Homeಮುಖಪುಟಸಿಲ್ಕ್ಯಾರಾ ಸುರಂಗ ಕುಸಿತ: ಕಾರ್ಮಿಕನ ಕುಟುಂಬದ ದುಸ್ಥಿತಿ ಬಗ್ಗೆ ವರದಿ ಮಾಡಿದ ಪತ್ರಕರ್ತರ ವಿರುದ್ಧ ಎಫ್ಐಆರ್

ಸಿಲ್ಕ್ಯಾರಾ ಸುರಂಗ ಕುಸಿತ: ಕಾರ್ಮಿಕನ ಕುಟುಂಬದ ದುಸ್ಥಿತಿ ಬಗ್ಗೆ ವರದಿ ಮಾಡಿದ ಪತ್ರಕರ್ತರ ವಿರುದ್ಧ ಎಫ್ಐಆರ್

- Advertisement -
- Advertisement -

ಉತ್ತರಾಖಂಡದ ಸಿಲ್ಕ್ಯಾರಾ ಸುರಂಗದಲ್ಲಿ ಸಿಲುಕಿರುವ ಕಾರ್ಮಿಕನ ಕುಟುಂಬವೊಂದರ ದುಸ್ಥಿತಿಯನ್ನು ವರದಿ ಮಾಡಿದ ನಂತರ ಸರ್ಕಾರಿ ಕೆಲಸಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಜಾರ್ಖಾಂಡ್‌ನ ಸ್ಥಳೀಯ ಇಬ್ಬರು ಪತ್ರಕರ್ತರ ವಿರುದ್ಧ ಜಾರ್ಖಂಡ್‌ನ ಖುಂತಿ ಜಿಲ್ಲೆಯಲ್ಲಿ ಪ್ರಕರಣ ದಾಖಲಾಗಿದೆ.

ಬ್ಲಾಕ್ ಡೆವಲಪ್‌ಮೆಂಟ್ ಅಧಿಕಾರಿ ಸ್ಮಿತಾ ನಾಗೇಸಿಯಾ ಮತ್ತು ವೃತ್ತ ಅಧಿಕಾರಿ ವಂದನಾ ಭಾರತಿ ಅವರ ದೂರಿನ ಆಧಾರದ ಮೇಲೆ ಕರ್ರಾ ಪೊಲೀಸ್ ಠಾಣೆಯಲ್ಲಿ ಪತ್ರಕರ್ತ ಸೋನು ಅನ್ಸಾರಿ ಮತ್ತು ಯೂಟ್ಯೂಬರ್ ಗುಂಜನ್ ಕುಮಾರ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ತೋರ್ಪಾ ಉಪವಿಭಾಗೀಯ ಪೊಲೀಸ್ ಅಧಿಕಾರಿ ಓಂಪ್ರಕಾಶ್ ತಿವಾರಿ ಹೇಳಿದ್ದಾರೆ.

ಅವರು ಸರ್ಕಾರಿ ಕೆಲಸಕ್ಕೆ ಅಡ್ಡಿಪಡಿಸಿದ್ದಾರೆ ಮತ್ತು ಅಧಿಕಾರಿಗಳೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ. ಅಧಿಕಾರಿಗಳು ಕಾರ್ಮಿಕನ ಮನೆಗೆ ಭೇಟಿ ನೀಡಿದಾಗ, ಇಬ್ಬರು ವರದಿಗಾರರು ಆಗಲೇ ಅಲ್ಲಿದ್ದರು. ಅವರು ಸತ್ಯವನ್ನು ಪರಿಶೀಲಿಸದೆ ರೆಕಾರ್ಡಿಂಗ್ ಪ್ರಾರಂಭಿಸಿದರು. ಸತ್ಯಾಸತ್ಯತೆಯನ್ನು ಪರಿಶೀಲಿಸುವಂತೆ ಕೇಳಿದಾಗ ಅವರು ನಮ್ಮ ಕೆಲಸಕ್ಕೆ ಅಡ್ಡಿಪಡಿಸಿ ನಮ್ಮೊಂದಿಗೆ ಅನುಚಿತವಾಗಿ ವರ್ತಿಸಿದರು ಎಂದು ನ.30ರಂದು ದಾಖಲಿಸಿದ ಪೊಲೀಸ್ ದೂರಿನಲ್ಲಿ ಆರೋಪಿಸಲಾಗಿದೆ.

ಸಿಆರ್‌ಪಿಸಿಯ ನಿಬಂಧನೆಗಳ ಪ್ರಕಾರ ಇಬ್ಬರಿಗೂ ನೋಟಿಸ್ ನೀಡಲಾಗುವುದು ಮತ್ತು ಅವರ ಹೇಳಿಕೆಗಳನ್ನು ದಾಖಲಿಸಲಾಗುತ್ತಿದೆ. ಹಿರಿಯ ಅಧಿಕಾರಿಗಳ ಸೂಚನೆ ಮೇರೆಗೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿವಾರಿ ಹೇಳಿದ್ದಾರೆ.

ಅನ್ಸಾರಿ ಮತ್ತು ಕುಮಾರ್ ತಮ್ಮ ವರದಿಗಳ ಮೂಲಕ ವಿಜಯ್ ಹೊರೋ ಕುಟುಂಬದ ದುಸ್ಥಿತಿಯನ್ನು ಎತ್ತಿ ತೋರಿಸಿದ್ದರು. ನ.12ರಂದು ಸುರಂಗ ಕುಸಿತದ ಎರಡು ವಾರಗಳ ನಂತರ ಆಡಳಿತವು ಬಡ ಕುಟುಂಬಕ್ಕೆ ಪಡಿತರವನ್ನು ಒದಗಿಸಿದೆ ಎಂದು ಅವರು ತಮ್ಮ ವರದಿಗಳಲ್ಲಿ ಆರೋಪಿಸಿದ್ದರು.

ಈ ಬಗ್ಗೆ ಪ್ರತಿಕ್ರಿಯಿಸಿ ಪತ್ರಕರ್ತ ಗುಂಜನ್‌, ವಿಜಯ್‌ ಕುಟುಂಬದ ಪರಿಸ್ಥಿತಿಯನ್ನು ಹೊರಜಗತ್ತಿಗೆ ತಿಳಿಸಲು ವರದಿ ಮಾಡಿದ್ದೇವೆ. ಸುರಂಗ ಕುಸಿತವಾದ ಎರಡು ವಾರಗಳ ನಂತರ ಬಡ ಕುಟುಂಬಕ್ಕೆ ಅಧಿಕಾರಿಗಳು ಪಡಿತರ ಒದಗಿಸಿದ್ದರು ಎಂದು ಹೇಳಿದ್ದಾರೆ.

ಕೇಂದ್ರ ಸರ್ಕಾರದ ಚಾರ್‌ಧಾಮ್ ಸರ್ವಋತು ರಸ್ತೆ ಯೋಜನೆಯಡಿ ನಿರ್ಮಿಸುತ್ತಿದ್ದ ಸುರಂಗದ ಕೆಳಭಾಗಗಳು ನ.12ರಂದು ಕುಸಿದು 41 ಕಾರ್ಮಿಕರು ಸುರಂಗದೊಳಗೆ ಸಿಲುಕಿದ್ದರು. ಘಟನೆ ನಡೆದ 17 ದಿನಗಳ ನಂತರ ನ.28ರಂದು ಕಾರ್ಮಿಕರನ್ನು ರಕ್ಷಿಸಲಾಗಿತ್ತು.

ಇದನ್ನು ಓದಿ; ನ್ಯಾಯಾಲಯದಲ್ಲಿ ಅಂಬೇಡ್ಕರ್‌ಗೂ ಮೊದಲು ಮನು ಪ್ರತಿಮೆ ಏಕೆ ಸ್ಥಾಪಿಸಲಾಯಿತು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...

KPSC ಪರೀಕ್ಷಾ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ರಾಜಕೀಯ ಪಕ್ಷ ನೋಡದೆ ನಿರ್ದಾಕ್ಷಿಣ್ಯ ಕ್ರಮ – ಸಚಿವ ಪ್ರಿಯಾಂಕ್ ಖರ್ಗೆ

ಕೆಪಿಎಸ್‌ಸಿ (KPSC) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ...

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...