Homeಕರ್ನಾಟಕರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳಲ್ಲೇ ತೇಲಾಡುತ್ತಿದೆ: ರೈತ ಹೋರಾಟಗಾರ ಬಸವರಾಜಪ್ಪ

ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳಲ್ಲೇ ತೇಲಾಡುತ್ತಿದೆ: ರೈತ ಹೋರಾಟಗಾರ ಬಸವರಾಜಪ್ಪ

- Advertisement -
- Advertisement -

ದುಡಿಯುವ ವರ್ಗದ ಜನರು, ರೈತರು ಮತ್ತು ಕಾರ್ಮಿಕರನ್ನು ಬೀದಿಗೆ ತಳ್ಳುವ ಕೆಲಸವನ್ನು ಕೇಂದ್ರ ಸರ್ಕಾರ ಮಾಡುತ್ತಿದೆ. ರಾಜ್ಯ ಕಾಂಗ್ರೆಸ್‌ ಸರ್ಕಾರ ತಾನು ನೀಡಿದ್ದ ಎಲ್ಲಾ ಭರವಸೆಗಳನ್ನು ಮರೆತು, ಕೇವಲ ಗ್ಯಾರಂಟಿ ಯೋಜನೆಗಳಲ್ಲೇ ತೇಲಾಡುತ್ತಿದೆ ಎಂದು ರೈತ ಹೋರಾಟಗಾರ ಬಸವರಾಜಪ್ಪ ಹೇಳಿದರು.

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆಯುತ್ತಿರುವ ‘ದುಡಿಯುವ ಜನರ ಮಹಾಧರಣಿ’ಯಲ್ಲಿ ಮಾತನಾಡಿದ ಅವರು, ” ಮೋದಿ ಸರ್ಕಾರ ಬಡವರ ವಿರೋಧಿ, ಬಂಡವಾಳಶಾಹಿ ಪರವಾದ ನೀತಿಗಳನ್ನು ಜಾರಿಗೆ ತಂದು ಅಸಮಾನತೆಯನ್ನು ಸೃಷ್ಠಿ ಮಾಡಿದೆ. ಅಸಮಾನತೆ ತೊರೆದು ಸಮಾನತೆ, ಸಮತಾವಾದ ಆಶಯದೊಂದಿಗೆ ದೇಶದ ಜನರು ಬದುಕಬೇಕೆಂಬ ಆಶಯ ಸ್ವಾತಂತ್ರ್ಯ ಹೋರಾಟದ್ಧಾಗಿತ್ತು. ಅದರೆ, ಇಂದಿನ ಸರ್ಕಾರ ಸ್ವಾತಂತ್ರ್ಯದ ಆಶಯಕ್ಕೆ ವಿರುದ್ಧವಾಗಿ ನಡೆದುಕೊಳ್ಳುತ್ತಿದೆ” ಎಂದರು.

ವಿದ್ಯುತ್ ಖಾಸಗೀಕರಣ ನೀತಿಯನ್ನು ಜಾರಿಗೆ ತರಲ್ಲವೆಂದು ಲಿಖಿತವಾಗಿ ಭರವಸೆ ನೀಡಿದ್ದ ಕೇಂದ್ರ ಸರ್ಕಾರ, ಈಗ ತನ್ನ ಮಾತನ್ನು ತಪ್ಪುತ್ತಿದೆ. ಕೇಂದ್ರವು ರಾಮ ಮಂದಿರದ ಹೆಸರಿನಲ್ಲಿ ಚುನಾವಣೆ ಎದುರಿಸುತ್ತಿದೆ. 2014ರಲ್ಲಿ ರಾಮ ಮಂದಿರ ಕಟ್ಟುತ್ತೇವೆ ಎಂದಿದ್ದರು. ಈಗ ಅದನ್ನು ಉದ್ಘಾಟನೆ ಮಾಡ್ತೀವಿ, ಉಚಿತವಾಗಿ ಅಯೋಧ್ಯೆಗೆ ಕರೆದುಕೊಂಡು ಹೋಗ್ತಿವಿ ಎಂದು ಹೇಳಿಕೊಳ್ಳುತ್ತಿದೆ. ಮಂದಿರ ಕಟ್ಟುವುದರಿಂದ ರೈತರ, ಬಡವರ ಸಮಸ್ಯೆಗಳ ಪರಿಹಾರ ಆಗುತ್ತವೆ ಎನ್ನುವುದಾದರೆ ಜಿಲ್ಲೆಗೊಂದು, ತಾಲೂಕಿಗೊಂದು ಮಂದಿರ ಕಟ್ಟಬಹುದು. ಆದರೆ, ಮಂದಿರ ಕಟ್ಟುವುದರಿಂದ ಸಂಪತ್ತು ಸೃಷ್ಟಿಯಾಗುವುದಿಲ್ಲ. ದೇಶದ ಜನರ ದುಡಿಮೆಯಿಂದ ಸಂಪತ್ತು ಬರುತ್ತದೆ. ಆ ಸಂಪತ್ತು ಮೋದಿ ಸ್ನೇಹಿತರ ಬಳಿ ಕ್ರೋಢೀಕರಣ ಆಗುತ್ತದೆ” ಎಂದು ಕಿಡಿಕಾರಿದರು.

ರಾಜ್ಯದಲ್ಲಿ ಜನರನ್ನು ಬೀದಿ ಪಾಲು ಮಾಡುವಂತಹ ನೀತಿಗಳನ್ನು ಬಿಜೆಪಿ ಸರ್ಕಾರ ಜಾರಿಗೆ ತಂದಿತ್ತು. ಕಳೆದ ಚುನಾವಣೆಯಲ್ಲಿ ಜನರು ಅವರಿಗೆ ತಕ್ಕ ಪಾಠವನ್ನು ಕಲಿಸಿದ್ದಾರೆ. ವಿಧಾನಸಭಾ ಚುನಾವಣೆಯ ಸಮಯದಲ್ಲಿ ರಾಜಕೀಯ ಪಕ್ಷಗಳ ಮುಂದೆ 35 ಹಕ್ಕೊತ್ತಾಯಗಳನ್ನು ಸಂಯುಕ್ತ ಹೋರಾಟ ಸಮಿತಿ ಮುಂದಿಟ್ಟಿತ್ತು. ಅವುಗಳನ್ನು ತಮ್ಮ ಭರವಸೆಗಳಲ್ಲಿ ಸೇರಿಸಿಕೊಳ್ಳುವವರಿಗೆ ಮತವೆಂದು ಕರೆ ಕೊಟ್ಟಿತ್ತು. ನಮ್ಮ ಹಕ್ಕೊತ್ತಾಯಗಳನ್ನು ಒಪ್ಪಿಕೊಂಡಿದ್ದ ಕಾಂಗ್ರೆಸ್‌ ಅಧಿಕಾರಕ್ಕೆ ಬಂದಿದೆ. ಕಾಂಗ್ರೆಸ್‌ ಸರ್ಕಾರ ಬಂದು ಆರು ತಿಂಗಳಾಗಿವೆ. ಅದರೂ, ರೈತ, ಕಾರ್ಮಿಕ, ದಲಿತ, ಯುವಜನ ವಿರೋಧಿ ನೀತಿಗಳನ್ನು ಹಿಂಪಡೆಯುವಲ್ಲಿ, ಜನಪರ ನೀತಿಗಳನ್ನು ಜಾರಿಗೆ ತರುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ಕೇವಲ ಗ್ಯಾರಂಟಿ ಯೋಜನೆಗಳಲ್ಲೇ ತೇಲಾಡುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಬರ ಉಂಟಾಗಿದೆ. ಇನ್ನೂ ಬರ ಪರಿಹಾರ ನೀಡಿಲ್ಲ. ಒಂದು ಹೆಕ್ಟೇರ್‌ಗೆ ಕನಿಷ್ಠ 40,000 ರೂ. ಪರಿಹಾರ ನೀಡಬೇಕು. ರೈತರು, ಕಾರ್ಮಿಕರು ಗುಳೆ ಹೋಗುವುದನ್ನು ತಪ್ಪಿಸಿ, ಆಯಾ ಗ್ರಾಮಗಳಲ್ಲಿ ಉದ್ಯೋಗ ನೀಡುವ ಕೆಲಸವನ್ನು ಸರ್ಕಾರ ಮಾಡಬೇಕು. ಜಾತಿ ಪ್ರಮಾಣ ಪತ್ರ, ಪಹಣಿ, ಆದಾಯ ದೃಢೀಕರಣ ಪತ್ರ ಪಡೆಯಲು ಶುಲ್ಕವನ್ನು ಹೆಚ್ಚಿಸಲಾಗಿದೆ. ಅದನ್ನು ಕಡಿಮೆ ಮಾಡಬೇಕು ಎಂದು ಆಗ್ರಹಿಸಿದರು.

ರಾಮಮಂದಿರ ತೆರೆದ ತಕ್ಷಣ ಮತ್ತೆ ಅಧಿಕಾರಕ್ಕೆ ಬರ್ತೀವಿ ಅಂತ ಬಿಜೆಪಿ ಭಾವಿಸಿದೆ. ಅದರೆ, ಅವರು ಜನರನ್ನು ಕಡೆಗಣಿಸಿದರೆ ಅವರಿಗೆ ರಾಜ್ಯದಲ್ಲಾದ ಪರಿಸ್ಥಿತಿಯೇ ಎದುರಾಗುತ್ತದ ಎಂದು ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಇದನ್ನೂ ಓದಿ : 2024ರಲ್ಲಿ ಬಿಜೆಪಿ ಗೆದ್ದರೆ ಭಾರತ ಸೋಲುತ್ತದೆ: ಬಡಗಲಪುರ ನಾಗೇಂದ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ| ಸಾಮೂಹಿಕ ಮತಾಂತರ ಆರೋಪ; ಕ್ರಿಶ್ಚಿಯನ್ನರ ವಾರಾಂತ್ಯದ ಪ್ರಾರ್ಥನೆಗೆ ಅಡ್ಡಿಪಡಿಸಿದ ಹಿಂದುತ್ವ ಗುಂಪು

ದೆಹಲಿಯ ಜನಕಪುರಿಯಲ್ಲಿರುವ ಹಯಾತ್ ಸೆಂಟ್ರಿಕ್ ಹೋಟೆಲ್‌ನಲ್ಲಿ ನಡೆಯುತ್ತಿದ್ದ (ಸೆಪ್ಟೆಂಬರ್ 20 ರಂದು) ಕ್ರಿಶ್ಚಿಯನ್ನರ ಭಾನುವಾರದ ವಾಡಿಕೆಯ ಪ್ರಾರ್ಥನಾ ಸಭೆಗೆ ನುಗ್ಗಿದ ಹಿಂದುತ್ವ ಗುಂಪು ಪ್ರಾರ್ಥನೆಗೆ ಅಡ್ಡಪಿಡಿಸಿದೆ. ಹಿಂದೂಗಳ ಸಾಮೂಹಿಕ ಮತಾಂತರ ನಡೆಯುತ್ತಿದೆ...

ಕಸ್ತೂರಿ ರಂಗನ್ ವರದಿ ತಿರಸ್ಕಾರ, ಮಲೆನಾಡಿನ ಜನರ ಬದುಕಿಗೆ ಶಾಶ್ವತ ಪರಿಹಾರ : ಡಾ. ಜಿ. ಪರಮೇಶ್ವರ್

ಪಶ್ಚಿಮ ಘಟ್ಟದ ಜೀವ ವೈವಿಧ್ಯ ಮತ್ತು ಪರಿಸರ ಸಂರಕ್ಷಣೆಯ ಹೆಸರಿನಲ್ಲಿ ಕೇಂದ್ರ ಸರ್ಕಾರವು ಕಸ್ತೂರಿ ರಂಗನ್ ವರದಿಯ ಕರಡು ಅಧಿಸೂಚನೆಗಳನ್ನು ಪದೇ ಪದೇ ಹೊರಡಿಸುತ್ತಿರುವುದು ಮಲೆನಾಡಿನ ಜನರ ನೆಮ್ಮದಿ ಕೆಡಿಸಿದೆ. ರಾಜ್ಯ ಸರ್ಕಾರವು...

‘ಇದು ಸಂಸ್ಕೃತಿಯಲ್ಲ, ಪಿತೃಪ್ರಭುತ್ವ’: ಜಮುಯಿ ಅಪ್ರಾಪ್ತ ಬಾಲಕಿ ಮೇಲಿನ ಕಿರುಕುಳದ ವಿಡಿಯೋಗೆ ರಾಹುಲ್ ಗಾಂಧಿ ಆಕ್ರೋಶ 

ಪಾಟ್ನಾ: ಬಿಹಾರದ ಜಮುಯಿ ಜಿಲ್ಲೆಯಲ್ಲಿ 10ನೇ ತರಗತಿಯ ಅಪ್ರಾಪ್ತ ಬಾಲಕ ಮತ್ತು ಬಾಲಕಿಯನ್ನು ರಸ್ತೆಯಲ್ಲಿ ತಡೆದು ಪುರುಷರ ಗುಂಪೊಂದು ಕಿರುಕುಳ ನೀಡಿದೆ ಎಂದು ಆರೋಪಿಸಲಾದ ವೈರಲ್ ವಿಡಿಯೋ ಭಾರಿ ಆಕ್ರೋಶಕ್ಕೆ ಕಾರಣವಾಗಿದೆ. ಈ...

ನಕಲಿ ಔಷಧಗಳ ವಿತರಣೆ ಜಾಲದೊಂದಿಗೆ ನಂಟು; 16 ಫಾರ್ಮಸಿಗಳ ಪರವಾನಗಿ ರದ್ದು

ಬಿಡದಿಯ ಫಾರ್ಮ್‌ಹೌಸ್ (ತೋಟದ ಮನೆ) ಒಂದರಲ್ಲಿ ಪತ್ತೆಯಾದ ನಕಲಿ ಔಷಧಗಳ ವಿತರಣೆಯ ಜಾಲದೊಂದಿಗೆ ನಂಟು ಹೊಂದಿರುವ ಆರೋಪದ ಮೇಲೆ ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ (ಎಫ್‌ಡಿಎ) ಸಂಸ್ಥೆಯು 16 ಫಾರ್ಮಸಿಗಳ...

ಚಾಮರಾಜನಗರ: ಬಂಡಿ ಪೂಜೆ ಹಬ್ಬದಲ್ಲಿ ದಲಿತ ಮಕ್ಕಳಿಗೆ ಅಸ್ಪೃಶ್ಯತೆ ಆಚರಣೆ – ಊಟ ನೀಡದೆ ಅಪಮಾನಿಸಿದ ಆರೋಪ

ಸಮಾಜದಲ್ಲಿ ಜಾತಿಪದ್ದತಿ ಇಂದಿಗೂ ಜೀವಂತವಾಗಿದೆಯೇ ಎಂದು ಪ್ರಶ್ನಿಸುವವರಿಗೇನು ಕಡಿಮೆ ಇಲ್ಲ.ಆದರೆ ಜಾತಿ ಕಾರಣಕ್ಕೆ ಪುಟಾಣಿ ಮಕ್ಕಳಿಗೆ ಊಟವನ್ನು ನಿರಾಕರಿಸಿ ಅಸ್ಪೃಶ್ಯತೆ ಆಚರಣೆ ಮಾಡಿರುವುದು ನಾಗರಿಕ ಸಮಾಜ ನಿಜಕ್ಕೂ ತಲೆತಗ್ಗಿಸುವಂತೆ ಮಾಡಿದೆ. ಹೌದು ಚಾಮರಾಜನಗರ ಜಿಲ್ಲೆಯ...

ಥಾಣೆ ಗಣೇಶೋತ್ಸವ 2026: ತಿಟ್ವಾಲಾದಲ್ಲಿ ಗಣಪತಿ ವಿಸರ್ಜನೆ ವೇಳೆ 2 ಗುಂಪುಗಳ ಘರ್ಷಣೆ, ಬಿಜೆಪಿ ಮಾಜಿ ಉಪಮೇಯರ್ ಸೇರಿ 70-80 ಜನರ ವಿರುದ್ಧ ಪ್ರಕರಣ

ಮಹಾರಾಷ್ಟ್ರದ ಥಾಣೆ ಜಿಲ್ಲೆಯ ತಿಟ್ವಾಲಾದಲ್ಲಿ ಗಣಪತಿ ವಿಸರ್ಜನೆ ಮೆರವಣಿಗೆ ವೇಳೆ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದೆ. ಈ ಘಟನೆಗೆ ಸಂಬಂಧಿಸಿದಂತೆ ಬಿಜೆಪಿಯ ಮಾಜಿ ಉಪಮೇಯರ್ ಹಾಗೂ ಹಾಲಿ ಕಾರ್ಪೊರೇಟರ್ ಉಪೇಕ್ಷಾ ಭೋಯಿರ್...

ಬಿಜೆಪಿ ಆಡಳಿತದಲ್ಲಿ 151 ಅಂಬೇಡ್ಕರ್ ಪ್ರತಿಮೆಗಳ ಧ್ವಂಸ: ಅಖಿಲೇಶ್ ಯಾದವ್ ಆರೋಪ

ಉತ್ತರ ಪ್ರದೇಶದಲ್ಲಿ ಬಿಜೆಪಿ ಆಡಳಿತದ ಅವಧಿಯಲ್ಲಿ 72 ಜಿಲ್ಲೆಗಳಲ್ಲಿ ಬಾಬಾಸಾಹೇಬ್ ಬಿ.ಆರ್. ಅಂಬೇಡ್ಕರ್ ಅವರ 151 ಪ್ರತಿಮೆಗಳನ್ನು ಧ್ವಂಸಗೊಳಿಸಲಾಗಿದೆ. ಆದರೆ ಈವರೆಗೆ ಕೇವಲ 14 ಮಂದಿಯನ್ನು ಮಾತ್ರ ಬಂಧಿಸಲಾಗಿದೆ ಎಂದು ಸಮಾಜವಾದಿ ಪಕ್ಷದ...

ಜಾತಿ ತಾರತಮ್ಯ ಹಿಂದೂ ಸಮಾಜಕ್ಕಂಟಿದ ‘ಕಳಂಕ’: ಆರ್‌ಎಸ್‌ಎಸ್ ಮುಖಂಡ ದತ್ತಾತ್ರೇಯ ಹೊಸಬಾಳೆ

"ಜಾತಿ ಆಧಾರಿತ ತಾರತಮ್ಯವು ಹಿಂದೂ ಸಮಾಜಕ್ಕಂಟಿದ ಕಳಂಕ, ಕೇವಲ ಕಾನೂನುಗಳಿಂದ ಜಾತೀಯತೆ ಮತ್ತು ಅಸ್ಪೃಶ್ಯತೆಯನ್ನು ಕೊನೆಗೊಳಿಸಲು ಸಾಧ್ಯವಿಲ್ಲ, ಇದಕ್ಕೆ ಪ್ರತಿಯೊಬ್ಬ ವ್ಯಕ್ತಿಯ ನಡವಳಿಕೆಯಲ್ಲಿ ಬದಲಾವಣೆಯಾಗುವ ಅಗತ್ಯವಿದೆ" ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌)...

ಎಸ್‌ಐಆರ್‌ನ ಮೂರು ಹಂತಗಳಲ್ಲಿ 13.98 ಕೋಟಿ ಮತದಾರರು ಹೊರಕ್ಕೆ; 5.43 ಕೋಟಿ ಮತದಾರರಿಗೆ ಅಳಿಸುವಿಕೆಯ ಭೀತಿ: ಕಾಂಗ್ರೆಸ್ 

ನವದೆಹಲಿ: ಭಾರತೀಯ ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ದೇಶದ ಕೋಟ್ಯಂತರ ಮತದಾರರ ಹಕ್ಕಿನ ಮೇಲೆ ಪರಿಣಾಮ ಬೀರುತ್ತಿದೆ ಎಂದು ಕಾಂಗ್ರೆಸ್ ಗಂಭೀರ ಆರೋಪ ಮಾಡಿದೆ. SIRನ...

ಧರ್ಮಸ್ಥಳ ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ : ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶ

ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯಳ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗೆ ಸುಪ್ರೀಂ ಕೋರ್ಟ್ ಸೋಮವಾರ (ಸೆ.21) ಆದೇಶಿಸಿದೆ. ಈ ಪ್ರಕರಣದಲ್ಲಿ ಕೈಗೊಂಡಿರುವ ಕ್ರಮಗಳ ಕುರಿತು ಮೂರು ತಿಂಗಳೊಳಗೆ ಅನುಪಾಲನಾ ವರದಿಯನ್ನು (compliance report)...