Homeಮುಖಪುಟ2019-2021ರ ನಡುವೆ 35,950 ವಿದ್ಯಾರ್ಥಿಗಳು ಆತ್ಮಹತ್ಯೆ: ಕೇಂದ್ರ ಸರ್ಕಾರ

2019-2021ರ ನಡುವೆ 35,950 ವಿದ್ಯಾರ್ಥಿಗಳು ಆತ್ಮಹತ್ಯೆ: ಕೇಂದ್ರ ಸರ್ಕಾರ

- Advertisement -
- Advertisement -

2019 ಮತ್ತು 2021 ರ ನಡುವೆ ದೇಶದಲ್ಲಿ ಒಟ್ಟು 35,950 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ ಮಂಗಳವಾರ ಸಂಸತ್ತಿಗೆ ತಿಳಿಸಿದೆ.

ದೇಶದಲ್ಲಿ ಸಾಮಾಜಿಕ ತಾರತಮ್ಯದಿಂದ ಆತ್ಮಹತ್ಯೆ ಮಾಡಿಕೊಂಡ ಪರಿಶಿಷ್ಟ ಜಾತಿ (ಎಸ್‌ಸಿ) ಮತ್ತು ಪರಿಶಿಷ್ಟ ಪಂಗಡದ (ಎಸ್‌ಟಿ) ವಿದ್ಯಾರ್ಥಿಗಳ ಸಂಖ್ಯೆಗೆ ಸಂಬಂಧಿಸಿದಂತೆ ಲೋಕಸಭೆಯಲ್ಲಿ ಜನತಾ ದಳ (ಯುನೈಟೆಡ್) ಸದಸ್ಯ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವ ಅಬ್ಬಯ್ಯ ನಾರಾಯಣಸ್ವಾಮಿ “ದೇಶದಲ್ಲಿ ಸಾಮಾಜಿಕ ತಾರತಮ್ಯದಿಂದ ಆತ್ಮಹತ್ಯೆ ಮಾಡಿಕೊಂಡ ಎಸ್‌ಸಿ, ಎಸ್‌ಟಿ ವಿದ್ಯಾರ್ಥಿಗಳ ಸಂಖ್ಯೆಯ ಬಗ್ಗೆ ಯಾವುದೇ ಮಾಹಿತಿ ಇಲ್ಲ” ಎಂದು ಹೇಳಿದ್ದಾರೆ.

ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (ಎನ್‌ಸಿಆರ್‌ಬಿ)ದ ಅಂಕಿ ಅಂಶಗಳ ಪ್ರಕಾರ, 2019 ರಲ್ಲಿ 10,335, 2020ರಲ್ಲಿ 12,526 ಮತ್ತು 2021 ರಲ್ಲಿ 13,089 ವಿದ್ಯಾರ್ಥಿಗಳ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

ಸಾಮಾಜಿಕ ತಾರತಮ್ಯವನ್ನು ತಡೆಗಟ್ಟಲು ದೇಶದಲ್ಲಿ ಯಾವ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ? ಎಂಬ ಪ್ರಶ್ನೆಗೆ ಉತ್ತರಿಸಿದ ನಾರಾಯಣಸ್ವಾಮಿ, ಉನ್ನತ ಶಿಕ್ಷಣ ಇಲಾಖೆಯು ಕೌನ್ಸೆಲಿಂಗ್ ಸೆಲ್‌ಗಳನ್ನು ಸ್ಥಾಪಿಸಿದೆ. ಎಸ್‌ಸಿ/ಎಸ್‌ಟಿ ವಿದ್ಯಾರ್ಥಿಗಳ ಸೆಲ್, ಸಮಾನ ಅವಕಾಶ ಸೆಲ್, ವಿದ್ಯಾರ್ಥಿಗಳ ಕುಂದು ಕೊರತೆಗಳ ಸೆಲ್, ಈ ರೀತಿಯ ವಿವಿಧ ಕಾರ್ಯವಿಧಾನಗಳನ್ನು ಅಳವಡಿಸಿಕೊಳ್ಳಲಾಗಿದೆ. ವಿದ್ಯಾರ್ಥಿಗಳ ಕುಂದುಕೊರತೆ ಸಮಿತಿ ಮತ್ತು ದೇಶಾದ್ಯಂತ ಶಿಕ್ಷಣ ಸಂಸ್ಥೆಗಳಲ್ಲಿ ಸಂಪರ್ಕ ಅಧಿಕಾರಿಗಳನ್ನು ನೇಮಿಸಲಾಗಿದೆ ಎಂದು ತಿಳಿಸಿದ್ದಾರೆ.

ಇದಲ್ಲದೆ, ಅಸ್ಪೃಶ್ಯತೆ, ಪರಿಶಿಷ್ಟ ಜಾತಿ (ಎಸ್‌ಸಿ) ಮತ್ತು ಪರಿಶಿಷ್ಟ ಪಂಗಡ (ಎಸ್‌ಟಿ) (ದೌರ್ಜನ್ಯಗಳ ತಡೆಗಟ್ಟುವಿಕೆ)ಗಳ ನಾಗರಿಕ ಹಕ್ಕುಗಳ (ಪಿಸಿಆರ್) ಕಾಯಿದೆ 1955, ( ಪಿಒಎ) ಕಾಯಿದೆ, 1989, ಎಸ್‌ಸಿ ಮತ್ತು ಎಸ್‌ಟಿಗಳ ವಿದ್ಯಾರ್ಥಿಗಳು ಸೇರಿದಂತೆ ಸದಸ್ಯರ ವಿರುದ್ಧ ದೌರ್ಜನ್ಯದ ಅಪರಾಧಗಳ ತಡೆ ಆಯೋಗ ಜಾರಿಯಲ್ಲಿದೆ ಎಂದು ಸಚಿವರು ಹೇಳಿದ್ದಾರೆ.

ಇದನ್ನೂ ಓದಿ : ಕಳೆದ 5 ವರ್ಷಗಳಲ್ಲಿ ಒಳಚರಂಡಿ ಸ್ವಚ್ಚಗೊಳಿಸುವಾಗ 400ಕ್ಕೂ ಹೆಚ್ಚು ಜನರು ಸಾವು: ಕೇಂದ್ರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...