Homeಮುಖಪುಟಸುಳ್ಳು ಸುದ್ದಿ ಪ್ರಸಾರ: 9 ಯೂಟ್ಯೂಬ್ ಚಾನೆಲ್‌ಗಳ ಹೆಸರು ಬಿಡುಗಡೆ ಮಾಡಿದ ಪಿಐಬಿ

ಸುಳ್ಳು ಸುದ್ದಿ ಪ್ರಸಾರ: 9 ಯೂಟ್ಯೂಬ್ ಚಾನೆಲ್‌ಗಳ ಹೆಸರು ಬಿಡುಗಡೆ ಮಾಡಿದ ಪಿಐಬಿ

- Advertisement -
- Advertisement -

ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುವ ಪ್ರೆಸ್ ಇನ್ಫರ್ಮೇಷನ್ ಬ್ಯೂರೋದ ಫ್ಯಾಕ್ಟ್-ಚೆಕ್ ಯುನಿಟ್ 9 ಯೂಟ್ಯೂಬ್ ಚಾನೆಲ್‌ಗಳು ಹರಡಿರುವ ಸುಳ್ಳು ಮಾಹಿತಿಯನ್ನು ಬಯಲು ಮಾಡಿದೆ.

ಸುಳ್ಳು ಸುದ್ದಿಯನ್ನು ಹರಡುತ್ತಿದ್ದ ಯೂಟ್ಯೂಬ್ ಚಾನೆಲ್‌ಗಳು 83 ಲಕ್ಷ ಚಂದಾದಾರರನ್ನು ಹೊಂದಿವೆ ಎಂದು ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ. ಈ ಚಾನೆಲ್‌ಗಳು ಭಾರತದ ಮುಖ್ಯ ನ್ಯಾಯಮೂರ್ತಿ, ಪ್ರಧಾನ ಮಂತ್ರಿ ಮತ್ತು ಮುಖ್ಯ ಚುನಾವಣಾ ಆಯುಕ್ತರು ಸೇರಿದಂತೆ ಸಾಂವಿಧಾನಿಕ ಹುದ್ದೆಗಳಲ್ಲಿರುವ ವ್ಯಕ್ತಿಗಳ ಬಗ್ಗೆ ಅವಹೇಳನಕಾರಿ ಸುದ್ದಿ ಪ್ರಸಾರ ಮಾಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕೆಲವು ರಾಜ್ಯಗಳಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಲಾಗಿದೆ, ಎಲೆಕ್ಟ್ರಾನಿಕ್ ಮತಯಂತ್ರಗಳನ್ನು (ಇವಿಎಂಗಳು) ನಿಷೇಧಿಸಲಾಗಿದೆ ಮತ್ತು ಕೇಂದ್ರ ಸಚಿವರ ರಾಜೀನಾಮೆ ಅಥವಾ ಸಾವಿನ ಬಗ್ಗೆ ಕೆಲವು ಚಾನೆಲ್‌ಗಳು ತಪ್ಪಾಗಿ ಹೇಳಿಕೊಂಡಿವೆ ಎಂದು  ಫ್ಯಾಕ್ಟ್-ಚೆಕ್ ಯುನಿಟ್ ಹೇಳಿಕೊಂಡಿದೆ.

ಸುಳ್ಳು ಸುದ್ದಿ ಹರಡುತ್ತಿದೆ ಎಂದು ಪಟ್ಟಿ ಮಾಡಲಾದ ಯುಟ್ಯೂಬ್‌ ಚಾನಲ್‌ಗಳು: ಬಜರಂಗ್ ಎಜುಕೇಶನ್  (Bajrang Education) (24.3 ಲಕ್ಷ ಚಂದಾದಾರರನ್ನು ಹೊಂದಿದೆ), ಆಪ್ಕೆ ಗುರೂಜಿ(Aapke Guruji) (34.7 ಲಕ್ಷ ಚಂದಾದಾರರನ್ನು ಹೊಂದಿದೆ), ಬಿಜೆ ನ್ಯೂಸ್ (Bj News) (5.29 ಲಕ್ಷ ಚಂದಾದಾರರನ್ನು ಹೊಂದಿದೆ), ಸಂಸಾನಿ ಲೈವ್ ಟಿವಿ ( Sansani Live TV) (4.33 ಲಕ್ಷ ಚಂದಾದಾರರನ್ನು ಹೊಂದಿದೆ), ಜಿವಿಟಿ ನ್ಯೂಸ್( GVT News ) (8.16 ಲಕ್ಷ ಚಂದಾದಾರರನ್ನು ಹೊಂದಿದೆ), ಡೈಲಿ ಸ್ಟಡಿ ( Daily Study) (3.35 ಲಕ್ಷ ಚಂದಾದಾರನ್ನು ಹೊಂದಿದೆ), ಭಾರತ್ ಏಕ್ತಾ ನ್ಯೂಸ್(Bharat Ekta News ) (11,700 ಚಂದಾದಾರರನ್ನು ಹೊಂದಿದೆ), ಅಬ್ ಬೋಲೆಗಾ ಭಾರತ್(Ab Bolega Bharat) (1.78 ಲಕ್ಷ ಚಂದಾದಾರರನ್ನು ಹೊಂದಿದೆ) ಮತ್ತು ಸರ್ಕಾರಿ ಯೋಜನೆ ಅಧಿಕೃತ(Sarkari Yojana Official ) (1 ಲಕ್ಷ ಚಂದಾದಾರನ್ನು ಹೊಂದಿದೆ).

ಈ ಚಾನೆಲ್‌ಗಳಲ್ಲಿನ ನಕಲಿ ವಿಷಯಗಳಲ್ಲಿ ಹೆಚ್ಚಿನವು ಹಿಂದಿಯಲ್ಲಿದೆ. ಆದ್ದರಿಂದ ಇದನ್ನು ಭಾರತದಿಂದ ಸೃಷ್ಟಿಸಿರುವ  ಹೆಚ್ಚಿನ ಸಾಧ್ಯತೆಗಳಿವೆ ಎಂದು  ವರದಿ ತಿಳಿಸಿದೆ. ಇತ್ತೀಚೆಗೆ 2021ರ ಮಾಹಿತಿ ತಂತ್ರಜ್ಞಾನ ಇಲಾಖೆ ನಿಯಮಗಳ ಅಡಿಯಲ್ಲಿ ತುರ್ತಾಗಿ ಸರ್ಕಾರವು ಹಲವಾರು YouTube ಚಾನಲ್‌ಗಳನ್ನು ಬ್ಲಾಕ್‌ ಮಾಡಿತ್ತು. YouTube ಚಾನಲ್‌ಗಳು ಹರಡುವ ನಕಲಿ ಸುದ್ದಿಗಳ ಬಗ್ಗೆ ಮತ್ತು ಟ್ರಾಫಿಕ್‌ ಹೆಚ್ಚಿಸಲು ಸುಳ್ಳು ಸುದ್ದಿಗಳನ್ನು ಹರಡುತ್ತಿರುವ ಬಗ್ಗೆ ಫ್ಯಾಕ್ಟ್-ಚೆಕ್ ಯುನಿಟ್ ನಿಗಾ ವಹಿಸುತ್ತಿದೆ.

ಈ ಹಿಂದೆ 2022ರ ಡಿಸೆಂಬರ್‌ನಿಂದ ಸುಳ್ಳು ಮಾಹಿತಿಯನ್ನು ಪ್ರಕಟಿಸಿದ ಆರೋಪದ ಮೇಲೆ 26 YouTube ಚಾನಲ್‌ಗಳ ಹೆಸರನ್ನು PIB ಬಹಿರಂಗಪಡಿಸಿತ್ತು. 2021ರ IT ನಿಯಮಗಳಡಿಯಲ್ಲಿ ಮಾಹಿತಿ ಮತ್ತು ತಂತ್ರಜ್ಞಾನ ಸಚಿವಾಲಯವು 120ಕ್ಕೂ ಹೆಚ್ಚು YouTube ಚಾನಲ್‌ಗಳನ್ನು ಬ್ಲಾಕ್‌ ಮಾಡಿತ್ತು.

ಇದನ್ನು ಓದಿ: ಪ.ಬಂಗಾಳ: ರಾಷ್ಟ್ರಗೀತೆಗೆ ಅವಮಾನ; 12 ಬಿಜೆಪಿ ಶಾಸಕರ ವಿರುದ್ಧ ಎಫ್‌ಐಆರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...