Homeಮುಖಪುಟಮುಂದಿನ 30 ವರ್ಷ ಸಂಸತ್ತಿನ ಒಳಗೆ- ಹೊರಗೆ ನಿಮ್ಮ ವಿರುದ್ಧ ಹೋರಾಡುತ್ತೇನೆ: ಮಹುವಾ

ಮುಂದಿನ 30 ವರ್ಷ ಸಂಸತ್ತಿನ ಒಳಗೆ- ಹೊರಗೆ ನಿಮ್ಮ ವಿರುದ್ಧ ಹೋರಾಡುತ್ತೇನೆ: ಮಹುವಾ

- Advertisement -
- Advertisement -

ಪ್ರಶ್ನೆಗಾಗಿ ಹಣ ಪಡೆದ ಆರೋಪದ ಮೇಲೆ ಲೋಕಸಭೆಯಿಂದ ಉಚ್ಛಾಟಿಸಲ್ಪಟ್ಟಿರುವ ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೋಯಿತ್ರಾ ಅವರಿಗೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಸೇರಿದಂತೆ ಹಲವು ವಿಪಕ್ಷ ನಾಯಕರು ಬೆಂಬಲ ಸೂಚಿಸಿದರು. ಸಂಸತ್ತಿನ ಗಾಂಧಿ ಪ್ರತಿಮೆ ಮಂದೆ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು.

ನೈತಿಕ ಸಮಿತಿ ಶಿಫಾರಸ್ಸಿನ ಮೇರೆಗೆ ಲೋಕಸಭೆ ಸ್ಪೀಕರ್ ಮಹುವಾ ಅವರನ್ನು ಉಚ್ಛಾಟಿಸಿದ್ದು, ಈ ಕುರಿತು ಸಂಸತ್ತಿನ ಹೊರಗೆ ಮಾಧ್ಯಮವನ್ನು ಉದ್ದೇಶಿಸಿ ಮಾತನಾಡಿದ ಅವರು, ‘ನೈತಿಕ ಸಮಿತಿಯು ಪ್ರತಿಯೊಂದು ನಿಯಮವನ್ನೂ ಉಲ್ಲಂಘಿಸಿದೆ. ನನಗೂ ಈ ಬಗ್ಗೆ ಮಾತನಾಡುವ ಹಕ್ಕಿದೆ’ ಎಂದರು.

‘ಅಸ್ತಿತ್ವದಲ್ಲೇ ಇಲ್ಲದ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಕ್ಕಾಗಿ ನಾನು ತಪ್ಪಿತಸ್ಥೆ ಎಂದು ಸಮಿತಿ ಸದಸ್ಯರು ಹೇಳಿದ್ದಾರೆ. ಸದಸ್ಯರು ತನ್ನ ವರದಿಯು ಪುಸ್ತಕದಲ್ಲಿನ ಪ್ರತಿಯೊಂದು ನಿಯಮಗಳನ್ನೂ ಮುರಿದಿದ್ದಾರೆ’ ಎಂದು ಕಿಡಿಕಾರಿದರು.

ಮೊಯಿತ್ರಾ ಅವರ ಉಚ್ಚಾಟನೆ ಆದೇಶ ಹೊರಬೀಳುತ್ತಿದ್ದಂತೆಯೇ ಸೋನಿಯಾ ಗಾಂಧಿ ಸೇರಿದಂತೆ ಇತರೆ ವಿರೋಧ ಪಕ್ಷದ ನಾಯಕರು ಲೋಕಸಭೆಯಿಂದ ಹೊರನಡೆದರು, ಕೇಂದ್ರ ಸರ್ಕಾರದ ಈ ಕ್ರಮವನ್ನು ‘ಅನೈತಿಕ ನಡವಳಿಕೆ’ ಎಂದು ವಾಗ್ದಾಳಿ ನಡೆಸಿದರು.

ಮಹುವಾ ಮೊಯಿತ್ರಾ ಅವರನ್ನು ಅನರ್ಹಗೊಳಿಸಲು ಶಿಫಾರಸ್ಸು ಮಾಡುವ ನೀತಿಸಂಹಿತೆ ಸಮಿತಿಯ ವರದಿಯನ್ನು ಬಿಜೆಪಿ ಸಂಸದ ವಿನೋದ್ ಕುಮಾರ್ ಸೋಂಕರ್ ಅವರು ಶುಕ್ರವಾರ ಲೋಕಸಭೆಯಲ್ಲಿ ಮಂಡಿಸಿದರು. ಇದೇ ವೇಳೆ ಪ್ರತಿಪಕ್ಷಗಳ ಸದಸ್ಯರು ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು. ‘ನಾನು ನಗದು ತೆಗೆದುಕೊಂಡಿದ್ದರೆ ಅದು ಎಲ್ಲಿದೆ ಎಂಬುದನ್ನು ನೀವು ಸಾಬೀತು ಮಾಡಬೇಕಾಗಿದೆ’ ಎಂದು ಮಹುವಾ ಮೊಯಿತ್ರಾ ಪ್ರಶ್ನಿಸಿದರು.

ಮಹುವಾ ಮೇಲಿನ ಆರೋಪವೇನು?

ಕೈಗಾರಿಕೋದ್ಯಮಿ ದರ್ಶನ್ ಹಿರಾನಂದನಿ ಅವರಿಂದ ನಗದು ಮತ್ತು ದುಬಾರಿ ಉಡುಗೊರೆಗಳನ್ನು ಪಡೆದುಕೊಂಡು ತನ್ನ ಸಂಸತ್ತಿನ ಲಾಗಿನ್ ಐಡಿ ನೀಡಿದ್ದಾರೆ ಮತ್ತು ಪ್ರಧಾನಿ ಮೋದಿ, ಅದಾನಿ ಸಮೂಹದ ವಿರುದ್ಧ ಲೋಕಸಭೆಯಲ್ಲಿ ಪ್ರಶ್ನೆ ಕೇಳಿದ್ದಾರೆ ಎಂಬ ಆರೋಪ ಸಂಸದೆ ಮಹುವಾ ಮೊಯಿತ್ರಾ ಮೇಲಿದೆ. ಈ ಸಂಬಂಧ ಬಿಜೆಪಿ ಸಂಸದ ನಿಶಿಕಾಂತ್ ದುಬೆ ಮತ್ತು ವಕೀಲ ಜೈ ಅನಂತ್ ದೇಹದ್ರಾಯ್ ಲೋಕಸಭೆಗೆ ದೂರು ನೀಡಿದ್ದರು.

ಇದನ್ನೂ ಓದಿ; ಪ್ರಶ್ನೆಗಾಗಿ ನಗದು ಪ್ರಕರಣ: ಲೋಕಸಭೆಯಿಂದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಉಚ್ಚಾಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...