Homeಮುಖಪುಟತೆಲಂಗಾಣ: ಮಾದಿಗ ಮೀಸಲಾತಿ ನೆಪದಲ್ಲಿ ಮೋದಿ ಮತಬೇಟೆ

ತೆಲಂಗಾಣ: ಮಾದಿಗ ಮೀಸಲಾತಿ ನೆಪದಲ್ಲಿ ಮೋದಿ ಮತಬೇಟೆ

- Advertisement -
- Advertisement -

ತೆಲಂಗಾಣದಲ್ಲಿ ವಿಧಾನಸಭಾ ಚುನಾವಣೆಯ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ ದಲಿತ ಉಪವರ್ಗೀಕರಣದ ಬಹುಕಾಲದ ಬೇಡಿಕೆಯ ಸಮಸ್ಯೆಯನ್ನು ಪರಿಶೀಲಿಸಲು ಸಮಿತಿ ರಚಿಸುವ ಪ್ರಕ್ರಿಯೆಯನ್ನು ಪ್ರಧಾನಿ ನರೇಂದ್ರ ಮೋದಿ ಪ್ರಾರಂಭಿಸಿದ್ದಾರೆ ಎಂದು ದಿ ಹಿಂದೂ ವರದಿ ಮಾಡಿದೆ.

ಸಂಪುಟ ಕಾರ್ಯದರ್ಶಿ ರಾಜೀವ್ ಗೌಬಾ ಮತ್ತು ಇತರ ಅಧಿಕಾರಿಗಳೊಂದಿಗೆ ಸಮಿತಿಗೆ ಸಂಬಂಧಿಸಿದ ಸಮಸ್ಯೆ ಮತ್ತು ವಿಧಾನಗಳ ಬಗ್ಗೆ ಮೋದಿ ಚರ್ಚಿಸಿದ್ದಾರೆ ಎಂದು ಸರ್ಕಾರಿ ಮೂಲಗಳನ್ನು ಉಲ್ಲೇಖಿಸಿ ಪತ್ರಿಕೆ ವರದಿ ಮಾಡಿದೆ.

ನವೆಂಬರ್ 11 ರಂದು ಹೈದರಾಬಾದ್‌ನಲ್ಲಿ ಮಾದಿಗ ಮೀಸಲಾತಿ ಹೋರಾಟ ಸಮಿತಿ (ಎಂಆರ್‌ಪಿಎಸ್) ಆಯೋಜಿಸಿದ್ದ ಸಭೆಯಲ್ಲಿ ದಲಿತ ಉಪವರ್ಗೀಕರಣದ ಸಮಸ್ಯೆಯನ್ನು ಪರಿಶೀಲಿಸುವುದಾಗಿ ಮೋದಿ ಭರವಸೆ ನೀಡಿದ್ದರು.

ಮಾದಿಗರ ದಲಿತ ಉಪ-ಗುಂಪು ತೆಲಂಗಾಣ ರಾಜ್ಯದಲ್ಲಿ ಒಟ್ಟು ದಲಿತ ಜನಸಂಖ್ಯೆಯ ಸುಮಾರು ಶೇ. 50ರಷ್ಟಿದೆ. ನವೆಂಬರ್ 30 ರಂದು ಚುನಾವಣೆ ನಡೆಯಲಿರುವ ತೆಲಂಗಾಣದಲ್ಲಿ ದಲಿತರು ಶೇ.15ರಷ್ಟಿದ್ದಾರೆ.

1994 ರಿಂದ, ಎಂಆರ್‌ಪಿಎಸ್ ಬ್ಯಾನರ್ ಅಡಿಯಲ್ಲಿ ಮಾದಿಗರು ವಿವಿಧ ದಲಿತ ಉಪ-ಗುಂಪುಗಳು ತಮ್ಮ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಪಡೆಯಲು ದಲಿತರಲ್ಲಿ ಉಪ-ವರ್ಗೀಕರಣಕ್ಕೆ ಒತ್ತಾಯಿಸುತ್ತಿದ್ದಾರೆ. ಮಂದ ಕೃಷ್ಣ ಮಾದಿಗ ನೇತೃತ್ವದ ಎಂಆರ್‌ಪಿಎಸ್, ಸುಮಾರು ಶೇ. 80 ಮೀಸಲಾತಿ ಪ್ರಯೋಜನಗಳನ್ನು ಮತ್ತೊಂದು ಪ್ರಬಲ ದಲಿತ ಉಪ-ಗುಂಪಾದ ಮಾಲಾಗಳು ಅನುಭವಿಸುತ್ತಿದ್ದಾರೆ ಎಂದು ಅಭಿಪ್ರಾಯಪಟ್ಟಿದೆ.

ನವೆಂಬರ್ 11 ರಂದು ಹೈದರಾಬಾದ್‌ನಲ್ಲಿ ನಡೆದ ಎಂಆರ್‌ಪಿಎಸ್ ಸಭೆಯಲ್ಲಿ ಮೋದಿಯವರ ಉಪಸ್ಥಿತಿಯು ಮಹತ್ವವನ್ನು ಪಡೆದುಕೊಂಡಿದೆ. ‘ಇಂದಿನಿಂದ ಮಾದಿಗ ಮೀಸಲಾತಿ ಹೋರಾಟ ಸಮಿತಿ (ಎಂಆರ್‌ಪಿಎಸ್) ಸಂಸ್ಥಾಪಕ ಮಂದ ಕೃಷ್ಣ ಅವರು ಸಮುದಾಯಕ್ಕೆ ದಶಕಗಳಿಂದ ಆಗುತ್ತಿರುವ ಅನ್ಯಾಯವನ್ನು ಕೊನೆಗಾಣಿಸುವ ಚಳವಳಿಯಲ್ಲಿ ನನ್ನ ನಾಯಕರಾಗಿದ್ದಾರೆ. ನಿಮ್ಮೆಲ್ಲರಿಗೂ ನ್ಯಾಯ ಸಿಗುವವರೆಗೂ ನಾನು ಅವರ ಪರ ಇರುತ್ತೇನೆ’ ಎಂದು ಎಂಆರ್‌ಪಿಎಸ್ ಸಭೆಯನ್ನುದ್ದೇಶಿಸಿ ಮೋದಿ ಹೇಳಿದ್ದರು.

ಮಾದಿಗ ಮೀಸಲಾತಿ ಹೋರಾಟಕ್ಕೆ ಮೋದಿಯವರ ಬೆಂಬಲ ಬಿಜೆಪಿಗೆ ಚುನಾವಣೆಯಲ್ಲಿ ನೆರವಾಗಲಿದೆ. ಪ್ರಸ್ತುತ ಮಾದಿಗ ಸಮುದಾಯದ ಬೆಂಬಲ ಆಡಳಿತಾರೂಢ ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್) ಮತ್ತು ಕಾಂಗ್ರೆಸ್ ನಡುವೆ ಹಂಚಿಹೋಗಿದೆ. ತೆಲಂಗಾಣದಲ್ಲಿ ಮಾದಿಗರು, ಮುದಿರಾಜು ಮತ್ತು ಮುನ್ನಾರ್ ಕಾಪು ಸಮುದಾಯದ ಮೂವರು ಸ್ವಾಮೀಜಿಗಳು ಒಗ್ಗೂಡಿ ಬಿಜೆಪಿಯನ್ನು ಬೆಂಬಲಿಸಿದರೆ ಚುನಾವಣೆಯಲ್ಲಿ ಪಕ್ಷಕ್ಕೆ ದೊಡ್ಡ ಬಲ ಬರಲಿದೆ. ಮುದಿರಾಜು ಮತ್ತು ಮುನ್ನಾರ್ ಕಾಪು ರಾಜ್ಯದ ಪ್ರಬಲ ಇತರ ಹಿಂದುಳಿದ ವರ್ಗ(OBC)ಗಳಾಗಿವೆ. ಅವುಗಳು ಬಿಜೆಪಿಯನ್ನು ಬೆಂಬಲಿಸಿದರೆ ವಿಧಾನಸಭೆ ಚುನಾವಣೆಯ ಅಲ್ಲದಿದ್ದರೂ, 2024 ರ ಲೋಕಸಭಾ ಚುನಾವಣೆಯಲ್ಲಿ ಪಕ್ಷಕ್ಕೆ ಲಾಭವಾಗುವುದು ಖಚಿತ ಎಂಬ ಲೆಕ್ಕಚಾರದಲ್ಲಿ ಬಿಜೆಪಿ ಇದೆ ಎಂದು ಹಿಂದೂ ವರದಿ ಹೇಳಿದೆ.

ತೆಲಂಗಾಣದಲ್ಲಿ ಈ ಬಾರಿ ಪ್ರಮುಖವಾಗಿ ಆಡಳಿತಾರೂಢ ಬಿಆರ್‌ಎಸ್ ಮತ್ತು ಕಾಂಗ್ರೆಸ್ ನಡುವೆ ನೇರ ಹೋರಾಟವಿದೆ. ಈ ನಡುವೆ ಹಿಂದುಳಿದ ವರ್ಗಗಳ ಓಲೈಕೆಗೆ ಮುಂದಾಗಿರುವ ಬಿಜೆಪಿ, ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ ಒಬಿಸಿ ವರ್ಗದ ವ್ಯಕ್ತಿಯನ್ನು ಮುಖ್ಯಮಂತ್ರಿ ಮಾಡುವುದಾಗಿ ಘೋಷಿಸಿದೆ. ರಾಜ್ಯದ 119 ಕ್ಷೇತ್ರಗಳಿಗೆ ನವೆಂಬರ್ 30 ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಡಿಸೆಂಬರ್‌ 3ರಂದು ಫಲಿತಾಂಶ ಪ್ರಕಟಗೊಳ್ಳಲಿದೆ.

ಇದನ್ನೂ ಓದಿ : ಉದಯನಿಧಿ ಸನಾತನ ಧರ್ಮ ಹೇಳಿಕೆ: ತೀರ್ಪು ಕಾಯ್ದಿರಿಸಿದ ಮದ್ರಾಸ್ ಹೈಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 2) ಸಿಬಿಐ ತನಿಖೆಗೆ ಆದೇಶಿಸಿದೆ. ಜೂನ್...

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...