Homeಮುಖಪುಟ'ಹದಿಹರೆಯದ ಹೆಣ್ಣು ಲೈಂಗಿಕ ಪ್ರಚೋದನೆ ನಿಗ್ರಹಿಸಬೇಕು' ಎಂಬ ನ್ಯಾಯಾಧೀಶರ ಸಲಹೆಗೆ ಸುಪ್ರೀಂ ಆಕ್ಷೇಪ

‘ಹದಿಹರೆಯದ ಹೆಣ್ಣು ಲೈಂಗಿಕ ಪ್ರಚೋದನೆ ನಿಗ್ರಹಿಸಬೇಕು’ ಎಂಬ ನ್ಯಾಯಾಧೀಶರ ಸಲಹೆಗೆ ಸುಪ್ರೀಂ ಆಕ್ಷೇಪ

- Advertisement -
- Advertisement -

ಹದಿಹರೆಯದ ಹೆಣ್ಣುಮಕ್ಕಳು ತಮ್ಮ ಲೈಂಗಿಕ ಪ್ರಚೋದನೆಯನ್ನು ನಿಯಂತ್ರಿಸಬೇಕು ಎಂಬ ಕಲ್ಕತ್ತಾ ಹೈಕೋರ್ಟ್‌ನ ಸಲಹೆಗಳು ಅತ್ಯಂತ ಆಕ್ಷೇಪಾರ್ಹ ಮತ್ತು ಸಂಪೂರ್ಣವಾಗಿ ಅನಗತ್ಯ ಎಂದು ಸುಪ್ರೀಂಕೋರ್ಟ್ ಹೇಳಿದೆ.

ಈ ಕುರಿತು ಸಲ್ಲಿಕೆಯಾಗಿದ್ದ ದೂರಿನ ಕುರಿತು ಶುಕ್ರವಾರ ನಡೆದ ವಿಚಾರಣೆಯಲ್ಲಿ ಆಕ್ಷೇಪ ವ್ಯಕ್ತಪಡಿಸಿರುವ ಸುಪ್ರೀಂಕೋರ್ಟ್‌ನ ನ್ಯಾಯಮೂರ್ತಿಗಳಾದ ಅಭಯ್ ಎಸ್ ಓಕಾ ಮತ್ತು ಪಂಕಜ್ ಮಿಥಾಲ್, ಅಕ್ಟೋಬರ್ 18, 2023ರ ಕಲ್ಕತ್ತಾ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ ‘ಹದಿಹರೆಯದವರ ಖಾಸಗಿತನದ ಹಕ್ಕು’ ಎಂಬ ವಿಚಾರದ ಮೇಲೆ ದಾಖಲಾಗಿರುವ ಸ್ವಯಂ ಪ್ರೇರಿತ ಪ್ರಕರಣದಲ್ಲಿ ಪಶ್ಚಿಮ ಬಂಗಾಳ ಸರ್ಕಾರಕ್ಕೆ ಮತ್ತು ಸಂಬಂಧಪಟ್ಟವರಿಗೆ ನೋಟಿಸ್ ಜಾರಿ ಮಾಡಿದ್ದಾರೆ.

ಹದಿಹರೆಯದ ಹೆಣ್ಣುಮಕ್ಕಳು ತಮ್ಮ ಲೈಂಗಿಕ ಪ್ರಚೋದನೆಯನ್ನು ನಿಯಂತ್ರಿಸಬೇಕು ಮತ್ತು ಅವರ ಹಕ್ಕನ್ನು ರಕ್ಷಿಸಿಕೊಳ್ಳಬೇಕು ಎಂಬ ಕಲ್ಕತ್ತಾ ಹೈಕೋರ್ಟ್‌ನ ಸಲಹೆಗಳ ಕುರಿತು ತನ್ನ ಅಭಿಪ್ರಾಯ ವ್ಯಕ್ತಪಡಿಸಿರುವ ಸುಪ್ರೀಂಕೋರ್ಟ್, ‘ನ್ಯಾಯಾಧೀಶರು ಇಂತ ಪ್ರಕರಣಗಳನ್ನು ನಿರ್ವಹಿಸುವಾಗ ಬೋಧನೆ ಹಾಗೂ ವೈಯಕ್ತಿಕ ಅಭಿಪ್ರಾಯಗಳನ್ನು ವ್ಯಕ್ತಪಡಿಸುವುದನ್ನು ನಿಲ್ಲಿಸಬೇಕು’ ಎಂದು ಶುಕ್ರವಾರ ಹೇಳಿದೆ.

ಇದು ಹೆಣ್ಣು ಮಕ್ಕಳ ಕುರಿತು ಅತ್ಯಂತ ಆಕ್ಷೇಪಾರ್ಹವಾಗಿದ್ದು, ಸಂಪೂರ್ಣವಾಗಿ ಅನಗತ್ಯ ಮತ್ತು ಸಂವಿಧಾನದ 21ನೇ ವಿಧಿಯ ಉಲ್ಲಂಘನೆಯಾಗಿದೆ ಎಂದು ಹೇಳಿದೆ.

ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ ಕಾಯ್ದೆಯಡಿ (ಪೋಕ್ಸೋ) ಹಾಗೂ ಮದುವೆ ಮತ್ತು ಇತರ ಅಪರಾಧಗಳ ಉದ್ದೇಶಕ್ಕಾಗಿ ಮಕ್ಕಳ ಅಪಹರಣ ಪ್ರಕರಣದ ವಿಚಾರಣೆ ಸಂದರ್ಭದಲ್ಲಿ ಹೈಕೋರ್ಟ್ ಈ ಸಲಹೆ ನೀಡಿತ್ತು. ಈ ಕುರಿತು ಆಕ್ಷೇಪ ವ್ಯಕ್ತಪಡಿಸಿರುವ ಸುಪ್ರೀಂಕೋರ್ಟ್, ‘ಆರೋಪಿಗಳನ್ನು ಖುಲಾಸೆಗೊಳಿಸಿದ್ದಕ್ಕಾಗಿ ಹೈಕೋರ್ಟ್ ತನ್ನ ಆದೇಶದಲ್ಲಿ ಯಾವುದೇ ಸೂಕ್ತ ಕಾರಣಗಳನ್ನು ನೀಡಿಲ್ಲ’ ಎಂದು ಹೇಳಿದೆ. ಇನ್ನು ಇದೇ ಸಂದರ್ಭದಲ್ಲಿ ಪ್ರಕರಣದ ವಿಚಾರಣೆಯನ್ನು 01-01-24ಕ್ಕೆ ಮುಂದೂಡಿದೆ.

‘ಪ್ರತಿ ಹದಿಹರೆಯದ ಹೆಣ್ಣುಮಕ್ಕಳು ತನ್ನ ದೇಹದ ಸಮಗ್ರತೆಯ ಹಕ್ಕನ್ನು ರಕ್ಷಿಸುಸುವು ಆಕೆಯ ಕರ್ತವ್ಯ ಹಾಗೂ ಬಾಧ್ಯತೆಯಾಗಿದೆ; ಆಕೆಯ ಘನತೆ ಮತ್ತು ಸ್ವಾಭಿಮಾನವನ್ನು ರಕ್ಷಿಸಿಕೊಂಡು ಲಿಂಗಾಧಾರಿತ ಅಡೆತಡೆಗಳನ್ನು ಮೀರಿದ ಸ್ವಯಂ ಅಭಿವೃದ್ಧಿ ಕಾಣಬೇಕು. ಲೈಂಗಿಕ ಪ್ರಚೋದನೆಗಳನ್ನು ನಿಯಂತ್ರಿಸಿಬೇಕು. ಕೇವಲ ಎರಡು ನಿಮಿಷಗಳ ಲೈಂಗಿಕ ಆನಂದಕ್ಕಾಗಿ ಆಕೆ ಅವಕಾಶ ನೀಡಿದಾಗ ಅವಳು ಕಳೆದುಕೊಳ್ಳುವುದೇ ಹೆಚ್ಚು. ಆದ್ದರಿಂದ ಅವಳ ದೇಹದ ಸ್ವಾಯತ್ತತೆ ಮತ್ತು ಗೌಪ್ಯತೆಯ ಹಕ್ಕನ್ನು ರಕ್ಷಿಸಬೇಕು’ ಎಂಬ ಹೈಕೋರ್ಟ್ ನೀಡಿರುವ ತೀರ್ಪಿನ ಕುರಿತು ಸುಪ್ರೀಂಕೋರ್ಟ್ ನಿರ್ದಿಷ್ಟವಾಗಿ ಆಕ್ಷೇಪಣೆಗೆ ತೆಗೆದುಕೊಂಡಿತು.

‘ನ್ಯಾಯಾಧೀಶರು ತಮ್ಮ ವೈಯಕ್ತಿಕ ಅಭಿಪ್ರಾಯಗಳನ್ನು ವ್ಯಕ್ತಪಡಿಸಲು ಅಥವಾ ಬೋಧಿಸಲು ಸಾಧ್ಯವಿಲ್ಲ ಎಂದು ನಾವು ಭಾವಿಸುತ್ತೇವೆ. ಕಲ್ಕತ್ತಾ ಹೈಕೋರ್ಟ್‌ನ ಸಲಹೆಗಳು ಅತ್ಯಂತ ಆಕ್ಷೇಪಾರ್ಹ ಮತ್ತು ಸಂಪೂರ್ಣವಾಗಿ ಅನಗತ್ಯ. ನ್ಯಾಯಾಧೀಶರ ಈ ಹೇಳಿಕೆಗಳು ಸಂವಿಧಾನದ 21ನೇ ವಿಧಿಯ ಅಡಿಯಲ್ಲಿ ಹದಿಹರೆಯದವರ ಹಕ್ಕುಗಳನ್ನು ಸಂಪೂರ್ಣವಾಗಿ ಉಲ್ಲಂಘಿಸುತ್ತವೆ’ ಎಂದು ಸುಪ್ರೀಂಕೋರ್ಟ್ ಹೇಳಿದೆ.

ಪೋಕ್ಸೋ ಪ್ರಕರಣದಲ್ಲಿ ವ್ಯಕ್ತಿಯೋರ್ವನ ವಿರುದ್ಧ ಹೈಕೋರ್ಟ್ ನೀಡಿರು ಖುಲಾಸೆಯ ಆದೇಶವು ‘ಯಾವುದೇ ತರ್ಕಗಳಿಲ್ಲದ’ ಕಾರಣಕ್ಕೆ, ಸದರಿ ಪ್ರಕರಣದ ಕುರಿತು ಮೇಲ್ಮನವಿ ಸಲ್ಲಿಸುವ ಬಗ್ಗೆ ಯೋಚಿಸಬೇಕು ಎಂದು ನ್ಯಾಯಾಲಯವು ಪಶ್ಚಿಮ ಬಂಗಾಳದ ವಕೀಲೆ ಆಸ್ತಾ ಶರ್ಮಾ ಅವರಿಗೆ ಸಲಹೆ ನೀಡಿದೆ.

ಅ.18, 2023 ರಂದು, ಕಲ್ಕತ್ತಾ ಹೈಕೋರ್ಟ್‌ನ ವಿಭಾಗೀಯ ಪೀಠವು ಪ್ರತಿ ಹದಿಹರೆಯದ ಹೆಣ್ಣುಮಕ್ಕಳು ‘ಲೈಂಗಿಕ ಪ್ರಚೋದನೆಗಳನ್ನು ನಿಯಂತ್ರಿಸಬೇಕು ಮತ್ತು ತನ್ನ ದೇಹದ ಸಮಗ್ರತೆಯ ಹಕ್ಕನ್ನು ರಕ್ಷಿಸಬೇಕು’ ಎಂದು ಹೇಳಿತ್ತು.

ನಂತರ ನ್ಯಾಯಾಲಯವು ಅಪ್ರಾಪ್ತ ಬಾಲಕಿಯನ್ನು ಮದುವೆಯಾಗಿ ಹೆಣ್ಣು ಮಗುವಿನ ತಂದೆಯಾಗಿದ್ದ ವ್ಯಕ್ತಿಯೊಬ್ಬನ ಶಿಕ್ಷೆಯನ್ನು ರದ್ದುಗೊಳಿಸಿದ್ದಲ್ಲದೆ, ‘ಇದು ವಯಸ್ಸಿನ ದೃಷ್ಟಿಯಿಂದ ಒಪ್ಪದೇ ಇರುವುದಕ್ಕೆ ಸಾಧ್ಯವಿಲ್ಲ. ಆದರೆ, ಇಬ್ಬರು ಹದಿಹರೆಯದವರ ನಡುವಿನ ಒಪ್ಪಿಗೆಯ, ಶೋಷಣೆಯಿಲ್ಲದ ಸಮ್ಮತಿ ಲೈಂಗಿಕ ಸಂಬಂಧದ ಪ್ರಕರಣವಾಗಿದೆ. ಇದರಲ್ಲಿ ಬಲಿಪಶು ಎಂಬುದು ಅಪ್ರಸ್ತುತ’ ಎಂದು ಹೇಳಿದೆ.

ಇದನ್ನೂ ಓದಿ; ಪ್ರಶ್ನೆಗಾಗಿ ನಗದು ಪ್ರಕರಣ: ಲೋಕಸಭೆಯಿಂದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಉಚ್ಚಾಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...