Homeಮುಖಪುಟಹಲಾಲ್ ಉತ್ಪನ್ನಗಳ ಮಾರಾಟ ನಿಷೇಧದ ಕುರಿತು ನಿರ್ಧಾರ ತೆಗೆದುಕೊಂಡಿಲ್ಲ: ಅಮಿತ್‌ ಶಾ

ಹಲಾಲ್ ಉತ್ಪನ್ನಗಳ ಮಾರಾಟ ನಿಷೇಧದ ಕುರಿತು ನಿರ್ಧಾರ ತೆಗೆದುಕೊಂಡಿಲ್ಲ: ಅಮಿತ್‌ ಶಾ

- Advertisement -
- Advertisement -

ಹಲಾಲ್ ಪ್ರಮಾಣೀಕೃತ ಉತ್ಪನ್ನಗಳ ಮಾರಾಟವನ್ನು ನಿಷೇಧಿಸುವ ಯಾವುದೇ ನಿರ್ಧಾರವನ್ನು ಕೇಂದ್ರ ಸರಕಾರ ತೆಗೆದುಕೊಂಡಿಲ್ಲ ಎಂದು ಕೇಂದ್ರ ಗೃಹ ಸಚಿವ, ಬಿಜೆಪಿ ನಾಯಕ ಅಮಿತ್ ಶಾ ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ಹೈದರಾಬಾದ್‌ನಲ್ಲಿ ಮಾದ್ಯಮ ಪ್ರತಿನಿಧಿಗಳನ್ನು ಉದ್ದೇಶಿಸಿ ಮಾತನಾಡಿದ ಅಮಿತ್ ಶಾ, ಕೇಂದ್ರ ಸರ್ಕಾರವು ಹಲಾಲ್‌ ಉತ್ಪನ್ನಗಳ ಮಾರಾಟವನ್ನು ನಿಷೇಧಿಸುವ ಯಾವುದೇ ನಿರ್ಧಾರವನ್ನು ಇನ್ನೂ ತೆಗೆದುಕೊಂಡಿಲ್ಲ ಎಂದು ಹೇಳಿದ್ದಾರೆ.

ಇದಕ್ಕೂ ಮೊದಲು ತೆಲಂಗಾಣದಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ಉದ್ದೇಶಿಸಿ ಮಾತನಾಡಿದ ಅಮಿತ್‌ ಶಾ, ಬಿಆರ್‌ಎಸ್ ತುಷ್ಟೀಕರಣ ರಾಜಕಾರಣ ಮಾಡುತ್ತಿದೆ. ಸಂವಿಧಾನವು ಯಾರಿಗೂ ವಿಶೇಷ ಕೊಡುಗೆ ನೀಡಲು ಅವಕಾಶ ನೀಡುವುದಿಲ್ಲ. ಧಾರ್ಮಿಕ ಮೀಸಲಾತಿಯನ್ನು ಕೆಸಿಆರ್ ನೀಡಿದ್ದಾರೆ. ಇದು ಸಂವಿಧಾನಕ್ಕೆ ವಿರುದ್ಧವಾಗಿದೆ. ನಾವು ಧಾರ್ಮಿಕ ಅಲ್ಪಸಂಖ್ಯಾತರಿಗೆ 4% ಕೋಟಾವನ್ನು ಕೊನೆಗೊಳಿಸುತ್ತೇವೆ ಮತ್ತು ಅದನ್ನು ಪರಿಶಿಷ್ಟ ಪಂಗಡಗಳು, ಪರಿಶಿಷ್ಟ ಜಾತಿಗಳು ಮತ್ತು ಇತರ ಹಿಂದುಳಿದ ವರ್ಗಗಳಿಗೆ ನೀಡುತ್ತೇವೆ ಎಂದು ಹೇಳಿದ್ದಾರೆ.

ಕಳೆದವಾರವಷ್ಟೇ ಉತ್ತರಪ್ರದೇಶದಲ್ಲಿ ಹಲಾಲ್‌ ಟ್ಯಾಗ್  ಹೊಂದಿರುವ ಉತ್ಪನ್ನಗಳನ್ನು ನಿಷೇಧಿಸಿ ಉತ್ತರಪ್ರದೇಶ ಸರಕಾರ ಆದೇಶವನ್ನು ನೀಡಿತ್ತು. ಹಲಾಲ್ ಪ್ರಮಾಣೀಕರಣದೊಂದಿಗೆ ಆಹಾರ ಉತ್ಪನ್ನಗಳ ಉತ್ಪಾದನೆ, ಸಂಗ್ರಹಣೆ, ವಿತರಣೆ ಮತ್ತು ಮಾರಾಟವನ್ನು ನಿಷೇಧಿಸಿತ್ತು. ಆದರೆ ರಫ್ತಿಗಾಗಿ ತಯಾರಿಸಿದ ಉತ್ಪನ್ನಗಳಿಗೆ ನಿರ್ಬಂಧ ಅನ್ವಯವಾಗುವುದಿಲ್ಲ ಎಂದು ಹೇಳಲಾಗಿತ್ತು.

ಉತ್ತರಪ್ರದೇಶದೊಳಗೆ ಹಲಾಲ್ ಪ್ರಮಾಣೀಕೃತ ಔಷಧಗಳು, ವೈದ್ಯಕೀಯ ಸಾಧನಗಳು ಮತ್ತು ಸೌಂದರ್ಯವರ್ಧಕಗಳ ಉತ್ಪಾದನೆ, ಸಂಗ್ರಹಣೆ, ವಿತರಣೆ, ಖರೀದಿ ಮತ್ತು ಮಾರಾಟದಲ್ಲಿ ತೊಡಗಿರುವ ಯಾವುದೇ ವ್ಯಕ್ತಿ ಅಥವಾ ಸಂಸ್ಥೆಯ ವಿರುದ್ಧ ಕಠಿಣ ಕಾನೂನು ಕ್ರಮಗಳನ್ನು ಜಾರಿಗೊಳಿಸಲಾಗುವುದು ಎಂದು ಅಧಿಕೃತ ಆದೇಶ ತಿಳಿಸಿತ್ತು.

ಆಹಾರ ಉತ್ಪನ್ನಗಳ ಹಲಾಲ್ ಪ್ರಮಾಣೀಕರಣವು ಒಂದು ಸಮಾನಾಂತರ ವ್ಯವಸ್ಥೆಯಾಗಿದ್ದು ಅದು ಆಹಾರ ಪದಾರ್ಥಗಳ ಗುಣಮಟ್ಟಕ್ಕೆ ಸಂಬಂಧಿಸಿದಂತೆ ಗೊಂದಲವನ್ನು ಸೃಷ್ಟಿಸುತ್ತದೆ ಮತ್ತು ಆಹಾರ ಕಾನೂನು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯಿದೆಯ ಸೆಕ್ಷನ್ 89ರ ಅಡಿಯಲ್ಲಿ ಸಮರ್ಥನೀಯವಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿತ್ತು.

ಇದರ ಬೆನ್ನಲ್ಲೇ ಬಿಹಾರದಲ್ಲಿ ಹಲಾಲ್ ಪ್ರಮಾಣಪತ್ರ ಹೊಂದಿರುವ ಉತ್ಪನ್ನಗಳನ್ನು ನಿಷೇಧಿಸುವಂತೆ ಆಗ್ರಹಿಸಿ ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಸಿಎಂ ನಿತೀಶ್ ಕುಮಾರ್ ಅವರಿಗೆ ಪತ್ರ ಬರೆದಿದ್ದರು. ಹಲಾಲ್ ಉತ್ಪನ್ನವನ್ನು ಜಿಹಾದ್ ಎಂದ ಗಿರಿರಾಜ್ ಸಿಂಗ್, ತುಕ್ಡೇ ತುಕ್ಡೇ ಗ್ಯಾಂಗ್‌ಗಳು ಬಿಹಾರದ ಎಲ್ಲಾ ಮೂಲೆ ಮೂಲೆಗಳಲ್ಲಿ ಹಲಾಲ್ ಪ್ರಾಮಾಣಿಕೃತ ಉತ್ಪನ್ನಗಳನ್ನು ಮಾರಾಟ ಮಾಡುತ್ತಿವೆ. ಹಲಾಲ್‌ ಉತ್ಪನ್ನಗಳನ್ನು ಹಿಂದೂ ಮಂತ್ರಗಳಂತೆ ಕುರಾನ್‌ ಮೂಲಕ ಪವಿತ್ರೀಕರಣಗೊಳಿಸಲಾಗುತ್ತದೆ. ಇದರಿಂದ ಸನಾತನ ಧರ್ಮ ಅಪಾಯದಲ್ಲಿದೆ. ಹಲಾಲ್‌ ಉತ್ಪನ್ನಗಳ ಮೂಲಕ ಶರಿಯಾ ಕಾನೂನು ಹೇರಲಾಗುತ್ತಿದೆ. ಅಲ್ಲದೆ ಇದು ಉಗ್ರವಾದಿಗಳೊಂದಿಗೆ ಸಂಪರ್ಕ ಹೊಂದಿದೆ ಎಂದು ಹೇಳಿದ್ದರು.

ಗಿರಿರಾಜ್‌ ಸಿಂಗ್‌ ಆರೋಪಕ್ಕೆ ಜೆಡಿಯು ನಾಯಕ ನೀರಜ್‌ ಕುಮಾರ್‌ ತಿರುಗೇಟು ಕೊಟ್ಟಿದ್ದು, ಬಿಜೆಪಿ ನಾಯಕರು ಹಿಂದೂ ಧರ್ಮದ ಪಾಲಕರಂತೆ ತಮ್ಮನ್ನು ತಾವು ಬಿಂಬಿಸಿಕೊಳ್ಳುತ್ತಾರೆ. ಆದರೆ ಅವರದ್ದೇ ಆಡಳಿತದ ಉತ್ತರ ಪ್ರದೇಶದಲ್ಲಿ ರಾಜ್ಯಗಳು ಗೋಮಾಂಸ ರಫ್ತಿನಲ್ಲಿ ಮುಂಚೂಣಿಯಲ್ಲಿದೆ. ಇವೆಲ್ಲವೂ ಅವರ ಬೂಟಾಟಿಕೆ ಎಂದು ಹೇಳಿದ್ದರು.

ಇದನ್ನು ಓದಿ: ಯುದ್ಧ ಭೀಕರತೆ: ಗಾಝಾದಲ್ಲಿ ಪತ್ರಕರ್ತರ ಹತ್ಯಾಕಾಂಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ-ಮಹಾರಾಷ್ಟ್ರದಲ್ಲಿ ಜನನ ಪ್ರಮಾಣಪತ್ರಕ್ಕೆ ಆಧಾರ್ ಮಾನ್ಯವಲ್ಲ: ಹೊಸ ಮಾರ್ಗಸೂಚಿ

ಜನನ ಪ್ರಮಾಣಪತ್ರಗಳನ್ನು ನೀಡಲು ಆಧಾರ್ ಕಾರ್ಡ್‌ಗಳನ್ನು ಇನ್ನು ಮುಂದೆ ಮಾನ್ಯ ಪುರಾವೆಯಾಗಿ ಅಥವಾ ಜನ್ಮ ದಿನಾಂಕದ ಪುರಾವೆಯಾಗಿ ಸ್ವೀಕರಿಸಲಾಗುವುದಿಲ್ಲ ಎಂದು ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರ ಘೋಷಿಸಿವೆ. ಈ ಉದ್ದೇಶಕ್ಕಾಗಿ ಆಧಾರ್ ಬಳಸುವುದನ್ನು...

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ 'ಸೈನಾ' (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ...

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...