Homeಮುಖಪುಟಇಂದು ಮಧ್ಯಪ್ರದೇಶ, ಛತ್ತೀಸಗಢ ವಿಧಾನಸಭಾ ಚುನಾವಣೆಯ ಮತದಾನ

ಇಂದು ಮಧ್ಯಪ್ರದೇಶ, ಛತ್ತೀಸಗಢ ವಿಧಾನಸಭಾ ಚುನಾವಣೆಯ ಮತದಾನ

- Advertisement -
- Advertisement -

ಐದು ರಾಜ್ಯಗಳ ಪೈಕಿ ಅತ್ಯಂತ ‘ಹೈವೊಲ್ವೇಜ್’ ಚುನಾವಣೆ ಎಂದೇ ಪರಿಗಣಿಸಲಾಗಿರುವ ಮಧ್ಯಪ್ರದೇಶ ಹಾಗೂ ಛತ್ತೀಸಗಢ ರಾಜ್ಯ ವಿಧಾನಸಭಾ ಚುನಾವಣೆಯ ಮತದಾನ ಶುಕ್ರವಾರ ಮುಂಜಾನೆ ಆರಂಭವಾಗಿದೆ. ಇಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಬಹುತೇಕ ನೇರ ಸ್ಪರ್ಧೆ ಇದೆ..

ಮಧ್ಯಪ್ರದೇಶದ 230 ವಿಧಾನಸಭಾ ಸ್ಥಾನಗಳಿಗೆ ಹಾಗೂ ಛತ್ತೀಸಗಢ ವಿಧಾನಸಭಾ ಚುನಾವಣೆಯ ಎರಡನೇ ಹಂತದಲ್ಲಿ 90 ಸ್ಥಾನಗಳ ಪೈಕಿ 70 ಕ್ಷೇತ್ರಗಳಲ್ಲಿ ಮತದಾನ ಬೆಳಿಗ್ಗೆ 7ಕ್ಕೆ ಆರಂಭವಾಗಿದೆ.

ಮಧ್ಯಪ್ರದೇಶದಲ್ಲಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್, ನಿಕಟಪೂರ್ವ ಮುಖ್ಯಮಂತ್ರಿ ಹಾಗೂ ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ಕಮಲನಾಥ್ ಸೇರಿದಂತೆ 2533 ಅಭ್ಯರ್ಥಿಗಳ ಭವಿಷ್ಯ ಇಂದು ನಿರ್ಧಾರವಾಗಲಿದೆ.

ಮಧ್ಯಪ್ರದೇಶದಲ್ಲಿ ಅಳುವ ಬಿಜೆಪಿ ಮತ್ತು ವಿರೋಧಪಕ್ಷ ಕಾಂಗ್ರೆಸ್ ನಡುವೆ ತೀವ್ರ ತುರುಸಿನ ಸ್ಪರ್ಧೆ ನಡೆದಿದೆ. ರಾಜ್ಯದಲ್ಲಿ ಅಧಿಕಾರದಲ್ಲಿರುವ ಬಿಜೆಪಿಯು ಮೋದಿ ನಾಮಬಲ ಹಿಂದುತ್ವ ಹಾಗೂ ಕಲ್ಯಾಣ ಕಾರ್ಯಕ್ರಮಗಳನ್ನು ಪಣಕ್ಕಿಟ್ಟರೆ, ‘ಆಪರೇಷನ್ ಕಮಲ’ದಿಂದ ಮೂರುವರೆ ವರ್ಷಗಳ ಹಿಂದೆ ಅಧಿಕಾರ ಕಳೆದುಕೊಂಡ ಕಾಂಗ್ರೆಸ್ ಪಕ್ಷ ಆಡಳಿತ ವಿರೋಧಿ ಅಲೆಯನ್ನೇ ನಂಬಿಕೊಂಡಿದೆ. ಬಿಜೆಪಿ ಪುನಃ ಅಧಿಕಾರ ಹಿಡಿಯುತ್ತದೆಂದು ನಿಶ್ಚಿತವಾಗಿ ಹೇಳುವ ಸ್ಥಿತಿ ಇಲ್ಲ. 18 ವರ್ಷಗಳ ಆಡಳಿತದ ಬಳಿಕ ಶಿವರಾಜ್ ಸಿಂಗ್ ಚೌಹಾಣ್ ಅವರ ಸಾಂಪ್ರದಾಯಿಕ ಬೆಂಬಲಿಗರು ನಿಧಾನಕ್ಕೆ ಕೈಕೊಡಲಾರಂಭಿಸಿದ್ದಾರೆ. ರಾಜ್ಯದಲ್ಲಿ ಬಿಜೆಪಿ ವಿರೋಧಿ ಅಲೆಗಿಂತ ಚೌಹಾಣ್ ವಿರೋಧಿ ಅಲೆಯೇ ಬಲವಾಗಿದೆ.

ಬಿಜೆಪಿ ಸರ್ಕಾರಕ್ಕೆ ಆಡಳಿತ ವಿರೋಧಿ ಅಲೆಯ ಬಿಸಿ ಜೋರಾಗಿ ತಟ್ಟಿದೆ. ಇದನ್ನು ಕಡಿಮೆ ಮಾಡಲು ಕಮಲ ಪಡೆಯು ಮಹಿಳೆಯರ ಮನ ಗೆಲ್ಲಲು ಹಲವು ಕಲ್ಯಾಣ ಯೋಜನೆಗಳನ್ನು ಅನುಷ್ಠಾನಗೊಳಿಸಿದೆ. ಲಾಡ್ಲಿ ಬೆಹನಾ ಯೋಜನೆಯಡಿ ಮಹಿಳೆಯರಿಗೆ ಮಾಸಿಕ 31,250 ಹಣ ವರ್ಗಾಯಿಸುತ್ತಿದೆ. ಮಹಿಳೆಯರ ಖಾತೆಗೆ ಒಂದಷ್ಟು ದುಡ್ಡು ಬಂದಿದೆ. ಹಿಂದೂ ಧಾರ್ಮಿಕ ಕೇಂದ್ರಗಳ ಅಭಿವೃದ್ಧಿಗೆ ಹೇರಳ ಅನುದಾನ ನೀಡಿದೆ. ಕಾಂಗ್ರೆಸ್ ಪಕ್ಷವು ಕರ್ನಾಟಕದ ಮಾದರಿಯಲ್ಲೇ `ಗ್ಯಾರಂಟಿ’ಗಳನ್ನು ಘೋಷಿಸಿದೆ. ಒಬಿಸಿ ಮತದಾರರೇ ನಿರ್ಣಾಯಕವಾಗಿರುವ ರಾಜ್ಯದಲ್ಲಿ ಜಾತಿ ಗಣತಿಯ ಅಸ್ತ್ರ ಬಿಟ್ಟಿದೆ. ಮೀಸಲಾತಿ ರಾಜಕಾರಣ ಚುನಾವಣೆಗಳ ಆಸುಪಾಸಿನಲ್ಲಿ ತಲೆಯೆತ್ತಿದೆ.

ಮತದಾನ ಮುಕ್ತ ಹಾಗೂ ಶಾಂತಿಯುತವಾಗಿ ನಡೆಯಲು ಅನುವಾಗುವಂತೆ ಕೇಂದ್ರೀಯ ಪಡೆಗಳ 700ಕ್ಕೂ ಹೆಚ್ಚು ತುಕಡಿಗಳನ್ನು ಮತ್ತು 2 ಲಕ್ಷಕ್ಕೂ ಅಧಿಕ ಪೊಲೀಸ್ ಸಿಬ್ಬಂದಿಯನ್ನು ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲಾಗಿದೆ. ಸುಮಾರು 42 ಸಾವಿರ ಮತಗಟ್ಟೆಗಳಲ್ಲಿ ವೆಬಾಸ್ಟಿಂಗ್ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ರಾಜ್ಯಾದ್ಯಂತ ಮತದಾನ ಮುಂಜಾನೆ 7ರಿಂದ ಸಂಜೆ 6ರವರೆಗೆ ನಡೆಯಲಿದೆ.

ಇದನ್ನೂ ಓದಿ: ದೇವೇಗೌಡರನ್ನೇ ಹೊರಗಿಟ್ಟು ರಾಷ್ಟ್ರೀಯ ಸಮಾವೇಶ ನಡೆಸಿದ ಜೆಡಿಎಸ್ ನಾಯಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....