Homeಮುಖಪುಟಬಿಹಾರ: ಕೋಮು ವಿವಾದವನ್ನು ಹುಟ್ಟು ಹಾಕಿದ ಶಾಲಾ ಕ್ಯಾಲೆಂಡರ್‌

ಬಿಹಾರ: ಕೋಮು ವಿವಾದವನ್ನು ಹುಟ್ಟು ಹಾಕಿದ ಶಾಲಾ ಕ್ಯಾಲೆಂಡರ್‌

- Advertisement -
- Advertisement -

ಬಿಹಾರದ ಶಿಕ್ಷಣ ಇಲಾಖೆಯು ಸಾಮಾನ್ಯ ಶಾಲೆಗಳಿಗೆ ಮತ್ತು ಉರ್ದು ಶಾಲೆಗಳಿಗೆ 2024ರ ಪ್ರತ್ಯೇಕ ರಜಾದಿನದ ಕ್ಯಾಲೆಂಡರ್‌ಗಳನ್ನು ಬಿಡುಗಡೆ ಮಾಡಿದೆ. ಈ ಕ್ರಮವು ಬಿಹಾರದಲ್ಲಿ ಬಿಜೆಪಿ ಮತ್ತು ಸಂಘಪರಿವಾರದ ಆಕ್ರೋಶಕ್ಕೆ ಕಾರಣವಾಗಿದೆ ಮತ್ತು ಕ್ಯಾಲೆಂಡರ್‌ ಬಗ್ಗೆ ವ್ಯಾಪಕವಾಗಿ ಸುಳ್ಳು ಮಾಹಿತಿಗಳನ್ನು ಹರಡಲಾಗಿದೆ.

ಬಿಹಾರದ ಶಿಕ್ಷಣ ಇಲಾಖೆಯು ಬಿಡುಗಡೆ ಮಾಡಿದ ಕ್ಯಾಲೆಂಡರ್‌ನ್ನು ಹಿಂದುತ್ವ ಗುಂಪುಗಳು ವಿರೋಧಿಸಿದ್ದು, ಶಿಕ್ಷಣ ಇಲಾಖೆಯು ವಿದ್ಯಾರ್ಥಿಗಳ ಅನುಕೂಲಕ್ಕೆ ಅನುಗುಣವಾಗಿ ಕ್ಯಾಲೆಂಡರ್‌ಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ಹೇಳಿದೆ.

ರಾಮ ನವಮಿ, ಮಹಾವೀರ ಜಯಂತಿ, ಸಾಮ್ರಾಟ್ ಅಶೋಕ್ ಜಯಂತಿ, ಮತ್ತು ವೀರ್ ಕುನ್ವರ್ ಸಿಂಗ್ ಜಯಂತಿಯಂತಹ ಹಬ್ಬಗಳು ಬೇಸಿಗೆ ರಜೆಯ ಸಮಯದಲ್ಲಿ ಅಂದರೆ ಏಪ್ರಿಲ್ 15 ರಿಂದ ಮೇ 15ರ ನಡುವೆ ಇರುತ್ತದೆ. ಈ ಹಬ್ಬಗಳನ್ನು ಕ್ಯಾಲೆಂಡರ್‌ನಲ್ಲಿ ಸೇರಿಸಲಾಗಿಲ್ಲ.

ಎ.10, 11, 12 ರಂದು ಈದ್-ಉಲ್-ಫಿತರ್, ಜೂ.18,19,20ರಂದು ಈದ್-ಉಲ್-ಝೋಹಾ ಮತ್ತು ಮುಹರ್ರಂ ಹಬ್ಬಗಳಿಗೆ ರಜೆಯನ್ನು ಕ್ಯಾಲೆಂಡರ್‌ನಲ್ಲಿ ಉಲ್ಲೇಖಿಸಲಾಗಿದೆ.

ಶಿಕ್ಷಣ ಇಲಾಖೆಯು ರಜೆಯ ಕ್ಯಾಲೆಂಡರ್‌ಗಳನ್ನು ಬಿಡುಗಡೆ ಮಾಡಿದ ನಂತರ ಸಾಮಾಜಿಕ ಮಾದ್ಯಮಗಳಲ್ಲಿ ವಿಶೇಷವಾಗಿ ಫೇಸ್‌ಬುಕ್‌ನಲ್ಲಿ ಸರ್ಕಾರವು ಹಿಂದೂ ಹಬ್ಬಗಳಿಗೆ ಸಂಬಂಧಿಸಿದ ರಜಾದಿನಗಳನ್ನು ಕಡಿಮೆಗೊಳಿಸಿ ಮುಸ್ಲಿಮರಿಗೆ ರಜಾದಿನಗಳ ಸಂಖ್ಯೆಯನ್ನು ಹೆಚ್ಚಿಸಿದೆ ಎಂದು ಹಲವರು ಸುಳ್ಳು ಪೋಸ್ಟ್‌ಗಳನ್ನು ಮಾಡಿದ್ದಾರೆ. 2024ರ ಲೋಕಸಭಾ ಚುನಾವಣೆಯ ಸಮಯದಲ್ಲಿ ಮುಸ್ಲಿಮರನ್ನು ಸಮಾಧಾನಗೊಳಿಸಲು ಇದು ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಡಿಸಿಎಂ ತೇಜಸ್ವಿ ಯಾದವ್ ಅವರ ತಂತ್ರವಾಗಿದೆ ಎಂದು ಹಲವಾರು ಸಾಮಾಜಿಕ ಮಾದ್ಯಮ ಬಳಕೆದಾರರು ಹೇಳಿಕೊಂಡಿದ್ದಾರೆ.

ಪಾಟ್ನಾ ಮೂಲದ ಹಿಂದಿ ಪತ್ರಿಕೆಗಳು ಸಹ ಇದೇ  ರೀತಿ ವರದಿಯನ್ನು ಮಾಡಿದ್ದು, ಮುಸ್ಲಿಮರ ಹಬ್ಬಗಳಿಗೆ ರಜೆಯನ್ನು ಹೆಚ್ಚಿಸಲಾಗಿದೆ ಮತ್ತು ಹಿಂದೂಗಳಿಗೆ ರಜೆಯನ್ನು ಕಡಿಮೆ ಮಾಡಲಾಗಿದೆ ಎಂದು ವರದಿ ಮಾಡಿದೆ. ಪತ್ರಿಕೆಯೊಂದು ಒಂದು ತನ್ನ ವರದಿಯಲ್ಲಿ ಶಿವರಾತ್ರಿ, ರಾಮ ನವಮಿ, ಜನ್ಮಾಷ್ಠಮಿಗೆ ರಜೆಗಳಿಲ್ಲ. ಈದ್, ಮೊಹರಂಗೆ ಹೆಚ್ಚಿನ ರಜಾದಿನಗಳನ್ನು ನೀಡಲಾಗಿದೆ ಎಂದು ವರದಿ ಮಾಡಿದೆ.

ರಾಜ್ಯ ಸರ್ಕಾರವು ಹಿಂದೂಗಳಿಗಿಂತ ಮುಸ್ಲಿಮರಿಗೆ ಆದ್ಯತೆ ನೀಡುವ ಮೂಲಕ ಹಿಂದೂ ಸಮುದಾಯದ ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸಿದೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮತ್ತು ಬಿಜೆಪಿ ಮುಖಂಡರು ಆರೋಪಿಸಿದ್ದಾರೆ.

ಈ ಬಗ್ಗೆ ಜೆಪಿಯ ಹಿರಿಯ ನಾಯಕ ಮತ್ತು ರಾಜ್ಯಸಭಾ ಸಂಸದ ಸುಶೀಲ್ ಕುಮಾರ್ ಮೋದಿ ಮಾತನಾಡಿದ್ದು, ರಜಾದಿನದ ಕ್ಯಾಲೆಂಡರ್ ಮುಸ್ಲಿಂ ಸಮುದಾಯದ ಮತಗಳನ್ನು ಗಳಿಸಲು ಮುಸ್ಲಿಮರ ವಿರುದ್ಧ ಹಿಂದೂಗಳನ್ನು ಪ್ರಚೋದಿಸುವ ಪ್ರಯತ್ನವಾಗಿದೆ. ಸರಕಾರ ಇಂತಹ ಕೋಮುವಾದಿ ಉದ್ದೇಶದಿಂದ ಕೆಲಸ ಮಾಡಬಾರದು. ಈ ಕೋಮುವಾದಿ ಉದ್ದೇಶವನ್ನು ಸಹಿಸಲಾಗುವುದಿಲ್ಲ. ಇದು ಪಕ್ಷಕ್ಕೆ ಯಾವುದೇ ಚುನಾವಣಾ ಲಾಭವನ್ನು ತರುವುದಿಲ್ಲ ಎಂದು ಹೇಳಿದ್ದಾರೆ.

ಇದರ ಜೊತೆಗೆ ಹಿಂದೂ ರಜಾದಿನಗಳ ಕಡಿತಗೊಳಿಸಲಾಗಿದೆ ಮತ್ತು ಮುಸ್ಲಿಂ ರಜಾದಿನಗಳ ಸಂಖ್ಯೆಯಲ್ಲಿನ ಹೆಚ್ಚಳವನ್ನು ಮಾಡಲಾಗಿದೆ ಎಂದು ಲೇಖನಗಳು ಮತ್ತು ವೀಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ಲೆಕ್ಕವಿಲ್ಲದಷ್ಟು ಕಂಡು ಬಂದಿದೆ.

ಕೆಲ ಶಾಲಾ ಶಿಕ್ಷಕರು ಈ ಬಗ್ಗೆ ಮಾತನಾಡಿದ್ದು, ಶಿಕ್ಷಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಕೆ.ಕೆ. ಪಾಠಕ್ ಅವರು ಕ್ಯಾಂಪಸ್‌ಗಳಲ್ಲಿ ಕಠಿಣ ನೀತಿಗಳನ್ನು ಜಾರಿಗೊಳಿಸಿದ್ದಾರೆ. ಅವರು ಶಾಲೆಯಲ್ಲಿ ಶಿಕ್ಷಕರ ಇರುವಿಕೆಯ ಅವಧಿಯನ್ನು ಸಂಜೆ 5ರವರೆಗೆ ವಿಸ್ತರಿಸಿದ್ದಾರೆ. ಸಾಫ್ಟ್‌ವೇರ್ ಮೂಲಕ ಅವರು ಶಿಕ್ಷಕರ ಹಾಜರಾತಿಯನ್ನು ಮೇಲ್ವಿಚಾರಣೆ ಮಾಡುತ್ತಾರೆ. ಇದಲ್ಲದೆ ಅವರು ಅನಿರೀಕ್ಷಿತವಾಗಿ ತಪಾಸಣೆ ನಡೆಸಿ ಹೊಸ ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ತಕ್ಷಣ ಕ್ರಮ ತೆಗೆದುಕೊಳ್ಳುತ್ತಾರೆ. ಅವರ ಕಟ್ಟುನಿಟ್ಟಿನ ನೀತಿಗಳು ಹಲವಾರು ಶಿಕ್ಷಕರ ಅಮಾನತು ಮತ್ತು ಅವರ ಸಂಬಳದಲ್ಲಿ ಕಡಿತಕ್ಕೆ ಕಾರಣವಾಗಿವೆ. ಇದರಿಂದ ಪಾಠಕ್ ವಿರುದ್ಧ ಹಲವಾರು ಶಿಕ್ಷಕರು ಆಕ್ರೋಶಗೊಂಡಿದ್ದಾರೆ ಎಂದು ಹೇಳಿದ್ದಾರೆ.

ಬಿಹಾರದ ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಚಿವ ಸಂಜಯ್ ಝಾ ಈ ಬಗ್ಗೆ ಸ್ಪಷ್ಟನೆಯನ್ನು ನೀಡಿದ್ದು,  ಹಿಂದೂ ಮತ್ತು ಮುಸ್ಲಿಂ ಹಬ್ಬಗಳ ರಜಾದಿನಗಳ ಸಂಖ್ಯೆಯಲ್ಲಿ ಬದಲಾಗಿಲ್ಲ.  2023ರ ರಜಾದಿನದ ಕ್ಯಾಲೆಂಡರ್ 60 ರಜಾದಿನಗಳನ್ನು ಹೊಂದಿತ್ತು. 2024ರಲ್ಲಿ 60 ರಜೆಗಳಿವೆ. ಇದರಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಇದನ್ನು ಓದಿ: ರಾಮಮಂದಿರಕ್ಕೆ ಧನಸಹಾಯ ನೀಡಲು ಬಯಸಿದ ನಾಲ್ವರ ಹಂತಕ ಪೇದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋದಿ ಅಣಕ: ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ‘ಛಾತ್ರೋಂ ಕಿ ಗೂಂಜ್’ ಕಾರ್ಯಕ್ರಮದಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಂಡ ಸ್ಟ್ಯಾಂಡಪ್ ಕಾಮೆಡಿಯನ್‌ ಒಬ್ಬರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿರುವ ವಿಚಾರ...

ಪ.ಬಂಗಾಳ: ನಂದಿಗ್ರಾಮದಲ್ಲಿ ಕಾಂಗ್ರೆಸ್‌ಗೆ ಮಮತಾ ಬೆಂಬಲ: ಬಂಗಾಳದ ವಿರೋಧ ಪಕ್ಷಗಳ ರಾಜಕೀಯದಲ್ಲಿ ಮರುಹೊಂದಾಣಿಕೆಯ ಸುಳಿವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ಹೊಸ ರಾಜಕೀಯ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಬಣ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ ಅವರಿಗೆ...

SIR ಎಂದರೆ ‘ಶಾ ಇನ್ಸ್ಟಿಗೇಟೆಡ್ ರಿಮೂವಲ್ʼ : ಕಾಂಗ್ರೆಸ್

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಕೈಬಿಡುತ್ತಿರುವ ವಿಷಯವನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್, ಈ ಎಸ್‌ಐಆರ್ ಪ್ರಕ್ರಿಯೆಯು ವಾಸ್ತವವಾಗಿ ಮತದಾರರ ಬೃಹತ್ "ಶಾ...

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...