Homeಮುಖಪುಟಕೇರಳ: ಜನಪ್ರಿಯ ನಟ ವಿನೋದ್ ಥಾಮಸ್ ಶವವಾಗಿ ಪತ್ತೆ

ಕೇರಳ: ಜನಪ್ರಿಯ ನಟ ವಿನೋದ್ ಥಾಮಸ್ ಶವವಾಗಿ ಪತ್ತೆ

- Advertisement -
- Advertisement -

ಜನಪ್ರಿಯ ನಟ ವಿನೋದ್ ಥಾಮಸ್ ಕೇರಳದ ಪಂಪಾಡಿ ಸಮೀಪದ ಹೋಟೆಲ್‌ವೊಂದರ ಪಾರ್ಕಿಂಗ್‌ನಲ್ಲಿ ನಿಲ್ಲಿಸಿದ್ದ ಕಾರಿನೊಳಗೆ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಹೋಟೆಲ್ ಆವರಣದಲ್ಲಿ ಕಾರೊಂದು ನಿಲ್ಲಿಸಿದ್ದು, ವ್ಯಕ್ತಿಯೊಬ್ಬರು ಕಾರಿನೊಳಗೆ ಇರುವುದನ್ನು ಕಂಡ ಹೊಟೇಲ್‌ ಸಿಬ್ಬಂದಿಗಳು ಪೊಲೀಸರಿಗೆ ಮಾಹಿತಿಯನ್ನು ನೀಡಿದ್ದಾರೆ.

ನಾವು ಥಾಮಸ್ ಅವರು ಕಾರಿನೊಳಗೆ ನಿಶ್ಚಲವಾಗಿರುವುದನ್ನು ಕಂಡುಕೊಂಡೆವು ಮತ್ತು ಅವರನ್ನು ಹತ್ತಿರದ ಆಸ್ಪತ್ರೆಗೆ ಕರೆದುಕೊಂಡು ಹೋದೆವು. ವೈದ್ಯರು ಆವರನ್ನು ಪರೀಕ್ಷಿಸಿ ಮೃತಪಟ್ಟಿದ್ದಾರೆ ಎಂದು ಹೇಳಿದ್ದಾರೆ.  ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ಮಾಹಿತಿಯನ್ನು ನೀಡಿದ್ದಾರೆ.

ವಿನೋದ್ ಥಾಮಸ್ ಸಾವಿನ ಹಿಂದಿನ ಕಾರಣವನ್ನು ಬಹಿರಂಗಪಡಿಸಲಾಗಿಲ್ಲ. ವರದಿಗಳ ಪ್ರಕಾರ, ಕಾರಿನ ಎಸಿಯಿಂದ ವಿಷಕಾರಿ ಅನಿಲವನ್ನು ಉಸಿರಾಡಿದ್ದರಿಂದ ಸಾವಿಗೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ. ಆದರೆ, ಮರಣೋತ್ತರ ಪರೀಕ್ಷೆಯ ಬಳಿಕವೇ ಈ ಬಗ್ಗೆ ಸ್ಪಷ್ಟ ಮಾಹಿತಿ ದೊರೆಯಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಥಾಮಸ್ ಅವರು ಅಯ್ಯಪ್ಪನುಮ್ ಕೊಶ್ಯುಮ್,  ನತ್ತೋಲಿ ಒರು ಚೆರಿಯ ಮೀನಲ್ಲ, ಒರು ಮುರೈ ವಂದ್ ಪಾತಾಯ, ಹ್ಯಾಪಿ ವೆಡ್ಡಿಂಗ್ ಮತ್ತು ಜೂನ್ ಮುಂತಾದ ಚಲನಚಿತ್ರಗಳಲ್ಲಿ ನಟಿಸಿದ್ದಾರೆ.

ಇದನ್ನು ಓದಿ: ಉತ್ತರಪ್ರದೇಶ: ಹಲಾಲ್ ಉತ್ಪನ್ನಗಳ ಮಾರಾಟ ನಿಷೇಧ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸುವ ಅಧಿಕಾರ ಬಾರ್ ಕೌನ್ಸಿಲ್‌ಗಳಿಗೆ ಇಲ್ಲ; ನಲ್ಸಾರ್ ವಿವಿ ವಿರುದ್ಧದ ಬಿಸಿಐ ಅಧ್ಯಕ್ಷರ ಆದೇಶ ಕಾನೂನುಬಾಹಿರ : ಸುಪ್ರೀಂ ಕೋರ್ಟ್

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಬಾರ್ ಕೌನ್ಸಿಲ್ ಆಫ್ ಇಂಡಿಯಾ (ಬಿಸಿಐ) ಮತ್ತು ರಾಜ್ಯ ಬಾರ್ ಕೌನ್ಸಿಲ್‌ಗಳಿಗೆ ಯಾವುದೇ ಶಾಸನಬದ್ಧ ಅಧಿಕಾರವಿಲ್ಲ ಎಂದು ಸುಪ್ರೀಂ ಕೋರ್ಟ್ ಗುರುವಾರ (ಸೆ.3) ಮಹತ್ವದ...

ದೇಶದ ಆರ್ಥಿಕ ಸ್ಥಿರತೆಯ ಬಗ್ಗೆ ಕೇಂದ್ರ ಸರ್ಕಾರದಿಂದ ಸುಳ್ಳು ನಿರೂಪಣೆ ಸೃಷ್ಟಿ: ಶರದ್ ಪವಾರ್

ದೇಶದಲ್ಲಿ ಹೆಚ್ಚುತ್ತಿರುವ ಹಣದುಬ್ಬರ ಮತ್ತು ಸಂಕಷ್ಟದಲ್ಲಿರುವ ನೈಜ ಆರ್ಥಿಕತೆಯನ್ನು ಮರೆಮಾಚಲು ಕೇಂದ್ರ ಸರ್ಕಾರವು 'ಸಂಖ್ಯಾಶಾಸ್ತ್ರೀಯ ವಿಧಾನಗಳನ್ನು ತಿರುಚುತ್ತಿದೆ' ಎಂದು ನ್ಯಾಷನಲ್ ಕಾಂಗ್ರೆಸ್ ಪಾರ್ಟಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಆರೋಪಿಸಿದ್ದಾರೆ. "ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ಶೇಕಡಾ...

ಮಹದೇವಪುರ, ಗಾಂಧಿನಗರ ವೋಟರ್ ಲಿಸ್ಟ್ ಹಗರಣ: ಇಸಿಐ ತನಿಖೆಗೆ ರಾಜ್ಯ ಚುನಾವಣಾ ಆಯೋಗ ಶಿಫಾರಸು

ಮಹದೇವಪುರ ಮತ್ತು ಗಾಂಧಿನಗರ ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿದೆ ಎಂದು ಕಾಂಗ್ರೆಸ್ ಸಂಸದ ಮನ್ಸೂರ್ ಅಲಿ ಖಾನ್ ನೀಡಿದ್ದ ದೂರನ್ನು ಕರ್ನಾಟಕ ರಾಜ್ಯ ಚುನಾವಣಾ ಆಯೋಗವು ಕೇಂದ್ರ ಚುನಾವಣಾ ಆಯೋಗಕ್ಕೆ...

ಬಹುತೇಕ ಧರ್ಮಗಳು ಲಿಂಗ ಸಮಾನತೆಯನ್ನು ಗುರುತಿಸಲು ಹಿಂಜರಿಯುತ್ತವೆ: ಎಂ. ಎ. ಬೇಬಿ

ಸಾರ್ವಜನಿಕ ಸ್ಥಳಗಳಲ್ಲಿ ಮಹಿಳೆಯರ ಉಪಸ್ಥಿತಿಯ ಮೇಲೆ ನಿರ್ಬಂಧಗಳನ್ನು ಹೇರಬೇಕೆಂದು ಪ್ರತಿಪಾದಿಸಿದ್ದ ಇಸ್ಲಾಮಿಕ್ ಪಂಡಿತ ಕಾಂತಪುರಂ ಎ.ಪಿ. ಅಬೂಬಕರ್ ಮುಸ್ಲಿಯಾರ್ ಅವರ ಹೇಳಿಕೆಯನ್ನು ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಎಂ. ಎ. ಬೇಬಿ ಅವರು ತೀವ್ರವಾಗಿ...

ಭಾಗವತ್ ಕಾರ್ಯಕ್ರಮಕ್ಕೆ ಅಮೆರಿಕದ ಧಾರ್ಮಿಕ ನಾಯಕರ ತೀವ್ರ ಆಕ್ಷೇಪ: ‘ನಮ್ಮನ್ನು ತಪ್ಪುದಾರಿಗೆಳೆದು ಆರ್‌ಎಸ್‌ಎಸ್ ಕಾರ್ಯಕ್ರಮಕ್ಕೆ ಕರೆಸಲಾಗಿತ್ತು’ ಎಂದು ಆರೋಪ

ನ್ಯೂಯಾರ್ಕ್: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರೊಂದಿಗೆ ನ್ಯೂಯಾರ್ಕ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಕಾಣಿಸಿಕೊಂಡಿದ್ದ ಇಬ್ಬರು ಅಮೆರಿಕದ ಧಾರ್ಮಿಕ ಮುಖಂಡರು, ಕಾರ್ಯಕ್ರಮದ ನೈಜ ಉದ್ದೇಶ ಮತ್ತು ಭಾಗವತ್ ಅವರ ಭಾಗವಹಿಸುವಿಕೆ...

ನೈತಿಕ ಹೊಣೆ ಹೊತ್ತು ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡಲಿ: ಎಚ್.ಡಿ. ಕುಮಾರಸ್ವಾಮಿ

ಕೆಪಿಎಸ್‌ಸಿ (KPSC) ಸಹಾಯಕ ಕಾರ್ಯಪಾಲಕ ಅಭಿಯಂತರ (AEE) ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ರಾಜೀನಾಮೆಗೆ ತೀವ್ರ ಒತ್ತಡ ಹೇರಿರುವ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ಈ...

KPSC: ರಾಜ್ಯದ ಪ್ರಭಾವಿಗಳ ಸಲಹೆಯಂತೆ ಪರಾರಿಯಾಗಿದ್ದ ಜ್ಞಾನೇಂದ್ರ ಕುಮಾರ್ !

ಕೆಪಿಎಸ್‌ಸಿ (KPSC) ಪಶುವೈದ್ಯರ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಬಂಧಿತರಾಗಿರುವ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಪರಾರಿಯಾದ ರೋಚಕ ಹಾದಿ ಸಿಐಡಿ (CID) ವಿಚಾರಣೆಯಿಂದ ಬಯಲಾಗಿದೆ. ರಾಜ್ಯದ ಪ್ರಭಾವಿ ವ್ಯಕ್ತಿಗಳು ಹಾಗೂ ರಾಜಕಾರಣಿಗಳ ಸತತ...

ಪಂಜಾಬ್ SIR : ಕರಡು ಪಟ್ಟಿಯಿಂದ ರಾಘವ್ ಚಡ್ಡಾ ಹೆಸರು ನಾಪತ್ತೆ; ಎಎಪಿಯ ‘ಸೇಡಿನ ರಾಜಕಾರಣ’ಎಂದ ಸಂಸದ

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಭಾಗವಾಗಿ ಸಿದ್ಧಪಡಿಸಲಾದ ರಾಜ್ಯದ ಕರಡು ಮತದಾರರ ಪಟ್ಟಿಯಿಂದ ತಮ್ಮ ಹೆಸರು ನಾಪತ್ತೆಯಾದ ನಂತರ, ಪಂಜಾಬ್‌ನ ಆಮ್ ಆದ್ಮಿ ಪಕ್ಷದ(ಎಎಪಿ) ಸರ್ಕಾರದ ವಿರುದ್ಧ ಇತ್ತೀಚೆಗೆ ಬಿಜೆಪಿ ಸೇರಿದ ರಾಜ್ಯಸಭಾ...

ದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 2) ಸಿಬಿಐ ತನಿಖೆಗೆ ಆದೇಶಿಸಿದೆ. ಜೂನ್...

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...