Homeಮುಖಪುಟರಾಜಸ್ಥಾನ: ರಾಷ್ಟ್ರೀಯ ರಜಪೂತ ಕರ್ಣಿ ಸೇನಾ ಮುಖ್ಯಸ್ಥನ ಗುಂಡಿಕ್ಕಿ ಹತ್ಯೆ

ರಾಜಸ್ಥಾನ: ರಾಷ್ಟ್ರೀಯ ರಜಪೂತ ಕರ್ಣಿ ಸೇನಾ ಮುಖ್ಯಸ್ಥನ ಗುಂಡಿಕ್ಕಿ ಹತ್ಯೆ

- Advertisement -
- Advertisement -

ಬಲ ಪಂಥೀಯ ಸಂಘಟನೆ ರಾಷ್ಟ್ರೀಯ ರಜಪೂತ ಕರ್ಣಿ ಸೇನಾ ಮುಖ್ಯಸ್ಥ ಸುಖದೇವ್ ಸಿಂಗ್ ಗೊಗಮೆಡಿ ಅವರನ್ನು ದುಷ್ಕರ್ಮಿಗಳು ಮನೆಗೆ ನುಗ್ಗಿ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.

ಇಂದು (ಡಿ.5) ರಾಜಸ್ಥಾನದ ಜೈಪುರದ ಶ್ಯಾಮ್ ನಗರ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಅತಿಥಿಗಳಂತೆ ಮನೆಗೆ ಆಗಮಿಸಿದ ನಾಲ್ವರು ಅಪರಿಚಿತರು ಗೊಗಮೆಡಿ ಜೊತೆ ಮಾತನಾಡುವಂತೆ ಅಭಿನಯಿಸಿ ಹಠಾತ್ ಗುಂಡಿನ ದಾಳಿ ನಡೆಸಿದ್ದಾರೆ ಎಂದು ವರದಿಗಳು ಹೇಳಿವೆ. ಈ ಕುರಿತ ಸಿಸಿಟಿವಿ ದೃಶ್ಯ ವೈರಲ್ ಆಗಿದೆ. ಗುಂಡಿನ ದಾಳಿಯಲ್ಲಿ ಗೊಗಮೆಡಿ ಅವರ ಇಬ್ಬರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ರಾಜಸ್ಥಾನ ಡಿಜಿಪಿ ಉಮೇಶ್ ಮಿಶ್ರಾ ತಿಳಿಸಿದ್ದಾರೆ.

ಸುಖದೇವ್ ಸಿಂಗ್ ಗೊಗಮೆಡಿ ಅವರು ಲೋಕೇಂದ್ರ ಸಿಂಗ್ ಕಲ್ವಿಯವರ ರಜಪೂತ್ ಕರ್ಣಿ ಸೇನೆಯ ಭಾಗವಾಗಿದ್ದರು. ಈ ಸಂಘಟನೆ ಸಂಜಯ್ ಲೀಲಾ ಬನ್ಸಾಲಿಯವರ ‘ಪದ್ಮಾವತ್’ ಸಿನಿಮಾದ ವಿರುದ್ಧ ಪ್ರತಿಭಟನೆ ನಡೆಸುವ ಮೂಲಕ ಗಮನ ಸೆಳೆದಿತ್ತು. ನಂತರ ಆಂತರಿಕ ಗಲಾಟೆಯಿಂದ ಗೊಗಮೆಡಿ ತಮ್ಮದೇ ಪ್ರತ್ಯೇಖ ಕರ್ಣಿ ಸೇನೆಯನ್ನು ಕಟ್ಟಿದ್ದರು.

ದೀಪಿಕಾ ಪಡುಕೋಣೆ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡ ‘ಪದ್ಮಾವತ್’ ಸಿನಿಮಾ ವಿರೋಧಿಸಿ ಮತ್ತು ಗ್ಯಾಂಗ್‌ಸ್ಟರ್ ಆನಂದ್‌ಪಾಲ್ ಎನ್‌ಕೌಂಟರ್ ಪ್ರಕರಣದ ನಂತರ ರಾಜಸ್ಥಾನದಲ್ಲಿ ಪ್ರತಿಭಟನೆ ನಡೆಸುವ ಗೊಗಮೆಡಿ ಬೆಳಕಿಗೆ ಬಂದಿದ್ದರು. ಈ ಘಟನೆಗಳಿಗೆ ಸಂಬಂಧಿಸಿದಂತೆ ಅವರ ಹಲವು ವಿಡಿಯೋಗಳು ಕೂಡ ವೈರಲ್ ಆಗಿದ್ದವು.

ಗ್ಯಾಂಗ್‌ಸ್ಟರ್‌ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಸದಸ್ಯ ರೋಹಿತ್ ಗೋಡಾರಾ ಕಪುರಿಸರ್ ಗೊಗಮೆಡಿ ಹತ್ಯೆಯ ಹೊಣೆ ಹೊತ್ತುಕೊಂಡಿದ್ದಾನೆ ಎಂದು ಹಿಂದುಸ್ಥಾನ್ ಟೈಮ್ಸ್‌ ವರದಿ ಮಾಡಿದೆ.

ಇದನ್ನೂ ಓದಿ : ಭಾರತೀಯ ಪೊಲೀಸರ ವಿರುದ್ಧ ಗಂಭೀರ ಆರೋಪ ಮಾಡಿದ್ದ ಬ್ರಿಟನ್‌ನಲ್ಲಿ ಮೃತ ಸಿಖ್‌ ಕಾರ್ಯಕರ್ತ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪತಂಜಲಿಯ ಪತನ ಶುರು: ಸೋನ್ ಪಾಪ್ಡಿಯಿಂದ ಮೂವರಿಗೆ ಜೈಲು ಶಿಕ್ಷೆ

0
ಪತಂಜಲಿ ನವರತ್ನ ಎಲೈಚಿ ಸೋನ್ ಪಾಪ್ಡಿ(ಸಾಂಪ್ರದಾಯಿಕ ಸಿಹಿತಿಂಡಿ) ಗುಣಮಟ್ಟದ ಪರೀಕ್ಷೆಯಲ್ಲಿ ವಿಫಲವಾದ ಹಿನ್ನೆಲೆ ಉತ್ತರಾಖಂಡದ ನ್ಯಾಯಾಲಯವು ಪತಂಜಲಿ ಆಯರ್ವೇದ ಲಿಮಿಟೆಡ್‍ನ ಸಹಾಯಕ ವ್ಯವಸ್ಥಾಪಕ ಸೇರಿದಂತೆ ಮೂರು ಮಂದಿಗೆ ಆರು ತಿಂಗಳ ಜೈಲು ಶಿಕ್ಷೆ...