HomeUncategorizedಬನಶಂಕರಿ: ಬೀದಿ ವ್ಯಾಪಾರಿಗಳ ಎತ್ತಂಗಡಿಗೆ ಮುಂದಾದ ಬಿಬಿಎಂಪಿ; ತೀವ್ರ ವಿರೋಧ

ಬನಶಂಕರಿ: ಬೀದಿ ವ್ಯಾಪಾರಿಗಳ ಎತ್ತಂಗಡಿಗೆ ಮುಂದಾದ ಬಿಬಿಎಂಪಿ; ತೀವ್ರ ವಿರೋಧ

- Advertisement -
- Advertisement -

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಅಧಿಕಾರಿಗಳು, ಪೊಲೀಸರು ಮತ್ತು ಬೀದಿ ಬದಿ ವ್ಯಾಪಾರಿಗಳ ನಡುವೆ ಮತ್ತೊಮ್ಮೆ ಜಟಾಪಟಿ ಶುರುವಾಗಿದೆ.

ನಗರದ ಬೀದಿ ಬದಿಗಳಲ್ಲಿ ಹಣ್ಣು, ಹೂವು, ತರಕಾರಿ ಸೇರಿದಂತೆ ಸಣ್ಣಪುಟ್ಟ ವ್ಯಾಪಾರ ಮಾಡುತ್ತಿರುವ ವ್ಯಾಪಾರಿಗಳನ್ನು ತೆರವುಗೊಳಿಸಲು ಮತ್ತೊಮ್ಮೆ ಪಾಲಿಕೆ ಅಧಿಕಾರಿಗಳು ಮುಂದಾಗಿದ್ದಾರೆ. ಇದಕ್ಕೆ ವ್ಯಾಪಾರಿಗಳಿಂದ ತೀವ್ರ ವಿರೋಧ ವ್ಯಕ್ತವಾಗಿದೆ.

ಇಂದು (ನ.29) ನಗರದ ಬನಶಂಕರಿ ಮತ್ತು ಸಾರಕ್ಕಿ ಮಾರುಕಟ್ಟೆಯ ಬೀದಿ ಬದಿಗಳಲ್ಲಿ ವ್ಯಾಪಾರ ಮಾಡುತ್ತಿರುವ ವ್ಯಾಪಾರಿಗಳನ್ನು ಸ್ಥಳ ಬಿಟ್ಟು ತೆರಳುವಂತೆ ಬಿಬಿಎಂಪಿ ಅಧಿಕಾರಿಗಳು ಸೂಚಿಸಿದ್ದಾರೆ. ಈ ವೇಳೆ ವ್ಯಾಪಾರಿಗಳು ತಮಗೆ ಬೀದಿ ಬದಿ ವ್ಯಾಪಾರ ಮಾಡಲು ಸ್ವತಃ ಬಿಬಿಎಂಪಿಯೇ ನೀಡಿರುವ ಅನುಮತಿ ಪತ್ರ, ಗುರುತಿನ ಚೀಟಿಗಳನ್ನು ತೋರಿಸಿದ್ದಾರೆ. ಇದರಿಂದ ತೆರವು ಕಾರ್ಯಕ್ಕೆ ಆಗಮಿಸಿದ್ದ ಅಧಿಕಾರಿಗಳು ವಾಪಸ್‌ ತೆರಳಿದ್ದಾರೆ.

ಈ ಕುರಿತು ನಾನು ಗೌರಿ ಜೊತೆ ಮಾತನಾಡಿರುವ ವಕೀಲ ವಿನಯ್, “ನಮ್ಮ ದೇಶದಲ್ಲಿ 2014ರಿಂದ ‘ಬೀದಿ ವ್ಯಾಪಾರಿಗಳ ಜೀವನೋಪಾಯ ರಕ್ಷಣೆ ಹಾಗೂ ನಿಯಂತ್ರಣ ಕಾಯ್ದೆ’ ಜಾರಿಯಲ್ಲಿದೆ. ಬನಶಂಕರಿ ಮತ್ತು ಸಾರಕ್ಕಿ ಮಾರುಕಟ್ಟೆಗಳ ಎಲ್ಲಾ ಬೀದಿ ಬದಿ ವ್ಯಾಪಾರಿಗಳಲ್ಲಿ ಗುರುತಿನ ಚೀಟಿಯಿದೆ. 2017ರಲ್ಲಿ ಬಿಬಿಎಂಪಿ ಸಮೀಕ್ಷೇ ಮಾಡಿ ಗುರುತಿನ ಚೀಟಿ ಕೊಟ್ಟಿದೆ. ಯಾರೂ ಅಕ್ರಮ ಚಟುಚಟಿಕೆ ಮಾಡುತ್ತಿಲ್ಲ. ಬೀದಿಯಲ್ಲಿ ವ್ಯಾಪಾರ ಮಾಡುವುದು ನಮ್ಮ ಹಕ್ಕು. ಅಧಿಕಾರಿಗಳಿಗೆ ವ್ಯಾಪಾರಿಗಳನ್ನು ತೆರವುಗೊಳಿಸಲು ಯಾವುದೇ ಆದೇಶವಿರಲಿಲ್ಲ ಮತ್ತು ಅವರು ವ್ಯಾಪಾರಿಗಳಿಗೆ ಯಾವುದೇ ನೋಟಿಸ್ ಕೂಡ ನೀಡಿರಲಿಲ್ಲ” ಎಂದು ಹೇಳಿದ್ದಾರೆ.

“2017 ಬಿಬಿಎಂಪಿ ಸಮೀಕ್ಷೆ ಬಳಿಕ ಪಟ್ಟಣ ವ್ಯಾಪಾರ ಸಮಿತಿ ರಚನೆಯಾಗಿದೆ. ಈ ಸಮಿತಿ ಅಧೀನಲ್ಲಿ ಮತ್ತೊಮ್ಮೆ ಸಮೀಕ್ಷೆ ಅಗಬೇಕು. ಅದು ಆಗುವವರೆಗೆ ಯಾರನ್ನೂ ತೆರವುಗೊಳಿಸುವಂತಿಲ್ಲ. ನಾವು ಅನುಮತಿ ಪತ್ರ, ಗುರುತಿನ ಚೀಟಿ ತೋರಿಸಿದಾಗ ಅಧಿಕಾರಿಗಳು ವಾಪಸ್ ಹೋಗಿದ್ದಾರೆ. ಬೀದಿ ಬದಿ ವ್ಯಾಪಾರಿಗಳಿಗೆ ಅಧಿಕಾರಿಗಳು ಪದೇ ಪದೇ ಕಿರುಕುಳ ಕೊಡಬಾರದು. ಬೀದಿ ವ್ಯಾಪಾರಿಗಳ ಕಾಯ್ದೆಯ ಸೆಕ್ಷನ್ 27ರಲ್ಲಿ ವ್ಯಾಪಾರಿಗಳಿಗೆ ಕಿರುಕುಳ ಆಗಬಾರದು ಎಂಬುವುದು ಸ್ಪಷ್ಟವಾಗಿದೆ. ಈ ಬಗ್ಗೆ ಹೆಚ್ಚಿನ ಅಧಿಕಾರಿಗಳಿಗೆ ಮಾಹಿತಿ ಇಲ್ಲ. ಕಾಯ್ದೆ ಪ್ರಕಾರ ಅಧಿಕಾರಿಗಳಿಗೂ ತರಬೇತಿ ನೀಡಬೇಕು. ಬೆಂಗಳೂರು ದಕ್ಷಿಣ ವಿಭಾಗದಲ್ಲಿ ಬೀದಿ ವ್ಯಾಪಾರಿಗಳಿಗೆ ಮಾತ್ರ ತರಬೇತಿ ನೀಡಲಾಗಿದೆ ಆದರೆ, ಅಧಿಕಾರಿಗಳಿಗೆ ತರಬೇತಿ ನೀಡಿಲ್ಲ” ಎಂದರು.

ಬನಶಂಕರಿ ಬೀದಿ ವ್ಯಾಪಾರಿಗಳ ಸಂಘದ ಅಧ್ಯಕ್ಷ ಖಾದರ್ ವಾಲಿ ಮಾತನಾಡಿ, “ನಾವು ಇಲ್ಲಿ ಮೂವತ್ತು ವರ್ಷಗಳಿಂದ ವ್ಯಾಪಾರ ಮಾಡುತ್ತಿದ್ದೇವೆ. ನಮಗೆ ಬಿಬಿಎಂಪಿಯಿಂದ ಅನುಮತಿ ಇದೆ. ಆದರೂ, ಅಧಿಕಾರಿಗಳು ಪದೇ ಕಿರುಕುಳ ಕೊಡುತ್ತಿದ್ದಾರೆ. ಪಾಲಿಕೆಯವರೇ ನಮಗೆ ಬಲವಂತವಾಗಿ ಲೋನ್ ಕೊಟ್ಟು ವ್ಯಾಪಾರ ಮಾಡಿ ಎಂದಿದ್ದರು. ಈಗ ಅವರೇ ತೆರವು ಮಾಡುತ್ತಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪಿವಿಸಿ ಸದಸ್ಯ ಮಂಜು ಮಾತನಾಡಿ, “ಅಧಿಕಾರಿಗಳಿಗೆ ಬೀದಿ ವ್ಯಾಪಾರಿಗಳ ಕಾಯ್ದೆ ಬಗ್ಗೆ ಮಾಹಿತಿ ಗೊತ್ತಿಲ್ಲ. ಅವರಿಗೆ ಕಾನೂನಿನ ಅರಿವಿಲ್ಲ. ಈ ಹಿಂದೆ ಮೆಟ್ರೋ ನಿಗಮದಿಂದಲೂ ವ್ಯಾಪಾರಿಗಳಿಗೆ ತೊಂದರೆಯಾಗಿತ್ತು. ನಾವು ಪ್ರತಿಭಟಿಸಿದ್ದಕ್ಕೆ ನಮ್ಮನ್ನೇ ಟಾರ್ಗೆಟ್ ಮಾಡಿದ್ದಾರೆ. ಬಿಬಿಎಂಪಿ ಅಧಿಕಾರಿಗಳು ಮತ್ತು ಪೊಲೀಸರು ತುಂಬಾ ಕಿರುಕುಳ ನೀಡುತ್ತಿದ್ದಾರೆ.
ದಯವಿಟ್ಟು ಬೀದಿ ವ್ಯಾಪಾರಿಗಳನ್ನು ಬದುಕಲು ಬಿಡಿ” ಎಂದರು.

ಬೆಂಗಳೂರು ಬೀದಿ ವ್ಯಾಪಾರಿಗಳ ಸಂಘಟನೆಗಳ ಒಕ್ಕೂಟದ ಉಪಾಧ್ಯಕ್ಷ ಸೈಯ್ಯದ್ ಝಮೀರ್ ಮಾತನಾಡಿ, “ನಮಗೆ ಬೀದಿ ಬದಿ ವ್ಯಾಪಾರ ಮಾಡಲು ಪಾಲಿಕೆಯಿಂದ ಅನುಮತಿ ಇದೆ. ನಮ್ಮದು ಕಚ್ಚಾ ವಸ್ತು, ನಾವು ಅವತ್ತಿಂದು ಅವತ್ತೇ ಮಾರಾಟ ಮಾಡಬೇಕು. ಇಲ್ಲದಿದ್ದರೆ ಬಂಡವಾಳ ಹಾಳಾಗುತ್ತದೆ. ಸರ್ಕಾರ ನಮಗೆ 10, 20, 30 ಸಾವಿರ ಸಾಲ ಕೊಟ್ಟ ವ್ಯಾಪಾರ ಮಾಡಲು ಪ್ರೋತ್ಸಾಹಿಸಿದೆ. ಅಧಿಕಾರಿಗಳು ಹೀಗೆ ಕಿರುಕುಳ ಕೊಟ್ಟರೆ ನಾವು ವ್ಯಾಪಾರ ಮಾಡೋದು ಹೇಗೆ? ಸಾಲ ತೀರಿಸೋದು ಹೇಗೆ? ಹೀಗೆ ಎತ್ತಂಗಡಿ ಮಾಡುತ್ತಿದ್ದರೆ ನಮಗೆ ಆಗುವ ನಷ್ಟವನ್ನು ಸರ್ಕಾರ ತುಂಬಿಕೊಡಬೇಕು ಎಂದು” ಹೇಳಿದರು.

ಸಾರಕ್ಕಿ ಮಾರುಕಟ್ಟೆಯ ಅರುಣ್ ಕುಮಾರ್ ಮಾತನಾಡಿ, “ನಮಗೆ ವ್ಯಾಪಾರ ಮಾಡಲು ಅನುಮತಿ ಇದೆ. ಅನುಮತಿ ಕೊಟ್ಟು ಐದು ವರ್ಷ ಆಗಿದೆ. ಈಗ ನ್ಯಾಯಾಲಯದ ಆದೇಶ ಮೇರೆಗೆ ತೆರವುಗೊಳಿಸಲು ಬಂದಿದ್ದಾರೆ. ನಮ್ಮ ಕಡೆಯಿಂದ ವಕೀಲರು ಬಂದು ಮಾತನಾಡಿದ ಬಳಿಕ ಅಧಿಕಾರಿಗಳು ತೆರಳಿದ್ದಾರೆ. ನಮಗೆ ಹಕ್ಕುಪತ್ರ ಇದೆ. ರಸ್ತೆ ಬದಿ ವ್ಯಾಪಾರ ಮಾಡಲು ಗೆರೆ ಹಾಕಿ ಕೊಟ್ಟದ್ದಾರೆ” ಎಂದು ತಿಳಿಸಿದರು.

“ನಮಗೆ ಬೀದಿ ಬದಿ ವ್ಯಾಪಾರ ಮಾಡಲು ಪಾಲಿಕೆಯಿಂದ ಅನುಮತಿ ಇದೆ. ಬಿಬಿಎಂಪಿ ಅಧಿಕಾರಿಗಳೇ ಅನುಮತಿ ಕೊಟ್ಟು ಈಗ ಎತ್ತಂಗಡಿ ಮಾಡಲು ಬಂದಿದ್ದಾರೆ. ಹೀಗಾದರೆ ನಾವು ಎಲ್ಲಿಗೆ ಹೋಗಬೇಕು? ನಮಗೆ ಜೀವನ ಮಾಡಲು ಬೀದಿ ಬದಿ ವ್ಯಾಪಾರವೊಂದೇ ದಾರಿ. ಇದು ಬಿಟ್ಟರೆ ಬೇರೆ ಗೊತ್ತಿಲ್ಲ. ಇಡೀ ಕುಟುಂಬವನ್ನು ಈ ವ್ಯಾಪಾರದಿಂದಲೇ ಸಲಹುತ್ತಿದ್ದೇವೆ. ನಾವು ಯಾವುದೇ ನಿಯಮ ಮೀರಿಲ್ಲ. ಪಾಲಿಕೆಯವರು ನಿಗದಿಪಡಿಸಿದ ಜಾಗದಲ್ಲೇ ವ್ಯಾಪಾರ ಮಾಡುತ್ತಿದ್ದೇವೆ. ಸಾವಿರಾರು ಹೆಣ್ಣು ಮಕ್ಕಳು ನನ್ನಂತೆ ವ್ಯಾಪಾರ ಮಾಡುತ್ತಿದ್ದಾರೆ. ಪಾಲಿಕೆ ಅಧಿಕಾರಿಗಳು ಅವರ ಬಗ್ಗೆ ಸ್ವಲ್ಪ ಯೋಚನೆ ಮಾಡಬೇಕು ಎಂದು ಬೀದಿ ಬದಿ ವ್ಯಾಪಾರಿ ಫರ್ವೀನ್ ತಾಜ್ ಬೇಸರ ವ್ಯಕ್ತಪಡಿಸಿದರು.

ಇದನ್ನೂ ಓದಿ : ಬೆಂಗಳೂರು: ರಂಗ ಶಂಕರದಲ್ಲಿ ಪ್ಯಾಲೇಸ್ತೀನ್ ಪರ ಕಾರ್ಯಕ್ರಮಕ್ಕೆ ಅನುಮತಿ ನಿರಾಕರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...