Homeಮುಖಪುಟಮಧ್ಯಪ್ರದೇಶ: ಘರ್ಷಣೆ ವೇಳೆ ಕೈ ಕಾರ್ಯಕರ್ತ ಸಾವು: ಬಿಜೆಪಿ ಅಭ್ಯರ್ಥಿಯ ಬಂಧನಕ್ಕೆ ಪ್ರತಿಭಟನೆ

ಮಧ್ಯಪ್ರದೇಶ: ಘರ್ಷಣೆ ವೇಳೆ ಕೈ ಕಾರ್ಯಕರ್ತ ಸಾವು: ಬಿಜೆಪಿ ಅಭ್ಯರ್ಥಿಯ ಬಂಧನಕ್ಕೆ ಪ್ರತಿಭಟನೆ

- Advertisement -
- Advertisement -

ಮಧ್ಯಪ್ರದೇಶದ ಛತ್ತರ್‌ಪುರ ಜಿಲ್ಲೆಯಲ್ಲಿ ಚುನಾವಣೆಯ ದಿನ ಬಿಜೆಪಿ ಮತ್ತು ಕಾಂಗ್ರೆಸ್‌ ಕಾರ್ಯಕರ್ತರ ನಡುವೆ ನಡೆದ ಘರ್ಷಣೆಯ ವೇಳೆ ಕಾಂಗ್ರೆಸ್‌ ಕಾರ್ಯಕರ್ತ ಸಲ್ಮಾನ್ ಖಾನ್ ಮೃತಪಟ್ಟಿದ್ದಾರೆ. ಸಲ್ಮಾನ್ ಖಾನ್ ಸಾವಿಗೆ ಸಂಬಂಧಿಸಿದ ಪ್ರಕರಣದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಬಂಧಿಸುವಂತೆ ಆಗ್ರಹಿಸಿ ಕಾಂಗ್ರೆಸ್‌ ನಾಯಕ ದಿಗ್ವಿಜಯ ಸಿಂಗ್‌, ಪಕ್ಷದ ಶಾಸಕ ವಿಕ್ರಮ್‌ ಸಿಂಗ್‌ ನಾಟಿ ರಾಜಾ ಮತ್ತಿತರರ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ.

ನ.17ರಂದು ಮಧ್ಯಪ್ರದೇಶದಲ್ಲಿ ನಡೆದ ವಿಧಾನಸಭಾ ಚುನಾವಣೆ ವೇಳೆ ಛತ್ತರ್‌ಪುರ ಜಿಲ್ಲೆಯ ರಾಜನಗರ ಕ್ಷೇತ್ರದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ನಡೆದ ಘರ್ಷಣೆಯಲ್ಲಿ ಸಲ್ಮಾನ್ ಖಾನ್ ಎಂಬ ಕಾಂಗ್ರೆಸ್ ಕಾರ್ಯಕರ್ತ ಮೃತಪಟ್ಟಿದ್ದ. ಘಟನೆಯ ನಂತರ ದಿಗ್ವಿಜಯ ಸಿಂಗ್ ತಮ್ಮ ಬೆಂಬಲಿಗರೊಂದಿಗೆ ನವೆಂಬರ್ 18-19 ರಂದು ರಾಜನಗರದ ಬಿಜೆಪಿ ಅಭ್ಯರ್ಥಿ ಅರವಿಂದ್ ಪಟೇರಿಯಾ ಅವರನ್ನು ಬಂಧಿಸುವಂತೆ ಒತ್ತಾಯಿಸಿ ಖಜುರಾಹೊ ಪೊಲೀಸ್ ಠಾಣೆಯ ಹೊರಗೆ ಪ್ರತಿಭಟನೆ ಕುಳಿತಿದ್ದರು.

ಕಾಂಗ್ರೆಸ್ ನಾಯಕರು ಪಟೇರಿಯಾ ಅವರು ಖಾನ್ ಹತ್ಯೆಗೆ ಕಾರಣ ಎಂದು ಆರೋಪಿಸಿದ್ದಾರೆ. ಈ ಆರೋಪವನ್ನು ಅವರು ನಿರಾಕರಿಸಿದ್ದಾರೆ.

ಹೆಚ್ಚುವರಿ ಪೊಲೀಸ್ ಅಧೀಕ್ಷಕ (ಎಎಸ್‌ಪಿ) ವಿಕ್ರಮ್ ಸಿಂಗ್ ಅವರು ಛತ್ತರ್‌ಪುರ ಹೆಚ್ಚುವರಿ ಜಿಲ್ಲಾಧಿಕಾರಿ ಸಲ್ಲಿಸಿದ ವರದಿಯ ಆಧಾರದ ಮೇಲೆ ಮಾದರಿ ನೀತಿ ಸಂಹಿತೆಯ ಉಲ್ಲಂಘನೆ ಆರೋಪದಲ್ಲಿ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 188ರ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ.

ಎಫ್‌ಐಆರ್‌ನಲ್ಲಿ ದಿಗ್ವಿಜಯ ಸಿಂಗ್, ರಾಜನಗರದ ಕಾಂಗ್ರೆಸ್ ಅಭ್ಯರ್ಥಿ ಮತ್ತು ಹಾಲಿ ಶಾಸಕ ರಾಜ ಮತ್ತು ಇತರ 60-70 ಜನರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಬಿಜೆಪಿಯ ಛತ್ತರ್‌ಪುರ ಜಿಲ್ಲಾಧ್ಯಕ್ಷ ಮಲ್ಖಾನ್ ಸಿಂಗ್ ಈ ಹಿಂದೆ ಜಿಲ್ಲಾಡಳಿತಕ್ಕೆ ದೂರು ನೀಡಿದ್ದು, ದಿಗ್ವಿಜಯ ಸಿಂಗ್ ಮತ್ತು ಇತರ ಕಾಂಗ್ರೆಸ್ ನಾಯಕರು ಅಧಿಕಾರಿಗಳಿಂದ ಅನುಮತಿ ಪಡೆಯದೆ ಧರಣಿ ನಡೆಸಿ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿದ್ದರು. ಈ ಬಗ್ಗೆ ಹೆಚ್ಚುವರಿ ಜಿಲ್ಲಾಧಿಕಾರಿ ಪ್ರತಿಭಟನೆಗೆ ಸ್ಥಳೀಯ ಆಡಳಿತದಿಂದ ಅನುಮತಿ ಪಡೆದಿಲ್ಲ ವರದಿಯನ್ನು ನೀಡಿದ್ದರು.

ಸಲ್ಮಾನ್ ಖಾನ್ ಸಾವಿನ ನಂತರ ಪೊಲೀಸರು ನ.17ರಂದು ಪಟೇರಿಯಾ ಮತ್ತು 20 ಬಿಜೆಪಿ ಕಾರ್ಯಕರ್ತರ ವಿರುದ್ಧ ಕೊಲೆ ಆರೋಪದ ಮೇಲೆ ಪ್ರಕರಣ ದಾಖಲಿಸಿದ್ದರು. ಇದರ ಬಳಿಕ ಬಿಜೆಪಿ ಪಕ್ಷಪಾತ ಧೋರಣೆ ಅನುಸರಿಸುತ್ತಿದೆ ಎಂದು ಕಾಂಗ್ರೆಸ್‌ ಆರೋಪಿಸಿತ್ತು.

ನ.19ರಂದು ನಡೆದ ಘಟನೆಗೆ ಸಂಬಂಧಿಸಿ ಬಿಜೆಪಿ ಪ್ರತಿ ದೂರು ನೀಡಿದ್ದು, ಕಾಂಗ್ರೆಸ್ ಅಭ್ಯರ್ಥಿ ನಾಟಿ ರಾಜಾ ವಿರುದ್ಧ ಕೊಲೆ ಯತ್ನ, ಗಲಭೆ ಮತ್ತು ಇತರ ಐಪಿಸಿ ಸೆಕ್ಷನ್‌ಗಳ ಅಡಿಯಲ್ಲಿ ಪ್ರತ್ಯೇಕ ಪ್ರಕರಣವನ್ನು ದಾಖಲಿಸಿದ್ದಾರೆ.

ಚುನಾವಣೆಯಲ್ಲಿ ಲಾಭ ಪಡೆಯಲು ನಾಟಿ ರಾಜಾ ಖಾನ್ ಹತ್ಯೆಗೆ ಸಂಚು ರೂಪಿಸಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ. ಮತ್ತೊಂದೆಡೆ ಕಾಂಗ್ರೆಸ್ ಅಭ್ಯರ್ಥಿ ನಾಟಿ ರಾಜಾ, ಸಲ್ಮಾನ್ ಖಾನ್ ಸಾವಿಗೆ ಬಿಜೆಪಿ ಅಭ್ಯರ್ಥಿ ಪಟೇರಿಯಾ ಕಾರಣ ಎಂದು ಆರೋಪಿಸಿದ್ದಾರೆ.

ಇದನ್ನು ಓದಿ: ನ್ಯಾಷನಲ್ ಹೆರಾಲ್ಡ್‌ಗೆ ಸಂಬಂಧಿಸಿದ 751 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಬಿಎಸ್‌ಇ 10 ನೇ ತರಗತಿ ವಿದ್ಯಾರ್ಥಿಗಳಿಗೆ ಮೊದಲ ಬೋರ್ಡ್ ಪರೀಕ್ಷೆ ಕಡ್ಡಾಯ, ಪರಿಣಾಮಗಳ ಬಗ್ಗೆ ಎಚ್ಚರಿಕೆ

ನವದೆಹಲಿ: 10ನೇ ತರಗತಿಯ ವಿದ್ಯಾರ್ಥಿಗಳು ಮೊದಲ ಬೋರ್ಡ್ ಪರೀಕ್ಷೆ ಬರೆಯುವುದು ಕಡ್ಡಾಯ ಎಂದು ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್‌ಇ) ಸ್ಪಷ್ಟಪಡಿಸಿದ್ದು, ಮೊದಲ ಆವೃತ್ತಿಯಲ್ಲಿ ಕನಿಷ್ಠ ಮೂರು ವಿಷಯಗಳನ್ನು ಪ್ರಯತ್ನಿಸದ ವಿದ್ಯಾರ್ಥಿಗಳು "ಅಗತ್ಯ...

ಬಾಗೇಪಲ್ಲಿ ಕಾಂಗ್ರೆಸ್‌ ಶಾಸಕ ಸುಬ್ಬಾರೆಡ್ಡಿ ಆಯ್ಕೆ ಅಸಿಂಧುಗೊಳಿಸಿದ ಹೈಕೋರ್ಟ್‌

ವಿಧಾನಸಭೆಯ 2023ರ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ (ಭಾಗ್ಯನಗರ) ಕ್ಷೇತ್ರದಿಂದ ಕಾಂಗ್ರೆಸ್ ಶಾಸಕ ಎನ್‌.ಸುಬ್ಬಾರೆಡ್ಡಿ ಆಯ್ಕೆಯಾಗಿರುವುದನ್ನು ಹೈಕೋರ್ಟ್ ಅಸಿಂಧುಗೊಳಿಸಿದೆ ಎಂದು ಕಾನೂನು ಸುದ್ದಿ ಸಂಸ್ಥೆ ಬಾರ್ &ಬೆಂಚ್ ಸೋಮವಾರ (ಫೆ.16) ವರದಿ ಮಾಡಿದೆ. ಸುಬ್ಬಾರೆಡ್ಡಿ...

ಗಂಗಾವತಿ : ವಿದೇಶಿ ಮಹಿಳೆ ಸೇರಿ ಇಬ್ಬರ ಅತ್ಯಾಚಾರ, ಓರ್ವನ ಕೊಲೆ ಪ್ರಕರಣ ; ಮೂವರು ಅಪರಾಧಿಗಳಿಗೆ ಮರಣದಂಡನೆ

ಕೊಪ್ಪಳದ ಗಂಗಾವತಿ ತಾಲೂಕಿನ ಸಾಣಾಪುರ ಕೆರೆ ಬಳಿ ಸ್ಥಳೀಯ ಹೋಮ್‌ ಸ್ಟೇ ಮಾಲಕಿ ಮತ್ತು ಇಸ್ರೇಲಿ ಯುವತಿ ಮೇಲೆ ಅತ್ಯಾಚಾರವೆಸಗಿ, ಅವರ ಜೊತೆಗಿದ್ದ ಯುವಕನನ್ನು ಕೊಲೆಗೈದ ಪ್ರಕರಣದ ಮೂವರು ಅಪರಾಧಿಗಳಿಗೆ ಒಂದನೇ ಹೆಚ್ಚುವರಿ...

ಶಿವಮೊಗ್ಗ: 40 ಸಾವಿರ ಲಂಚ ಪಡೆಯುತ್ತಿದ್ದ ಕೆಎಎಸ್ ಅಧಿಕಾರಿ ಸೇರಿ ಇಬ್ಬರನ್ನು ಬಂಧಿಸಿದ ಲೋಕಾಯುಕ್ತ ಪೊಲೀಸರು 

ಶಿವಮೊಗ್ಗ: 40,000 ರೂ. ಲಂಚ ಸ್ವೀಕರಿಸುತ್ತಿದ್ದಾಗ ರಾಷ್ಟ್ರೀಯ ಹೆದ್ದಾರಿಯ ವಿಶೇಷ ಭೂ ಸ್ವಾಧೀನಾಧಿಕಾರಿ (KAS officer) ಸಿದ್ದಲಿಂಗ ರೆಡ್ಡಿ ಮತ್ತು ಗ್ರಾಮ ಸಹಾಯಕ ರಾಜೇಶ್‌ ಎಂಬುವರನ್ನು ಲೋಕಾಯುಕ್ತ ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ...

ದ್ವೇಷ ಭಾಷಣ | ಅಸ್ಸಾಂ ಸಿಎಂ ವಿರುದ್ಧದ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ ; ಹೈಕೋರ್ಟ್‌ಗೆ ಹೋಗಲು ಸೂಚನೆ

ಸಂವಿಧಾನದ 32ನೇ ವಿಧಿಯಡಿ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ದ್ವೇಷ ಭಾಷಣದ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿ ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್, ಈ ವಿಷಯವಾಗಿ ಗುವಾಹಟಿ ಹೈಕೋರ್ಟ್...

ಕಲಬುರಗಿ| ಅನುಮತಿ ಇಲ್ಲದೆ ಪುರಾತತ್ವ ಇಲಾಖೆ ಕೋಟೆ ಪ್ರವೇಶಕ್ಕೆ ಯತ್ನಿಸಿದ ಪಿಎಸ್‌ಐ ಹಗರಣದ ಆರೋಪಿ ದಿವ್ಯಾ ಹಾಗರಗಿ ತಂಡ

ಸಬ್ ಇನ್ಸ್‌ಪೆಕ್ಟರ್‌ಗಳ ನೇಮಕಾತಿ ಅಕ್ರಮ ಪ್ರಕರಣದ ಪ್ರಮುಖ ಆರೋಪಿಗಳಲ್ಲಿ ಒಬ್ಬರಾದ ಮಾಜಿ ಬಿಜೆಪಿ ನಾಯಕಿ ದಿವ್ಯಾ ಹಾಗರಗಿ ನೇತೃತ್ವದ ಗುಂಪೊಂದು ಭಾನುವಾರ ಕಲಬುರಗಿ ಕೋಟೆಗೆ ಮಹಾಶಿವರಾತ್ರಿ ಪೂಜೆ ಮಾಡಲು ಅನುಮತಿಯಿಲ್ಲದೆ ಪ್ರವೇಶಿಸಲು ಯತ್ನಿಸಿದ...

‘ಆರೆಸ್ಸೆಸ್ ಭೂತ, ಬಿಜೆಪಿ ಅದರ ನೆರಳು’: ಆರ್‌ಎಸ್‌ಎಸ್ ನೋಂದಣಿ ಆಗೇ ಆಗುತ್ತೆ, ನಾವು ಮಾಡಿಸುತ್ತೇವೆ: ಪ್ರಿಯಾಂಕ್ ಖರ್ಗೆ 

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಭಾನುವಾರ ಆರ್‌ಎಸ್‌ಎಸ್ ಮತ್ತು ಅದರ ಸೈದ್ಧಾಂತಿಕ ಸಂತತಿ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿದ್ದು, ಆರ್‌ಎಸ್‌ಎಸ್ ಇಲ್ಲದೆ ಬಿಜೆಪಿ "ಜೆಡಿ (ಎಸ್) ಗಿಂತ ದುರ್ಬಲವಾಗಿದೆ"...

ರಾಜಸ್ಥಾನ| ಪಟಾಕಿ ತಯಾರಿಕಾ ಕಾರ್ಖಾನೆಯಲ್ಲಿ ಬೆಂಕಿ ಅವಘಡ; ಏಳು ಮಂದಿ ಸಾವು – ಹಲವರು ಸಿಲುಕಿರುವ ಶಂಕೆ

ರಾಜಸ್ಥಾನದ ಖೈರ್ತಾಲ್-ತಿಜಾರಾ ಜಿಲ್ಲೆಯ ಭಿವಾಡಿ ಪಟ್ಟಣದಲ್ಲಿ ಸೋಮವಾರ ಅಕ್ರಮ ಪಟಾಕಿ ತಯಾರಿಕಾ ಕಾರ್ಖಾನೆಯಲ್ಲಿ ಸಮಭವಿಸಿದ ಬೆಂಕಿ ಅವಘಡದಲ್ಲಿ ಏಳು ಮಂದಿ ಸಜೀವ ದಹನಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. "ಘಟನೆಯಲ್ಲಿ ಏಳು ಜನರು ಸಾವನ್ನಪ್ಪಿದ್ದಾರೆ. ಇದು...

ಶಬರಿಮಲೆಗೆ ಮಹಿಳೆಯರ ಪ್ರವೇಶ: ಏಪ್ರಿಲ್ 7ರಿಂದ ಅರ್ಜಿ ವಿಚಾರಣೆ ನಡೆಸಲಿರುವ ಸುಪ್ರೀಂ ಕೋರ್ಟ್‌ನ 9 ನ್ಯಾಯಾಧೀಶರ ಸಂವಿಧಾನ ಪೀಠ

ಏಪ್ರಿಲ್ 7 ರಿಂದ ಶಬರಿಮಲೆಗೆ ಮಹಿಳೆಯರ ಪ್ರವೇಶಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಲು 9 ನ್ಯಾಯಾಧೀಶರ ಪೀಠವನ್ನು ಸ್ಥಾಪಿಸುವುದಾಗಿ ಸುಪ್ರೀಂ ಕೋರ್ಟ್ ಫೆಬ್ರವರಿ 16, ಸೋಮವಾರದಂದು ಘೋಷಿಸಿರುವುದಾಗಿ ಲೈವ್ ಲಾ...

ಬಾಂಗ್ಲಾ ಪ್ರಧಾನಿ ಪದಗ್ರಹಣ : ಭಾರತವನ್ನು ಪ್ರತಿನಿಧಿಸಲಿರುವ ಸ್ಪೀಕರ್ ಓಂ ಬಿರ್ಲಾ

ಫೆಬ್ರವರಿ 17ರಂದು ನಡೆಯಲಿರುವ ಬಾಂಗ್ಲಾದೇಶದ ನೂತನ ಪ್ರಧಾನಿ ತಾರಿಖ್ ರೆಹಮಾನ್ ಅವರ ಪದಗ್ರಹಣದ ಸಮಾರಂಭದಲ್ಲಿ ಭಾರತದಿಂದ ಅಧಿಕೃತ ಪ್ರತಿನಿಧಿಯಾಗಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಭಾಗವಹಿಸಲಿದ್ದಾರೆ ಎಂದು ವರದಿಯಾಗಿದೆ. ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿಯವರನ್ನು...