Homeಮುಖಪುಟಸಿಎಎ ಜಾರಿಯನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ: ಅಮಿತ್‌ ಶಾ

ಸಿಎಎ ಜಾರಿಯನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ: ಅಮಿತ್‌ ಶಾ

- Advertisement -
- Advertisement -

ಕೇಂದ್ರ ಸರ್ಕಾರವು ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಜಾರಿಗೆ ತರಲಿದೆ ಮತ್ತು ಅದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಗೃಹ ಸಚಿವ ಅಮಿತ್ ಶಾ ಬುಧವಾರ ಹೇಳಿದ್ದಾರೆ.

ಕೋಲ್ಕತ್ತಾದಲ್ಲಿ ಲೋಕಸಭೆಯ ಚುನಾವಣಾ ಪ್ರಚಾರದ ಭಾಗವಾಗಿ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ  ಅಮಿತ್‌ ಶಾ, ಸಿಎಎಯನ್ನು ಮಮತಾ ಬ್ಯಾನರ್ಜಿ ವಿರೋಧಿಸುತ್ತಿದ್ದಾರೆ. ಆದರೆ ಯಾರೊಬ್ಬರೂ ಅದರ ಅನುಷ್ಠಾನವನ್ನು ತಡೆಯಲು ಸಾಧ್ಯವಿಲ್ಲ. ಪ್ರತಿಪಕ್ಷಗಳ ಬಲವಾದ ವಿರೋಧದ ಮಧ್ಯೆ ಕೇಂದ್ರವು ಸಿಎಎ ಕುರಿತು ನಿಯಮವನ್ನು ರೂಪಿಸಲಿದೆ ಎಂದು ಹೇಳಿದ್ದಾರೆ.

ಇದಲ್ಲದೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯ ಮೇಲೆ ತುಷ್ಟೀಕರಣ, ಭ್ರಷ್ಟಾಚಾರ ಮತ್ತು ರಾಜಕೀಯ ಹಿಂಸಾಚಾರ, ಒಳ ನುಸುಳುವಿಕೆ ವಿಚಾರದಲ್ಲಿ ತೀವ್ರ ವಾಗ್ದಾಳಿ ನಡೆಸಿದ್ದು, ಮುಂದಿನ ಚುನಾವಣೆಯಲ್ಲಿ ಬಿಜೆಪಿಯನ್ನು ಗೆಲ್ಲಿಸುವಂತೆ ಸೂಚಿಸಿದ್ದಾರೆ. ಇಲ್ಲಿ ನೆರದಿರುವ ಜನಸ್ತೋಮವನ್ನು ನೋಡಿದರೆ ಇದು ಬಿಜೆಪಿಯ ಪರ ಜನರ ಒಲವನ್ನು ಸೂಚಿಸುತ್ತದೆ. 2026ರಲ್ಲಿ ರಾಜ್ಯದಲ್ಲಿ ಬಿಜೆಪಿ 3ನೇ ಎರಡರಷ್ಟು ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ. ರಾಜ್ಯದಲ್ಲಿ ಬಿಜೆಪಿಯ ಸಾಧನೆಯು 2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯ ಗೆಲುವಿಗೆ ಅಡಿಪಾಯವಾಗಿದೆ ಎಂದು ಹೇಳಿದ್ದಾರೆ.

ಇತ್ತೀಚೆಗೆ ಪಶ್ಚಿಮ ಬಂಗಾಳದ ಠಾಕೂರ್ ನಗರದಲ್ಲಿ ದಲಿತ ಮಟುವಾ ಸಮುದಾಯದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡು ಮಾತನಾಡಿದ ಅಜಯ್ ಮಿಶ್ರಾ, ಪೌರತ್ವದ ಹಕ್ಕುಗಳನ್ನು ಯಾರೂ ಕಸಿದುಕೊಳ್ಳಲು ಸಾಧ್ಯವಿಲ್ಲ. ಪೌರತ್ವ ತಿದ್ದುಪಡಿ ಕಾಯ್ದೆ ಅಥವಾ ಸಿಎಎಯ ಅಂತಿಮ ಕರಡು 2024ರ ಮಾ.30ರೊಳಗೆ ಸಿದ್ಧವಾಗಲಿದೆ  ಎಂದು ಹೇಳಿದ್ದರು.

ಬಾಂಗ್ಲಾದೇಶದಲ್ಲಿ ಧಾರ್ಮಿಕ ಕಿರುಕುಳದಿಂದ ಪಲಾಯನ ಮಾಡಿದ ಮಾಟುವಾ ಸಮುದಾಯದ ಜನರು ವಿಭಜನೆಯ ನಂತರ ಪಶ್ಚಿಮ ಬಂಗಾಳವನ್ನು ಪ್ರವೇಶಿಸಿದ್ದಾರೆ. ಮಾಟುವಾಗಳಿಗೆ ಪೌರತ್ವದ ಹಕ್ಕುಗಳನ್ನು ನೀಡುತ್ತೇವೆ ಎಂದು ಹೇಳಿದ್ದರು.

ಕೇಂದ್ರ ಸರಕಾರವು ತರಲು ಉದ್ದೇಶಿಸಿರುವ ಸಿಎಎ ಅಥವಾ ಪೌರತ್ವ ತಿದ್ದುಪಡಿ ಕಾಯ್ದೆಯ ಪ್ರಕಾರ ಡಿಸೆಂಬರ್ 31, 2014ರ ಮೊದಲು ಭಾರತಕ್ಕೆ ಪ್ರವೇಶಿಸಿದ ಅಫ್ಘಾನಿಸ್ತಾನ, ಬಾಂಗ್ಲಾದೇಶ ಮತ್ತು ಪಾಕಿಸ್ತಾನದಿಂದ ಬಂದ ಹಿಂದೂಗಳು, ಸಿಖ್ಖರು, ಬೌದ್ಧರು, ಜೈನರು, ಪಾರ್ಸಿಗಳು ಮತ್ತು ಕ್ರಿಶ್ಚಿಯನ್ನರಿಗೆ ಭಾರತೀಯ ಪೌರತ್ವವನ್ನು ನೀಡುವುದಾಗಿದೆ. ಪ್ರಾಸ್ತವಿತ ಕಾಯ್ದೆಯು ದೇಶದಲ್ಲಿ ಭಾರೀ ಜನ ವಿರೋಧಕ್ಕೆ ಕಾರಣವಾಗಿತ್ತು.

ಇದನ್ನು ಓದಿ: ಅಝಾನ್‌ಗೆ ಧ್ವನಿವರ್ಧಕ ಬಳಸಿದರೆ ಶಬ್ಧಮಾಲಿನ್ಯವಾಗುತ್ತದೆ ಎನ್ನುವುದು ತಪ್ಪು ಕಲ್ಪನೆ: ಹೈಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...