗ ನಾನು ಬಿಡದಿಯ ತೋಟದಲ್ಲಿದ್ದೆ. ನಿನ್ನೆ ರಾತ್ರಿ ಮನೆಗೆ ವಾಪಸ್ ಬಂದಾಗ ಈ ವಿಷಯ ನನ್ನ ಗಮನಕ್ಕೆ ಬಂತು. ತಕ್ಷಣ ಅದನ್ನು ತೆಗೆಸಿ ಮನೆಯ ಮೀಟರ್ ಬೋರ್ಡ್‌ನಿಂದಲೇ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಮಾಡಿದ್ದೇನೆ. ಇದು ವಾಸ್ತವ ಸ್ಥಿತಿ. ಇದರಲ್ಲಿ ಮುಚ್ಚುಮರೆ ಏನೂ ಇಲ್ಲ ಎಂದು ಹೇಳಿಕೊಂಡಿದ್ದರು.

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಸ್ವಾತಿ ಮಲಿವಾಲ್ ಮೇಲಿನ ಹಲ್ಲೆ ಪ್ರಕರಣ: ಕೇಜ್ರಿವಾಲ್ ಸಹಾಯಕ ಬಂಧನ

0
ಎಎಪಿ ಸಂಸದೆ ಸ್ವಾತಿ ಮಲಿವಾಲ್ ಅವರ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಸಹಾಯಕ ಮತ್ತು ಮಾಜಿ ಆಪ್ತ ಕಾರ್ಯದರ್ಶಿ ಬಿಭವ್ ಕುಮಾರ್ ಅವರನ್ನು ಶನಿವಾರ ದೆಹಲಿ...