ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ಬಿಜೆಪಿ ಸರ್ಕಾರ ನೀಡಿದ್ದ ಅನುಮತಿಯನ್ನು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಹಿಂಪಡೆದಿತ್ತು. ಸರ್ಕಾರದ ಈ ಕ್ರಮ ಪ್ರಶ್ನಿಸಿ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ ಹೂಡಿರುವ ಯತ್ನಾಳ್, ಒಪ್ಪಿಗೆ ಹಿಂಪಡೆದ ರಾಜ್ಯ ಸರ್ಕಾರದ ಆದೇಶ ರದ್ದುಪಡಿಸುವಂತೆ ಕೋರಿದ್ದಾರೆ.
ಶಾಸಕ ಯತ್ನಾಳ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಕೆ ವೇಳೆ, ಒಮ್ಮೆ ಸಿಬಿಐ ತನಿಖೆಗೆ ನೀಡಿದ ಒಪ್ಪಿಗೆ ಹಿಂಪಡೆಯುವಂತಿಲ್ಲ ಎಂದು ಕಾಜಿ ಲೆಂಡಪ್ ದೋರ್ಜಿ ಪ್ರಕರಣದ ತೀರ್ಪನ್ನು ಉಲ್ಲೇಖಿಸಿದ್ದಾರೆ ಎಂದು ತಿಳಿದು ಬಂದಿದೆ. ಸಿಬಿಐ ತನಿಖೆ ಬಹುತೇಕ ಮುಕ್ತಾಯದ ಹಂತದಲ್ಲಿದೆ. ಸರ್ಕಾರ ಕಾನೂನುಬಾಹಿರ ಕ್ರಮ ಕೈಗೊಂಡಿದೆ. ಸಿಬಿಐ ತನಿಖೆಯನ್ನು ಮೊಟಕುಗೊಳಿಸುವ ಉದ್ದೇಶ ಸರ್ಕಾರ ಹೊಂದಿದೆ ಎಂದು ಯತ್ನಾಳ್ ಆರೋಪಿಸಿದ್ದಾರೆ.
2018ರಲ್ಲಿ ಡಿಕೆ ಶಿವಕುಮಾರ್ ನಿವಾಸದ ಮೇಲೆ ದಾಳಿ ನಡೆಸಿದ್ದ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು, ಡಿಕೆಶಿಯನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿತ್ತು. ಬಳಿಕ ಭ್ರಷ್ಟಾಚಾರ ತಡೆ ಕಾಯ್ದೆಯಡಿ ಪ್ರಕರಣದ ಸಿಬಿಐ ತನಿಖೆ ನಡೆಸಲು ಬಿಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಅನುಮತಿ ನೀಡಿತ್ತು. ಸರ್ಕಾರದ ಸಮ್ಮತಿ ಪಡೆದು ಡಿಕೆ ಶಿವಕುಮಾರ್ ವಿರುದ್ಧ ಸಿಬಿಐ ಎಫ್‌ಐಆರ್ ದಾಖಲಿಸಿತ್ತು. ತನಿಖೆ ಅಂತಿಮ ಹಂತದಲ್ಲಿತ್ತು. ಆದರೆ, ಪ್ರಸ್ತುತ ರಾಜ್ಯ ಕಾಂಗ್ರೆಸ್ ಸರ್ಕಾರ ತನಿಖೆಗೆ ನೀಡಿದ್ದ ಅನುಮತಿಯನ್ನು ಹಿಂಪಡೆದಿದೆ.
ಸರ್ಕಾರದ ನಿರ್ಧಾರದ ವಿರುದ್ಧ ನ್ಯಾಯಾಲಯದ ಮೊರೆ ಹೋಗುವುದಾಗಿ ಯತ್ನಾಳ್ ಹೇಳಿದ್ದರು. ಅದರಂತೆ ಈಗ ಅರ್ಜಿ ಸಲ್ಲಿಕೆ ಮಾಡಿದ್ದಾರೆ.
ಇದನ್ನೂ ಓದಿ : ‘ಆರ್‌ಎಸ್‌ಎಸ್ ಬಹಿರಂಗವಾಗಿ ಮುಸ್ಲಿಂ ವಿರುದ್ಧ; ಅಂತರಂಗದಲ್ಲಿ ದಲಿತರ ವಿರುದ್ಧ’



40% yaavaga tanike aarabha please