Homeಮುಖಪುಟನಕಲಿ ಜಿಎಸ್‌ಟಿ ನೋಂದಣಿ: 24,000 ಕೋಟಿ ರೂ.ಗೂ ಅಧಿಕ ತೆರಿಗೆ ವಂಚನೆ ಬಯಲು

ನಕಲಿ ಜಿಎಸ್‌ಟಿ ನೋಂದಣಿ: 24,000 ಕೋಟಿ ರೂ.ಗೂ ಅಧಿಕ ತೆರಿಗೆ ವಂಚನೆ ಬಯಲು

- Advertisement -
- Advertisement -

ಜಿಎಸ್‌ಟಿ ಅಧಿಕಾರಿಗಳು ಕೈಗೊಂಡ ಮಹತ್ವದ ಕಾರ್ಯಚರಣೆಯಲ್ಲಿ 21,791 ನಕಲಿ ಜಿಎಸ್‌ಟಿ ನೋಂದಣಿಗಳು ಪತ್ತೆಯಾಗಿದೆ. ಇದರಿಂದ ಸುಮಾರು 24,000 ಕೋಟಿ ರೂ.ಗೂ ಅಧಿಕ ತೆರಿಗೆ ವಂಚನೆ ಬಯಲಾಗಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಗಳವಾರ ಹೇಳಿದ್ದಾರೆ.

ರಾಜ್ಯಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಲಿಖಿತ ಉತ್ತರ ನೀಡಿದ ಸಚಿವರು, ಪ್ರಾಮಾಣಿಕ ತೆರಿಗೆದಾರರ ಹಿತಾಸಕ್ತಿ ಕಾಪಾಡಲು ಮತ್ತು ತೆರಿಗೆದಾರರಿಗೆ ತೀವ್ರ ತೊಂದರೆಯಾಗದಂತೆ ಕಾಲಕಾಲಕ್ಕೆ ಸೂಚನೆಗಳನ್ನು ನೀಡಲಾಗಿದ್ದು, ಅಧಿಕಾರಿಗಳು ಈ ಬಗ್ಗೆ ಅಧಿಕಾರ ಚಲಾಯಿಸುವಾಗ ಎಚ್ಚರಿಕೆಯಿಂದ ಮತ್ತು ಕಾಳಜಿ ವಹಿಸುವಂತೆ ಸೂಚಿಸಿದ್ದಾರೆ.

ಜಿಎಸ್‌ಟಿ ನೋಂದಣಿ ಹೊಂದಿರುವ ಒಟ್ಟು 21,791 ಘಟಕಗಳು ಅಸ್ತಿತ್ವದಲ್ಲಿಲ್ಲ ಎಂದು ಪತ್ತೆ ಮಾಡಲಾಗಿದೆ. ಇದರಲ್ಲಿ ರಾಜ್ಯ ತೆರಿಗೆ ವ್ಯಾಪ್ತಿಗೆ ಸಂಬಂಧಿಸಿದ 11,392 ಘಟಕಗಳು ಮತ್ತು ಸಿಬಿಐಸಿ ಅಧಿಕಾರ ವ್ಯಾಪ್ತಿಗೆ ಸಂಬಂಧಿಸಿದ 10,399 ಘಟಕಗಳು ಸೇರಿದೆ. ಇದರಿಂದ 24,010 ಕೋಟಿ ರೂ. ವಂಚನೆ ನಡೆದಿರುವುದು ಪತ್ತೆಯಾಗಿದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಕೇಂದ್ರೀಯ ಪರೋಕ್ಷ ತೆರಿಗೆಗಳು ಮತ್ತು ಕಸ್ಟಮ್ಸ್ ಮಂಡಳಿ (ಸಿಬಿಐಸಿ) ನಡೆಸಿದ ನಕಲಿ ಜಿಎಸ್‌ಟಿ ನೋಂದಣಿಗಳ ವಿರುದ್ಧ ವಿಶೇಷ ಅಭಿಯಾನದ ವೇಳೆ ನಕಲಿ ನೋಂದಣಿ ಹೊಂದಿರುವ ಸಂಸ್ಥೆಗಳ ಸಂಖ್ಯೆ ಮತ್ತು ಪತ್ತೆಯಾದ ಒಟ್ಟು ಮೊತ್ತದ ಕುರಿತ ಪ್ರಶ್ನೆಗೆ ಸಚಿವರು ಉತ್ತರಿಸುತ್ತಾ ಈ ಅಂಕಿ ಅಂಶವನ್ನು ಬಹಿರಂಗಪಡಿಸಿದ್ದಾರೆ. ಮೇ 16 ರಿಂದ ಜು.15ರವೆರೆಗೆ ಸಿಬಿಐಸಿ ಈ ಕುರಿತು ವಿಶೇಷ ಕಾರ್ಯಾಚರಣೆ ನಡೆಸಿತ್ತು.

ಇ–ವಾಣಿಜ್ಯ ಸಂಸ್ಥೆಗಳಿಗೆ ಜಿಎಸ್‌ಟಿ ನೋಂದಣಿಗೆ ಸರಳೀಕೃತ ವಿಧಾನವನ್ನು ಈಗಾಗಲೇ ಅಧಿಸೂಚನೆಯಲ್ಲಿ ಪ್ರಕಟಿಸಲಾಗಿದೆ. ಇದರ ಅಡಿಯಲ್ಲಿ, ಇ–ವಾಣಿಜ್ಯ ಸಂಸ್ಥೆಗಳು ನೋಂದಣಿಗೆ ಅರ್ಜಿ ಸಲ್ಲಿಸಿದಾಗ, ಅರ್ಜಿ ಸಲ್ಲಿಕೆಯಾದ ರಾಜ್ಯದಲ್ಲಿ ಆ ಸಂಸ್ಥೆಯು ಭೌತಿಕವಾಗಿ ಅಸ್ತಿತ್ವ ಹೊಂದಿಲ್ಲದಿದ್ದರೆ, ತನ್ನ ಭೌತಿಕ ಅಸ್ತಿತ್ವ ಇರುವ ರಾಜ್ಯ ಅಥವಾ ಕೇಂದ್ರಾಡಳಿತ ಪ್ರದೇಶದ ವಿಳಾಸ ನೀಡಲು ಅವಕಾಶ ಕಲ್ಪಿಸಲಾಗಿದೆ ಎಂದು ಸಚಿವರು ಇದೇ  ವೇಳೆ ಹೇಳಿದ್ದಾರೆ.

ಇದಲ್ಲದೆ ನೋಂದಣಿ ಪ್ರಕ್ರಿಯೆಯನ್ನು ಬಲಪಡಿಸಲು ಜಿಎಸ್‌ಟಿ ನಿಯಮಗಳಲ್ಲಿ ತಿದ್ದುಪಡಿಗಳನ್ನು ಮಾಡಲಾಗಿದೆ. ನೋಂದಣಿದಾರರಿಗೆ ಬಯೋಮೆಟ್ರಿಕ್ ಆಧಾರಿತ ಆಧಾರ್ ದೃಢೀಕರಣ, ದಾಖಲೆಗಳ ಮೂಲ ಪ್ರತಿಯ ಪರಿಶೀಲನೆಯನ್ನು ಕೂಡ ಮಾಡಲಾಗುತ್ತದೆ. ನೋಂದಾಯಿತ ವ್ಯಕ್ತಿಯ ಬ್ಯಾಂಕ್ ಖಾತೆ, ಹೆಸರು ಮತ್ತು PAN ನ ವಿವರಗಳನ್ನು ನೋಂದಣಿಯ  30 ದಿನಗಳ ಒಳಗೆ ಒದಗಿಸಬೇಕಾಗುತ್ತದೆ ಎಂದು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಹೇಳಿದ್ದಾರೆ.

ಇದನ್ನು ಓದಿ: ‘ಗೋರಕ್‌ಪುರ ಆಸ್ಪತ್ರೆ ದುರಂತ’ ಪುಸ್ತಕ ಬರೆದ ಡಾ.ಕಫೀಲ್ ಖಾನ್ ವಿರುದ್ದ ಪ್ರಕರಣ ದಾಖಲು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...