Homeಮುಖಪುಟಬಿಜೆಪಿಯಿಂದ ಇಡೀ ದೇಶಕ್ಕೆ ಕೇಸರಿ ಬಣ್ಣ ಬಳಿಯುವ ಪ್ರಯತ್ನ: ಮಮತಾ ಬ್ಯಾನರ್ಜಿ

ಬಿಜೆಪಿಯಿಂದ ಇಡೀ ದೇಶಕ್ಕೆ ಕೇಸರಿ ಬಣ್ಣ ಬಳಿಯುವ ಪ್ರಯತ್ನ: ಮಮತಾ ಬ್ಯಾನರ್ಜಿ

- Advertisement -
- Advertisement -

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಭಾರತೀಯ ಕ್ರಿಕೆಟ್ ತಂಡ ಸೇರಿದಂತೆ ದೇಶಾದ್ಯಂತ ವಿವಿಧ ಸಂಸ್ಥೆಗಳನ್ನು ಕೇಸರಿಮಯಗೊಳಿಸಲು ಪ್ರಯತ್ನಿಸುತ್ತಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶುಕ್ರವಾರ ಆರೋಪಿಸಿದ್ದಾರೆ. ಭಾರತೀಯ ಕ್ರಿಕೆಟ್ ತಂಡದ ಆಟಗಾರರು ಅಭ್ಯಾಸದ ವೇಳೆ ತೊಡುವ ಜೆರ್ಸಿಗಳು ಈಗ ಕೇಸರಿ ಬಣ್ಣದ್ದಾಗಿವೆ.

ಸೆಂಟ್ರಲ್ ಕೋಲ್ಕತ್ತಾದ ಪೊಸ್ತಾ ಬಝಾರ್‌ನಲ್ಲಿ ನಡೆದ ಜಗಧಾತ್ರಿ ಪೂಜೆಯನ್ನು ಉದ್ಘಾಟಿಸಿ ಮಾತನಾಡಿದ ಬ್ಯಾನರ್ಜಿ, ಟೀಂ ಇಂಡಿಯಾದ ಅಭ್ಯಾಸ ಜೆರ್ಸಿಗಳಲ್ಲಿ ಮಾತ್ರವಲ್ಲದೆ, ಮೆಟ್ರೋ ಸ್ಟೇಷನ್‌ಗಳಿಗೂ ಕೇಂದ್ರ ಸರ್ಕಾರ ಕೇಸರಿ ಬಣ್ಣ ಹೊಡೆಸುತ್ತಿದೆ ಎಂದು ಆರೋಪಿಸಿದರು.

ಅವರು ಇಡೀ ದೇಶಕ್ಕೆ ಕೇಸರಿ ಬಣ್ಣ ಬಳಿಯಲು ಪ್ರಯತ್ನಿಸುತ್ತಿದ್ದಾರೆ. ನಮ್ಮ ಭಾರತೀಯ ಆಟಗಾರರ ಮೇಲೆ ನಾವು ಅಭಿಮಾನ ಹೊಂದಿದ್ದೇವೆ, ಅವರು ವಿಶ್ವಕಪ್ ಗೆಲ್ಲುತ್ತಾರೆಂದು ನಂಬುತ್ತೇನೆ, ಆದರೆ, ನಮ್ಮ ಆಟಗಾರರು ಈಗ ಕೇಸರಿ ಬಣ್ಣದ ಜೆರ್ಸಿ ಹಾಕಿ ಆಡಬೇಕಿದೆ, ಮೆಟ್ರೋ ಸ್ಟೇಷನ್‌ಗಳಿಗೂ ಕೇಸರಿ ಬಳಿಯಲಾಗಿದೆ, ಇದನ್ನು ಒಪ್ಪಲಾಗದು ಎಂದು ಬ್ಯಾನರ್ಜಿ ಹೇಳಿದ್ದಾರೆ.

“ಅವರು ಇಡೀ ದೇಶಕ್ಕೆ ಕೇಸರಿ ಬಣ್ಣ ಬಳಿಯಲು ಪ್ರಯತ್ನಿಸುತ್ತಿದ್ದಾರೆ. ನಮ್ಮ ಭಾರತೀಯ ಆಟಗಾರರ ಬಗ್ಗೆ ನಮಗೆ ಹೆಮ್ಮೆ ಇದೆ ಮತ್ತು ಅವರು ವಿಶ್ವಕಪ್‌ನಲ್ಲಿ ಚಾಂಪಿಯನ್ ಆಗುತ್ತಾರೆ ಎಂದು ನಾನು ನಂಬುತ್ತೇನೆ. ಆದರೆ ಅವರು (ಬಿಜೆಪಿ) ಅಲ್ಲಿಯೂ ಕೇಸರಿ ಬಣ್ಣಗಳನ್ನು ತಂದರು. ನಮ್ಮ ಹುಡುಗರು ಈಗ ಕೇಸರಿ ಬಣ್ಣದ ಜರ್ಸಿಯಲ್ಲಿ ಅಭ್ಯಾಸ ಮಾಡುತ್ತಿದ್ದಾರೆ. ಮೆಟ್ರೋ ನಿಲ್ದಾಣಗಳಿಗೆ ಕೇಸರಿ ಬಣ್ಣ ಬಳಿಯಲಾಗಿದೆ. ಇದು ಸ್ವೀಕಾರಾರ್ಹವಲ್ಲ” ಎಂದು ಕಿಡಿಕಾರಿದರು.

ದೇಶವು ಇಲ್ಲಿನ ಜನರಿಗೆ ಸೇರಿದ್ದೇ ವಿನಃ, ಬಿಜೆಪಿಯ ಜನರಿಗೆ ಸೇರಿದ್ದಲ್ಲ. ಅಧಿಕಾರ ಬರುತ್ತದೆ ಹೋಗುತ್ತದೆ, ಆದರೆ, ಇಂತಹದ್ದೆಲ್ಲಾ ಯಾವ ಕಾರಣಕ್ಕೂ ಫಲ ನೀಡುವುದಿಲ್ಲ ಎಂದಿದ್ದಾರೆ.

”ಬಿಜೆಪಿಯವರು ಪ್ರತಿಮೆಗಳನ್ನು ಸ್ಥಾಪಿಸುವುದರಲ್ಲಿ ನನಗೆ ಯಾವುದೇ ಸಮಸ್ಯೆಗಳಿಲ್ಲ, ಆದರೆ ಅವರು ಎಲ್ಲವನ್ನೂ ಕೇಸರಿ ಮಾಡಲು ಪ್ರಯತ್ನಿಸುತ್ತಿದ್ದಾರೆ. ಮಾಯಾವತಿ ಅವರ ಪ್ರತಿಮೆಯನ್ನು ನಾನು ಒಮ್ಮೆ ನೋಡಿದ್ದೇನೆ, ಅದರ ನಂತರ, ನಾನು ಏನನ್ನೂ ಕೇಳಲಿಲ್ಲ. ಈ ನಾಟಕಗಳು ಯಾವುದಕ್ಕೂ ಪ್ರಯೋಜಕ್ಕೆ ಬರುವುದಿಲ್ಲ” ಎಂದರು.

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಮೊದಲ ಪುಟದ ಜಾಹೀರಾತುಗಳಿಗೆ ಕೋಟಿಗಟ್ಟಲೆ ಖರ್ಚು ಮಾಡುತ್ತಿದೆ ಆದರೆ “ರಾಜ್ಯಕ್ಕೆ ಬರಬೇಕಿದ್ದ ಬಾಕಿ ಹಣವನ್ನು ನಿಲ್ಲಿಸಿದೆ, ಹೀಗಾಗಿ ರಾಜ್ಯದಲ್ಲಿ ಸಾವಿರಾರು (MGNREGA) ಕಾರ್ಮಿಕರು ಉದ್ಯೋಗದಿಂದ ವಂಚಿತರಾಗಿದ್ದಾರೆ” ಎಂದು ಮಮತಾ ಬ್ಯಾನರ್ಜಿ ಹೇಳಿದರು.

ಇದನ್ನೂ ಓದಿ: ರಾಜೀನಾಮೆ ನೀಡಬೇಕೇ ಅಥವಾ ಜೈಲಿನಿಂದಲೇ ಸರ್ಕಾರ ನಡೆಸಬೇಕೇ?: ಜನರು ತೀರ್ಮಾನಿಸಲಿ ಎಂದ ಕೇಜ್ರಿವಾಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಜಿಡಿಪಿ ಬಿಟ್ಟು ನಿಮ್ಮ ಮುಖದ ಸೌಂದರ್ಯದ ರಹಸ್ಯ ತಿಳಿಸಿ..’; ಪ್ರಧಾನಿ ಮೋದಿ ಕಾಲೆಳೆದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ

ಇತ್ತೀಚೆಗೆ ಬಿಡುಗಡೆಯಾದ ಭಾರತದ ತ್ರೈಮಾಸಿಕ ಜಿಡಿಪಿ ಅಂಕಿಅಂಶಗಳ ಕುರಿತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವ್ಯಂಗ್ಯವಾಡಿದ್ದಾರೆ. 2026-27ರ ಹಣಕಾಸು ವರ್ಷದ ಮೊದಲ...

ರಾಜಕೀಯ ಪಕ್ಷಗಳ ಬಿಎಲ್‌ಎಗಳು ಎಸ್‌ಐಆರ್‌ನ ಎಲ್ಲ ಮಾಹಿತಿಗಳನ್ನೂ ಪರಿಶೀಲಿಸಲು ಜವಾಬ್ದಾರರಲ್ಲ : ದೆಹಲಿ ಹೈಕೋರ್ಟ್

ರಾಜಕೀಯ ಪಕ್ಷಗಳ ಬೂತ್ ಮಟ್ಟದ ಏಜೆಂಟ್‌ಗಳು (ಬಿಎಲ್‌ಎ) ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಸಂದರ್ಭದಲ್ಲಿ ಎಣಿಕೆ ನಮೂನೆಗಳಲ್ಲಿರುವ (ಎನ್ಯುಮರೇಷನ್ ಫಾರಂ) ಎಲ್ಲ ವಿವರಗಳನ್ನು ಪರಿಶೀಲಿಸಲು ಜವಾಬ್ದಾರರಲ್ಲ ಎಂದು ದೆಹಲಿ ಹೈಕೋರ್ಟ್...

‘ಕೈಯಿಂದ ಮಲ ಹೊರುವ ಪದ್ಧತಿ ಇಲ್ಲ’ ಎಂದ ಸರ್ಕಾರ: ‘ಹಾಗಾದರೆ ನಾವು ಇನ್ನೂ ಏಕೆ ಈ ಕೆಲಸ ಮಾಡುತ್ತಿದ್ದೇವೆ?’ ಎಂದು ಪ್ರಶ್ನಿಸಿದ ಮಹಿಳಾ ಕಾರ್ಮಿಕರು

ನವದೆಹಲಿ: ದೇಶದಲ್ಲಿ ಕೈಯಿಂದ ಮಲ ಹೊರುವ ಪದ್ಧತಿ ಸಂಪೂರ್ಣವಾಗಿ ನಿರ್ಮೂಲನೆಯಾಗಿದೆ ಎಂದು ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಹೇಳಿರುವ ಬೆನ್ನಲ್ಲೇ, ಉತ್ತರ ಪ್ರದೇಶ, ಮಧ್ಯಪ್ರದೇಶ, ಬಿಹಾರ ಮತ್ತು ಜಮ್ಮು ಮತ್ತು ಕಾಶ್ಮೀರದ ಮಹಿಳಾ ನೈರ್ಮಲ್ಯ...

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸುವ ಅಧಿಕಾರ ಬಾರ್ ಕೌನ್ಸಿಲ್‌ಗಳಿಗೆ ಇಲ್ಲ; ನಲ್ಸಾರ್ ವಿವಿ ವಿರುದ್ಧದ ಬಿಸಿಐ ಅಧ್ಯಕ್ಷರ ಆದೇಶ ಕಾನೂನುಬಾಹಿರ : ಸುಪ್ರೀಂ ಕೋರ್ಟ್

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಬಾರ್ ಕೌನ್ಸಿಲ್ ಆಫ್ ಇಂಡಿಯಾ (ಬಿಸಿಐ) ಮತ್ತು ರಾಜ್ಯ ಬಾರ್ ಕೌನ್ಸಿಲ್‌ಗಳಿಗೆ ಯಾವುದೇ ಶಾಸನಬದ್ಧ ಅಧಿಕಾರವಿಲ್ಲ ಎಂದು ಸುಪ್ರೀಂ ಕೋರ್ಟ್ ಗುರುವಾರ (ಸೆ.3) ಮಹತ್ವದ...

ದೇಶದ ಆರ್ಥಿಕ ಸ್ಥಿರತೆಯ ಬಗ್ಗೆ ಕೇಂದ್ರ ಸರ್ಕಾರದಿಂದ ಸುಳ್ಳು ನಿರೂಪಣೆ ಸೃಷ್ಟಿ: ಶರದ್ ಪವಾರ್

ದೇಶದಲ್ಲಿ ಹೆಚ್ಚುತ್ತಿರುವ ಹಣದುಬ್ಬರ ಮತ್ತು ಸಂಕಷ್ಟದಲ್ಲಿರುವ ನೈಜ ಆರ್ಥಿಕತೆಯನ್ನು ಮರೆಮಾಚಲು ಕೇಂದ್ರ ಸರ್ಕಾರವು 'ಸಂಖ್ಯಾಶಾಸ್ತ್ರೀಯ ವಿಧಾನಗಳನ್ನು ತಿರುಚುತ್ತಿದೆ' ಎಂದು ನ್ಯಾಷನಲ್ ಕಾಂಗ್ರೆಸ್ ಪಾರ್ಟಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಆರೋಪಿಸಿದ್ದಾರೆ. "ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ಶೇಕಡಾ...

ಮಹದೇವಪುರ, ಗಾಂಧಿನಗರ ವೋಟರ್ ಲಿಸ್ಟ್ ಹಗರಣ: ಇಸಿಐ ತನಿಖೆಗೆ ರಾಜ್ಯ ಚುನಾವಣಾ ಆಯೋಗ ಶಿಫಾರಸು

ಮಹದೇವಪುರ ಮತ್ತು ಗಾಂಧಿನಗರ ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿದೆ ಎಂದು ಕಾಂಗ್ರೆಸ್ ಸಂಸದ ಮನ್ಸೂರ್ ಅಲಿ ಖಾನ್ ನೀಡಿದ್ದ ದೂರನ್ನು ಕರ್ನಾಟಕ ರಾಜ್ಯ ಚುನಾವಣಾ ಆಯೋಗವು ಕೇಂದ್ರ ಚುನಾವಣಾ ಆಯೋಗಕ್ಕೆ...

ಬಹುತೇಕ ಧರ್ಮಗಳು ಲಿಂಗ ಸಮಾನತೆಯನ್ನು ಗುರುತಿಸಲು ಹಿಂಜರಿಯುತ್ತವೆ: ಎಂ. ಎ. ಬೇಬಿ

ಸಾರ್ವಜನಿಕ ಸ್ಥಳಗಳಲ್ಲಿ ಮಹಿಳೆಯರ ಉಪಸ್ಥಿತಿಯ ಮೇಲೆ ನಿರ್ಬಂಧಗಳನ್ನು ಹೇರಬೇಕೆಂದು ಪ್ರತಿಪಾದಿಸಿದ್ದ ಇಸ್ಲಾಮಿಕ್ ಪಂಡಿತ ಕಾಂತಪುರಂ ಎ.ಪಿ. ಅಬೂಬಕರ್ ಮುಸ್ಲಿಯಾರ್ ಅವರ ಹೇಳಿಕೆಯನ್ನು ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಎಂ. ಎ. ಬೇಬಿ ಅವರು ತೀವ್ರವಾಗಿ...

ಭಾಗವತ್ ಕಾರ್ಯಕ್ರಮಕ್ಕೆ ಅಮೆರಿಕದ ಧಾರ್ಮಿಕ ನಾಯಕರ ತೀವ್ರ ಆಕ್ಷೇಪ: ‘ನಮ್ಮನ್ನು ತಪ್ಪುದಾರಿಗೆಳೆದು ಆರ್‌ಎಸ್‌ಎಸ್ ಕಾರ್ಯಕ್ರಮಕ್ಕೆ ಕರೆಸಲಾಗಿತ್ತು’ ಎಂದು ಆರೋಪ

ನ್ಯೂಯಾರ್ಕ್: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರೊಂದಿಗೆ ನ್ಯೂಯಾರ್ಕ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಕಾಣಿಸಿಕೊಂಡಿದ್ದ ಇಬ್ಬರು ಅಮೆರಿಕದ ಧಾರ್ಮಿಕ ಮುಖಂಡರು, ಕಾರ್ಯಕ್ರಮದ ನೈಜ ಉದ್ದೇಶ ಮತ್ತು ಭಾಗವತ್ ಅವರ ಭಾಗವಹಿಸುವಿಕೆ...

ನೈತಿಕ ಹೊಣೆ ಹೊತ್ತು ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡಲಿ: ಎಚ್.ಡಿ. ಕುಮಾರಸ್ವಾಮಿ

ಕೆಪಿಎಸ್‌ಸಿ (KPSC) ಸಹಾಯಕ ಕಾರ್ಯಪಾಲಕ ಅಭಿಯಂತರ (AEE) ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ರಾಜೀನಾಮೆಗೆ ತೀವ್ರ ಒತ್ತಡ ಹೇರಿರುವ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ಈ...

KPSC: ರಾಜ್ಯದ ಪ್ರಭಾವಿಗಳ ಸಲಹೆಯಂತೆ ಪರಾರಿಯಾಗಿದ್ದ ಜ್ಞಾನೇಂದ್ರ ಕುಮಾರ್ !

ಕೆಪಿಎಸ್‌ಸಿ (KPSC) ಪಶುವೈದ್ಯರ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಬಂಧಿತರಾಗಿರುವ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಪರಾರಿಯಾದ ರೋಚಕ ಹಾದಿ ಸಿಐಡಿ (CID) ವಿಚಾರಣೆಯಿಂದ ಬಯಲಾಗಿದೆ. ರಾಜ್ಯದ ಪ್ರಭಾವಿ ವ್ಯಕ್ತಿಗಳು ಹಾಗೂ ರಾಜಕಾರಣಿಗಳ ಸತತ...