Homeಮುಖಪುಟಕೊಚ್ಚಿ; ವಿವಿ ಕ್ಯಾಂಪಸ್‌ನಲ್ಲಿ ಕಾಲ್ತುಳಿತ ಸಂಭವಿಸಿದ್ದೇಗೆ? ಪ್ರತ್ಯಕ್ಷದರ್ಶಿಗಳಿಂದ ದುರಂತದ ವಿವರಣೆ..

ಕೊಚ್ಚಿ; ವಿವಿ ಕ್ಯಾಂಪಸ್‌ನಲ್ಲಿ ಕಾಲ್ತುಳಿತ ಸಂಭವಿಸಿದ್ದೇಗೆ? ಪ್ರತ್ಯಕ್ಷದರ್ಶಿಗಳಿಂದ ದುರಂತದ ವಿವರಣೆ..

- Advertisement -
- Advertisement -

ಕೊಚ್ಚಿಯ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯದ (CUSAT) ಸ್ಕೂಲ್ ಆಫ್ ಇಂಜಿನಿಯರಿಂಗ್‌ನ ಟೆಕ್‌ಫೆಸ್ಟ್‌ನಲ್ಲಿ ಕಾಲ್ತುಳಿತ ಸಂಭವಿಸಿ ನಾಲ್ವರು ಸಾವನ್ನಪ್ಪಿ 60ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು.  ಸ್ಕೂಲ್ ಆಫ್ ಇಂಜಿನಿಯರಿಂಗ್‌ ವಿದ್ಯಾರ್ಥಿಗಳು ಮತ್ತು ಅಧ್ಯಾಪಕರು ಆಯೋಜಿಸಿದ್ದ ಟೆಕ್ ಫೆಸ್ಟ್ ಈ ದುರಂತ ಸಾವಿಗೆ ಕಾರಣವಾಗಿತ್ತು.

ಕಾಲ್ತುಳಿತದಲ್ಲಿ ಅತುಲ್ ತಂಬಿ, ಆನ್ ರುಫ್ತಾ, ಸಾರಾ ಥಾಮಸ್ ಮತ್ತು ಅಲ್ವಿನ್ ಜೋಸೆಫ್ ಪ್ರಾಣವನ್ನು ಕಳೆದುಕೊಂಡಿದ್ದರು. ಅಲ್ವಿನ್ ಹೊರತುಪಡಿಸಿ ಉಳಿದ ಮೂವರು CUSAT ನಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿಗಳಾಗಿದ್ದರು.

ಕೊಚ್ಚಿಯ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯದಲ್ಲಿ ಧಿಷ್ನಾ ಎಂಬ ವಾರ್ಷಿಕ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್‌ ವಿದ್ಯಾರ್ಥಿಗಳ ವಸ್ತು ಪ್ರದರ್ಶನಗಳು ಇರುತ್ತದೆ. ಇದಕ್ಕೆ ಪ್ರವೇಶಿಸಲು ಸಾರ್ವಜನಿಕರಿಗೆ ಮುಕ್ತ ಅವಕಾಶವನ್ನು ನೀಡಲಾಗಿತ್ತು. ಉತ್ಸವದ ಪ್ರತಿ ದಿನದ ಕೊನೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮವನ್ನೂ ಏರ್ಪಡಿಸಲಾಗುತ್ತಿತ್ತು. 2020ರಲ್ಲಿ ಧಿಷ್ಣಾದ ಕೊನೆಯ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕೋವಿಡ್‌ ಬಳಿಕ ಮೊದಲ ಬಾರಿಗೆ ಈ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಸ್ಕೂಲ್ ಆಫ್ ಇಂಜಿನಿಯರಿಂಗ್‌ ಪ್ರಾಂಶುಪಾಲ ಡಾ. ದಿಲೀಪ್‌ಕುಮಾರ್ ಹೇಳಿದ್ದಾರೆ.

ಈವೆಂಟ್‌ನ್ನು ವಿವಿಧ ವಿಭಾಗಗಳ ವಿದ್ಯಾರ್ಥಿಗಳನ್ನು ಒಳಗೊಂಡಿರುವ ಕೋರ್ ಕಮಿಟಿ ಆಯೋಜಿಸುತ್ತದೆ ಮತ್ತು ಸಾಮಾನ್ಯವಾಗಿ ಇಬ್ಬರು ಅಧ್ಯಾಪಕರು ಸಂಯೋಜಕರಾಗಿರುತ್ತಾರೆ. ಶನಿವಾರದ ದಿನ ಬಾಲಿವುಡ್ ಗಾಯಕಿ ನಿಖಿತಾ ಗಾಂಧಿಯವರ ಸಂಗೀತ ಕಚೇರಿಗಾಗಿ ವಿಶ್ವವಿದ್ಯಾಲಯದ ಮುಖ್ಯ ಸಭಾಂಗಣದಲ್ಲಿ ವಿದ್ಯಾರ್ಥಿಗಳು ಒಟ್ಟುಗೂಡಿದ್ದರು.

ವಿಶ್ವವಿದ್ಯಾನಿಲಯದ ಮುಖ್ಯ ದ್ವಾರದಲ್ಲೇ ಸಭಾಂಗಣವು ಇತ್ತು. ಥಿಯೇಟರ್‌ನಂತೆ ಸಭಾಂಗಣವನ್ನು ರಚನೆ ಮಾಡಲಾಗಿದೆ. ಇದರಲ್ಲಿ ಪ್ರವೇಶ ಮತ್ತು ನಿರ್ಗಮನ ಎರಡಕ್ಕೂ ಹಿಂಭಾಗದಲ್ಲಿ ಒಂದೇ ಗೇಟ್ ವ್ಯವಸ್ಥೆ ಮಾಡಲಾಗಿತ್ತು. ಇದಲ್ಲದೆ ಸಂಘಟಕರು ಥಿಯೇಟರ್‌ನೊಳಗೆ ಬ್ಯಾರಿಕೇಡ್‌ಗಳನ್ನು ಹಾಕಿದರು, ವಿದ್ಯಾರ್ಥಿಗಳು ಮತ್ತು ಇತರ ಭಾಗವಹಿಸುವವರಿಗೆ ಕುಳಿತುಕೊಳ್ಳಲು ಸ್ಥಳಗಳನ್ನು ಗೊತ್ತುಪಡಿಸಿದ್ದರು.

ಸಂಜೆ 7 ಗಂಟೆಗೆ ಕಾರ್ಯಕ್ರಮ ಪ್ರಾರಂಭವಾಗುವ ಮೊದಲು, ಎಸ್‌ಒಇ ವಿದ್ಯಾರ್ಥಿಗಳಿಗೆ ಮೊದಲು ಸಭಾಂಗಣಕ್ಕೆ ಪ್ರವೇಶಿಸಲು ಅನುಮತಿಸಲಾಗಿದೆ. ಅವರ ಪ್ರವೇಶವನ್ನು ಸ್ವಯಂಸೇವಕರಾಗಿದ್ದ ವಿದ್ಯಾರ್ಥಿಗಳು ನಿಯಂತ್ರಿಸಿದರು. ಇದರ ನಂತರ ವಿಶ್ವವಿದ್ಯಾನಿಲಯದ ಇತರ ಶಾಲೆಗಳು ಮತ್ತು ಇತರ ಕಾಲೇಜುಗಳ ವಿದ್ಯಾರ್ಥಿಗಳನ್ನು ಒಳಗೆ ಬಿಡಲಾಯಿತು. ಪ್ರೇಕ್ಷಕರ ಪ್ರವೇಶವನ್ನು ನಿಯಂತ್ರಿಸಲು ಸಂಘಟಕರು ಒಬ್ಬರು ಅಥವಾ ಇಬ್ಬರು ವ್ಯಕ್ತಿಗಳು ಪ್ರವೇಶಿಸುವಷ್ಟು ಗೇಟ್‌ನ್ನು ತೆರೆದಿದ್ದರು. ಕಾರ್ಯಕ್ರಮಕ್ಕೆ ನಿಗದಿತ ಸಮಯ ಸಮೀಪಿಸುತ್ತಿದ್ದಂತೆ ಹೆಚ್ಚಿನ ಜನರು ಬರಲು ಪ್ರಾರಂಭಿಸಿದರು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.

ಹಠಾತ್ ಮಳೆಯಿಂದಾಗಿ ವಿದ್ಯಾರ್ಥಿಗಳು ಆಶ್ರಯ ಪಡೆಯಲು ಸಭಾಂಗಣಕ್ಕೆ ತೆರಳಿದ್ದರು. ಈ ವೇಳೆ ನೂಕು ನುಗ್ಗಲು ನಡೆದಿದೆ ಎಂದು ಆರಂಭಿಕ ವರದಿಗಳು ಹೇಳಿದರೆ, ಈವೆಂಟ್‌ಗೆ ಸ್ವಲ್ಪ ಮೊದಲು ಜನರು ಧಾವಿಸಿ ಗೇಟ್‌ನಲ್ಲಿ ಕಿಕ್ಕಿರಿದು ನೂಕುನುಗ್ಗಲಿಗೆ ಕಾರಣವಾಗಿದೆ ಎಂಬುವುದು ಈಗ ಸ್ಪಷ್ಟವಾಗಿ ತೋರುತ್ತದೆ. ಅಲ್ಲಿ ತುಂತುರು ಮಳೆಯಾಗಿದ್ದು ಮಳೆಯಿಂದ ರಕ್ಷಣೆ ಪಡೆಯಲು ಜನರು ಧಾವಿಸಿರುವುದು ದುರಂತಕ್ಕೆ ಕಾರಣವಾಗಿರಲು ಸಾಧ್ಯವಿಲ್ಲ ಎಂದು ಪ್ರತ್ಯಕ್ಷದರ್ಶಿಗಳು ಹೇಳುತ್ತಿದ್ದಾರೆ.

ಸಭಾಂಗಣವು ಕೆಳಮಟ್ಟದಲ್ಲಿದ್ದು, ಗೇಟ್‌ನಿಂದ ಕೆಳಗಿಳಿಯುವಾಗ ಮೆಟ್ಟಿಲುಗಳನ್ನು ಹೊಂದಿದೆ. ಮೆಟ್ಟಿಲುಗಳ ಮೇಲ್ಭಾಗದಲ್ಲಿ ಪ್ರವೇಶಿಸಲು ಪ್ರಯತ್ನಿಸುತ್ತಿರುವ ಜನರು ಕೆಳಭಾಗದಲ್ಲಿದ್ದವರನ್ನು ಕೆಳಗೆ ತಳ್ಳಿದ್ದಾರೆ. ಈ ವೇಳೆ  ಹಲವರು ಕೆಳಗೆ ಬಿದ್ದಿದ್ದಾರೆ. ಪ್ರವೇಶ ದ್ವಾರದ ಇಕ್ಕೆಲಗಳಲ್ಲಿ ಬ್ಯಾರಿಕೇಡ್ ಹಾಕಿದ್ದರಿಂದ ಜನರು ಬದಿಗೆ ತೆರಳಲು ಸಾಧ್ಯವಾಗಿರಲಿಲ್ಲ. ಆ ಹೊತ್ತಿಗೆ ಗೇಟ್‌ನಿಂದ ಕೆಳಗಿಳಿಯುವ ಮೆಟ್ಟಿಲುಗಳು ತುಂಬಿದ್ದವು. ಕೆಲವು ಜನರು ಉಸಿರುಗಟ್ಟಿ ಪ್ರಜ್ಞೆ ಕಳೆದುಕೊಂಡಿದ್ದರು. ಮೆಟ್ಟಿಲುಗಳ ಕೆಳಭಾಗದಲ್ಲಿ ಕೆಳಗೆ ಬಿದ್ದವರ ಮೇಲೆ  ಹಲವರು ಎಡವಿ ಬಿದ್ದಿದ್ದಾರೆ. ಸ್ವಯಂಸೇವಕರು ಗೇಟ್‌ನಲ್ಲಿ ಗುಂಪನ್ನು ಚದುರಿಸಲು ಮತ್ತು ಬಿದ್ದವರಿಗೆ ಸಹಾಯ ಮಾಡಲು ಈ ವೇಳೆ ಪ್ರಯತ್ನಿಸಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.

ಏನಾಗುತ್ತಿದೆ ಎಂಬುದನ್ನು ಅರ್ಥಮಾಡಿಕೊಳ್ಳುವುದಕ್ಕೆ ನಮಗೆ ಸಾಧ್ಯವಾಗಿಲ್ಲ. ಕಾಲ್ತುಳಿತ ಸಂಭವಿಸಿದಾಗ ಪ್ರವೇಶ ದ್ವಾರದಲ್ಲಿದ್ದ ಮಹಿಳಾ ವಿದ್ಯಾರ್ಥಿಗಳ ಗುಂಪು ಸಿಲುಕಿತ್ತು. ನಮ್ಮೆಲ್ಲರನ್ನು ಒಮ್ಮೆ ಮುಂದಕ್ಕೆ ನಂತರ ಹಿಂದಕ್ಕೆ ತಳ್ಳಲಾಯಿತು. ಜನಸಂದಣಿಯೊಂದಿಗೆ ಮುಂದುವರಿಯುವುದು ಬಿಟ್ಟು ನಾವು ಏನೂ ಮಾಡಲಾಗಲಿಲ್ಲ. ತಳ್ಳಾಟದ ವೇಳೆ ಜನರು ಬಿದ್ದಿದ್ದಾರೆ ಎಂದು ಹೆಸರು ಹೇಳಲು ಇಚ್ಛಿಸದ ವಿದ್ಯಾರ್ಥಿಯೊಬ್ಬರು ಹೇಳಿದ್ದಾರೆ.

ನಾವು ಸಾಧ್ಯವಾದಷ್ಟು ಬೇಗ ಸಭಾಂಗಣದಿಂದ ನಿರ್ಗಮಿಸಿದೆವು. ಆದರೆ ದುರಂತದ ಪ್ರಮಾಣದ ಬಗ್ಗೆ ನಮಗೆ ತಿಳಿದಿರಲಿಲ್ಲ. ನಾವು ಆಂಬ್ಯುಲೆನ್ಸ್ ಹೊರಡುವುದನ್ನು ನೋಡಿದ್ದೇವೆ ಮತ್ತು ಯಾವುದೋ ಕಾರಣದಿಂದ ಯಾರಿಗಾದರೂ ಸಣ್ಣ ಗಾಯವಾಗಿದೆ ಎಂದು ಭಾವಿಸಿದ್ದೇವೆ. ಇನ್ನೂ ಅನೇಕ ಆಂಬ್ಯುಲೆನ್ಸ್‌ಗಳು ಮತ್ತು ಖಾಸಗಿ ವಾಹನಗಳು ಕ್ಯಾಂಪಸ್‌ಗೆ ಬಂದವು. ಈ ವೇಳೆ ಅಸಲಿ ವಿಚಾರ ನಮ್ಮಗಮನಕ್ಕೆ ಬಂದಿದೆ ಎಂದು ವಿದ್ಯಾರ್ಥಿಯೋರ್ವರು ಹೇಳಿದ್ದಾರೆ.

ಮೃತ ಅತುಲ್ ಥಂಪಿಯ ಸಹಪಾಠಿಗಳಾದ ಅಭಿರಾಮ್ ಕೆಆರ್ ಮತ್ತು ಅರುಣ್ ಪಿಎ ಮಾತನಾಡಿದ್ದು, ಅತುಲ್ ಥಂಪಿಯ ಸಾವು ಮತ್ತು ಗಾಯಗಳಿಗೆ ಒಳಗಾದ ಇತರ ಸ್ನೇಹಿತರ ನೋವನ್ನು ಅರಗಿಸಿಕೊಳ್ಳುವುದು ಕಷ್ಟಕರವಾಗಿದೆ. ಆಡಿಟೋರಿಯಂ ಪ್ರವೇಶಿಸುವಾಗ ಅತುಲ್ ನಮ್ಮ ಹಿಂದೆಯೇ ಇದ್ದರು. ಆಸ್ಪತ್ರೆಗೆ ಕರೆದೊಯ್ದವರು ಕರೆಗಳನ್ನು ಮಾಡಿದ ನಂತರವೇ ದುರಂತದ ಬಗ್ಗೆ ನಮಗೆ ತಿಳಿದಿದೆ. ನಾವು ಈ ವೇಳೆ ಸಭಾಂಗಣದಲ್ಲಿದ್ದೆವು. ಆದರೆ ಪ್ರವೇಶದ್ವಾರದಲ್ಲಿ ಇದು ಸಂಭವಿಸಿದೆ ಎಂದು ನಮಗೆ ತಿಳಿದಿರಲಿಲ್ಲ ಎಂದು ಹೇಳಿದ್ದಾರೆ.

ಇದನ್ನು ಓದಿ: ಕೊಚ್ಚಿ: ‘ಟೆಕ್‌ ಫೆಸ್ಟ್‌’ನಲ್ಲಿ ಕಾಲ್ತುಳಿತ; ನಾಲ್ವರು ವಿದ್ಯಾರ್ಥಿಗಳು ಸಾವು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...