Homeಕರ್ನಾಟಕಕುಮಾರಸ್ವಾಮಿಯ ಕಾಮಾಲೆ ಕಣ್ಣಿಗೆ ಎಲ್ಲವೂ ಲಂಚದ ವ್ಯವಹಾರಗಳಂತೆ ಕಾಣಿಸುತ್ತಿದೆ: ಸಿದ್ದರಾಮಯ್ಯ ತಿರುಗೇಟು

ಕುಮಾರಸ್ವಾಮಿಯ ಕಾಮಾಲೆ ಕಣ್ಣಿಗೆ ಎಲ್ಲವೂ ಲಂಚದ ವ್ಯವಹಾರಗಳಂತೆ ಕಾಣಿಸುತ್ತಿದೆ: ಸಿದ್ದರಾಮಯ್ಯ ತಿರುಗೇಟು

- Advertisement -
- Advertisement -

ಅಧಿಕಾರ ಇದ್ದಾಗ ಲಂಚ-ಕಮಿಷನ್ ವ್ಯವಹಾರದಲ್ಲಿ ಮೂರುಹೊತ್ತು ಮುಳುಗೇಳುತ್ತಿದ್ದ ಮಾಜಿ ಮುಖ್ಯಮಂತ್ರಿ ಹೆಚ್‌ಡಿ ಕುಮಾರಸ್ವಾಮಿ ಅವರ ಕಾಮಾಲೆ ಕಣ್ಣಿಗೆ ನೋಡಿದ್ದು, ಕೇಳಿದ್ದೆಲ್ಲದರಲ್ಲಿಯೂ ಲಂಚದ ವ್ಯವಹಾರಗಳೇ ಕಾಣಿಸುತ್ತಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಹಾಲಿ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಯತೀಂದ್ರ ಸಿದ್ದರಾಮಯ್ಯ ಹಾಗೂ ಸಿಎಂ ಸಿದ್ದರಾಮಯ್ಯ ಅವ್ಯವಹಾರ ನಡೆಸಿದ್ದಾರೆ ಎಂದು ಆರೋಪಿಸಿ  ಕುಮಾರಸ್ವಾಮಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದು, ”ಕರ್ನಾಟಕದ ಕಲೆಕ್ಷನ್ ಕಿಂಗ್ ಅಪ್ಪ, ಕರ್ನಾಟಕದ ಕಲೆಕ್ಷನ್ ಪ್ರಿನ್ಸ್ ಮಗ ಸೇರಿ ಸಿಎಂ ಸಚಿವಾಲಯವನ್ನು ಸುಲಿಗೆ ಅಡ್ಡಾ ಮಾಡಿಕೊಂಡಿದ್ದಾರೆ” ಎಂಡು ಆರೋಪಿಸಿದ್ದಾರೆ.

ಕುಮಾರಸ್ವಾಮಿ ಅವರ ಆರೋಪಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ ಎಕ್ಸ್‌ನಲ್ಲೇ ತಿರುಗೇಟು ನೀಡಿದ್ದಾರೆ. ”ಅಧಿಕಾರ ಇದ್ದಾಗ ಲಂಚ-ಕಮಿಷನ್ ವ್ಯವಹಾರದಲ್ಲಿ ಮೂರುಹೊತ್ತು ಮುಳುಗೇಳುತ್ತಿದ್ದ ಮಾಜಿ ಮುಖ್ಯಮಂತ್ರಿ ಹೆಚ್‌ಡಿ ಕುಮಾರಸ್ವಾಮಿ ಅವರ ಕಾಮಾಲೆ ಕಣ್ಣಿಗೆ ನೋಡಿದ್ದು, ಕೇಳಿದ್ದೆಲ್ಲದರಲ್ಲಿಯೂ ಲಂಚದ ವ್ಯವಹಾರಗಳೇ ಕಾಣಿಸುತ್ತಿದೆ. ವರುಣ ಕ್ಷೇತ್ರದ ಶಾಲೆಗಳ ಅಭಿವೃದ್ದಿಗೆ ಸಂಬಂಧಿಸಿದಂತೆ ಸಾರ್ವಜನಿಕವಾಗಿ ನಡೆದಿರುವ ನನ್ನ ಮತ್ತು ನನ್ನಮಗನ ನಡುವಿನ ಪೋನ್ ಸಂಭಾಷಣೆಗೆ ವರ್ಗವಾವಣೆಯಲ್ಲಿ ವಸೂಲಿಯ ಕತೆ ಕಟ್ಟಿ ಕುಮಾರಸ್ವಾಮಿ ಕುಣಿದಾಡುತ್ತಿದ್ದಾರೆ. ಕುಮಾರಸ್ವಾಮಿಯವರ ಈ ಕ್ಷುಲಕ ನಡವಳಿಕೆ ಬಗ್ಗೆ ನಾನು ಕನಿಕರವನ್ನಷ್ಟೇ ವ್ಯಕ್ತಪಡಿಸಬಲ್ಲೆ” ಎಂದಿದ್ದಾರೆ.

”ವರುಣ ಕ್ಷೇತ್ರದ ಆಶ್ರಯ ಸಮಿತಿಯ ಅಧ್ಯಕ್ಷರು ಮತ್ತು ಕೆಡಿಪಿ ಸದಸ್ಯರಾಗಿರುವ ಮಾಜಿ ಶಾಸಕ ಡಾ.ಯತೀಂದ್ರ ಅವರು ಆ ಕ್ಷೇತ್ರದ ಅಭಿವೃದ್ದಿಗೆ ಶ್ರಮಿಸುತ್ತಿದ್ದಾರೆ. ಸಿಎಸ್ಆರ್ ಹಣವನ್ನು ಬಳಸಿಕೊಂಡು ಕ್ಷೇತ್ರದಲ್ಲಿರುವ ಸರ್ಕಾರಿ ಶಾಲೆಗಳ ಸುಧಾರಣೆಗೆ ತೊಡಗಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಅವರು ಫಲಾನುಭವಿ ಶಾಲೆಗಳ ಪಟ್ಟಿ ಬಗ್ಗೆ ನನ್ನ ಜೊತೆ ಮಾತನಾಡಿದ್ದರು. ಕ್ಷೇತ್ರದ ಜನರ ಎದುರಿನಲ್ಲಿಯೇ ನಡೆದಿರುವ ಈ ಸಂಭಾಷಣೆಯನ್ನು ವರ್ಗಾವಣೆಗಾಗಿ ವಸೂಲಿ ಎಂಬ ಅರ್ಥ ಬರುವ ಹಾಗೆ ತಿರುಚಿರುವ ಹೆಚ್‌ಡಿ ಕುಮಾರಸ್ವಾಮಿ ಅವರು ತಮ್ಮ ವಿಕೃತ ಮನಸ್ಥಿತಿಯನ್ನು ಪ್ರದರ್ಶಿಸಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

”ಕುಮಾರಸ್ವಾಮಿಯವರು ರಾಜಕೀಯಕ್ಕೆ ಪ್ರವೇಶ ಮಾಡಿದ ದಿನದಿಂದ ನಿರಂತರವಾಗಿ ಕಪೋಲ ಕಲ್ಪಿತ ಆರೋಪಗಳ ಮೂಲಕ ನನ್ನ ವಿರುದ್ಧ ಸೇಡು ತೀರಿಸಿಕೊಳ್ಳುವಂತೆ ಬಾಯಿಗೆ ಬಂದಂತೆ ಮಾತನಾಡುತ್ತಾ ಬರುತ್ತಿದ್ದುದನ್ನು ರಾಜ್ಯದ ಜನ ಕಂಡಿದ್ದಾರೆ. ಈಗ ತಂದೆಯಾದ ನನಗೆ ನೋವು ಕೊಡಬೇಕೆಂಬ ಏಕೈಕ ದುರುದ್ದೇಶದಿಂದ ಡಾ.ಯತೀಂದ್ರ ಅವರನ್ನು ಗುರಿಯಾಗಿಸಿಕೊಂಡು ಪ್ರತಿನಿತ್ಯ ಸುಳ್ಳು ಆರೋಪಗಳನ್ನು ಹರಿಬಿಡುತ್ತಿರುವುದು ಹೆಚ್‌ಡಿ ಕುಮಾರಸ್ವಾಮಿ ಅವರ ವಿಕೃತ ಮನಸ್ಥಿತಿಗೆ ಹಿಡಿದ ಕನ್ನಡಿಯಾಗಿದೆ” ಎಂದು ಕಿಡಿಕಾರಿದ್ದಾರೆ.

”ಶಾಸಕ ಸ್ಥಾನವನ್ನೇ ತ್ಯಾಗ ಮಾಡಿದರೂ ಜನಸೇವೆಯಿಂದ ಹಿಂದೆ ಸರಿಯದ ಡಾ.ಯತೀಂದ್ರ ಅವರು ವರುಣ ಕ್ಷೇತ್ರದ ಅಭಿವೃದ್ದಿಯಲ್ಲಿ ಪೂರ್ಣವಾಗಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಅವರನ್ನು ನೈತಿಕವಾಗಿ ಕುಗ್ಗಿಸುವ ದುರುದ್ದೇಶದಿಂದ ಹೆಚ್‌ಡಿ ಕುಮಾರಸ್ವಾಮಿ ಅವರು ಪ್ರತಿನಿತ್ಯ ಅವರ ವಿರುದ್ಧ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ. ತಮ್ಮ ಪತ್ನಿ ಮತ್ತು ಮಗ ಕೂಡಾ ರಾಜಕೀಯ ಕ್ಷೇತ್ರದಲ್ಲಿದ್ದಾರೆ ಎನ್ನುವುದನ್ನು ಹೆಚ್.ಡಿ.ಕುಮಾರಸ್ವಾಮಿ ಮರೆತಂತಿದೆ. ನಾನು ಕುಮಾರಸ್ವಾಮಿಯವರ ಮಟ್ಟಕ್ಕೆ ಇಳಿದು ಅವರ ರೀತಿ ಅವರ ಪತ್ನಿ ಮತ್ತು ಮಗನ ಬಗ್ಗೆ ಮಾತನಾಡಲಾರೆ. ಕನಿಷ್ಠ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಾದರೂ ಮಗನಿಗೆ ಬುದ್ದಿ ಹೇಳಿ ರಾಜ್ಯದ ಜನರಿಂದ ಮಗ ಛೀಮಾರಿಗೆ ಈಡಾಗುತ್ತಿರುವುದನ್ನು ತಪ್ಪಿಸಬೇಕೆಂದು ಕೋರುತ್ತೇನೆ” ಎಂದು ಎಕ್ಸ್‌ನಲ್ಲಿ ಸರಣಿ ಪೋಸ್ಟ್ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...