ತೆಲಂಗಾಣ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಟಿಪಿಸಿಸಿ ಅಧ್ಯಕ್ಷ ಹಾಗೂ ಕೊಡಂಗಲ್ ಶಾಸಕ ರೇವಂತ್ ರೆಡ್ಡಿ ಅವರನ್ನು ಆಯ್ಕೆ ಮಾಡಲಾಗಿದೆ. ಡಿಸೆಂಬರ್ 7 ಗುರುವಾರ ಪ್ರಮಾಣವಚನ ಕಾರ್ಯಕ್ರಮ ನಡೆಯಲಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ತಿಳಿಸಿದ್ದಾರೆ.
ಉಪ ಮುಖ್ಯಮಂತ್ರಿಯಾಗಿ ಯಾರನ್ನು ನೇಮಿಸಲಾಗುವುದು ಎಂದು ಮುಂದೆ ಮಾಹಿತಿ ನೀಡುವುದಾಗಿ ವೇಣುಗೋಪಾಲ್ ಹೇಳಿದ್ದಾರೆ. ನೂತನ ಸಿಎಂ ಜೊತೆ ಇತರ ಕೆಲ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಯಿದೆ.
The swearing-in ceremony of new Telangana CM will be held on December 7. More details will be announced soon.
: Shri @kcvenugopalmp, General Secretary (Organisation) pic.twitter.com/5RNEmPwoWg
— Congress (@INCIndia) December 5, 2023
ಡಿಸೆಂಬರ್ 3ರಂದು ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ದಾಖಲಿಸುತ್ತಿದ್ದಂತೆ ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಶಾಸಕರ ಸಭೆ ನಡೆದಿತ್ತು. ಈ ಸಭೆಯಲ್ಲಿ ರೇವಂತ್ ರೆಡ್ಡಿ ಅವರನ್ನು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆ ಮಾಡಲಾಗಿತ್ತು. ಆದರೆ, ಮುಖ್ಯಮಂತ್ರಿ ಆಯ್ಕೆ ವಿಚಾರವನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಬಿಡಲಾಗಿತ್ತು.
ಶಾಸಕರ ಅಭಿಪ್ರಾಯ ಮತ್ತು ಎಐಸಿಸಿ ಅಧ್ಯಕ್ಷರ ನಿರ್ಧಾರದಂತೆ ರೇವಂತ್ ರೆಡ್ಡಿ ಅವರನ್ನು ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲಾಗಿದೆ ಎಂದು ದೆಹಲಿಯ ಎಐಸಿಸಿ ಕಚೇರಿಯಲ್ಲಿ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ವೇಣುಗೋಪಾಲ್ ತಿಳಿಸಿದ್ದಾರೆ.
తెలంగాణ రాష్ట్ర ముఖ్యమంత్రిగా ఎన్నికైన టిపిసిసి అధ్యక్షులు, కొడంగల్ ఎమ్మెల్యే శ్రీ ఎనుముల రేవంత్ రెడ్డి గారికి తెలంగాణ కాంగ్రెస్ పార్టీ తరపున అభినందనలు తెలియజేస్తున్నాం. pic.twitter.com/VHsNLmHHQ0
— Telangana Congress (@INCTelangana) December 5, 2023
ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 64 ಸ್ಥಾನಗಳನ್ನು ಗೆದ್ದು ಸರ್ಕಾರ ರಚಿಸಲು ಅಣಿಯಾಗಿದೆ. ತೆಲಂಗಾಣ ಪ್ರತ್ಯೇಕ ರಾಜ್ಯ ರಚನೆಯಾದ ಬಳಿಕ ಮೊದಲ ಬಾರಿಗೆ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ರೇವಂತ್ ರೆಡ್ಡಿ ಅವರು ಕೆಸಿಆರ್ ಬಳಿಕ ತೆಲಂಗಾಣದ ಎರಡನೇ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ.
ರೇವಂತ್ ರೆಡ್ಡಿ ಮಾತ್ರವಲ್ಲದೆ, ದಲಿತ ಸಮುದಾಯದ ನಾಯಕ ಮಲ್ಲು ಭಟ್ಟಿ ವಿಕ್ರಮಾರ್ಕ ಮತ್ತು ಏಳು ಬಾರಿಯ ಶಾಸಕ ಹಾಗೂ ವಾಯುಪಡೆಯ ಮಾಜಿ ಪೈಲಟ್ ಉತ್ತಮ್ ಕುಮಾರ್ ರೆಡ್ಡಿ ಸಿಎಂ ಸ್ಥಾನದ ರೇಸ್‌ನಲ್ಲಿದ್ದರು. ಆದರೆ, ಕಾಂಗ್ರೆಸ್ ಹೈಕಮಾಂಡ್ ನಿರೀಕ್ಷೆಯಂತೆ ರೇವಂತ್ ರೆಡ್ಡಿಗೆ ಮನೆ ಹಾಕಿದೆ.
ತೆಲಂಗಾಣ ವಿಧಾನಸಭೆಯ 119 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಬಹುಮತ ಪಡೆದರೆ, ಹತ್ತು ವರ್ಷಗಳ ಕಾಲ ಆಡಳಿತ ನಡೆಸಿದ ಬಿಆರ್‌ಎಸ್ ಪಕ್ಷ 39 ಸ್ಥಾನಗಳನ್ನು ಪಡೆಯುವ ಮೂಲಕ ಅಧಿಕಾರ ಕಳೆದುಕೊಂಡಿದೆ. 8 ಸ್ಥಾನಗಳನ್ನು ಪಡೆದ ಬಿಜೆಪಿ ಮೂರನೇ ಪಕ್ಷವಾಗಿ ಹೊರ ಹೊಮ್ಮಿದ್ದು, ಅಸಾದುದ್ದೀನ್ ಓವೈಸಿ ನೇತೃತ್ವದ ಎಐಎಂಐಎಂ ಪಕ್ಷ 7 ಸ್ಥಾನಗಳನ್ನು ಗೆಲ್ಲುವ ಮೂಲಕ ನಾಲ್ಕನೇ ಸ್ಥಾನ ಪಡೆದುಕೊಂಡಿದೆ. ಇತರರು 1 ಸ್ಥಾನ ಪಡೆದುಕೊಂಡಿದ್ದಾರೆ.
ಇದನ್ನೂ ಓದಿ : ತೆಲಂಗಾಣ ಚುನಾವಣೆಯಲ್ಲಿ ಸಂಚಲನ ಸೃಷ್ಟಿಸಿದ್ದ ‘ಎಮ್ಮೆ ಕಾಯುವ’ ಹುಡುಗಿ ಏನಾದ್ರು?


