Homeಮುಖಪುಟವಿಶ್ವಕಪ್‌ನಲ್ಲಿ ಭಾರತಕ್ಕೆ ಸೋಲು: ಮೋದಿ, ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡ ವಿಪಕ್ಷದ ನಾಯಕರು

ವಿಶ್ವಕಪ್‌ನಲ್ಲಿ ಭಾರತಕ್ಕೆ ಸೋಲು: ಮೋದಿ, ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡ ವಿಪಕ್ಷದ ನಾಯಕರು

- Advertisement -
- Advertisement -

ಆಸ್ಟ್ರೇಲಿಯಾ ವಿರುದ್ಧದ ಐಸಿಸಿ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಭಾರತ ಸೋತ ನಂತರ ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಅವರು ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಜಾರಿ ನಿರ್ದೇಶನಾಲಯ(ಇಡಿ) ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಬನೀಸ್ ಅವರ ನಿವಾಸದ ಮೇಲೆ ದಾಳಿ ನಡೆಸಲಿದೆ ಎಂದು ಬಿಜೆಪಿಗೆ ಪರೋಕ್ಷವಾಗಿ ಟಾಂಗ್ ಕೊಟ್ಟಿದ್ದಾರೆ.

ಬ್ರೇಕಿಂಗ್ ನ್ಯೂಸ್ ‘ಆಸ್ಟ್ರೇಲಿಯಾದ ಪ್ರಧಾನಿ ನಿವಾಸದ ಮೇಲೆ ಇಡಿ ದಾಳಿ’ ಎಂದು ಮಹುವಾ ಮೊಯಿತ್ರಾ ಎಕ್ಸ್‌ನಲ್ಲಿ ಮಾಡಿದ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ಬಿಜೆಪಿಯು ತನ್ನ ರಾಜಕೀಯ ವಿರೋಧಿಗಳನ್ನು ಗುರಿಯಾಗಿಸಲು EDಯಂತಹ ಕೇಂದ್ರೀಯ ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ವಿರೋಧ ಪಕ್ಷಗಳು ಆರೋಪಿಸುತ್ತಿತ್ತು. ಅದರಂತೆ ಭಾರತ ವಿಶ್ವಕಪ್‌ನಲ್ಲಿ ಸೋತಿದೆ ಎಂದು ಅಸ್ಟ್ರೇಲಿಯಾ ಮೇಲೆ ಬಿಜೆಪಿ ಇಡಿ ದಾಳಿ ಮಾಡಿಸುತ್ತದೆ ಎಂಬರ್ಥದಲ್ಲಿ ಟೀಕಿಸಿದ್ದಾರೆ.

ಇದಲ್ಲದೆ ಅಹಮದಾಬಾದ್ ಸ್ಟೇಡಿಯಂನ್ನು ಮರು ನಾಮಕರಣ ಮಾಡಲಾಗಿದೆ  ‘ಜವಾಹರ್ ಲಾಲ್ ನೆಹರು ಕ್ರಿಕೆಟ್ ಸ್ಟೇಡಿಯಂ’ನಲ್ಲಿ ಭಾರತ ವಿಶ್ವಕಪ್ ಫೈನಲ್‌ನಲ್ಲಿ ಸೋತಿದೆ ಎಂದು ಮೊಯಿತ್ರಾ ತಮ್ಮ ಪೋಸ್ಟ್‌ನಲ್ಲಿ ಪ್ರಧಾನಿಗೆ ಟಾಂಗ್‌ ಕೊಟ್ಟಿದ್ದಾರೆ.

ಬಿಎಸ್ಪಿ ಸಂಸದ ಡ್ಯಾನಿಶ್ ಅಲಿ, ಪ್ರಧಾನಿ ನರೇಂದ್ರ ಮೋದಿ ಅವರು ಕ್ರೀಡಾಂಗಣಕ್ಕೆ ಆಗಮಿಸುವ ಬಗ್ಗೆ ಮೊದಲೇ ಘೋಷಿಸಬಾರದಿತ್ತು. ಅವರು ಇಂತಹ ದೊಡ್ಡ ಸಮಾರಂಭಗಳಿಂದ ದೂರವಿರಬೇಕು ಎಂದು ಹೇಳಿದ್ದಾರೆ.

ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ ಡ್ಯಾನಿಶ್ ಅಲಿ, ನಾವು ಕೂಡ ಗೆಲುವಿನ ಸಮೀಪದಲ್ಲಿದ್ದೆವು. ಆದರೆ ಅತಿಯಾದ ಮಾನಸಿಕ ಒತ್ತಡದಿಂದಾಗಿ ನಮ್ಮ ಆಟಗಾರರು ಗುರಿಯನ್ನು ಕಳೆದುಕೊಂಡರು. ಪ್ರಧಾನಿ ಮೋದಿ ಅವರು ಕ್ರೀಡಾಂಗಣಕ್ಕೆ ಆಗಮಿಸುವುದನ್ನು ಘೋಷಿಸಬಾರದು. ಇದು ದೇಶಕ್ಕೆ ಉತ್ತಮವಾಗಿದೆ. ಅಂತಹ ಸಂದರ್ಭಗಳಿಂದ ದೂರವಿರಿ ಮತ್ತು ಟಿವಿಯಲ್ಲಿ ವೀಕ್ಷಿಸಿ ಎಂದು ಹೇಳಿದ್ದಾರೆ.

ಫೈನಲ್ ಪಂದ್ಯವನ್ನು ವೀಕ್ಷಿಸಲು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಉಪಸ್ಥಿತರಿದ್ದರು.

ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ವಿಶ್ವಕಪ್‌ ಫೈನಲ್‌ ಪಂದ್ಯದಲ್ಲಿ ಭಾರತ ತಂಡ ಆಸ್ಟ್ರೇಲಿಯಾದ ವಿರುದ್ಧ 7ವಿಕೆಟ್‌ಗಳ ಸೋಲು ಕಂಡಿದ್ದು, 6ನೇ ಬಾರಿಗೆ ಆಸ್ಟ್ರೇಲಿಯಾ ಚಾಂಪಿಯನ್ ಪಟ್ಟಕ್ಕೇರಿದೆ.

ಇದನ್ನು ಓದಿ: ವಿಶ್ವಕಪ್ ಫೈನಲ್‌ನಲ್ಲಿ ಭಾರತಕ್ಕೆ ಸೋಲು: 6ನೇ ಬಾರಿಗೆ ಆಸಿಸ್‌ಗೆ ಚಾಂಪಿಯನ್ ಪಟ್ಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ | ಬುಡಕಟ್ಟು ವಿದ್ಯಾರ್ಥಿಗಳ ಹೋರಾಟಕ್ಕೆ ಜಯ : ಎಲ್ಲಾ ಬೇಡಿಕೆಗಳ ಈಡೇರಿಕೆಗೆ ಒಪ್ಪಿದ ಸರ್ಕಾರ

ಮಹಾರಾಷ್ಟ್ರದಲ್ಲಿ ಸರ್ಕಾರಿ ಉದ್ಯೋಗಗಳಲ್ಲಿ ಪರಿಶಿಷ್ಟ ಪಂಗಡದ (ಎಸ್‌ಟಿ) ಅಭ್ಯರ್ಥಿಗಳಿಗೆ ಆದ್ಯತೆ ಹಾಗೂ ವಸತಿ ಶಾಲೆಗಳ ಮೂಲಸೌಕರ್ಯ ಸುಧಾರಣೆಗೆ ಆಗ್ರಹಿಸಿ ಕಳೆದ 16 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಬುಡಕಟ್ಟು ವಿದ್ಯಾರ್ಥಿಗಳ ಸುದೀರ್ಘ ಹೋರಾಟಕ್ಕೆ...

ಖರ್ಗೆ ಭಾಷಣ ಸ್ಥಳದ ‘ಶುದ್ಧೀಕರಣ’: ಬಿಜೆಪಿ-RSS, ಸಂಘ ಪರಿವಾರದ ವಿಷಪೂರಿತ ಮನಸ್ಥಿತಿ ಮಾಜಿ ಸಿಎಂ ಸಿದ್ದರಾಮಯ್ಯ

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಮಾವೇಶದಲ್ಲಿ ಪಾಲ್ಗೊಂಡ ಬಳಿಕ, ಬಲಪಂಥೀಯ ಸಂಘಟನೆಯೊಂದು ಆ ಮೈದಾನದಲ್ಲಿ 'ಶುದ್ಧೀಕರಣ' ಕೈಗೊಂಡಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ರೋಶ...

ಸೋನಿಯಾ ಗಾಂಧಿ ಆತ್ಮಕಥೆ ವಿವಾದ | ಮೋದಿ, ಆರ್‌ಎಸ್‌ಎಸ್, ಚೀನಾ ನುಸುಳುವಿಕೆ ಕುರಿತ ಭಾಗಗಳನ್ನು ತೆಗೆದುಹಾಕಲು ಪೆಂಗ್ವಿನ್ ಇಂಡಿಯಾ ಕೋರಿತ್ತು : ಕಾಂಗ್ರೆಸ್ ಆರೋಪ

ಪ್ರಧಾನಿ ನರೇಂದ್ರ ಮೋದಿ, ಆರ್‌ಎಸ್‌ಎಸ್ ಮತ್ತು ಅವರ ಅಧಿಕಾರಾವಧಿಯಲ್ಲಿ ನಡೆದ ಭಾರತೀಯ ಭೂಪ್ರದೇಶದ ಮೇಲಿನ ಚೀನಾದ ಆಕ್ರಮಣದ ನಿರ್ವಹಣೆಗೆ ಸಂಬಂಧಿಸಿದ ಭಾಗಗಳನ್ನು ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ "ಬೆಲಾಂಗಿಂಗ್: ಎ ಜರ್ನಿ...

ಪಶ್ಚಿಮ ಬಂಗಾಳ| ದುರ್ಗಾಪೂಜೆ ಸಂದರ್ಭದಲ್ಲಿ ಮಾಂಸ ಮಾರಾಟ ನಿಷೇಧ ಆದೇಶ ಹೊರಡಿಸಿದ ವಿಎಚ್‌ಪಿ; ಬಲಪಂಥೀಯ ಸಂಘನೆಯ ಅಧಿಕಾರ ಪ್ರಶ್ನಿಸಿದ ವಿಪಕ್ಷಗಳು

ಪಶ್ಚಿಮ ಬಂಗಾಳದಲ್ಲಿ ದುರ್ಗಾಪೂಜೆ ಆಚರಣೆಗೆ ಸಂಬಂಧಿಸಿದಂತೆ ಬಲಪಂಥೀಯ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಹೊರಡಿಸಿರುವ ಮಾರ್ಗಸೂಚಿಯು ರಾಜಕೀಯ ಚರ್ಚೆಗೆ ಗ್ರಾಸವಾಗಿದೆ. ಪೂಜಾ ಮಂಟಪಗಳ ಸುತ್ತಮುತ್ತ ಸಸ್ಯಾಹಾರಿ ಅಲ್ಲದ ಮಾಂಸ ಮತ್ತು ಮೀನು...

ನ್ಯೂಯಾರ್ಕ್‌ನಲ್ಲಿ ಮೋಹನ್ ಭಾಗವತ್ ಕಾರ್ಯಕ್ರಮ: RSS ಮತ್ತು ಸಂಸ್ಥೆಯ ನಂಟಿನ ರಹಸ್ಯ ಬಯಲು

ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್ ಅವರು ಶನಿವಾರ ನ್ಯೂಯಾರ್ಕ್‌ನ ಪ್ರಸಿದ್ಧ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ಆಯೋಜಿಸಲಾಗಿರುವ ‘ಯೂನಿವರ್ಸಲ್ ಒನ್‌ನೆಸ್ ಸೆಲೆಬ್ರೇಷನ್ಸ್’ ಎಂಬ ಬೃಹತ್ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ವರದಿಗಳ ಪ್ರಕಾರ,...

ಮೋಹನ್ ಭಾಗವತ್ ನ್ಯೂಯಾರ್ಕ್ ಕಾರ್ಯಕ್ರಮಕ್ಕೆ ವಿರೋಧ : ಅಮೆರಿಕದ 61 ಸಂಘಟನೆಗಳಿಂದ ಪ್ರತಿಭಟನೆ

ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಭಾಷಣ ಮಾಡಲಿರುವ, ಶನಿವಾರ (ಆ.29) ನ್ಯೂಯಾರ್ಕ್‌ನ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ಆಯೋಜಿಸಲಾಗಿರುವ 'ಯೂನಿವರ್ಸಲ್ ಒನ್ನೆಸ್ ಸೆಲೆಬ್ರೇಷನ್ಸ್' ಕಾರ್ಯಕ್ರಮಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ. ನ್ಯೂಯಾರ್ಕ್ ಮೇಯರ್ ಝೊಹ್ರಾನ್ ಮಮ್ದಾನಿ ಅವರು...

ಶಿವಮೊಗ್ಗ| ಈದ್-ಎ-ಮಿಲಾದ್ ರ್‍ಯಾಲಿಯಲ್ಲಿ ಪ್ಯಾಲೆಸ್ತೀನ್ ಧ್ವಜ ಪ್ರದರ್ಶನ: ಮೂವರ ವಿರುದ್ಧ ಪ್ರಕರಣ ದಾಖಲು

ಶಿವಮೊಗ್ಗದ ಆರ್‌ಎಂಎಲ್ ನಗರದಲ್ಲಿ ಈದ್-ಎ-ಮಿಲಾದ್ ಆಚರಣೆಗಾಗಿ ನಿರ್ಮಿಸಲಾಗಿದ್ದ ಕಟೌಟ್ ಒಂದರ ಮೇಲೆ ಫೆಲೆಸ್ತೀನ್ ಧ್ವಜವನ್ನು ಪ್ರದರ್ಶಿಸಿದ ಆರೋಪದ ಮೇಲೆ ಪೊಲೀಸರು ಮೂವರು ಮುಸ್ಲಿಂ ಯುವಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಆರೋಪಿಗಳನ್ನು ನಿಹಾಲ್ ಉರುಫ್ ಬೆಕ್ಕು,...

ಕೋಲ್ಕತ್ತಾದಲ್ಲಿ ಮಮತಾ ಬ್ಯಾನರ್ಜಿ ವಿರುದ್ಧ FIR: ಹೈಕೋರ್ಟ್ ಆದೇಶ ಉಲ್ಲಂಘನೆ ಆರೋಪ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ವಿರುದ್ಧ ಕೋಲ್ಕತ್ತಾ ಪೊಲೀಸರು ಸ್ವಯಂಪ್ರೇರಿತ (Suo Motu) ದೂರು ದಾಖಲಿಸಿಕೊಂಡಿದ್ದಾರೆ. ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಟಿಎಂಸಿ ವಿದ್ಯಾರ್ಥಿ...

ಈದ್ ಮಿಲಾದ್ ಸಂದರ್ಭದಲ್ಲಿ ಸಾರ್ವಜನಿಕ ಶಾಂತಿಗೆ ಭಂಗ ತರಲು ಯತ್ನ; ಭಜರಂಗದಳ ಕಾರ್ಯಕರ್ತನ ವಿರುದ್ಧ ಪ್ರಕರಣ ದಾಖಲು

ಈದ್-ಎ-ಮಿಲಾದ್ ಪೋಸ್ಟರ್‌ಗಳ ವಿಚಾರವಾಗಿ ಗುಂಪುಗಳ ನಡುವೆ ಶತ್ರುತ್ವ ಸೃಷ್ಟಿಸಲು ಮತ್ತು ಸಾರ್ವಜನಿಕ ಶಾಂತಿಗೆ ಭಂಗ ತರಲು ಯತ್ನಿಸಿದ ಆರೋಪದ ಮೇಲೆ ಕಲಬುರಗಿಯಲ್ಲಿ ಭಜರಂಗದಳದ ಕಾರ್ಯಕರ್ತನೊಬ್ಬನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ನಗರದಲ್ಲಿ ಈದ್-ಎ-ಮಿಲಾದ್ ಆಚರಣೆಯ ಭಾಗವಾಗಿ...

ವೆನೆಜುವೆಲಾ ತೈಲ ನಿಕ್ಷೇಪಗಳ ಮೇಲೆ ಅಮೆರಿಕ ನಿಯಂತ್ರಣ: ಜಾಗತಿಕ ರಾಜಕಾರಣದಲ್ಲಿ ತಲ್ಲಣ!

ವಾಷಿಂಗ್ಟನ್/ಕಾರಕಾಸ್: ವಿಶ್ವದಲ್ಲೇ ಅತಿ ಹೆಚ್ಚು ಕಚ್ಚಾ ತೈಲ ನಿಕ್ಷೇಪ ಹೊಂದಿರುವ ವೆನೆಜುವೆಲಾ ದೇಶದ 65 ಬಿಲಿಯನ್ ಬ್ಯಾರೆಲ್‌ಗಿಂತ ಹೆಚ್ಚು ಸಾಬೀತಾದ ತೈಲ ನಿಕ್ಷೇಪಗಳ ಮೇಲೆ ಬಹುಮತ ನಿಯಂತ್ರಣ ಸಾಧಿಸುವ ಒಪ್ಪಂದವನ್ನು ಅಮೆರಿಕ ಮಾಡಿಕೊಂಡಿದೆ....